ಆ ಕೂಲಿಯಾಳುಗಳು ಕೆಲಸ ಮಾಡಲು ಅವನ ತೋಟಕ್ಕೆ ಹೋದರು. “ಆ ಯಜಮಾನನು ಅದೇ ರೀತಿ ಸುಮಾರು ಹನ್ನೆರಡು ಗಂಟೆಗೊಮ್ಮೆ ಮತ್ತೆ ಮೂರು ಗಂಟೆಗೊಮ್ಮೆ ಪೇಟೆಗೆ ಹೋದನು. ಆ ಎರಡು ಸಲವೂ ತನ್ನ ಹೊಲದಲ್ಲಿ ಕೆಲಸ ಮಾಡಲು ಬೇರೆ ಕೆಲವು ಕೂಲಿಯವರನ್ನು ಅವನು ಗೊತ್ತುಮಾಡಿದನು.
ಸುಮಾರು ಐದು ಗಂಟೆಗೆ ಆ ಯಜಮಾನನು ಮತ್ತೊಮ್ಮೆ ಪೇಟೆಗೆ ಹೋದನು. ಅಲ್ಲಿ ನಿಂತಿದ್ದ ಕೆಲವರನ್ನು ಅವನು ಕಂಡು, ‘ನೀವು ದಿನವಿಡೀ ಕೆಲಸ ಮಾಡದೆ ಸುಮ್ಮನೆ ಏಕೆ ನಿಂತಿದ್ದೀರಿ?’ ಎಂದು ಕೇಳಿದನು.
ನಂತರ ಮೊಟ್ಟಮೊದಲು ಗೊತ್ತುಮಾಡಲ್ಪಟ್ಟಿದ್ದವರು ತಮ್ಮ ಕೂಲಿಯನ್ನು ತೆಗೆದುಕೊಳ್ಳಲು ಬಂದರು. ಬೇರೆ ಆಳುಗಳಿಗಿಂತ ತಮಗೆ ಹೆಚ್ಚು ಸಿಕ್ಕುವುದೆಂದು ಅವರು ಆಲೋಚಿಸಿಕೊಂಡಿದ್ದರು. ಆದರೆ ಅವರಿಗೂ ಸಹ ಒಂದೊಂದು ಬೆಳ್ಳಿನಾಣ್ಯ ಸಿಕ್ಕಿತು.
‘ಕೊನೆಗೆ ಗೊತ್ತುಮಾಡಲ್ಪಟ್ಟ ಆಳುಗಳು ಒಂದು ಗಂಟೆ ಮಾತ್ರ ಕೆಲಸ ಮಾಡಿದ್ದಾರೆ. ಆದರೆ ಇವನು ಅವರಿಗೂ ನಮ್ಮಷ್ಟೇ ಕೊಟ್ಟಿದ್ದಾನೆ. ನಾವಾದರೋ ದಿನವೆಲ್ಲಾ ಬಿಸಿಲಿನಲ್ಲಿ ಕಷ್ಟಪಟ್ಟು ಕೆಲಸ ಮಾಡಿದ್ದೇವೆ’ ಎಂದರು.
ಅವರು ಮನುಷ್ಯಕುಮಾರನನ್ನು ಅಪಹಾಸ್ಯ ಮಾಡಿ, ಕೊರಡೆಗಳಿಂದ ಹೊಡೆದು, ಶಿಲುಬೆಗೇರಿಸುವರು. ಆದರೆ ಆತನು ಮರಣ ಹೊಂದಿದ ನಂತರ ಮೂರನೆಯ ದಿನದಂದು ಮತ್ತೆ ಜೀವಂತನಾಗಿ ಎದ್ದುಬರುವನು” ಎಂದು ಹೇಳಿದನು.
ಯೇಸು, “ನಿನ್ನ ಕೋರಿಕೆ ಏನು?” ಎಂದನು. ಅವಳು, “ನಿನ್ನ ರಾಜ್ಯದಲ್ಲಿ, ನನ್ನ ಗಂಡುಮಕ್ಕಳಲ್ಲಿ ಒಬ್ಬನು ನಿನ್ನ ಬಲಗಡೆಯಲ್ಲಿಯೂ ಮತ್ತೊಬ್ಬನು ನಿನ್ನ ಎಡಗಡೆಯಲ್ಲಿಯೂ ಕುಳಿತುಕೊಳ್ಳುವಂತೆ ವಾಗ್ದಾನಮಾಡು” ಎಂದು ಕೇಳಿಕೊಂಡಳು.
