Bible Languages

Indian Language Bible Word Collections

Bible Versions

Books

Mark Chapters

Mark 2 Verses

Bible Versions

Books

Mark Chapters

Mark 2 Verses

1 ಕೆಲವು ದಿನಗಳ ತರುವಾಯ, ಯೇಸು ಕಪೆರ್ನೌಮಿಗೆ ಹಿಂದಿರುಗಿ ಬಂದನು. ಯೇಸು ಮನೆಯಲ್ಲಿದ್ದಾನೆಂಬ ಸುದ್ದಿಯು ಹಬ್ಬಿತು.
2 ಜನರು ಗುಂಪುಗುಂಪಾಗಿ ಯೇಸುವಿನ ಉಪದೇಶವನ್ನು ಕೇಳಲು ಒಟ್ಟುಗೂಡಿದರು. ಮನೆಯು ತುಂಬಿಹೋಯಿತು. ಅಲ್ಲಿ ನಿಲ್ಲಲು ಹೊರಗಡೆಯಲ್ಲಿಯೂ ಸ್ಥಳವಿರಲಿಲ್ಲ. ಯೇಸು ಉಪದೇಶಿಸುತ್ತಿದ್ದನು.
3 ಕೆಲವು ಜನರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಆತನ ಬಳಿಗೆ ತಂದರು. ಅವನನ್ನು ನಾಲ್ಕು ಮಂದಿ ಹೊತ್ತುಕೊಂಡಿದ್ದರು.
4 ಮನೆಯು ಜನರಿಂದ ತುಂಬಿಹೋಗಿದ್ದುದರಿಂದ ಅವರು ಅವನನ್ನು ಯೇಸುವಿನ ಬಳಿಗೆ ತರಲಾಗಲಿಲ್ಲ. ಆದ್ದರಿಂದ ಅವರು ಯೇಸುವಿದ್ದ ಮನೆಯ ಮೇಲ್ಛಾವಣೆಯ ಮೇಲಕ್ಕೆ ಹೋಗಿ ಯೇಸುವಿದ್ದ ಸ್ಥಳದ ಮೇಲೆ ಹೆಂಚುಗಳನ್ನು ತೆಗೆದುಹಾಕಿದರು. ಹೀಗೆ ಅಲ್ಲಿ ಒಂದು ದ್ವಾರವನ್ನು ಮಾಡಿ ರೋಗಿಯನ್ನು ಹಾಸಿಗೆಯ ಸಮೇತ ಕೆಳಗಿಳಿಸಿದರು.
5 ಈ ಜನರ ದೊಡ್ಡ ನಂಬಿಕೆಯನ್ನು ಕಂಡ ಯೇಸು ರೋಗಿಗೆ, “ಯುವಕನೇ, ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ” ಎಂದು ಹೇಳಿದನು.
6 ಕೆಲವು ಮಂದಿ ಧರ್ಮೋಪದೇಶಕರು ಅಲ್ಲಿ ಕುಳಿತಿದ್ದರು. ಯೇಸು ಹೇಳಿದ್ದನ್ನು ಕೇಳಿದ ಅವರು,
7 “ಇವನು ಹೀಗೇಕೆ ಹೇಳುತ್ತಿದ್ದಾನೆ?ೆ ಇದು ದೇವದೂಷಣೆ! ದೇವರೊಬ್ಬನೇ ಪಾಪಗಳನ್ನು ಕ್ಷಮಿಸಲು ಸಾಧ್ಯ” ಎಂದು ತಮ್ಮ ಮನಸ್ಸಿನಲ್ಲಿ ಅಂದುಕೊಂಡರು.
