1
|
ಆಗ ಕೆಲವು ಫರಿಸಾಯರು ಮತ್ತು ಧರ್ಮೋಪದೇಶಕರು ಜೆರುಸಲೇಮಿನಿಂದ ಯೇಸುವಿನ ಬಳಿಗೆ ಬಂದು, |
2
|
“ನಮ್ಮ ಪೂರ್ವಿಕರಿಂದ ಬಂದ ಸಂಪ್ರದಾಯಗಳಿಗೆ ನಿನ್ನ ಶಿಷ್ಯರು ಏಕೆ ವಿಧೇಯರಾಗಿರುವುದಿಲ್ಲ? ನಿನ್ನ ಶಿಷ್ಯರು ಊಟ ಮಾಡುವುದಕ್ಕೆ ಮುಂಚೆ ಕೈ ತೊಳೆಯುವುದಿಲ್ಲವೇಕೆ?” ಎಂದು ಕೇಳಿದರು. |
3
|
ಯೇಸು, “ನಿಮ್ಮ ಸಂಪ್ರದಾಯಗಳನ್ನು ಅನುಸರಿಸಲು ದೇವರ ಆಜ್ಞೆಗೆ ಅವಿಧೇಯರಾಗುವುದೇಕೆ? |
4
|
‘ನಿಮ್ಮ ತಂದೆತಾಯಿಗಳಿಗೆ ಗೌರವ ನೀಡಿ’ ಎಂಬುದು ದೇವರ ಆಜ್ಞೆ. ‘ಯಾವನಾದರೂ ತನ್ನ ತಂದೆಯನ್ನಾಗಲಿ ತಾಯಿಯನ್ನಾಗಲಿ ಹೀನೈಸಿದರೆ ಅವನನ್ನು ಕೊಲ್ಲಬೇಕು’ ಎಂಬುದೂ ದೇವರ ಆಜ್ಞೆ. |
5
|
ಆದರೆ ಒಬ್ಬ ವ್ಯಕ್ತಿಯು ತನ್ನ ತಂದೆಗಾಗಲಿ ತಾಯಿಗಾಗಲಿ ‘ನಿಮಗೆ ಸಹಾಯ ಮಾಡಲು ನನಗೆ ಸಾಧ್ಯವಿಲ್ಲ, ಏಕೆಂದರೆ ನನ್ನಲ್ಲಿರುವ ಪ್ರತಿಯೊಂದು ದೇವರಿಗೆ ಪ್ರತಿಷ್ಠಿತವಾಗಿದೆ’ ಎಂದು ಹೇಳಿದರೆ, |
6
|
ಅವನು ತನ್ನ ತಂದೆಯನ್ನು ಗೌರವಿಸಬೇಕಿಲ್ಲ ಎಂದು ನೀವು ಬೋಧಿಸುತ್ತೀರಿ. ಹೀಗಿರಲು ನಿಮ್ಮ ಸಂಪ್ರದಾಯವೇ ದೇವರ ಆಜ್ಞೆಯನ್ನು ತಳ್ಳಿಹಾಕಿದೆ. |
7
|
ನೀವು ಕಪಟಿಗಳು. ಯೆಶಾಯನು ನಿಮ್ಮನ್ನು ಕುರಿತು ಸರಿಯಾಗಿ ಹೇಳಿದ್ದಾನೆ. ಅದೇನೆಂದರೆ: |
8
|
‘ಇವರು ನನ್ನನ್ನು ಮಾತಿನಿಂದ ಗೌರವಿಸುತ್ತಾರೆ. ಇವರ ಮನಸ್ಸಾದರೊ ನನಗೆ ದೂರವಾಗಿದೆ. |
9
|
ಇವರು ನನ್ನನ್ನು ಆರಾಧಿಸುವುದೂ ನಿರರ್ಥಕ. ಇವರು ಮನುಷ್ಯರ ಕಟ್ಟಳೆಗಳನ್ನೇ ಉಪದೇಶಿಸುತ್ತಾರೆ.” ಯೆಶಾಯ 29:13 |
