ಆದರೆ ಅವನು, “ಭಯಪಡಬೇಡಿ! ಶಿಲುಬೆಗೇರಿಸಲ್ಪಟ್ಟ ನಜರೇತಿನ ಯೇಸುವನ್ನು ನೀವು ಹುಡುಕುತ್ತಿದ್ದೀರಲ್ಲವೇ? ಆತನು ಜೀವಂತನಾಗಿ ಎದ್ದಿದ್ದಾನೆ. ಆತನು ಇಲ್ಲಿಲ್ಲ. ನೋಡಿರಿ, ಆತನ ದೇಹವನ್ನು ಇಟ್ಟಿದ್ದ ಸ್ಥಳ ಇದೇ.
ಈಗ ಹೋಗಿ ಆತನ ಶಿಷ್ಯರಿಗೆ ತಿಳಿಸಿರಿ. ಪೇತ್ರನಿಗಂತೂ ಖಂಡಿತವಾಗಿ ತಿಳಿಸಿರಿ. ನೀವು ಅವರಿಗೆ, ‘ಯೇಸು ಗಲಿಲಾಯಕ್ಕೆ ಹೋಗುತ್ತಿದ್ದಾನೆ. ಆತನು ನಿಮಗಿಂತ ಮುಂಚೆ ಅಲ್ಲಿರುತ್ತಾನೆ. ಆತನು ನಿಮಗೆ ಮೊದಲೇ ಹೇಳಿದಂತೆ ನೀವು ಆತನನ್ನು ಅಲ್ಲಿ ನೋಡುವಿರಿ’ ಎಂದು ಹೇಳಿರಿ” ಎಂದನು.
ಆ ಸ್ತ್ರೀಯರು ಬಹಳ ಭಯದಿಂದ ಗಲಿಬಿಲಿಗೊಂಡು, ಸಮಾಧಿಯನ್ನು ಬಿಟ್ಟು ಓಡಿಹೋದರು. ಅವರು ಬಹಳ ಭಯಗೊಂಡಿದ್ದರಿಂದ ಈ ವಿಷಯವನ್ನು ಯಾರಿಗೂ ಹೇಳಲಿಲ್ಲ. (ಕೆಲವು ಗ್ರೀಕ್ ಪತ್ರಿಕೆಗಳಲ್ಲಿ ಈ ಸುವಾರ್ತೆಯು ಇಲ್ಲಿಗೇ ಮುಕ್ತಾಯವಾಗುತ್ತದೆ.)
(ಮತ್ತಾಯ 28:9-10; ಯೋಹಾನ 20:11-18; ಲೂಕ 24:13-35) ವಾರದ ಮೊದಲನೆಯ ದಿನದ ಬೆಳಿಗ್ಗೆ ಯೇಸು ಜೀವಂತನಾಗಿ ಎದ್ದನು. ಯೇಸು ಮೊಟ್ಟಮೊದಲು ಮಗ್ದಲದ ಮರಿಯಳಿಗೆ ಕಾಣಿಸಿಕೊಂಡನು. ಹಿಂದೊಮ್ಮೆ ಯೇಸು ಮರಿಯಳಿಂದ ಏಳು ದೆವ್ವಗಳನ್ನು ಬಿಡಿಸಿದ್ದನು.
ಈ ಶಿಷ್ಯರು ಇತರ ಶಿಷ್ಯರ ಬಳಿಗೆ ಹಿಂತಿರುಗಿ, ಈ ವಿಷಯವನ್ನು ತಿಳಿಸಿದರು. ಆದರೆ ಆ ಶಿಷ್ಯರು ಅವರನ್ನು ನಂಬಲಿಲ್ಲ. (ಮತ್ತಾಯ 28:16-20; ಲೂಕ 24:36-49; ಯೋಹಾನ 20:19-23; ಅಪೊ. ಕಾರ್ಯ. 1:6-8)
ನಂತರ ಹನ್ನೊಂದು ಜನ ಶಿಷ್ಯರು ಊಟ ಮಾಡುತ್ತಿರುವಾಗ, ಯೇಸು ಅವರಿಗೆ ಕಾಣಿಸಿಕೊಂಡನು. ಶಿಷ್ಯರಲ್ಲಿ ಕೊಂಚ ನಂಬಿಕೆ ಇದ್ದುದರಿಂದ ಯೇಸು ಅವರನ್ನು ಖಂಡಿಸಿದನು. ಏಕೆಂದರೆ, ಯೇಸು ಸಾವಿನಿಂದ ಎದ್ದುಬಂದಿದ್ದಾನೆಂದು ದೃಢವಾಗಿ ಹೇಳಿದ ಮಾತನ್ನು ಅವರು ನಂಬಲಿಲ್ಲ.
ಅವರು ಹಾವುಗಳನ್ನು ಹಿಡಿದುಕೊಂಡರೂ ಅವು ಅವರನ್ನು ಕಚ್ಚುವುದಿಲ್ಲ. ವಿಷಕುಡಿದರೂ ಅವರಿಗೆ ಯಾವ ತೊಂದರೆಯೂ ಆಗುವುದಿಲ್ಲ. ಅವರು ಮುಟ್ಟಿದರೆ ರೋಗಿಗಳು ಗುಣಹೊಂದುವರು” ಎಂದು ಹೇಳಿದನು. (ಲೂಕ 24:50-53; ಅಪೊ. ಕಾರ್ಯ. 1:9-11)