(ಮತ್ತಾಯ 26:1-5; ಲೂಕ 22:1-2; ಯೋಹಾನ 11:45-53) ಪಸ್ಕ ಮತ್ತು ಹುಳಿಯಿಲ್ಲದ ರೊಟ್ಟಿಯ ಹಬ್ಬಕ್ಕೆ ಕೇವಲ ಎರಡು ದಿನಗಳಿದ್ದವು. ಮಹಾಯಾಜಕರು ಹಾಗೂ ಧರ್ಮೋಪದೇಶಕರು ಯಾವುದಾದರೊಂದು ಸುಳ್ಳು ಅಪವಾದವನ್ನು ಕಂಡುಹಿಡಿದು ಯೇಸುವನ್ನು ಬಂಧಿಸಿ ಆತನನ್ನು ಕೊಲ್ಲಬೇಕೆಂದಿದ್ದರು.
(ಮತ್ತಾಯ 26:6-13; ಯೋಹಾನ 12:1-8) ಬೆಥಾನಿಯದಲ್ಲಿ ಯೇಸು ಕುಷ್ಠರೋಗಿ ಸಿಮೋನನ ಮನೆಯಲ್ಲಿ ಊಟಮಾಡುತ್ತಿದ್ದಾಗ ಸ್ತ್ರೀಯೊಬ್ಬಳು ಆತನ ಬಳಿಗೆ ಬಂದಳು. ಆಕೆಯ ಬಳಿ ಅತ್ಯಂತ ಬೆಲೆಬಾಳುವ ಪರಿಮಳದ್ರವ್ಯದ ಭರಣಿ ಇತ್ತು. ಈ ಪರಿಮಳದ್ರವ್ಯವನ್ನು ಶುದ್ಧವಾದ ನಾರ್ಡ್ [*ನಾರ್ಡ್ ನಾರ್ಡ್ ಎಂಬ ಸಸ್ಯದ ಬೇರುಗಳಿಂದ ತಯಾರಿಸಿದ ಬೆಲೆಬಾಳುವ ಪರಿಮಳತೈಲ.] ತೈಲದಿಂದ ಮಾಡಲಾಗಿತ್ತು. ಆ ಸ್ತ್ರೀಯು ಭರಣಿಯನ್ನು ತೆರೆದು, ಆ ತೈಲವನ್ನು ಯೇಸುವಿನ ತಲೆಯ ಮೇಲೆ ಸುರಿದಳು.
ಮಹಾಯಾಜಕರು ಇದರ ಬಗ್ಗೆ ಬಹಳ ಸಂತೋಷಗೊಂಡು, ಹಣಕೊಡುವುದಾಗಿ ಯೂದನಿಗೆ ಮಾತುಕೊಟ್ಟರು. ಆದ್ದರಿಂದ ಅವರಿಗೆ ಯೇಸುವನ್ನು ಹಿಡಿದುಕೊಡಲು ಅತ್ಯಂತ ಉತ್ತಮವಾದ ಸಮಯಕ್ಕಾಗಿ ಯೂದನು ಕಾಯತ್ತಿದ್ದನು. (ಮತ್ತಾಯ 26:17-25; ಲೂಕ 22:7-14, 21-23; ಯೋಹಾನ 13:21-30)
ಅಂದು ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನವಾಗಿತ್ತು. ಯೆಹೂದಿಗಳು ಯಾವಾಗಲೂ ಪಸ್ಕಹಬ್ಬದ ಕುರಿಮರಿಗಳನ್ನು ಯಜ್ಞಮಾಡುವ ಸಮಯ ಇದಾಗಿತ್ತು. ಯೇಸುವಿನ ಶಿಷ್ಯರು ಆತನ ಬಳಿಗೆ ಬಂದು, “ನಾವು ಪಸ್ಕಹಬ್ಬದ ಊಟವನ್ನು ನಿನಗಾಗಿ ಎಲ್ಲಿ ಸಿದ್ಧಪಡಿಸೋಣ?” ಎಂದು ಕೇಳಿದರು.
ಅವನು ಒಂದು ಮನೆಯೊಳಗೆ ನಡೆದು ಹೋಗುತ್ತಾನೆ. ನೀವು ಆ ಮನೆಯ ಯಜಮಾನನಿಗೆ, ‘ನಮ್ಮ ಗುರುವು ತನ್ನ ಶಿಷ್ಯರ ಸಂಗಡ ಪಸ್ಕ ಹಬ್ಬದ ಊಟ ಮಾಡಲು ಒಂದು ಕೋಣೆಯನ್ನು ತೋರಿಸಬೇಕೆಂದು ಕೇಳುತ್ತಾನೆ’ ಎಂದು ಹೇಳಿ.