10
|
ಯೇಸು ಜನರನ್ನು ತನ್ನ ಬಳಿಗೆ ಕರೆದು, “ನಾನು ಹೇಳುವುದನ್ನು ಆಲಿಸಿರಿ ಮತ್ತು ಅರ್ಥಮಾಡಿಕೊಳ್ಳಿರಿ. |
11
|
ಒಬ್ಬನು ಕಲುಷಿತನಾಗುವುದು ತನ್ನ ಬಾಯಿಂದ ತಿನ್ನುವ ಪದಾರ್ಥಗಳಿಂದಲ್ಲ. ಅವನ ಬಾಯಿಂದ ಬರುವ ಕೆಟ್ಟಮಾತುಗಳೇ ಅವನನ್ನು ಕಲುಷಿತಗೊಳಿಸುತ್ತವೆ” ಎಂದು ಹೇಳಿದನು. |
12
|
ಆಗ ಶಿಷ್ಯರು ಯೇಸುವಿನ ಬಳಿಗೆ ಬಂದು, “ನೀನು ಹೇಳಿದ್ದನ್ನು ಕೇಳಿ ಫರಿಸಾಯರು ಬೇಸರಗೊಂಡದ್ದು ನಿನಗೆ ತಿಳಿಯಿತೋ? “ ಎಂದು ಕೇಳಿದರು. |
13
|
ಯೇಸು, “ಪರಲೋಕದಲ್ಲಿರುವ ನನ್ನ ತಂದೆ ನೆಡದಿರುವ ಪ್ರತಿಯೊಂದು ಗಿಡವನ್ನು ಬೇರಿನೊಂದಿಗೆ ಕಿತ್ತುಹಾಕಲಾಗುವುದು. |
14
|
ಫರಿಸಾಯರಿಂದ ದೂರವಾಗಿರಿ. ಅವರೇ ಕುರುಡರು, ಮತ್ತೊಬ್ಬರಿಗೆ ದಾರಿ ತೋರಿಸಲು ಹೋಗುತ್ತಾರೆ. ಕುರುಡನು ಕುರುಡನಿಗೆ ದಾರಿ ತೋರಿಸಿದರೆ ಅವರಿಬ್ಬರೂ ಹಳ್ಳದಲ್ಲಿ ಬೀಳುವರು” ಎಂದು ಉತ್ತರಕೊಟ್ಟನು. |
15
|
ಆಗ ಪೇತ್ರನು, “ನೀನು ಜನರಿಗೆ ಮೊದಲು ಹೇಳಿದ್ದನ್ನು ನಮಗೆ ವಿವರಿಸು” ಎಂದನು. |
16
|
ಯೇಸು, “ನಿಮಗೆ ಇನ್ನೂ ಅರ್ಥವಾಗುವುದಿಲ್ಲವೇ? |
17
|
ಒಬ್ಬ ಮನುಷ್ಯನ ಬಾಯಿಂದ ಆಹಾರ ಹೊಟ್ಟೆಯೊಳಕ್ಕೆ ಹೋಗುತ್ತದೆ. ನಂತರ ಅದು ದೇಹದಿಂದ ಹೊರಗೆ ಹೋಗಿಬಿಡುತ್ತದೆ. ಇದು ನಿಮಗೆ ತಿಳಿದೇ ಇದೆ. |
18
|
ಆದರೆ ಒಬ್ಬ ಮನುಷ್ಯನ ಬಾಯಿಂದ ಹೊರಡುವ ಕೆಟ್ಟಮಾತುಗಳು ಅವನ ಆಲೋಚನೆಯಿಂದ ಉದ್ಭವಿಸಿ ಅವನನ್ನು ಅಶುದ್ಧನನ್ನಾಗಿ ಮಾಡುತ್ತವೆ. |
19
|
