(ಮತ್ತಾಯ 10:5-15; ಮಾರ್ಕ 6:7-13) ಯೇಸು ಹನ್ನೆರಡು ಮಂದಿ ಅಪೊಸ್ತಲರನ್ನು ಒಟ್ಟಾಗಿ ಕರೆದು ಅವರಿಗೆ ಕಾಯಿಲೆಗಳನ್ನು ವಾಸಿಮಾಡುವ ಶಕ್ತಿಯನ್ನೂ ದೆವ್ವಗಳ ಮೇಲೆ ಅಧಿಕಾರವನ್ನೂ ಕೊಟ್ಟನು.
ಆತನು ಅವರಿಗೆ ಹೇಳಿದ್ದೇನೆಂದರೆ: “ನೀವು ಪ್ರಯಾಣಕ್ಕಾಗಿ ಊರುಗೋಲನ್ನಾಗಲಿ ಚೀಲವನ್ನಾಗಲಿ ಆಹಾರವನ್ನಾಗಲಿ ಹಣವನ್ನಾಗಲಿ ತೆಗೆದುಕೊಂಡು ಹೋಗಬೇಡಿರಿ. ಎರಡು ಅಂಗಿಗಳನ್ನೂ ತೆಗೆದುಕೊಳ್ಳಬೇಡಿ.
(ಮತ್ತಾಯ 14:1-12; ಮಾರ್ಕ 6:14-29) ನಡೆಯುತ್ತಿದ್ದ ಎಲ್ಲಾ ಸಂಗತಿಗಳ ಬಗ್ಗೆ ರಾಜ್ಯಪಾಲ ಹೆರೋದನು ಕೇಳಿ ಗಲಿಬಿಲಿಗೊಂಡನು. ಏಕೆಂದರೆ, “ಸ್ನಾನಿಕ ಯೋಹಾನನೇ ಸತ್ತವರೊಳಗಿಂದ ಎದ್ದಿದ್ದಾನೆ” ಎಂದು ಕೆಲವರು ಹೇಳುತ್ತಿದ್ದರು.
ಇನ್ನು ಕೆಲವರು, “ಎಲೀಯನು ನಮ್ಮ ಬಳಿಗೆ ಬಂದಿದ್ದಾನೆ” ಎಂದು ಹೇಳುತ್ತಿದ್ದರು. ಮತ್ತೆ ಕೆಲವರು, “ಪೂರ್ವಕಾಲದ ಪ್ರವಾದಿಗಳಲ್ಲೊಬ್ಬನು ಜೀವಂತವಾಗಿ ಎದ್ದಿದ್ದಾನೆ” ಎಂದು ಹೇಳುತ್ತಿದ್ದರು.
(ಮತ್ತಾಯ 14:13-21; ಮಾರ್ಕ 6:30-44; ಯೋಹಾನ 6:1-14) ಅಪೊಸ್ತಲರು ಸುವಾರ್ತಾ ಪ್ರಯಾಣದಿಂದ ಹಿಂತಿರುಗಿ ಬಂದು, ತಾವು ಮಾಡಿದ ಸಂಗತಿಗಳನ್ನು ಯೇಸುವಿಗೆ ತಿಳಿಸಿದರು. ಆಗ ಆತನು ಅವರನ್ನು ಬೆತ್ಸಾಯಿದ ಊರಿನ ಸಮೀಪಕ್ಕೆ ಪ್ರತ್ಯೇಕವಾಗಿ ಕರೆದುಕೊಂಡು ಹೋದನು. ಅಲ್ಲಿ ಯೇಸು ಮತ್ತು ಆತನ ಅಪೊಸ್ತಲರನ್ನು ಬಿಟ್ಟು ಬೇರೆ ಯಾರೂ ಇರಲಿಲ್ಲ.
ಆದರೆ ಯೇಸು ಅಲ್ಲಿಗೆ ಹೋದದ್ದು ಜನರಿಗೆ ತಿಳಿಯಿತು. ಅವರು ಆತನನ್ನು ಹಿಂಬಾಲಿಸಿದರು. ಯೇಸು ಅವರನ್ನು ಸ್ವಾಗತಿಸಿ ದೇವರ ರಾಜ್ಯದ ಬಗ್ಗೆ ಅವರಿಗೆ ತಿಳಿಸಿದನು; ಕಾಯಿಲೆಯ ಜನರನ್ನು ವಾಸಿಮಾಡಿದನು.