ಅವರೆಲ್ಲರೂ ಊಟ ಮಾಡುತ್ತಿರುವಾಗ, ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಿಮ್ಮಲ್ಲಿ ಒಬ್ಬನು ನನಗೆ ದ್ರೋಹ ಬಗೆಯುತ್ತಾನೆ. ಈಗ ಅವನು ನನ್ನೊಂದಿಗೆ ಊಟಮಾಡುತ್ತಿದ್ದಾನೆ” ಎಂದನು.
ಮನುಷ್ಯಕುಮಾರನು ಹಿಂಸಿಸಲ್ಪಟ್ಟನು. ಪವಿತ್ರ ಗ್ರಂಥದಲ್ಲಿಯೂ ಅದನ್ನು ಬರೆಯಲಾಗಿದೆ. ಆದರೆ ಮನುಷ್ಯಕುಮಾರನನ್ನು ಕೊಲ್ಲಲು ಹಿಡಿದುಕೊಡುವ ವ್ಯಕ್ತಿಯ ಸ್ಥಿತಿ ಬಹಳ ಭೀಕರವಾಗಿರುತ್ತದೆ. ಅವನು ಹುಟ್ಟದೇ ಇದ್ದಿದ್ದರೆ ಅವನಿಗೆ ಒಳ್ಳೆಯದಾಗುತ್ತಿತ್ತು” ಎಂದನು. (ಮತ್ತಾಯ 26:26-30; ಲೂಕ 22:15-20; 1 ಕೊರಿ. 11:23-25)
ಅವರು ಊಟಮಾಡುತ್ತಿರುವಾಗ, ಯೇಸು ರೊಟ್ಟಿಯನ್ನು ತೆಗೆದುಕೊಂಡು, ಅದಕ್ಕಾಗಿ ದೇವರಿಗೆ ಸ್ತೋತ್ರ ಸಲ್ಲಿಸಿ ಅದನ್ನು ಮುರಿದು, ತನ್ನ ಶಿಷ್ಯರಿಗೆ ಕೊಟ್ಟನು. ಯೇಸು ಅವರಿಗೆ, “ಈ ರೊಟ್ಟಿಯನ್ನು ತೆಗೆದುಕೊಂಡು ತಿನ್ನಿರಿ. ಈ ರೊಟ್ಟಿಯು ನನ್ನ ದೇಹ” ಎಂದನು.
ಆದರೆ ಪೇತ್ರನು ಖಚಿತವಾಗಿ, “ನಾನು ನಿನ್ನೊಂದಿಗೆ ಸಾಯಬೇಕಾದರೂ ಸರಿಯೇ, ನಿನ್ನನ್ನು ತಿಳಿದೇ ಇಲ್ಲವೆಂದು ನಾನೆಂದಿಗೂ ಹೇಳುವುದಿಲ್ಲ” ಎಂದು ಉತ್ತರಿಸಿದನು. ಉಳಿದ ಶಿಷ್ಯರು ಸಹ ಇದೇ ರೀತಿ ಹೇಳಿದರು.
(ಮತ್ತಾಯ 26:36-46; ಲೂಕ 22:39-46) ಯೇಸು ಮತ್ತು ಆತನ ಶಿಷ್ಯರು ಗೆತ್ಸೆಮನೆ ಎಂಬ ಸ್ಥಳಕ್ಕೆ ಹೋದರು. ಯೇಸು ತನ್ನ ಶಿಷ್ಯರಿಗೆ, “ನಾನು ಪ್ರಾರ್ಥಿಸಿ ಬರುವ ತನಕ ಕುಳಿತಿರಿ” ಎಂದು ಹೇಳಿ
ಬಳಿಕ ಯೇಸು, “ಅಪ್ಪಾ, [†ಅಪ್ಪಾ ಮೂಲಪದ ಅರಮೇಯಿಕ್ ಭಾಷೆಯ “ಅಬ್ಬಾ” ಇದರರ್ಥ “ಅಪ್ಪಾ.”] ತಂದೆಯೇ! ನಿನಗೆ ಎಲ್ಲವೂ ಸಾಧ್ಯ. ಈ ಸಂಕಟದ ಪಾತ್ರೆಯನ್ನು ನನ್ನಿಂದ ತೊಲಗಿಸು. ಆದರೆ ನನ್ನ ಚಿತ್ತದಂತೆ ಮಾಡದೆ, ನಿನ್ನ ಚಿತ್ತದಂತೆಯೇ ಮಾಡು” ಎಂದು ಪ್ರಾರ್ಥಿಸಿದನು.