ಯೇಸು ಅವಳ ಮಕ್ಕಳಿಗೆ, “ನೀವು ಏನು ಕೇಳಿಕೊಳ್ಳುತ್ತಿದ್ದೀರೆಂಬುದೇ ನಿಮಗೆ ಗೊತ್ತಿಲ. ನಾನು ಅನುಭವಿಸಬೇಕಾಗಿರುವ ಸಂಕಟವನ್ನು ಅನುಭವಿಸಲು ನಿಮಗೆ ಸಾಧ್ಯವೋ?” ಎಂದು ಕೇಳಿದನು. ಅದಕ್ಕೆ ಅವರು, “ಹೌದು, ನಮಗೆ ಸಾಧ್ಯ” ಎಂದು ಉತ್ತರಕೊಟ್ಟರು.
ಯೇಸು ಅವರಿಗೆ, “ನಾನು ಅನುಭವಿಸಲಿರುವ ಸಂಕಟಗಳನ್ನು ನೀವು ನಿಜವಾಗಿಯೂ ಅನುಭವಿಸುವಿರಿ. ಆದರೆ ನನ್ನ ಬಲಗಡೆಯಲ್ಲಾಗಲಿ ಎಡಗಡೆಯಲ್ಲಾಗಲಿ ಕುಳಿತುಕೊಳ್ಳುವವನನ್ನು ಆಯ್ಕೆಮಾಡುವವನು ನಾನಲ್ಲ. ನನ್ನ ತಂದೆಯು ಆ ಸ್ಥಳಗಳನ್ನು ಯಾರಿಗಾಗಿ ಕಾಯ್ದಿರಿಸಿದ್ದಾನೋ ಅವರಿಗೇ ಆ ಅವಕಾಶವನ್ನು ಕೊಡುತ್ತಾನೆ” ಎಂದನು.
ಯೇಸು ಶಿಷ್ಯರನ್ನೆಲ್ಲ ಒಟ್ಟಿಗೆ ಕರೆದು, “ಯೆಹೂದ್ಯರಲ್ಲದ ಅಧಿಪತಿಗಳು ಜನರ ಮೇಲೆ ತಮ್ಮ ಅಧಿಕಾರ ತೋರಿಸಲು ಇಷ್ಟಪಡುತ್ತಾರೆ ಎಂಬುದು ನಿಮಗೆ ಗೊತ್ತಿದೆ. ಮತ್ತು ಅವರ ಪ್ರಮುಖ ನಾಯಕರು ಜನರ ಮೇಲೆ ತಮ್ಮ ಅಧಿಕಾರವನ್ನೆಲ್ಲಾ ಚಲಾಯಿಸಲು ಇಷ್ಟಪಡುತ್ತಾರೆ.
ಇದೇ ನಿಯಮ ಮನುಷ್ಯಕುಮಾರನಿಗೂ ಅನ್ವಯಿಸುತ್ತದೆ. ಮನುಷ್ಯಕುಮಾರನು ಬೇರೆಯವರಿಂದ ಸೇವೆ ಮಾಡಿಸಿಕೊಳ್ಳಲು ಬರದೆ ಬೇರೆಯವರಿಗೆ ಸೇವೆ ಮಾಡುವುದಕ್ಕಾಗಿ ಮತ್ತು ಅನೇಕ ಜನರನ್ನು ರಕ್ಷಿಸುವುದಕ್ಕಾಗಿ ತನ್ನ ಪ್ರಾಣವನ್ನೇ ಈಡುಕೊಡಲು ಬಂದನು” ಎಂದು ಹೇಳಿದನು.
ದಾರಿಯ ಪಕ್ಕದಲ್ಲಿ ಇಬ್ಬರು ಕುರುಡರು ಕುಳಿತಿದ್ದರು. ಯೇಸು ಈ ಮಾರ್ಗವಾಗಿ ಹೋಗುತ್ತಿದ್ದಾನೆಂಬುದನ್ನು ಅವರು ಕೇಳಿದಾಗ, “ಪ್ರಭುವೇ, ದಾವೀದನ ಕುಮಾರನೇ, ದಯಮಾಡಿ ನಮಗೆ ಸಹಾಯ ಮಾಡು!” ಎಂದು ಕೂಗಿಕೊಂಡರು.