(ಮಾರ್ಕ 9:2-13; ಲೂಕ 9:28-36) ಆರು ದಿನಗಳ ತರುವಾಯ, ಪೇತ್ರನನ್ನು, ಯಾಕೋಬನನ್ನು ಮತ್ತು ಯಾಕೋಬನ ಸಹೋದರನಾದ ಯೋಹಾನನನ್ನು ಕರೆದುಕೊಂಡು ಯೇಸು ಎತ್ತರವಾದ ಒಂದು ಬೆಟ್ಟಕ್ಕೆ ಹೋದನು. ಅವರಲ್ಲದೆ ಬೇರೆ ಯಾರೂ ಅಲ್ಲಿರಲಿಲ್ಲ.
ಪೇತ್ರನು ಮಾತಾಡುತ್ತಿರುವಾಗಲೇ ಪ್ರಕಾಶಮಾನವಾದ ಒಂದು ಮೋಡವು ಅವರ ಮೇಲೆ ಕವಿಯಿತು ಮತ್ತು ಆ ಮೋಡದೊಳಗಿಂದ ಒಂದು ಧ್ವನಿಯು, “ಈತನು ನನ್ನ ಪ್ರಿಯ ಮಗನು. ನಾನು ಈತನನ್ನು ಬಹಳ ಮೆಚ್ಚಿಕೊಂಡಿದ್ದೇನೆ. ಈತನಿಗೆ ವಿಧೇಯರಾಗಿರಿ!” ಎಂದು ಹೇಳಿತು.
ಬೆಟ್ಟದಿಂದ ಇಳಿದು ಬರುತ್ತಿರುವಾಗ ಯೇಸು ತನ್ನ ಶಿಷ್ಯರಿಗೆ, “ನೀವು ಬೆಟ್ಟದ ಮೇಲೆ ಕಂಡ ದರ್ಶನವನ್ನು ಈಗ ಯಾರಿಗೂ ಹೇಳದೆ ಮನುಷ್ಯಕುಮಾರನು ಸತ್ತು ಜೀವಂತವಾಗಿ ಎದ್ದುಬಂದ ಮೇಲೆ ತಿಳಿಸಿರಿ” ಎಂದು ಆಜ್ಞಾಪಿಸಿದನು.
ಆದರೆ ನಾನು ನಿಮಗೆ ಹೇಳುವುದೇನೆಂದರೆ, ಎಲೀಯನು ಈಗಾಗಲೇ ಬಂದಿದ್ದಾನೆ. ಆದರೆ ಆತನು ಯಾರೆಂಬುದು ಜನರಿಗೆ ತಿಳಿಯಲಿಲ್ಲ. ಜನರು ತಮಗಿಷ್ಟಬಂದಂತೆ ಅವನನ್ನು ಹಿಂಸಿಸಿದರು. ಅದೇ ರೀತಿ ಅವರು ಮನುಷ್ಯಕುಮಾರನನ್ನು ಹಿಂಸೆಪಡಿಸುವರು” ಎಂದು ಉತ್ತರಕೊಟ್ಟನು.
ಯೇಸು, “ಅಯ್ಯೋ, ವಿಶ್ವಾಸವಿಲ್ಲದ ವಕ್ರಸಂತತಿಯೇ, ಇನ್ನೆಷ್ಟು ಕಾಲ ನಾನು ನಿಮ್ಮೊಂದಿಗಿರಬೇಕು? ಇನ್ನೆಷ್ಟು ಕಾಲ ನಾನು ನಿಮ್ಮನ್ನು ಸಹಿಸಿಕೊಳ್ಳಲಿ? ಆ ಬಾಲಕನನ್ನು ಇಲ್ಲಿಗೆ ಕರೆತನ್ನಿ” ಎಂದು ಉತ್ತರಕೊಟ್ಟನು.