ನಂತರ ಯೇಸು ತನ್ನ ಶಿಷ್ಯರ ಬಳಿಗೆ ಹಿಂತಿರುಗಿದಾಗ ಅವರು ನಿದ್ರಿಸುತ್ತಿರುವುದನ್ನು ಕಂಡು, ಪೇತ್ರನಿಗೆ, “ಸೀಮೋನನೇ, ಏಕೆ ನಿದ್ರೆ ಮಾಡುತ್ತಿರುವೆ? ನೀನು ನನ್ನೊಡನೆ ಒಂದು ಗಂಟೆ ಕಾಲ ಎಚ್ಚರವಾಗಿರಲು ಸಾಧ್ಯವಾಗಲಿಲ್ಲವೇ?
ನಂತರ ಯೇಸು ತನ್ನ ಶಿಷ್ಯರ ಬಳಿಗೆ ಹಿಂತಿರುಗಿ ಬಂದಾಗ ಅವರು ನಿದ್ರಿಸುತ್ತಿರುವುದನ್ನು ಕಂಡನು. ಅವರ ಕಣ್ಣುಗಳು ಬಹಳ ಆಯಾಸಗೊಂಡಿದ್ದವು. ಯೇಸುವಿಗೆ ಏನು ಹೇಳಬೇಕೆಂದು ಆ ಶಿಷ್ಯರಿಗೆ ತಿಳಿಯಲಿಲ್ಲ.
ಯೇಸು ಮೂರನೆಯ ಸಾರಿ ಪ್ರಾರ್ಥಿಸಿದ ಮೇಲೆ, ತನ್ನ ಶಿಷ್ಯರ ಬಳಿಗೆ ಹಿಂತಿರುಗಿ, “ನೀವು ಇನ್ನೂ ನಿದ್ರಿಸುತ್ತಾ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದೀರಾ? ಪಾಪಿಗಳ ಕೈಗೆ ಮನುಷ್ಯಕುಮಾರನನ್ನು ಒಪ್ಪಿಸುವ ಸಮಯ ಬಂದಿದೆ.
(ಮತ್ತಾಯ 26:47-56; ಲೂಕ 22:47-53; ಯೋಹಾನ 18:3-12) ಯೇಸು ಇನ್ನೂ ಮಾತಾಡುತ್ತಿರುವಾಗ, ಯೂದನು ಅಲ್ಲಿಗೆ ಬಂದನು. ಹನ್ನೆರಡು ಜನ ಅಪೊಸ್ತಲರಲ್ಲಿ ಯೂದನು ಒಬ್ಬನಾಗಿದ್ದನು. ಯೂದನೊಡನೆ ಕತ್ತಿ ಮತ್ತು ದೊಣ್ಣೆಗಳಿಂದ ಸುಸಜ್ಜಿತರಾಗಿದ್ದ ಅನೇಕ ಜನರಿದ್ದರು. ಮಹಾಯಾಜಕರು, ಧರ್ಮೋಪದೇಶಕರು ಮತ್ತು ಹಿರಿಯ ಯೆಹೂದ್ಯ ನಾಯಕರುಗಳು ಈ ಜನರನ್ನು ಕಳುಹಿಸಿದ್ದರು.
ಯೇಸು ಯಾರೆಂಬುದನ್ನು ಜನರಿಗೆ ತೋರಿಸಲು ಯೂದನು ಒಂದು ಉಪಾಯ ಮಾಡಿದನು. ಯೂದನು ಅವರಿಗೆ, “ನಾನು ಯಾರಿಗೆ ಮುದ್ದಿಡುತ್ತೇನೋ ಅವನೇ ಯೇಸು. ಅವನನ್ನು ಸೆರೆಹಿಡಿದು ಎಚ್ಚರಿಕೆಯಿಂದ ಕಾಯುತ್ತಾ ಕರೆದುಕೊಂಡು ಹೋಗಿರಿ!” ಎಂದು ಹೇಳಿಕೊಟ್ಟಿದ್ದನು.
ಪ್ರತಿದಿನ ದೇವಾಲಯದಲ್ಲಿ ನಾನು ಉಪದೇಶಿಸುತ್ತಾ ನಿಮ್ಮೊಡನೆ ಇದ್ದೆನು. ಅಲ್ಲಿ ನೀವು ನನ್ನನ್ನು ಬಂಧಿಸಲಿಲ್ಲ. ಆದರೆ ಈ ಎಲ್ಲಾ ಸಂಗತಿಗಳು ಪವಿತ್ರಗ್ರಂಥದಲ್ಲಿ ಬರೆದಿರುವಂತೆ ನಡೆದಿವೆ” ಎಂದನು.
