1
|
ಯೇಸು ಕ್ರಿಸ್ತನ ವಂಶಾವಳಿಯಿದು. ಆತನು ದಾವೀದನ ವಂಶದವನು. ದಾವೀದನು ಅಬ್ರಹಾಮನ ವಂಶದವನು. |
2
|
ಅಬ್ರಹಾಮನು ಇಸಾಕನ ತಂದೆ. ಇಸಾಕನು ಯಾಕೋಬನ ತಂದೆ. ಯಾಕೋಬನು ಯೂದ ಮತ್ತು ಅವನ ಸಹೋದರರ ತಂದೆ. |
3
|
ಯೂದನು ಪೆರೆಚನ ಮತ್ತು ಜೆರಹನ ತಂದೆ. (ಅವರ ತಾಯಿ ತಾಮರಳು.) ಪೆರೆಚನು ಹೆಚ್ರೋನನ ತಂದೆ. ಹೆಚ್ರೋನನು ಅರಾಮನ ತಂದೆ. |
4
|
ಅರಾಮನು ಅಮ್ಮಿನಾದಾಬನ ತಂದೆ. ಅಮ್ಮಿನಾದಾಬನು ನಹಶೋನನ ತಂದೆ. ನಹಶೋನನು ಸಲ್ಮೋನನ ತಂದೆ. |
5
|
ಸಲ್ಮೋನನು ಬೋವಜನ ತಂದೆ. (ಬೋವಜನ ತಾಯಿ ರಹಾಬಳು.) ಬೋವಜನು ಓಬೇದನ ತಂದೆ. (ಓಬೇದನ ತಾಯಿ ರೂತಳು.) ಓಬೇದನು ಇಷಯನ ತಂದೆ. |
6
|
ಇಷಯನು ಅರಸನಾದ ದಾವೀದನ ತಂದೆ. ದಾವೀದನು ಸೊಲೊಮೋನನ ತಂದೆ. (ಸೊಲೊಮೋನನ ತಾಯಿ ಊರೀಯನ ಹೆಂಡತಿಯಾಗಿದ್ದಳು.) |
7
|
ಸೊಲೊಮೋನನು ರೆಹಬ್ಬಾಮನ ತಂದೆ. ರೆಹಬ್ಬಾಮನು ಅಬೀಯನ ತಂದೆ. ಅಬೀಯನು ಆಸನ ತಂದೆ. |
8
|
ಆಸನು ಯೆಹೋಷಾಫಾಟನ ತಂದೆ. ಯೆಹೋಷಾಫಾಟನು ಯೆಹೋರಾಮನ ತಂದೆ. ಯೆಹೋರಾಮನು ಉಜ್ಜೀಯನ ತಂದೆ. |
9
|
ಉಜ್ಜೀಯನು ಯೋತಾಮನ ತಂದೆ. ಯೋತಾಮನು ಆಹಾಜನ ತಂದೆ. ಆಹಾಜನು ಹಿಜ್ಕೀಯನ ತಂದೆ. |
10
|
ಹಿಜ್ಕೀಯನು ಮನಸ್ಸೆಯ ತಂದೆ. ಮನಸ್ಸೆಯು ಆಮೋನನ ತಂದೆ. ಆಮೋನನು ಯೋಷೀಯನ ತಂದೆ. |
11
|
ಯೋಷೀಯನು ಯೆಕೊನ್ಯ ಮತ್ತು ಅವನ ಸಹೋದರರ ತಂದೆ. (ಈ ಸಮಯದಲ್ಲಿಯೇ ಯೆಹೂದ್ಯ ಜನರನ್ನು ಗುಲಾಮಗಿರಿಗಾಗಿ ಬಾಬಿಲೋನಿಗೆ ಕೊಂಡೊಯ್ದದ್ದು.) |
12
|
ಯೆಹೂದ್ಯರನ್ನು ಬಾಬಿಲೋನಿಗೆ ಕೊಂಡೊಯ್ದ ನಂತರದ ಕುಟುಂಬದ ಚರಿತ್ರೆ: ಯೆಕೊನ್ಯನು ಶೆಯಲ್ತಿಯೇಲನ ತಂದೆ. ಶೆಯಲ್ತಿಯೇಲನು ಜೆರುಬ್ಬಾಬೆಲನ ತಂದೆ. |
13
|
ಜೆರುಬ್ಬಾಬೆಲನು ಅಬಿಹೂದನ ತಂದೆ. ಅಬಿಹೂದನು ಎಲ್ಯಕೀಮನ ತಂದೆ. ಎಲ್ಯಕೀಮನು ಅಜೋರನ ತಂದೆ. |
14
|
ಅಜೋರನು ಸದೋಕನ ತಂದೆ. ಸದೋಕನು ಅಖೀಮನ ತಂದೆ. ಅಖೀಮನು ಎಲಿಹೂದನ ತಂದೆ. |
15
|
ಎಲಿಹೂದನು ಎಲಿಯಾಜರನ ತಂದೆ. ಎಲಿಯಾಜರನು ಮತ್ತಾನನ ತಂದೆ. ಮತ್ತಾನನು ಯಾಕೋಬನ ತಂದೆ. |
16
|
ಯಾಕೋಬನು ಯೋಸೇಫನ ತಂದೆ. ಯೋಸೇಫನು ಮರಿಯಳ ಗಂಡ. ಮರಿಯಳು ಯೇಸುವಿನ ತಾಯಿ. ಯೇಸುವನ್ನು ಕ್ರಿಸ್ತ ನೆಂದು ಕರೆಯುತ್ತಿದ್ದರು. |
17
|