8 ಧರ್ಮೋಪದೇಶಕರ ಆಲೋಚನೆಯನ್ನು ತಕ್ಷಣವೇ ಗ್ರಹಿಸಿಕೊಂಡ ಯೇಸು ಅವರಿಗೆ, “ನೀವು ಹೀಗೇಕೆ ಆಲೋಚಿಸುತ್ತೀರಿ?
9 ಯಾವುದು ಸುಲಭ? ‘ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ’ ಎಂದು ಹೇಳುವುದೋ? ಇಲ್ಲವೇ, ‘ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ಹೋಗು’ ಎಂದು ಹೇಳುವುದೋ?
10 ಆದರೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸುವ ಅಧಿಕಾರವಿದೆ ಎಂಬುದು ನಿಮಗೆ ತಿಳಿಯಬೇಕು” ಎಂದು ಹೇಳಿದನು. ಬಳಿಕ ಯೇಸು ರೋಗಿಗೆ,
11 “ನಾನು ನಿನಗೆ ಹೇಳುತ್ತಿದ್ದೇನೆ, ಎದ್ದು, ನಿನ್ನ ಹಾಸಿಗೆಯನ್ನು ತೆಗೆದುಕೊಂಡು ಮನೆಗೆ ಹೋಗು” ಎಂದನು.
12 ಆ ಕೂಡಲೇ ರೋಗಿಯು ಎದ್ದುನಿಂತು, ತನ್ನ ಹಾಸಿಗೆಯನ್ನು ತೆಗೆದುಕೊಂಡು ಅಲ್ಲಿಂದ ಹೊರಗೆ ಹೋದನು. ಇದನ್ನು ಕಂಡ ಆ ಜನರೆಲ್ಲರೂ ಆಶ್ಚರ್ಯಚಕಿತರಾಗಿ, “ನಾವು ಹಿಂದೆಂದೂ ಇಂಥ ಸಂಗತಿಯನ್ನು ನೋಡಿಯೇ ಇಲ್ಲ” ಎಂದು ಹೇಳಿ ದೇವರನ್ನು ಕೊಂಡಾಡಿದರು.
13 ಯೇಸು ಮತ್ತೆ ಸರೋವರಕ್ಕೆ ಹೋದನು. ಅನೇಕ ಜನರು ಆತನನ್ನು ಹಿಂಬಾಲಿಸಿ ಅಲ್ಲಿಗೆ ಹೋದದ್ದರಿಂದ ಆತನು ಅವರಿಗೆ ಉಪದೇಶಿಸಿದನು.
14 ಯೇಸು ಸರೋವರದ ತೀರದಲ್ಲಿ ನಡೆದು ಹೋಗುತ್ತಿದ್ದಾಗ ಸುಂಕವಸೂಲಿ ಮಾಡುತ್ತಿದ್ದ ಅಲ್ಫಾಯನ ಮಗನಾದ ಲೇವಿಯನ್ನು ಕಂಡನು. ಲೇವಿಯು ಸುಂಕದಕಟ್ಟೆಯಲ್ಲಿ ಕುಳಿತಿದ್ದನು. ಯೇಸು ಅವನಿಗೆ, “ನನ್ನನ್ನು ಹಿಂಬಾಲಿಸು” ಎಂದು ಹೇಳಿದನು. ಆಗ ಅವನು ಎದ್ದು ಯೇಸುವನ್ನು ಹಿಂಬಾಲಿಸಿದನು.
15 ಅಂದು ಸ್ವಲ್ಪ ಹೊತ್ತಾದ ಬಳಿಕ ಯೇಸು ಲೇವಿಯ ಮನೆಯಲ್ಲಿ ಊಟಮಾಡುತ್ತಿದ್ದನು. ಅಲ್ಲಿ ಅನೇಕ ಸುಂಕದ ಅಧಿಕಾರಿಗಳು ಮತ್ತು ಇತರ ಕೆಟ್ಟ ಜನರು ಸಹ ಯೇಸು ಮತ್ತು ಆತನ ಶಿಷ್ಯರ ಸಂಗಡ ಊಟಮಾಡುತ್ತಿದ್ದರು. ಈ ಜನರಲ್ಲಿ ಅನೇಕರು ಯೇಸುವಿನ ಹಿಂಬಾಲಕರಾಗಿದ್ದರು.
