ಮನೆಯು ಜನರಿಂದ ತುಂಬಿಹೋಗಿದ್ದುದರಿಂದ ಅವರು ಅವನನ್ನು ಯೇಸುವಿನ ಬಳಿಗೆ ತರಲಾಗಲಿಲ್ಲ. ಆದ್ದರಿಂದ ಅವರು ಯೇಸುವಿದ್ದ ಮನೆಯ ಮೇಲ್ಛಾವಣೆಯ ಮೇಲಕ್ಕೆ ಹೋಗಿ ಯೇಸುವಿದ್ದ ಸ್ಥಳದ ಮೇಲೆ ಹೆಂಚುಗಳನ್ನು ತೆಗೆದುಹಾಕಿದರು. ಹೀಗೆ ಅಲ್ಲಿ ಒಂದು ದ್ವಾರವನ್ನು ಮಾಡಿ ರೋಗಿಯನ್ನು ಹಾಸಿಗೆಯ ಸಮೇತ ಕೆಳಗಿಳಿಸಿದರು.
ಆ ಕೂಡಲೇ ರೋಗಿಯು ಎದ್ದುನಿಂತು, ತನ್ನ ಹಾಸಿಗೆಯನ್ನು ತೆಗೆದುಕೊಂಡು ಅಲ್ಲಿಂದ ಹೊರಗೆ ಹೋದನು. ಇದನ್ನು ಕಂಡ ಆ ಜನರೆಲ್ಲರೂ ಆಶ್ಚರ್ಯಚಕಿತರಾಗಿ, “ನಾವು ಹಿಂದೆಂದೂ ಇಂಥ ಸಂಗತಿಯನ್ನು ನೋಡಿಯೇ ಇಲ್ಲ” ಎಂದು ಹೇಳಿ ದೇವರನ್ನು ಕೊಂಡಾಡಿದರು.
ಯೇಸು ಸರೋವರದ ತೀರದಲ್ಲಿ ನಡೆದು ಹೋಗುತ್ತಿದ್ದಾಗ ಸುಂಕವಸೂಲಿ ಮಾಡುತ್ತಿದ್ದ ಅಲ್ಫಾಯನ ಮಗನಾದ ಲೇವಿಯನ್ನು ಕಂಡನು. ಲೇವಿಯು ಸುಂಕದಕಟ್ಟೆಯಲ್ಲಿ ಕುಳಿತಿದ್ದನು. ಯೇಸು ಅವನಿಗೆ, “ನನ್ನನ್ನು ಹಿಂಬಾಲಿಸು” ಎಂದು ಹೇಳಿದನು. ಆಗ ಅವನು ಎದ್ದು ಯೇಸುವನ್ನು ಹಿಂಬಾಲಿಸಿದನು.
ಅಂದು ಸ್ವಲ್ಪ ಹೊತ್ತಾದ ಬಳಿಕ ಯೇಸು ಲೇವಿಯ ಮನೆಯಲ್ಲಿ ಊಟಮಾಡುತ್ತಿದ್ದನು. ಅಲ್ಲಿ ಅನೇಕ ಸುಂಕದ ಅಧಿಕಾರಿಗಳು ಮತ್ತು ಇತರ ಕೆಟ್ಟ ಜನರು ಸಹ ಯೇಸು ಮತ್ತು ಆತನ ಶಿಷ್ಯರ ಸಂಗಡ ಊಟಮಾಡುತ್ತಿದ್ದರು. ಈ ಜನರಲ್ಲಿ ಅನೇಕರು ಯೇಸುವಿನ ಹಿಂಬಾಲಕರಾಗಿದ್ದರು.
ಈ ಸುಂಕದ ಅಧಿಕಾರಿಗಳೊಂದಿಗೆ ಮತ್ತು ಇತರ ಕೆಟ್ಟ ಜನರೊಂದಿಗೆ ಯೇಸು ಊಟಮಾಡುತ್ತಿರುವುದನ್ನು ಧರ್ಮೋಪದೇಶಕರು ಮತ್ತು ಫರಿಸಾಯರು ನೋಡಿ ಆತನ ಶಿಷ್ಯರಿಗೆ, “ಯೇಸು ಪಾಪಿಗಳೊಂದಿಗೆ ಮತ್ತು ಸುಂಕದ ಅಧಿಕಾರಿಗಳೊಂದಿಗೆ ಏಕೆ ಊಟ ಮಾಡುತ್ತಾನೆ?” ಎಂದು ಕೇಳಿದರು.