ಅಂದು ಸಾಯಂಕಾಲ, ಹನ್ನೆರಡು ಮಂದಿ ಅಪೊಸ್ತಲರು ಯೇಸುವಿನ ಬಳಿಗೆ ಬಂದು, “ಈ ಸ್ಥಳದಲ್ಲಿ ಯಾರೂ ವಾಸವಾಗಿಲ್ಲ. ಆದ್ದರಿಂದ ಜನರನ್ನು ಕಳುಹಿಸಿಬಿಡು. ಅವರು ಸುತ್ತಮುತ್ತಲಿರುವ ಹೊಲಗಳಿಗೂ ಊರುಗಳಿಗೂ ಹೋಗಿ ಆಹಾರವನ್ನು ಕೊಂಡುಕೊಳ್ಳಲಿ ಮತ್ತು ರಾತ್ರಿ ನಿದ್ರಿಸಲು ಸ್ಥಳವನ್ನು ಹುಡುಕಿಕೊಳ್ಳಲಿ” ಎಂದು ಹೇಳಿದರು.
ಆದರೆ ಯೇಸು ಅಪೊಸ್ತಲರಿಗೆ, “ನೀವೇ ಅವರಿಗೆ ಸ್ವಲ್ಪ ಆಹಾರ ಕೊಡಿರಿ” ಎಂದು ಹೇಳಿದನು. ಅದಕ್ಕೆ ಅಪೊಸ್ತಲರು, “ನಮ್ಮಲ್ಲಿ ಕೇವಲ ಐದು ರೊಟ್ಟಿ ಮತ್ತು ಎರಡು ಮೀನುಗಳಿವೆ. ನಾವೇ ಹೋಗಿ ಈ ಜನರಿಗೆಲ್ಲಾ ಆಹಾರವನ್ನು ಕೊಂಡುಕೊಳ್ಳಬೇಕೇ?” ಎಂದು ಕೇಳಿದರು.
ಆಗ ಯೇಸು ಐದು ರೊಟ್ಟಿ ಮತ್ತು ಎರಡು ಮೀನುಗಳನ್ನು ಕೈಯಲ್ಲಿ ತೆಗೆದುಕೊಂಡು, ಆಕಾಶದ ಕಡೆಗೆ ನೋಡಿ, ಅವುಗಳಿಗಾಗಿ ದೇವರಿಗೆ ಸ್ತೋತ್ರ ಸಲ್ಲಿಸಿದನು. ಬಳಿಕ ಯೇಸು ಅವುಗಳನ್ನು ಮುರಿದು ಶಿಷ್ಯರಿಗೆ ಕೊಟ್ಟು ಜನರಿಗೆ ಹಂಚಬೇಕೆಂದು ಹೇಳಿದನು.
(ಮತ್ತಾಯ 16:13-19; ಮಾರ್ಕ 8:27-29) ಒಮ್ಮೆ ಯೇಸು ಏಕಾಂತವಾಗಿ ಪ್ರಾರ್ಥನೆ ಮಾಡುತ್ತಿದ್ದನು. ಆತನ ಶಿಷ್ಯರು ಒಟ್ಟಾಗಿ ಅಲ್ಲಿಗೆ ಬಂದರು. ಯೇಸು ಅವರಿಗೆ, “ಜನರು ನನ್ನನ್ನು ಯಾರೆಂದು ಹೇಳುತ್ತಾರೆ?” ಎಂದು ಕೇಳಿದನು.
ಅದಕ್ಕೆ ಶಿಷ್ಯರು, “ಕೆಲವು ಜನರು ನಿನ್ನನ್ನು ‘ಸ್ನಾನಿಕನಾದ ಯೋಹಾನ’ ಎನ್ನುತ್ತಾರೆ. ಇನ್ನು ಕೆಲವರು, ‘ಎಲೀಯ’ ಎನ್ನುತ್ತಾರೆ. ಮತ್ತೆ ಕೆಲವರು, ‘ಪೂರ್ವಕಾಲದ ಪ್ರವಾದಿಗಳಲ್ಲಿ ಒಬ್ಬನು ಜೀವಂತವಾಗಿ ಎದ್ದುಬಂದಿದ್ದಾನೆ’ ಎನ್ನುತ್ತಾರೆ” ಎಂದು ಉತ್ತರಿಸಿದರು.
(ಮತ್ತಾಯ 16:21-28; ಮಾರ್ಕ 8:30-9:1) ಬಳಿಕ ಯೇಸು, “ಮನುಷ್ಯಕುಮಾರನು ಅನೇಕ ಸಂಕಟಗಳನ್ನು ಅನುಭವಿಸಬೇಕಾಗಿದೆ. ಆತನು ಹಿರಿಯ ಯೆಹೂದ್ಯನಾಯಕರಿಂದಲೂ ಮಹಾಯಾಜಕರಿಂದಲೂ ಧರ್ಮೋಪದೇಶಕರಿಂದಲೂ ತಿರಸ್ಕೃತನಾಗಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಜೀವಂತವಾಗಿ ಎದ್ದುಬರುವನು” ಎಂದು ಹೇಳಿದನು.