16 ಈ ಸುಂಕದ ಅಧಿಕಾರಿಗಳೊಂದಿಗೆ ಮತ್ತು ಇತರ ಕೆಟ್ಟ ಜನರೊಂದಿಗೆ ಯೇಸು ಊಟಮಾಡುತ್ತಿರುವುದನ್ನು ಧರ್ಮೋಪದೇಶಕರು ಮತ್ತು ಫರಿಸಾಯರು ನೋಡಿ ಆತನ ಶಿಷ್ಯರಿಗೆ, “ಯೇಸು ಪಾಪಿಗಳೊಂದಿಗೆ ಮತ್ತು ಸುಂಕದ ಅಧಿಕಾರಿಗಳೊಂದಿಗೆ ಏಕೆ ಊಟ ಮಾಡುತ್ತಾನೆ?” ಎಂದು ಕೇಳಿದರು.
17 ಬಳಿಕ ಯೇಸು ಅವರಿಗೆ, “ಆರೋಗ್ಯವಂತರಿಗೆ ವೈದ್ಯನ ಅಗತ್ಯವಿಲ್ಲ, ಆರೋಗ್ಯವಿಲ್ಲದವರಿಗೆ ವೈದ್ಯನ ಅಗತ್ಯವಿದೆ. ನಾನು ನೀತಿವಂತರನ್ನು ಕರೆಯಲು ಬರಲಿಲ್ಲ, ಪಾಪಿಗಳನ್ನು ಕರೆಯಲು ಬಂದೆನು” ಎಂದು ಹೇಳಿದನು.
18 ಯೋಹಾನನ ಶಿಷ್ಯರು ಮತ್ತು ಫರಿಸಾಯರು ಉಪವಾಸ ಮಾಡುತ್ತಿದ್ದರು. ಕೆಲವು ಜನರು ಯೇಸುವಿನ ಬಳಿಗೆ ಬಂದು, “ಯೋಹಾನನ ಶಿಷ್ಯರು ಮತ್ತು ಫರಿಸಾಯರ ಹಿಂಬಾಲಕರು ಉಪವಾಸ ಮಾಡುತ್ತಾರೆ. ಆದರೆ ನಿನ್ನ ಶಿಷ್ಯರು ಏಕೆ ಉಪವಾಸ ಮಾಡುವುದಿಲ್ಲ?” ಎಂದು ಕೇಳಿದರು.
19 ಯೇಸು, “ಮದುವೆಯಲ್ಲಿ ಮದುಮಗನು ತಮ್ಮ ಜೊತೆಯಲ್ಲಿ ಇರುವಾಗ ಅವನ ಗೆಳೆಯರು ವ್ಯಸನಪಡುವುದಿಲ್ಲ. ಉಪವಾಸ ಮಾಡುವುದಿಲ್ಲ.
20 ಆದರೆ ಮದುಮಗನು ಅವರನ್ನು ಬಿಟ್ಟು ಹೋಗುವ ಕಾಲ ಬರುತ್ತದೆ. ಆಗ ಅವನ ಗೆಳೆಯರು ವ್ಯಸನ ಪಡುತ್ತಾರೆ, ಉಪವಾಸ ಮಾಡುತ್ತಾರೆ.
21 ಒಬ್ಬ ವ್ಯಕ್ತಿಯು ತನ್ನ ಹಳೆಯ ಮೇಲಂಗಿಯ ಹರಕಿಗೆ ಹೊಸ ಬಟ್ಟೆಯನ್ನು ತೇಪೆ ಹಚ್ಚುವುದಿಲ್ಲ. ಒಂದುವೇಳೆ ಹಚ್ಚಿದರೆ, ಆ ತೇಪೆಯು ಹಿಂಜಿಕೊಂಡು ಆ ಹರಕನ್ನು ಮತ್ತಷ್ಟು ದೊಡ್ಡದನ್ನಾಗಿ ಮಾಡುತ್ತದೆ.
