(ಮತ್ತಾಯ 13:1-9; 8:4-8) ಮತ್ತೊಂದು ಸಮಯದಲ್ಲಿ ಯೇಸು ಸರೋವರದ ತೀರದಲ್ಲಿ ಉಪದೇಶಿಸಲಾರಂಭಿಸಿದನು. ಅನೇಕಾನೇಕ ಜನರು ಆತನ ಸುತ್ತಲೂ ಸೇರಿದರು. ಯೇಸು ಒಂದು ದೋಣಿಯೊಳಕ್ಕೆ ಹೋಗಿ ಕುಳಿತು ಸರೋವರದ ದಡದಿಂದ ಸ್ವಲ್ಪದೂರ ಹೋದನು. ಜನರೆಲ್ಲರೂ ಸರೋವರದ ದಡದ ಮೇಲಿದ್ದರು.
ಬೇರೆ ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದವು. ಆ ಬೀಜಗಳು ಮೊಳೆತು, ಬೆಳೆದು, ಫಲಬಿಟ್ಟವು. ಕೆಲವು ಗಿಡಗಳು ಮೂವತ್ತರಷ್ಟು ಹೆಚ್ಟಾಗಿ, ಇನ್ನು ಕೆಲವು ಗಿಡಗಳು ಅರವತ್ತರಷ್ಟು ಹೆಚ್ಚಾಗಿ ಮತ್ತು ಬೇರೆ ಕೆಲವು ಗಿಡಗಳು ನೂರರಷ್ಟು ಹೆಚ್ಚಾಗಿ ಫಲಕೊಟ್ಟವು.”
(ಮತ್ತಾಯ 13:18-23; ಲೂಕ 8:11-15) ನಂತರ ಯೇಸು ತನ್ನ ಶಿಷ್ಯರಿಗೆ, “ನಿಮಗೆ ಈ ಸಾಮ್ಯ ಅರ್ಥವಾಯಿತೇ? ನೀವು ಇದನ್ನೇ ಅರ್ಥಮಾಡಿಕೊಳ್ಳದಿದ್ದರೆ ಬೇರೆ ಯಾವ ಸಾಮ್ಯವನ್ನು ಅರ್ಥಮಾಡಿಕೊಳ್ಳುವಿರಿ?
ಆದರೆ ಆ ವಾಕ್ಯವು ತಮ್ಮಲ್ಲಿ ಆಳವಾಗಿ ಬೇರೂರಲು ಅವರು ಅವಕಾಶ ನೀಡುವುದಿಲ್ಲ. ಅವರು ಆ ವಾಕ್ಯವನ್ನು ಸ್ವಲ್ಪಕಾಲ ಮಾತ್ರ ಸ್ವೀಕರಿಸಿಕೊಂಡಿರುತ್ತಾರೆ. ಆ ವಾಕ್ಯದ ದೆಸೆಯಿಂದ ತೊಂದರೆಯಾಗಲಿ ಹಿಂಸೆಯಾಗಲಿ ಬಂದಾಗ ಅವರು ಅದನ್ನು ಬಹುಬೇಗನೆ ತ್ಯಜಿಸುತ್ತಾರೆ. ಇವರೇ ಬೀಜಬಿದ್ದ ಬಂಡೆಯ ನೆಲವಾಗಿದ್ದಾರೆ.
ಆದರೆ ಈ ಜೀವಿತದ ಚಿಂತೆಗಳು, ಹಣದ ಮೇಲಿನ ವ್ಯಾಮೋಹ ಮತ್ತು ಇತರ ಎಲ್ಲಾ ವಿಧವಾದ ಆಸೆಗಳು ಅವರಲ್ಲಿ ಬಿದ್ದ ವಾಕ್ಯಕ್ಕೆ ಬೆಳೆಯಲು ಅವಕಾಶ ಕೊಡುವುದಿಲ್ಲ. ಆದ್ದರಿಂದ ಅವರ ಜೀವಿತದಲ್ಲಿ ವಾಕ್ಯವು ಫಲ ಫಲಿಸುವುದಿಲ್ಲ.
“ಇನ್ನು ಕೆಲವರು ಬೀಜಬಿದ್ದ ಒಳ್ಳೆಯ ನೆಲದಂತಿದ್ದಾರೆ. ಅವರು ವಾಕ್ಯವನ್ನು ಸ್ವೀಕರಿಸಿಕೊಂಡು ಫಲವನ್ನು ಫಲಿಸುತ್ತಾರೆ. ಕೆಲವು ಸಂದರ್ಭಗಳಲ್ಲಿ ಮೂವತ್ತರಷ್ಟು ಹೆಚ್ಚಾಗಿ, ಇನ್ನು ಕೆಲವು ಸಂದರ್ಭಗಳಲ್ಲಿ ಅರವತ್ತರಷ್ಟು ಹೆಚ್ಚಾಗಿ, ಮತ್ತೆ ಕೆಲವು ಸಂಧರ್ಭಗಳಲ್ಲಿ ನೂರರಷ್ಟು ಹೆಚ್ಚಾಗಿ ಫಲ ಫಲಿಸುತ್ತಾರೆ” ಎಂದು ಹೇಳಿದನು.
ಆದರೆ ನೀವು ಈ ಕಾಳನ್ನು ಬಿತ್ತಿದಾಗ, ಅದು ಬೆಳೆದು, ನಿಮ್ಮ ತೋಟದ ಇತರ ಗಿಡಗಳಿಗಿಂತ ಅತಿ ದೊಡ್ಡದಾಗುತ್ತದೆ. ಅದಕ್ಕೆ ದೊಡ್ಡದೊಡ್ಡ ರೆಂಬೆಗಳಿರುತ್ತವೆ. ಕಾಡಿನ ಹಕ್ಕಿಗಳು ಬಂದು, ಅಲ್ಲಿ ಗೂಡುಗಳನ್ನು ಕಟ್ಟಿಕೊಂಡು ಸೂರ್ಯನ ತಾಪದಿಂದ ತಪ್ಪಿಸಿಕೊಳ್ಳುತ್ತವೆ” ಎಂದು ಹೇಳಿದನು.
ಯೇಸುವು ದೋಣಿಯ ಹಿಂಭಾಗದಲ್ಲಿ ತಲೆದಿಂಬಿನ ಮೇಲೆ ತಲೆಯನ್ನಿಟ್ಟು ನಿದ್ರಿಸುತ್ತಿದ್ದನು. ಶಿಷ್ಯರು ಆತನ ಬಳಿಗೆ ಹೋಗಿ, ಆತನನ್ನು ಎಬ್ಬಿಸಿ, “ಗುರುವೇ, ನೀನು ನಮ್ಮ ಬಗ್ಗೆ ಚಿಂತಿಸುವುದಿಲ್ಲವೆ? ನಾವು ಮುಳುಗಿಹೋಗುತ್ತಿದ್ದೇವೆ!” ಎಂದರು.