ಯೇಸು ತನ್ನ ಮಾತನ್ನು ಮುಂದುವರಿಸಿ ಅವರೆಲ್ಲರಿಗೆ ಹೇಳಿದ್ದೇನೆಂದರೆ: “ನನ್ನ ಹಿಂಬಾಲಕನಾಗಬಯಸುವವನು ತನ್ನನ್ನು ನಿರಾಕರಿಸಿ, ಪ್ರತಿದಿನ ತನ್ನ ಶಿಲುಬೆಯನ್ನು (ತನಗಾಗುವ ಹಿಂಸೆಯನ್ನು) ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
ಯಾವನಾದರೂ ನನಗೂ ನನ್ನ ಉಪದೇಶಕ್ಕೂ ನಾಚಿಕೊಳ್ಳುವುದಾದರೆ, ನಾನು ನನ್ನ ಮಹಿಮೆಯೊಡನೆ, ತಂದೆಯ ಮಹಿಮೆಯೊಡನೆ ಮತ್ತು ಪರಿಶುದ್ಧ ದೂತರ ಮಹಿಮೆಯೊಡನೆ ಬಂದಾಗ ಅವನ ವಿಷಯದಲ್ಲಿ ನಾಚಿಕೊಳ್ಳುವೆನು.
ನಾನು ಸತ್ಯವನ್ನು ಹೇಳುತ್ತೇನೆ. ಇಲ್ಲಿ ನಿಂತಿರುವ ಕೆಲವರು ತಾವು ಸಾಯುವುದಕ್ಕಿಂತ ಮೊದಲು ದೇವರ ರಾಜ್ಯವನ್ನು ನೋಡುವರು” ಎಂದು ಹೇಳಿದನು. ಮೋಶೆ, ಎಲೀಯ ಮತ್ತು ಯೇಸು (ಮತ್ತಾಯ 17:1-8; ಮಾರ್ಕ 9:2-8)
ಮೋಶೆ ಮತ್ತು ಎಲೀಯ ಆತನನ್ನು ಬಿಟ್ಟುಹೋಗುತ್ತಿರುವಾಗ, ಪೇತ್ರನು, “ಗುರುವೇ, ನಾವು ಇಲ್ಲೇ ಇರುವುದು ಒಳ್ಳೆಯದು. ಇಲ್ಲಿ ನಾವು ಮೂರು ಗುಡಾರಗಳನ್ನು ಹಾಕುತ್ತೇವೆ. ನಿನಗೊಂದು, ಮೋಶೆಗೊಂದು ಮತ್ತು ಎಲೀಯನಿಗೊಂದು” ಎಂದು ಹೇಳಿದನು. (ಪೇತ್ರನಿಗೆ ತಾನು ಏನು ಹೇಳುತ್ತಿದ್ದೇನೆಂದು ತಿಳಿಯಲಿಲ್ಲ.)
ದೆವ್ವವೊಂದು ನನ್ನ ಮಗನೊಳಗೆ ಬರುತ್ತದೆ. ಆಗ ಅವನು ಕೂಗಾಡುತ್ತಾನೆ. ಸ್ವಾಧೀನ ಕಳೆದುಕೊಂಡು ಬಾಯಿಂದ ನೊರೆಸುರಿಸುತ್ತಾನೆ. ದೆವ್ವವು ಅವನನ್ನು ಒದ್ದಾಡಿಸಿ ಜಜ್ಜದ ಹೊರತು ಬಿಟ್ಟುಬಿಡುವುದೇ ಇಲ್ಲ.
ಆಗ ಯೇಸು, “ನಂಬಿಕೆಯಿಲ್ಲದ ದುಷ್ಟಸಂತಾನವೇ, ಇನೆಷ್ಟು ಕಾಲ ನಾನು ನಿಮ್ಮ ಸಂಗಡ ತಾಳ್ಮೆಯಿಂದ ಇರಲಿ?” ಎಂದು ಉತ್ತರಿಸಿ, ಆ ಮನುಷ್ಯನಿಗೆ, “ನಿನ್ನ ಮಗನನ್ನು ಇಲ್ಲಿಗೆ ಕರೆದುಕೊಂಡು ಬಾ” ಅಂದನು.