ಅಬ್ರಹಾಮನಿಂದಿಡಿದು ದಾವೀದನವರೆಗೆ ಹದಿನಾಲ್ಕು ತಲೆಮಾರುಗಳು. ದಾವೀದನಿಂದಿಡಿದು ಬಾಬಿಲೋನಿಗೆ ಸೆರೆಹೊಯ್ದ ಸಮಯದವರೆಗೆ ಹದಿನಾಲ್ಕು ತಲೆಮಾರುಗಳು. ಬಾಬಿಲೋನಿಗೆ ಸೆರೆಹಿಡಿದುಕೊಂಡು ಹೋದಂದಿನಿಂದ ಕ್ರಿಸ್ತನು ಹುಟ್ಟುವವರೆಗೆ ಹದಿನಾಲ್ಕು ತಲೆಮಾರುಗಳು. |
18
|
ಯೇಸು ಕ್ರಿಸ್ತನ ತಾಯಿ ಮರಿಯಳು. ಯೇಸುವಿನ ಜನನ ಈ ರೀತಿ ಸಂಭವಿಸಿತು: ಮದುವೆಮಾಡಿಕೊಳ್ಳಲು ಯೋಸೇಫನಿಗೂ ಮರಿಯಳಿಗೂ ನಿಶ್ಚಿತಾರ್ಥವಾಗಿತ್ತು. ಆದರೆ ಮದುವೆಗೆ ಮೊದಲೇ ತಾನು ಗರ್ಭಿಣಿಯಾಗಿರುವುದು ಮರಿಯಳಿಗೆ ತಿಳಿದುಬಂತು. ಮರಿಯಳು ಪವಿತ್ರಾತ್ಮನ ಪ್ರಭಾವದಿಂದ ಗರ್ಭಿಣಿಯಾಗಿದ್ದಳು. |
19
|
ಮರಿಯಳನ್ನು ಮದುವೆಯಾಗಲಿದ್ದ ಯೋಸೇಫನು ನೀತಿವಂತನಾಗಿದ್ದನು. ಮರಿಯಳನ್ನು ಜನರ ಮುಂದೆ ನಾಚಿಕೆಪಡಿಸಲು ಅವನು ಇಷ್ಟಪಡಲಿಲ್ಲ. ಆದ್ದರಿಂದ ಅವನು ಗುಟ್ಟಾಗಿ ನಿಶ್ಚಿತಾರ್ಥವನ್ನು ರದ್ದುಗೊಳಿಸಬೇಕೆಂದಿದ್ದನು. |
20
|
ಯೋಸೇಫನು ಹೀಗೆ ಆಲೋಚಿಸಿಕೊಂಡನಂತರ, ಪ್ರಭುವಿನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡನು. ಆ ದೂತನು, “ದಾವೀದನ ಮಗನಾದ ಯೋಸೇಫನೇ, ಮರಿಯಳನ್ನು ನಿನ್ನ ಹೆಂಡತಿಯಾಗಿ ಸ್ವೀಕರಿಸಲು ಭಯಪಡಬೇಡ. ಆಕೆ ಪವಿತ್ರಾತ್ಮನ ಪ್ರಭಾವದಿಂದ ಗರ್ಭಿಣಿಯಾಗಿದ್ದಾಳೆ. |
21
|
ಆಕೆ ಒಬ್ಬ ಮಗನನ್ನು ಹೆರುವಳು. ನೀನು ಆ ಮಗುವಿಗೆ ಯೇಸು ಎಂದು ಹೆಸರಿಡುವೆ. ನೀನು ಆತನಿಗೆ ಆ ಹೆಸರನ್ನೇ ಇಡು; ಏಕೆಂದರೆ ಆತನು ತನ ಜನರನ್ನು ಅವರ ಪಾಪಗಳಿಂದ ರಕ್ಷಿಸುವನು” ಎಂದು ಹೇಳಿದನು. |
22
|
ಪ್ರವಾದಿಯ ಮೂಲಕ ಪ್ರಭು ತಿಳಿಸಿದ್ದೆಲ್ಲ ನೆರವೇರುವಂತೆ ಇದೆಲ್ಲಾ ನಡೆಯಿತು. |
23
|
ಅದೇನೆಂದರೆ: “ಕನ್ನಿಕೆಯೊಬ್ಬಳು ಗರ್ಭಿಣಿಯಾಗಿ ಒಬ್ಬ ಮಗನಿಗೆ ಜನ್ಮ ಕೊಡುತ್ತಾಳೆ. ಆತನಿಗೆ ಇಮ್ಮಾನುವೇಲ್ ಎಂಬ ಹೆಸರನ್ನು ಇಡುವರು.” (ಇಮ್ಮಾನುವೇಲ್ ಎಂದರೆ “ದೇವರು ನಮ್ಮ ಸಂಗಡ ಇದ್ದಾನೆ” ಎಂದರ್ಥ.) |
24
|
ಯೋಸೇಫನು ಎಚ್ಚರಗೊಂಡ ಮೇಲೆ ಪ್ರಭುವಿನ ದೂತನು ಕನಸಿನಲ್ಲಿ ಹೇಳಿದ್ದಂತೆಯೇ ಮರಿಯಳನ್ನು ಪತ್ನಿಯನ್ನಾಗಿ ಸ್ವೀಕರಿಸಿಕೊಂಡನು. |
25
|
ಆದರೆ ಮರಿಯಳು ಮಗನನ್ನು ಹೆರುವ ತನಕ ಯೋಸೇಫನು ಅವಳೊಂದಿಗೆ ಶರೀರ ಸಂಬಂಧವಿಲ್ಲದೆ ಇದ್ದನು. ಯೋಸೇಫನು ಆ ಮಗುವಿಗೆ “ಯೇಸು” ಎಂದು ಹೆಸರಿಟ್ಟನು. |
Matthew 1:12 Kannada Language Bible Words basic statistical display
COMING SOON ...