ಬಳಿಕ ಯೇಸು ಅವರಿಗೆ, “ಆರೋಗ್ಯವಂತರಿಗೆ ವೈದ್ಯನ ಅಗತ್ಯವಿಲ್ಲ, ಆರೋಗ್ಯವಿಲ್ಲದವರಿಗೆ ವೈದ್ಯನ ಅಗತ್ಯವಿದೆ. ನಾನು ನೀತಿವಂತರನ್ನು ಕರೆಯಲು ಬರಲಿಲ್ಲ, ಪಾಪಿಗಳನ್ನು ಕರೆಯಲು ಬಂದೆನು” ಎಂದು ಹೇಳಿದನು.
(ಮತ್ತಾಯ 9:14-17; ಲೂಕ 5:33-39) ಯೋಹಾನನ ಶಿಷ್ಯರು ಮತ್ತು ಫರಿಸಾಯರು ಉಪವಾಸ ಮಾಡುತ್ತಿದ್ದರು. ಕೆಲವು ಜನರು ಯೇಸುವಿನ ಬಳಿಗೆ ಬಂದು, “ಯೋಹಾನನ ಶಿಷ್ಯರು ಮತ್ತು ಫರಿಸಾಯರ ಹಿಂಬಾಲಕರು ಉಪವಾಸ ಮಾಡುತ್ತಾರೆ. ಆದರೆ ನಿನ್ನ ಶಿಷ್ಯರು ಏಕೆ ಉಪವಾಸ ಮಾಡುವುದಿಲ್ಲ?” ಎಂದು ಕೇಳಿದರು.
“ಒಬ್ಬ ವ್ಯಕ್ತಿಯು ತನ್ನ ಹಳೆಯ ಮೇಲಂಗಿಯ ಹರಕಿಗೆ ಹೊಸ ಬಟ್ಟೆಯನ್ನು ತೇಪೆ ಹಚ್ಚುವುದಿಲ್ಲ. ಒಂದುವೇಳೆ ಹಚ್ಚಿದರೆ, ಆ ತೇಪೆಯು ಹಿಂಜಿಕೊಂಡು ಆ ಹರಕನ್ನು ಮತ್ತಷ್ಟು ದೊಡ್ಡದನ್ನಾಗಿ ಮಾಡುತ್ತದೆ.
ಹಾಗೆಯೇ, ಜನರು ಹೊಸ ದ್ರಾಕ್ಷಾರಸವನ್ನು ಹಳೆಯ ಬುದ್ದಲಿಗಳಲ್ಲಿ ಹಾಕಿಡುವುದಿಲ್ಲ. ಏಕೆಂದರೆ ಅದು ಬುದ್ದಲಿಗಳನ್ನು ಒಡೆದುಹಾಕುವುದರಿಂದ ದ್ರಾಕ್ಷಾರಸವೂ ಹಾಳಾಗುತ್ತದೆ. ಆದ್ದರಿಂದ ಜನರು ಯಾವಾಗಲೂ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡುತ್ತಾರೆ” ಎಂದು ಉತ್ತರಕೊಟ್ಟನು.
(ಮತ್ತಾಯ 12:1-8; ಲೂಕ 6:1-5) ಸಬ್ಬತ್‌ದಿನದಂದು, ಯೇಸು ತನ್ನ ಶಿಷ್ಯರೊಂದಿಗೆ ಕೆಲವು ಹೊಲಗಳ ಮೂಲಕ ಹಾದುಹೋಗುತ್ತಿದ್ದನು. ಶಿಷ್ಯರು ತಿನ್ನಲು ಕೆಲವು ಕಾಳಿನ ತೆನೆಗಳನ್ನು ಕಿತ್ತುಕೊಂಡರು.
ಅದು ಮಹಾಯಾಜಕನಾದ ಅಬಿಯಾತರನ ಕಾಲ. ದಾವೀದನು ದೇವಾಲಯಕ್ಕೆ ಹೋಗಿ, ದೇವರಿಗೆ ಅರ್ಪಿಸಿದ ರೊಟ್ಟಿಯನ್ನು ತಿಂದನು. ಯಾಜಕರು ಮಾತ್ರ ಆ ರೊಟ್ಟಿಯನ್ನು ತಿನ್ನತಕ್ಕದ್ದೆಂದು ಮೋಶೆಯ ಧರ್ಮಶಾಸ್ತ್ರ ಹೇಳುತ್ತದೆ. ದಾವೀದನು ತನ್ನೊಂದಿಗಿದ್ದ ಜನರಿಗೂ ಆ ರೊಟ್ಟಿಯನ್ನು ನೀಡಿದನು” ಎಂದು ಉತ್ತರಕೊಟ್ಟನು.