ಆ ಹುಡುಗನು ಬರುತ್ತಿದ್ದಾಗ, ದೆವ್ವವು ಅವನನ್ನು ನೆಲಕ್ಕೆ ಅಪ್ಪಳಿಸಿತು. ಹುಡುಗನು ತನ್ನ ಸ್ವಾಧೀನ ಕಳೆದುಕೊಂಡನು. ಆಗ ಯೇಸು ದೆವ್ವವನ್ನು ಗದರಿಸಿ ಆ ಹುಡುಗನನ್ನು ಗುಣಪಡಿಸಿದನು. ಬಳಿಕ ಅವನನ್ನು ಅವನ ತಂದೆಗೆ ಒಪ್ಪಿಸಿಕೊಟ್ಟನು.
ಬಳಿಕ ಯೇಸು ತನ್ನ ಶಿಷ್ಯರಿಗೆ, “ಒಬ್ಬನು ನನ್ನ ಹೆಸರಿನಲ್ಲಿ ಒಂದು ಚಿಕ್ಕ ಮಗುವನ್ನು ಸ್ವೀಕರಿಸಿಕೊಂಡರೆ ಅವನು ನನ್ನನ್ನೇ ಸ್ವೀಕರಿಸಿಕೊಂಡಂತಾಯಿತು. ಒಬ್ಬನು ನನ್ನನ್ನು ಸ್ವೀಕರಿಸಿಕೊಂಡರೆ ಅವನು ನನ್ನನ್ನು ಕಳುಹಿಸಿದಾತನನ್ನೇ (ದೇವರನ್ನು) ಸ್ವೀಕರಿಸಿಕೊಂಡಂತಾಯಿತು. ನಿಮ್ಮಲ್ಲಿ ಯಾವನು ದೀನನಾಗಿದ್ದಾನೋ ಅವನೇ ನಿಮ್ಮಲ್ಲಿ ಪ್ರಮುಖನಾಗಿದ್ದಾನೆ” ಎಂದು ಹೇಳಿದನು.
ಯೋಹಾನನು, “ಗುರುವೇ, ನಿನ್ನ ಹೆಸರಿನ ಮೂಲಕ ಜನರಿಂದ ದೆವ್ವಗಳನ್ನು ಬಿಡಿಸುತ್ತಿದ್ದ ಒಬ್ಬ ವ್ಯಕ್ತಿಯನ್ನು ನಾವು ನೋಡಿದೆವು. ಅವನು ನಮ್ಮವನಲ್ಲದ ಕಾರಣ ನಿನ್ನ ಹೆಸರನ್ನು ಬಳಸಕೂಡದೆಂದು ಅವನಿಗೆ ಹೇಳಿದೆವು” ಎಂದರು.
ಯೇಸುವಿನ ಶಿಷ್ಯರಾದ ಯಾಕೋಬ ಮತ್ತು ಯೋಹಾನ ಇದನ್ನು ಕಂಡು, “ಸ್ವಾಮೀ, ಆಕಾಶದಿಂದ ಬೆಂಕಿ ಬಿದ್ದು ಇವರನ್ನು ನಾಶಮಾಡಲಿ ಎಂದು ನಾವು ಆಜ್ಞಾಪಿಸಬೇಕೆನ್ನುವಿಯೋ!” [*ಕೆಲವು ಗ್ರೀಕ್ ಪ್ರತಿಗಳಲ್ಲಿ 54ನೇ ವಚನ ಸೇರಿಸಲಾಗಿದೆ: “ಎಲೀಯನು ಮಾಡಿದಂತೆ.”] ಎಂದು ಕೇಳಿದರು.
ಆದರೆ ಯೇಸು ಅವರ ಕಡೆಗೆ ತಿರುಗಿ ಗದರಿಸಿದನು. [†ಕೆಲವು ಗ್ರೀಕ್ ಪ್ರತಿಗಳಲ್ಲಿ 55 ನೇ ವಚನ ಸೇರಿಸಲಾಗಿದೆ: “ಯೇಸುವು ಅವರಿಗೆ, “ನೀವು ಎಂಥಾ ಸ್ವಭಾವಿಗಳೆಂದು ನಿಮಗೇ ತಿಳಿಯದು. 56 ಮನುಷ್ಯಕುಮಾರನು ಬಂದದ್ದು ಮಾನವರ ಆತ್ಮಗಳನ್ನು ನಾಶಮಾಡುವುದಕ್ಕಾಗಿಯಲ್ಲ, ರಕ್ಷಿಸುವುದಕ್ಕಾಗಿಯಷ್ಟೇ.”]