ಮನುಷ್ಯನ ಮನಸ್ಸಿನಲ್ಲಿ ದುರಾಲೋಚನೆ, ಕೊಲೆ, ವ್ಯಭಿಚಾರ, ಸೂಳೆಗಾರಿಕೆ, ಕಳ್ಳತನ, ಸುಳ್ಳುಸಾಕ್ಷಿ ಮತ್ತು ಬೈಗಳು ಹೊರಟು ಬರುತ್ತವೆ. |
20
|
ಇವು ಮನುಷ್ಯನನ್ನು ಅಶುದ್ಧನನ್ನಾಗಿ ಮಾಡುತ್ತವೆ. ಆದರೆ ಊಟಕ್ಕೆ ಮೊದಲು ಕೈತೊಳೆಯದ ಮಾತ್ರಕ್ಕೆ ಮನುಷ್ಯನೇನೂ ಅಶುದ್ಧನಾಗುವುದಿಲ್ಲ” ಎಂದು ಹೇಳಿದನು. |
21
|
ಯೇಸು ಆ ಸ್ಥಳವನ್ನು ಬಿಟ್ಟು, ಟೈರ್ ಮತ್ತು ಸೀದೋನ್ಗಳ ಸುತ್ತಮುತ್ತಲಿನ ಪ್ರದೇಶಕ್ಕೆ ಹೋದನು. |
22
|
ಆ ಸ್ಥಳದಿಂದ ಕಾನಾನ್ಯಳಾದ ಒಬ್ಬ ಸ್ತ್ರೀ ಯೇಸುವಿನ ಬಳಿಗೆ ಬಂದು, “ಪ್ರಭುವೇ, ದಾವೀದನ ಮಗನೇ, ದಯವಿಟ್ಟು ನನಗೆ ಕರುಣೆ ತೋರು! ನನ್ನ ಮಗಳಲ್ಲಿ ದೆವ್ವ ಸೇರಿಕೊಂಡಿದೆ ಮತ್ತು ಆಕೆ ಬಹಳ ಸಂಕಟಪಡುತ್ತಿದ್ದಾಳೆ” ಎಂದು ಗಟ್ಟಿಯಾಗಿ ಕೂಗಿಕೊಂಡಳು. |
23
|
ಆದರೆ ಯೇಸು ಆ ಸ್ತ್ರೀಗೆ ಉತ್ತರ ಕೊಡಲಿಲ್ಲ. ಆದ್ದರಿಂದ ಶಿಷ್ಯರು ಯೇಸುವಿನ ಬಳಿಗೆ ಬಂದು, “ಆ ಸ್ತ್ರೀಗೆ ಹೊರಟು ಹೋಗುವುದಕ್ಕೆ ಹೇಳು. ಆಕೆಯು ಕೂಗಿಕೊಂಡು ನಮ್ಮ ಹಿಂದೆಯೇ ಬರುತ್ತಿದ್ದಾಳೆ.” ಎಂದು ಕೇಳಿಕೊಂಡರು. |
24
|
ಯೇಸು, “ತಪ್ಪಿಸಿಕೊಂಡ ಕುರಿಗಳಂತಿರುವ ಇಸ್ರೇಲರ ಬಳಿಗೆ ಮಾತ್ರ ದೇವರು ನನ್ನನ್ನು ಕಳುಹಿಸಿದನು” ಎಂದನು. |
25
|
ಆಗ ಆ ಸ್ತ್ರೀಯು ಯೇಸುವಿನ ಬಳಿಗೆ ಬಂದು ಆತನ ಮುಂದೆ ಅಡ್ಡಬಿದ್ದು, “ಪ್ರಭುವೇ, ನನಗೆ ಸಹಾಯ ಮಾಡು” ಎಂದು ಕೇಳಿದಳು. |
26
|
ಯೇಸು, “ಮಕ್ಕಳು ತಿನ್ನುವ ರೊಟ್ಟಿಯನ್ನು ತೆಗೆದುಕೊಂಡು ನಾಯಿಗಳಿಗೆ ಕೊಡುವುದು ಸರಿಯಲ್ಲ” ಎಂದು ಉತ್ತರಕೊಟ್ಟನು. |
