(ಮಾರ್ಕ 3:13-19; 6:7-13; ಲೂಕ 6:12-16; 9:1-6) ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು, ಅವರಿಗೆ ದುರಾತ್ಮಗಳನ್ನು ಬಿಡಿಸುವುದಕ್ಕೂ ಎಲ್ಲಾ ತರದ ವ್ಯಾಧಿ ಮತ್ತು ಕಾಯಿಲೆಗಳನ್ನು ವಾಸಿಮಾಡುವುದಕ್ಕೂ ಅಧಿಕಾರ ಕೊಟ್ಟನು.
ಯೇಸು ಈ ಹನ್ನೆರಡು ಅಪೊಸ್ತಲರಿಗೆ ಕೆಲವು ಆಜ್ಞೆಗಳನ್ನು ನೀಡಿ ಪರಲೋಕರಾಜ್ಯವನ್ನು ಕುರಿತು ತಿಳಿಸುವುದಕ್ಕಾಗಿ ಅವರನ್ನು ಕಳುಹಿಸಿದನು. ಯೇಸು ಅವರಿಗೆ ಹೇಳಿದ್ದೇನೆಂದರೆ: “ಯೆಹೂದ್ಯರಲ್ಲದ ಜನರ ಬಳಿಗಾಗಲಿ ಸಮಾರ್ಯದವರು ವಾಸಿಸುವ ಯಾವ ಊರಿಗಾಗಲಿ ಹೋಗಬೇಡಿ.
ರೋಗಿಗಳನ್ನು ವಾಸಿಮಾಡಿರಿ. ಸತ್ತವರನ್ನು ಬದುಕಿಸಿರಿ. ಕುಷ್ಠರೋಗಿಗಳನ್ನು ವಾಸಿಮಾಡಿರಿ. ಜನರನ್ನು ದೆವ್ವಗಳಿಂದ ಬಿಡಿಸಿರಿ. ನಾನು ನಿಮಗೆ ಈ ಅಧಿಕಾರಗಳನ್ನು ಉಚಿತವಾಗಿ ಕೊಡುತ್ತೇನೆ. ಆದ್ದರಿಂದ ಬೇರೆಯವರಿಗೆ ಉಚಿತವಾಗಿ ಸಹಾಯಮಾಡಿ.
ಆ ಮನೆಯಲ್ಲಿರುವ ಜನರು ನಿಮ್ಮನ್ನು ಸ್ವಾಗತಿಸಿದರೆ ನಿಮ್ಮ ಆಶೀರ್ವಾದಕ್ಕೆ ಅವರು ಯೋಗ್ಯರಾಗಿರುವುದರಿಂದ ಆ ಆಶೀರ್ವಾದವು ಅವರಿಗೆ ದೊರೆಯಲಿ. ಅವರು ನಿಮ್ಮನ್ನು ಸ್ವಾಗತಿಸದಿದ್ದರೆ, ನಿಮ್ಮ ಆಶೀರ್ವಾದವು ನಿಮಗೇ ಹಿಂತಿರುಗಿಬರಲಿ.
ಒಂದು ಮನೆಯವರು ಅಥವಾ ಒಂದು ಊರಿನವರು ನಿಮ್ಮನ್ನು ಸ್ವಾಗತಿಸದಿದ್ದರೆ ಇಲ್ಲವೇ ನಿಮ್ಮ ಮಾತನ್ನು ಕೇಳದಿದ್ದರೆ ನೀವು ಆ ಸ್ಥಳವನ್ನು ಬಿಟ್ಟುಹೋಗುವಾಗ, ನಿಮ್ಮ ಕಾಲಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ.
(ಮಾರ್ಕ 13:9-13; ಲೂಕ 21:12-17) “ಕೇಳಿರಿ! ತೋಳಗಳ ನಡುವೆ ಕುರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತಿದ್ದೇನೆ. ಆದ್ದರಿಂದ ನೀವು ಹಾವುಗಳಂತೆ ಸೂಕ್ಷ್ಮ ಬುದ್ದಿಯುಳ್ಳವರಾಗಿರಿ, ಪಾರಿವಾಳಗಳಂತೆ ಯಾವ ಹಾನಿಯನ್ನೂ ಮಾಡದಿರಿ.
ನಿಮ್ಮನ್ನು ಅಧಿಕಾರಿಗಳ ಸಮ್ಮುಖಕ್ಕೂ ಅರಸುಗಳ ಸಮ್ಮುಖಕ್ಕೂ ಕರೆದುಕೊಂಡು ಹೋಗುವರು. ನನ್ನ ನಿಮಿತ್ತ ಜನರು ನಿಮಗೆ ಹೀಗೆ ಮಾಡುವರು. ಆದರೆ ನೀವು ಆ ಅರಸುಗಳಿಗೂ ಅಧಿಕಾರಿಗಳಿಗೂ ಯಹೂದ್ಯರಲ್ಲದ ಜನರಿಗೂ ನನ್ನ ವಿಷಯವಾಗಿ ಹೇಳುವಿರಿ.
“ಸಹೋದರರು ಸ್ವಂತ ಸಹೋದರರಿಗೆ ವಿರೋಧವಾಗಿ ತಿರುಗಿಬಿದ್ದು ಅವರನ್ನು ಮರಣದಂಡನೆಗೆ ಒಪ್ಪಿಸುವರು. ತಂದೆಯಂದಿರು ತಮ್ಮ ಸ್ವಂತ ಮಕ್ಕಳಿಗೆ ವಿರೋಧವಾಗಿ ತಿರುಗಿಬಿದ್ದು ಅವರನ್ನು ಮರಣದಂಡನೆಗೆ ಒಪ್ಪಿಸುವರು.