ಅದಕ್ಕೆ ಯೇಸು, “ನಿಮ್ಮ ಅಲ್ಪವಿಶ್ವಾಸವೇ ಅದಕ್ಕೆ ಕಾರಣ. ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಿಮ್ಮ ನಂಬಿಕೆಯು ಸಾಸಿವೆ ಕಾಳಿನಷ್ಟಿದ್ದರೂ, ಈ ಪರ್ವತಕ್ಕೆ ‘ಇಲ್ಲಿಂದ ಅಲ್ಲಿಗೆ ಹೋಗು’ ಎಂದು ನೀವು ಹೇಳಿದರೂ ಅದು ಹೋಗುತ್ತದೆ. ನಿಮಗೆ ಅಸಾಧ್ಯವಾಗದ ಕಾರ್ಯಗಳೇ ಇರದು” ಎಂದನು.
ಯೇಸು ಮತ್ತು ಆತನ ಶಿಷ್ಯರು ಕಪೆರ್ನೌಮಿಗೆ ಹೋದರು. ದೇವಾಲಯಕ್ಕೆ ಯೆಹೂದ್ಯರಿಂದ ವಾರ್ಷಿಕ ತೆರಿಗೆ ವಸೂಲಿ ಮಾಡುವ ಕೆಲವರು ಪೇತ್ರನ ಬಳಿಗೆ ಬಂದು, “ನಿಮ್ಮ ಬೋಧಕನು ದೇವಾಲಯದ ವಾರ್ಷಿಕ ತೆರಿಗೆಯನ್ನು ಸಲ್ಲಿಸುವುದಿಲ್ಲವೋ?” ಎಂದು ಕೇಳಿದರು.
ಅದಕ್ಕೆ ಪೇತ್ರನು, “ಹೌದು, ಸಲ್ಲಿಸುತ್ತಾನೆ” ಎಂದು ಉತ್ತರಕೊಟ್ಟನು. ಬಳಿಕ ಪೇತ್ರನು ಯೇಸುವಿದ್ದ ಮನೆಯೊಳಕ್ಕೆ ಹೋದನು. ಅವನು ಈ ವಿಷಯವನ್ನು ಹೇಳುವುದಕ್ಕಿಂತ ಮೊದಲೇ ಯೇಸು ಅವನಿಗೆ, “ಭೂಲೋಕದ ರಾಜರುಗಳು ಜನರಿಂದ ಅನೇಕ ಬಗೆಯ ತೆರಿಗೆಗಳನ್ನು ತೆಗೆದುಕೊಳ್ಳುತ್ತಾರೆ. ಆದರೆ ತೆರಿಗೆ ಕೊಡುವ ಜನರು ಯಾರು? ರಾಜನ ಮಕ್ಕಳೇ ಅಥವಾ ಬೇರೆ ಜನರೇ? ನಿನ್ನ ಅಭಿಪ್ರಾಯವೇನು?” ಎಂದು ಕೇಳಿದನು.
ಆದರೆ ತೆರಿಗೆ ವಸೂಲಿಗಾರರನ್ನು ನಾವೇಕೆ ಕೋಪಗೊಳಿಸಬೇಕು? ನೀನು ತೆರಿಗೆಯನ್ನು ಕೊಡು. ಸರೋವರಕ್ಕೆ ಹೋಗಿ ಮೀನನ್ನು ಹಿಡಿ. ನಿನಗೆ ಸಿಕ್ಕಿದ ಮೊದಲನೇ ಮೀನಿನ ಬಾಯನ್ನು ತೆರೆ, ಅದರ ಬಾಯೊಳಗೆ ವಾರ್ಷಿಕ ತೆರಿಗೆಗೆ ಬೇಕಾದ ಒಂದು ನಾಣ್ಯವನ್ನು ಕಾಣುವೆ. ಅದನ್ನು ತೆಗೆದುಕೊಂಡು ಬಂದು, ತೆರಿಗೆ ವಸೂಲಿ ಮಾಡುವವರಿಗೆ ಕೊಡು. ಅದರಿಂದ ನನ್ನ ಮತ್ತು ನಿನ್ನ ತೆರಿಗೆಯನ್ನು ಕೊಟ್ಟಂತಾಗುವುದು” ಎಂದು ಹೇಳಿದನು.