27
|
ಆ ಸ್ತ್ರೀಯು, “ಹೌದು ಪ್ರಭುವೇ, ಆದರೂ ನಾಯಿಗಳು ತಮ್ಮ ಯಜಮಾನರ ಮೇಜಿನಿಂದ ಬೀಳುವ ಆಹಾರದ ತುಂಡುಗಳನ್ನು ತಿನ್ನುತ್ತವೆಯಲ್ಲಾ” ಎಂದಳು. |
28
|
ಆಗ ಯೇಸು, “ಅಮ್ಮಾ, ನಿನ್ನ ನಂಬಿಕೆ ದೊಡ್ಡದು. ನಿನ್ನ ಕೋರಿಕೆಯನ್ನು ನಾನು ಈಡೇರಿಸುತ್ತೇನೆ” ಎಂದನು. ಆ ಕ್ಷಣದಲ್ಲೇ ಆಕೆಯ ಮಗಳು ಗುಣವಾದಳು. |
29
|
ಆಗ ಯೇಸು ಆ ಸ್ಥಳವನ್ನು ಬಿಟ್ಟು ಗಲಿಲಾಯ ಸರೋವರದ ದಡಕ್ಕೆ ಹೋಗಿ ಒಂದು ಬೆಟ್ಟದ ಮೇಲೆ ಕುಳಿತುಕೊಂಡನು. |
30
|
ಜನರು ಗುಂಪುಗುಂಪಾಗಿ ಯೇಸುವಿನ ಬಳಿಗೆ ಬಂದರು. ಅವರು ಅನೇಕ ಬಗೆಯ ಕಾಯಿಲೆಯವರನ್ನು ಕರೆದುತಂದು, ಯೇಸುವಿನ ಪಾದಸನ್ನಿಧಿಯಲ್ಲಿ ಬಿಟ್ಟರು. ಅಲ್ಲಿ ಅಂಗವಿಕಲರು, ಕುರುಡರು, ಕುಂಟರು, ಕಿವುಡರು ಮತ್ತು ಇತರ ಅನೇಕ ಜನರಿದ್ದರು. ಆತನು ಇವರನ್ನೆಲ್ಲರನ್ನು ಗುಣಪಡಿಸಿದನು. |
31
|
ಮೂಕರು ಮತ್ತೆ ಮಾತಾಡುವುದನ್ನೂ ಕುಂಟರು ನಡೆದಾಡುವುದನ್ನೂ ಅಂಗವಿಕಲರು ಸ್ವಸ್ಥರಾದದ್ದನ್ನೂ ಕುರುಡರಿಗೆ ಮತ್ತೆ ದೃಷ್ಟಿ ಬಂದದ್ದನ್ನೂ ಕಂಡು ಜನರೆಲ್ಲರೂ ಅತ್ಶಾಶ್ಚರ್ಯಪಟ್ಟು ಇಸ್ರೇಲರ ದೇವರನ್ನು ಕೊಂಡಾಡಿದರು. |
32
|
ಯೇಸು ತನ್ನ ಶಿಷ್ಯರನ್ನು ಕರೆದು, “ನಾನು ಈ ಜನರಿಗಾಗಿ ದುಃಖಪಡುತ್ತೇನೆ. ಇವರು ಮೂರು ದಿನಗಳಿಂದ ನನ್ನ ಜೊತೆಯಲ್ಲಿದ್ದಾರೆ. ಈಗ ಇವರಿಗೆ ಊಟಕ್ಕೆ ಏನೂ ಇಲ್ಲ. ಇವರನ್ನು ಹಸಿವಿನಿಂದ ಕಳುಹಿಸಿಬಿಡುವುದಕ್ಕೆ ನನಗೆ ಮನಸ್ಸಿಲ್ಲ. ಇವರು ಮನೆಗೆ ಹೋಗುತ್ತಿರುವಾಗ ಬಳಲಿ ಹೋಗಬಹುದು” ಎಂದು ಹೇಳಿದನು. |