ಒಂದು ಊರಿನಲ್ಲಿ ನಿಮ್ಮನ್ನು ಹಿಂಸಿಸಿದರೆ ಮತ್ತೊಂದು ಊರಿಗೆ ಹೋಗಿ. ಮನುಷ್ಯಕುಮಾರನು ಪುನಃ ಬರುವುದಕ್ಕಿಂತ ಮುಂಚೆ ನೀವು ಇಸ್ರೇಲರ ಊರುಗಳಿಗೆಲ್ಲಾ ಹೋಗುವುದನ್ನು ಮುಗಿಸಿರುವುದಿಲ್ಲ ಎಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.
ಶಿಷ್ಯನು ತನ್ನ ಗುರುವಿನಂತಾದರೆ ಸಾಕು. ಆಳು ತನ್ನ ದಣಿಯಂತಾದರೆ ಸಾಕು. ಕುಟುಂಬದ ಹಿರಿಯನನ್ನೇ ಬೆಲ್ಜೆಬೂಲ (ದೆವ್ವ) ಎಂದು ಕರೆದರೆ, ಆ ಕುಟುಂಬದ ಇತರರನ್ನು ಮತ್ತಷ್ಟು ಕೆಟ್ಟ ಹೆಸರಿನಿಂದ ಕರೆಯುವುದಿಲ್ಲವೇ? ಭಯಪಡಬೇಕಾದದ್ದು ದೇವರಿಗೆ, ಮನುಷ್ಯರಿಗಲ್ಲ
ನಾನು ಕತ್ತಲೆಯಲ್ಲಿ (ರಹಸ್ಯವಾಗಿ) ಈ ಸಂಗತಿಗಳನ್ನು ನಿಮಗೆ ಹೇಳುತ್ತಿದ್ದೇನೆ. ಆದರೆ ನೀವು ಈ ಸಂಗತಿಗಳನ್ನು ಬೆಳಕಿನಲ್ಲಿ ಹೇಳಬೇಕೆಂಬುದು ನನ್ನ ಇಷ್ಟ. ನಾನು ಈ ವಿಷಯಗಳನ್ನು ನಿಮಗೆ ಮೆಲ್ಲಗೆ ಹೇಳುತ್ತಿದ್ದೇನೆ. ಆದರೆ ನೀವು ಈ ವಿಷಯಗಳನ್ನು ಜನರಿಗೆಲ್ಲ ಗಟ್ಟಿಯಾಗಿ ಹೇಳಿರಿ.
ಮಾರುಕಟ್ಟೆಯಲ್ಲಿ ಎರಡು ಗುಬ್ಬಚ್ಚಿಗಳನ್ನು ಒಂದು ನಾಣ್ಯಕ್ಕೆ [*ನಾಣ್ಯ. ತಾಮ್ರದ ನಾಣ್ಯ. ದಿನಾರಿಯಲ್ಲಿ ಹದಿನಾರನೇ ಒಂದು ಭಾಗ.] ಮಾರುತ್ತಾರೆ. ಆದರೆ ನಿಮ್ಮ ತಂದೆಯು ಅಪ್ಪಣೆ ಕೊಡದ ಹೊರತು ಅವುಗಳಲ್ಲಿ ಒಂದಾದರೂ ಸಾಯುವುದಿಲ್ಲ.
(35-36) ಈ ಪ್ರವಾದನೆ ನೆರವೇರುವಂತೆ ಮಾಡಲು ನಾನು ಬಂದಿದ್ದೇನೆ: ‘ಒಬ್ಬನಿಗೆ ಅವನ ಮನೆಯವರೇ ವೈರಿಗಳಾಗುವರು. ಮಗನು ತಂದೆಗೆ, ಮಗಳು ತಾಯಿಗೆ, ಸೊಸೆಯು ಅತ್ತೆಗೆ ವೈರಿಗಳಾಗುವರು.’ ಮೀಕ 7:6]
“ಯಾರಾದರೂ ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ತಂದೆ ಅಥವಾ ತಾಯಿಯನ್ನು ಪ್ರೀತಿಸಿದರೆ, ಅವನು ನನ್ನ ಹಿಂಬಾಲಕನಾಗಲು ಯೋಗ್ಯನಲ್ಲ. ಯಾವನಾದರೂ ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ಮಗನನ್ನು ಇಲ್ಲವೆ ಮಗಳನ್ನು ಪ್ರೀತಿಸಿದರೆ, ಅವನು ನನ್ನ ಹಿಂಬಾಲಕನಾಗಲು ಯೋಗ್ಯನಲ್ಲ.
ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ಪ್ರಾಣವನ್ನು ಪ್ರೀತಿಸುವವನು ಅದನ್ನು ಕಳೆದುಕೊಳ್ಳುತ್ತಾನೆ. ನನಗಾಗಿ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಪಡೆದುಕೊಳ್ಳುವನು.
ದೀನರಾದ ಇವರಿಗೆ ನನ್ನ ಹಿಂಬಾಲಕರೆಂಬ ನಿಮಿತ್ತ ಸಹಾಯ ಮಾಡುವವನು ಖಂಡಿತವಾಗಿಯೂ ಪ್ರತಿಫಲವನ್ನು ಪಡೆಯುವನು. ನನ್ನ ಹಿಂಬಾಲಕರಿಗೆ ಕೇವಲ ಒಂದು ಬಟ್ಟಲು ತಣ್ಣೀರನ್ನು ಕೊಟ್ಟರೂ ಸಹ ಅದಕ್ಕೆ ಬರತಕ್ಕ ಪ್ರತಿಫಲವು ತಪ್ಪುವುದೇ ಇಲ್ಲ.”