ಮಹಾಯಾಜಕರು ಹಾಗೂ ಹಿರಿಯ ಸಭೆಯವರೆಲ್ಲರು ಆತನನ್ನು ಕೊಲ್ಲಲು ಬೇಕಾದ ಒಂದು ತಪ್ಪನ್ನು ಆತನಲ್ಲಿ ಕಂಡುಹಿಡಿಯುವುದಕ್ಕೆ ಪ್ರಯತ್ನಿಸಿದರು. ಆದರೆ ಯೇಸುವನ್ನು ಕೊಲ್ಲಲು ಸರಿಯಾದ ಯಾವುದೇ ಆಧಾರವನ್ನು ಕಂಡುಹಿಡಿಯಲು ಸಮಿತಿಗೆ ಸಾಧ್ಯವಾಗಲಿಲ್ಲ.
“ಈ ಮನುಷ್ಯನು, ‘ಕೈಯಿಂದ ಕಟ್ಟಿದ ಈ ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕೈಯಿಂದ ಕಟ್ಟಿಲ್ಲದ ಇನ್ನೊಂದು ದೇವಾಲಯವನ್ನು ಕಟ್ಟುತ್ತೇನೆ’ ಎಂದು ಹೇಳಿದ್ದನ್ನು ನಾವು ಕೇಳಿದೆವು” ಎಂದರು.
ಆಗ ಪ್ರಧಾನಯಾಜಕನು ಎಲ್ಲಾ ಜನರೆದುರಿಗೆ ಎದ್ದುನಿಂತು, ಯೇಸುವಿಗೆ, “ಈ ಜನರು ನಿನಗೆ ವಿರುದ್ಧವಾಗಿ ಹೊರಿಸುತ್ತಿರುವ ಈ ಆರೋಪಗಳ ಬಗ್ಗೆ ನೀನು ಏನಾದರೂ ಹೇಳಬೇಕೆಂದಿರುವೆಯೋ? ಜನರು ಹೇಳುತ್ತಿರುವುದು ನಿಜವೇ?” ಎಂದು ಕೇಳಿದನು.
ಇವನು ದೇವರ ವಿರುದ್ಧವಾಗಿ ಹೇಳಿದ ಮಾತನ್ನು ನೀವೆಲ್ಲರೂ ಕೇಳಿದ್ದೀರಿ. ನಿಮ್ಮ ಅಭಿಪ್ರಾಯವೇನು?” ಎಂದು ಕೇಳಿದನು. ಯೇಸು ಅಪರಾಧಿಯೆಂತಲೂ ಆತನಿಗೆ ಮರಣದಂಡನೆ ಆಗಬೇಕೆಂತಲೂ ಜನರೆಲ್ಲರು ಹೇಳಿದರು.
ಅಲ್ಲಿದ್ದ ಕೆಲವು ಜನರು ಯೇಸುವಿಗೆ ಉಗುಳಿ, ಆತನ ಮುಖವನ್ನು ಮುಚ್ಚಿ, ಮುಷ್ಠಿಯಿಂದ ಗುದ್ದಿ, “ನಮಗೆ ಪ್ರವಾದನೆ ಹೇಳು” ಎಂದರು. ನಂತರ ಕಾವಲುಗಾರರು ಯೇಸುವನ್ನು ದೂರ ಕರೆದುಕೊಂಡು ಹೋಗಿ, ಆತನನ್ನು ಹೊಡೆದರು.
ಪುನಃ ಪೇತ್ರನು ಆಕೆಯ ಮಾತನ್ನು ನಿರಾಕರಿಸಿದನು. ಸ್ವಲ್ಪ ಸಮಯದ ನಂತರ, ಪೇತ್ರನ ಬಳಿ ನಿಂತಿದ್ದ ಕೆಲವು ಜನರು ಅವನಿಗೆ, “ಯೇಸುವನ್ನು ಹಿಂಬಾಲಿಸಿದ ಜನರಲ್ಲಿ ನೀನೂ ಒಬ್ಬನು ಎಂಬುದು ನಮಗೆ ತಿಳಿದಿದೆ. ನೀನು ಯೇಸುವಿನಂತೆ ಗಲಿಲಾಯದವನು” ಎಂದರು.
ಪೇತ್ರನು ಇದನ್ನು ಹೇಳಿದ ಮೇಲೆ ಕೋಳಿ ಎರಡನೇ ಸಾರಿ ಕೂಗಿತು. “ಕೋಳಿ ಎರಡು ಸಾರಿ ಕೂಗುವುದಕ್ಕಿಂತ ಮುಂಚೆ, ನೀನು ನನ್ನನ್ನು ತಿಳಿದಿಲ್ಲವೆಂದು ಮೂರು ಸಾರಿ ಹೇಳುವೆ” ಎಂದು ಯೇಸು ತನಗೆ ಹೇಳಿದ್ದನ್ನು ಪೇತ್ರನು ಜ್ಞಾಪಿಸಿಕೊಂಡು ಬಹಳ ದುಃಖದಿಂದ ಗೋಳಾಡಿದನು.