33
|
ಶಿಷ್ಯರು ಯೇಸುವಿಗೆ, “ಈ ಜನರೆಲ್ಲರಿಗೂ ಊಟಕ್ಕೆ ಬೇಕಾಗುವಷ್ಟು ರೊಟ್ಟಿ ನಮಗೆ ಎಲ್ಲಿ ಸಿಕ್ಕುತ್ತದೆ? ಇಲ್ಲಿಗೆ ಯಾವ ಊರೂ ಸಮೀಪವಾಗಿಲ್ಲ” ಎಂದು ಹೇಳಿದರು. |
34
|
ಆತನು, “ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ?”ಎಂದು ಕೇಳಿದನು. ಶಿಷ್ಯರು, “ನಮ್ಮಲ್ಲಿ ಏಳು ರೊಟ್ಟಿಗಳಿವೆ ಮತ್ತು ಕೆಲವು ಸಣ್ಣ ಮೀನುಗಳಿವೆ” ಎಂದರು. |
35
|
ಆಗ ಜನರಿಗೆ ನೆಲದ ಮೇಲೆ ಕುಳಿತುಕೊಳ್ಳುವುದಕ್ಕೆ ಆತನು ಆಜ್ಞಾಪಿಸಿ, |
36
|
ಆ ಏಳು ರೊಟ್ಟಿಗಳನ್ನು ಮತ್ತು ಮೀನುಗಳನ್ನು ತೆಗೆದುಕೊಂಡು ಅವುಗಳಿಗಾಗಿ ದೇವರಿಗೆ ಸ್ತೋತ್ರ ಸಲ್ಲಿಸಿದನು. ಬಳಿಕ ಅವುಗಳನ್ನು ಮುರಿದು ಶಿಷ್ಯರಿಗೆ ಕೊಟ್ಟನು. ಶಿಷ್ಯರು ಅವುಗಳನ್ನು ಜನರಿಗೆ ಹಂಚಿದರು. |
37
|
ಜನರೆಲ್ಲರೂ ತಿಂದು ತೃಪ್ತರಾದರು. ಬಳಿಕ ತಿನ್ನಲಾರದೆ ಉಳಿದುಹೋದ ಆಹಾರದ ಚೂರುಗಳನ್ನು ಶಿಷ್ಯರು ಶೇಖರಿಸಿದಾಗ ಏಳು ಬುಟ್ಟಿಗಳು ತುಂಬಿಹೋದವು. |
38
|
ಅಂದು ಊಟ ಮಾಡಿದ್ದವರಲ್ಲಿ ಗಂಡಸರೇ ಸುಮಾರು ನಾಲ್ಕುಸಾವಿರ ಮಂದಿಯಿದ್ದರು. ಇವರಲ್ಲದೆ ಹೆಂಗಸರು ಮತ್ತು ಮಕ್ಕಳು ಸಹ ಊಟಮಾಡಿದರು. |
39
|
ಬಳಿಕ ಯೇಸು ತಮ್ಮತಮ್ಮ ಮನೆಗಳಿಗೆ ಹೋಗುವಂತೆ ಅವರಿಗೆ ಹೇಳಿ ಕಳುಹಿಸಿದನು. ಅನಂತರ ದೋಣಿಯನ್ನು ಹತ್ತಿ ಮಗದಾನ್ ಎಂಬ ಪ್ರಾಂತ್ಯಕ್ಕೆ ಹೋದನು. |
Matthew 15:26 Kannada Language Bible Words basic statistical display
COMING SOON ...