22 ಹಾಗೆಯೇ, ಜನರು ಹೊಸ ದ್ರಾಕ್ಷಾರಸವನ್ನು ಹಳೆಯ ಬುದ್ದಲಿಗಳಲ್ಲಿ ಹಾಕಿಡುವುದಿಲ್ಲ. ಏಕೆಂದರೆ ಅದು ಬುದ್ದಲಿಗಳನ್ನು ಒಡೆದುಹಾಕುವುದರಿಂದ ದ್ರಾಕ್ಷಾರಸವೂ ಹಾಳಾಗುತ್ತದೆ. ಆದ್ದರಿಂದ ಜನರು ಯಾವಾಗಲೂ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡುತ್ತಾರೆ” ಎಂದು ಉತ್ತರಕೊಟ್ಟನು.
23 ಸಬ್ಬತ್‌ದಿನದಂದು, ಯೇಸು ತನ್ನ ಶಿಷ್ಯರೊಂದಿಗೆ ಕೆಲವು ಹೊಲಗಳ ಮೂಲಕ ಹಾದುಹೋಗುತ್ತಿದ್ದನು. ಶಿಷ್ಯರು ತಿನ್ನಲು ಕೆಲವು ಕಾಳಿನ ತೆನೆಗಳನ್ನು ಕಿತ್ತುಕೊಂಡರು.
24 ಫರಿಸಾಯರು ಇದನ್ನು ಕಂಡು ಯೇಸುವಿಗೆ, “ನಿನ್ನ ಶಿಷ್ಯರು ಹೀಗೇಕೆ ಮಾಡುತ್ತಾರೆ? ಸಬ್ಬತ್‌ದಿನದಂದು ಹೀಗೆ ಮಾಡುವುದು ಯೆಹೊದ್ಯರ ನಿಯಮಗಳಿಗೆ ವಿರುದ್ಧವಲ್ಲವೆ?” ಎಂದು ಕೇಳಿದರು.
25 ಯೇಸು ಅವರಿಗೆ, “ದಾವೀದನು ಮತ್ತು ಅವನ ಜನರು ಹಸಿದು ಆಹಾರವನ್ನು ಬಯಸಿದಾಗ ಅವನೇನು ಮಾಡಿದನೆಂಬುದನ್ನು ನೀವು ಓದಿದ್ದೀರಿ.
26 ಅದು ಮಹಾಯಾಜಕನಾದ ಅಬಿಯಾತರನ ಕಾಲ. ದಾವೀದನು ದೇವಾಲಯಕ್ಕೆ ಹೋಗಿ, ದೇವರಿಗೆ ಅರ್ಪಿಸಿದ ರೊಟ್ಟಿಯನ್ನು ತಿಂದನು. ಯಾಜಕರು ಮಾತ್ರ ಆ ರೊಟ್ಟಿಯನ್ನು ತಿನ್ನತಕ್ಕದ್ದೆಂದು ಮೋಶೆಯ ಧರ್ಮಶಾಸ್ತ್ರ ಹೇಳುತ್ತದೆ. ದಾವೀದನು ತನ್ನೊಂದಿಗಿದ್ದ ಜನರಿಗೂ ಆ ರೊಟ್ಟಿಯನ್ನು ನೀಡಿದನು” ಎಂದು ಉತ್ತರಕೊಟ್ಟನು.
27 ನಂತರ ಯೇಸು ಫರಿಸಾಯರಿಗೆ, “ಸಬ್ಬತ್‌ದಿನವನ್ನು ನಿರ್ಮಾಣ ಮಾಡಿರುವುದು ಜನರ ಸಹಾಯಕ್ಕಾಗಿ. ಆದರೆ ಜನರನ್ನು ಸೃಷ್ಟಿಸಿರುವುದು ಸಬ್ಬತ್‌ದಿನಕ್ಕೆ ಅವರು ಅಧೀನರಾಗಿರಲಿ ಎಂದಲ್ಲ.
28 ಆದ್ದರಿಂದ ಮನುಷ್ಯಕುಮಾರನು ಸಬ್ಬತ್‌ದಿನಕ್ಕೂ ಉಳಿದೆಲ್ಲ ದಿನಗಳಿಗೂ ಪ್ರಭುವಾಗಿದ್ದಾನೆ” ಎಂದು ಹೇಳಿದನು.

Mark 2:18 Kannada Language Bible Words basic statistical display

COMING SOON ...

×

Alert

×