ಮುಂಜಾನೆ ನಸುಕಿನಲ್ಲೇ, ಮಹಾಯಾಜಕರು, ಹಿರಿಯ ಯೆಹೂದ್ಯನಾಯಕರು ಧರ್ಮೋಪದೇಶಕರು ಮತ್ತು ಯೆಹೂದ್ಯ ಸಮಿತಿಯವರು ಸಭೆಸೇರಿ ಯೇಸುವಿಗೆ ಮಾಡಬೇಕಾದದ್ದನ್ನು ನಿರ್ಧರಿಸಿದರು. ಅವರು ಯೇಸುವನ್ನು ಬಂಧಿಸಿ, ರಾಜ್ಯಪಾಲನಾದ ಪಿಲಾತನ ಬಳಿಗೆ ಕರೆದುಕೊಂಡು ಹೋಗಿ ಅವನಿಗೆ ಒಪ್ಪಿಸಿದರು.
(ಮತ್ತಾಯ 27:32-44; ಲೂಕ 23:26-43; ಯೋಹಾನ 19:17-27) ಆಗ ಸಿರೇನ್ ಪಟ್ಟಣದ ಸಿಮೋನ ಎಂಬವನು ಹೊಲದಿಂದ ಬರುತ್ತಿದ್ದನು. ಅವನು ಅಲೆಕ್ಸಾಂಡರ್ ಮತ್ತು ರೂಫಸ್ ಎಂಬವರ ತಂದೆ. ಸೈನಿಕರು ಯೇಸುವಿನ ಶಿಲುಬೆಯನ್ನು ಹೊರುವಂತೆ ಸಿಮೋನನನ್ನು ಬಲವಂತ ಮಾಡಿದರು.
ಅಲ್ಲದೆ ಅವರು ಯೇಸುವಿನ ಪಕ್ಕದಲ್ಲಿ ಇಬ್ಬರು ಕಳ್ಳರನ್ನು ಶಿಲುಬೆಗೆ ಹಾಕಿದರು. ಅವರು ಒಬ್ಬ ಕಳ್ಳನನ್ನು ಯೇಸುವಿನ ಬಲಗಡೆಯಲ್ಲಿಯೂ ಇನ್ನೊಬ್ಬ ಕಳ್ಳನನ್ನು ಯೇಸುವಿನ ಎಡಗಡೆಯಲ್ಲಿಯೂ ಹಾಕಿದ್ದರು.
ಅವನು ನಿಜವಾಗಲೂ ಇಸ್ರೇಲರ ರಾಜನಾದ ಕ್ರಿಸ್ತನಾಗಿದ್ದರೆ, ಈಗ ಶಿಲುಬೆಯಿಂದ ಕೆಳಗಿಳಿದು ಬಂದು ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ. ಆಗ ನಾವು ಅವನನ್ನು ನಂಬುತ್ತೇವೆ” ಎಂದು ಅಪಹಾಸ್ಯ ಮಾಡಿದರು. ಯೇಸುವಿನ ಪಕ್ಕದ ಶಿಲುಬೆಗಳಿಗೆ ಹಾಕಲ್ಪಟ್ಟಿದ್ದ ಕಳ್ಳರು ಸಹ ಆತನನ್ನು ಗೇಲಿಮಾಡಿದರು.
ಮೂರು ಗಂಟೆಗೆ, ಯೇಸು ದೊಡ್ಡ ಧ್ವನಿಯಿಂದ, “ಎಲೋಹಿ, ಎಲೋಹಿ, ಲಮಾ ಸಬಕ್ತಾನಿ?” ಎಂದು ಕೂಗಿದನು. “ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟೆ?” [✡ಉಲ್ಲೇಖನ: ಕೀರ್ತನೆ. 22:1.] ಎಂಬುದೇ ಇದರರ್ಥ.
ಅಲ್ಲಿದ್ದ ಒಬ್ಬನು ಓಡಿಹೋಗಿ, ಸ್ಪಂಜನ್ನು ತೆಗೆದುಕೊಂಡು ಅದನ್ನು ಹುಳಿರಸದಿಂದ ತುಂಬಿಸಿ, ಒಂದು ಕೋಲಿಗೆ ಕಟ್ಟಿ ಯೇಸುವಿಗೆ ಕುಡಿಯಲು ಕೊಡುತ್ತಾ, “ಎಲೀಯನು ಇವನನ್ನು ಶಿಲುಬೆಯಿಂದ ಕೆಳಗಿಳಿಸಲು ಬರಬಹುದೇನೋ ನಾವು ಕಾಯ್ದು ನೋಡಬೇಕು” ಎಂದನು.
ಕೆಲವು ಸ್ತ್ರೀಯರು ಶಿಲುಬೆಯಿಂದ ದೂರದಲ್ಲಿ ನಿಂತುಕೊಂಡು ನೋಡುತ್ತಾ ಇದ್ದರು. ಈ ಸ್ತ್ರೀಯರಲ್ಲಿ ಕೆಲವರೆಂದರೆ, ಮಗ್ದಲದ ಮರಿಯಳು, ಸಲೋಮೆ ಮತ್ತು ಯಾಕೋಬ ಯೋಸೆಯರ ತಾಯಿಯಾದ ಮರಿಯಳು (ಯಾಕೋಬನು ಅವಳ ಕಿರಿಯ ಮಗ.)
ಅರಿಮಥಾಯ ಊರಿನ ಯೋಸೇಫ ಎಂಬವನು ಪಿಲಾತನ ಬಳಿಗೆ ಹೋಗಿ, ಯೇಸುವಿನ ದೇಹವನ್ನು ತನಗೆ ಕೊಡಬೇಕೆಂದು ಧೈರ್ಯದಿಂದ ಕೇಳಿದನು. ಯೋಸೇಫನು ಯೆಹೂದ್ಯರ ಸಮಿತಿಯಲ್ಲಿ ಒಬ್ಬ ಮುಖ್ಯ ಸದಸ್ಯನಾಗಿದ್ದನು. ದೇವರರಾಜ್ಯ ಬರಲೆಂದು ಬಯಸಿದ ಜನರಲ್ಲಿ ಇವನೂ ಒಬ್ಬನಾಗಿದ್ದನು.
ಯೇಸು ಇಷ್ಟು ಬೇಗನೆ ಸತ್ತದ್ದನ್ನು ಕೇಳಿ ಪಿಲಾತನಿಗೆ ಆಶ್ಚರ್ಯವಾಯಿತು. ಯೇಸುವನ್ನು ಕಾವಲು ಕಾಯುತ್ತಿದ್ದ ಸೈನ್ಯಾಧಿಕಾರಿಯನ್ನು ಪಿಲಾತನು ಕರೆದು, “ಯೇಸು ಸತ್ತುಹೋದನೇ?” ಎಂದು ಕೇಳಿದನು.
ಯೋಸೇಫನು ನಾರುಬಟ್ಟೆಯನ್ನು ತೆಗೆದುಕೊಂಡು ಬಂದು, ಶಿಲುಬೆಯಿಂದ ದೇಹವನ್ನು ಇಳಿಸಿ, ಅದನ್ನು ಆ ಬಟ್ಟೆಯಿಂದ ಸುತ್ತಿದನು. ಅನಂತರ, ಬಂಡೆಯ ಸಮಾಧಿಯಲ್ಲಿ ಅದನ್ನಿರಿಸಿ ಆ ಸಮಾಧಿಯ ಬಾಗಿಲಿಗೆ ದೊಡ್ಡ ಬಂಡೆಯನ್ನು ಉರುಳಿಸಿ ಮುಚ್ಚಿದನು.