ಆದ್ದರಿಂದ ಹೆರೋದನು ತನ್ನ ಸೇವಕರಿಗೆ, “ನಿಜವಾಗಿಯೂ ಯೇಸುವೇ ಸ್ನಾನಿಕ ಯೋಹಾನನು. ಅವನು ಮತ್ತೆ ಜೀವಂತವಾಗಿ ಬಂದಿದ್ದಾನೆ. ಆದಕಾರಣವೇ ಅವನು ಈ ಅದ್ಭುತಕಾರ್ಯಗಳನ್ನು ಮಾಡಲು ಶಕ್ತನಾಗಿದ್ದಾನೆ” ಎಂದು ಹೇಳಿದನು.
ಏನು ಕೇಳಿಕೊಳ್ಳಬೇಕೆಂದು ಹೆರೋದ್ಯಳು ತನ್ನ ಮಗಳಿಗೆ ಹೇಳಿಕೊಟ್ಟಳು. ಆದ್ದರಿಂದ ಅವಳು ಹೆರೋದನಿಗೆ, “ಸ್ನಾನಿಕ ಯೋಹಾನನ ತಲೆಯನ್ನು ಇಲ್ಲಿಯೇ ಈ ತಟ್ಟೆಯ ಮೇಲೆಯೇ ನನಗೆ ಕೊಡು” ಎಂದು ಹೇಳಿದಳು.
ರಾಜ ಹೆರೋದನು ಬಹಳವಾಗಿ ದುಃಖಪಟ್ಟನು. ಆದರೆ ಏನು ಕೇಳಿದರೂ ಕೊಡುತ್ತೇನೆಂದು ಅವನು ಅವಳಿಗೆ ವಾಗ್ದಾನ ಮಾಡಿದ್ದನು. ಹೆರೋದನ ಪಂಕ್ತಿಯಲ್ಲಿ ಊಟ ಮಾಡುತ್ತಿದ್ದವರು ಸಹ ಆ ವಾಗ್ದಾನವನ್ನು ಕೇಳಿಸಿಕೊಂಡಿದ್ದರು. ಆದ್ದರಿಂದ ಅವಳು ಕೇಳಿದ್ದನ್ನು ಕೊಡುವುದಕ್ಕೆ ಹೆರೋದನು ಅಪ್ಪಣೆಕೊಟ್ಟನು.
(ಮಾರ್ಕ 6:30-44; ಲೂಕ 9:10-17; ಯೋಹಾನ 6:1-14) ಯೋಹಾನನಿಗೆ ಸಂಭವಿಸಿದ್ದನ್ನು ಕೇಳಿದಾಗ ಯೇಸು ದೋಣಿಹತ್ತಿ ನಿರ್ಜನವಾದ ಸ್ಥಳಕ್ಕೆ ಒಬ್ಬನೇ ಹೋದನು. ಆದರೆ ಈ ಸುದ್ದಿ ಜನರಿಗೆ ತಿಳಿಯಿತು. ಆದ್ದರಿಂದ ಅವರು ತಮ್ಮ ಊರುಗಳನ್ನು ಬಿಟ್ಟು ಕಾಲುನಡಿಗೆಯಲ್ಲೇ ಆತನಿದ್ದ ಸ್ಥಳಕ್ಕೆ ಹೋದರು.
ಸಂಜೆಯಾದಾಗ, ಶಿಷ್ಯರು ಯೇಸುವಿನ ಬಳಿಗೆ ಬಂದು, “ಈ ಸ್ಥಳದಲ್ಲಿ ಜನರು ವಾಸಿಸುವುದಿಲ್ಲ. ಈಗಾಗಲೇ ಸಮಯವಾಗಿದೆ. ಜನರು ತಮಗಾಗಿ ಆಹಾರವನ್ನು ಕೊಂಡುಕೊಳ್ಳಲು ಅವರನ್ನು ಊರುಗಳಿಗೆ ಕಳುಹಿಸಿಬಿಡು” ಎಂದು ಹೇಳಿದರು.
ಬಳಿಕ ಆತನು ಜನರಿಗೆ ಹುಲ್ಲಿನ ಮೇಲೆ ಕುಳಿತುಕೊಳ್ಳುವುದಕ್ಕೆ ಹೇಳಿ ಐದು ರೊಟ್ಟಿ ಮತ್ತು ಎರಡು ಮೀನುಗಳನ್ನು ತೆಗೆದುಕೊಂಡು, ಆಕಾಶದ ಕಡೆಗೆ ನೋಡಿ, ಅವುಗಳಿಗಾಗಿ ದೇವರಿಗೆ ಸ್ತೋತ್ರಸಲ್ಲಿಸಿ, ರೊಟ್ಟಿಯನ್ನು ಮುರಿದು ತನ್ನ ಶಿಷ್ಯರಿಗೆ ಕೊಟ್ಟನು. ಶಿಷ್ಯರು ರೊಟ್ಟಿಯನ್ನು ಜನರಿಗೆ ಹಂಚಿದರು.
(ಮಾರ್ಕ 6:45-52; ಯೋಹಾನ 6:15-21) ಬಳಿಕ ಯೇಸು ತನ್ನ ಶಿಷ್ಯರಿಗೆ, “ನಾನು ಈ ಜನರನ್ನು ಬೀಳ್ಕೊಟ್ಟು ಬರುತ್ತೇನೆ. ನೀವು ಈಗಲೇ ದೋಣಿ ಹತ್ತಿಕೊಂಡು ಸರೋವರದ ಆಚೆದಡಕ್ಕೆ ಹೋಗಿರಿ” ಎಂದು ಹೇಳಿ ಕಳುಹಿಸಿದನು.
ಅಲ್ಲಿದ್ದ ಜನರು ಯೇಸುವನ್ನು ನೋಡಿದರು. ಆತನು ಯಾರೆಂಬುದು ಅವರಿಗೆ ತಿಳಿದಿತ್ತು. ಆದ್ದರಿಂದ ಅವರು ಸುತ್ತಮುತ್ತಲಿನ ಪ್ರದೇಶದ ಜನರಿಗೆ ಯೇಸು ಬಂದಿದ್ದಾನೆ ಎಂದು ತಿಳಿಸಿದರು. ಜನರು ರೋಗಗಳಿಂದ ಬೇನೆಗಳಿಂದ ನರಳುತ್ತಿದ್ದವರನ್ನೆಲ್ಲ ಆತನ ಬಳಿಗೆ ತಂದರು.