1
|
“ಆ ದಿನಗಳಲ್ಲಿ ಪರಲೋಕರಾಜ್ಯವು ಹೇಗಿರುತ್ತದೆ ಎನ್ನುವುದಕ್ಕೆ ಈ ಸಾಮ್ಯವು ಉದಾಹರಣೆಯಾಗಿದೆ. ಹತ್ತು ಮಂದಿ ಕನ್ನಿಕೆಯರು ತಮ್ಮ ದೀಪಗಳನ್ನು ತೆಗೆದುಕೊಂಡು ಮದುಮಗನನ್ನು ಎದುರುಗೊಳ್ಳಲು ಹೊರಟರು. |
2
|
ಅವರಲ್ಲಿ ಐದು ಮಂದಿ ಬುದ್ಧಿಹೀನರಾಗಿದ್ದರು. ಇನ್ನುಳಿದ ಐದು ಮಂದಿ ಬುದ್ಧಿವಂತೆಯರಾಗಿದ್ದರು. |
3
|
ಬುದ್ಧಿಹೀನ ಕನ್ನಿಕೆಯರು ತಮ್ಮ ದೀಪಾರತಿಗಳನ್ನು ತಂದರೇ ಹೊರತು ಬೇಕಾಗುವಷ್ಟು ಎಣ್ಣೆಯನ್ನು ತೆಗೆದುಕೊಳ್ಳಲಿಲ್ಲ. |
4
|
ಬುದ್ಧಿವಂತೆಯರು ತಮ್ಮ ದೀಪಗಳೊಂದಿಗೆ ಬೇಕಾದಷ್ಟು ಎಣ್ಣೆಯನ್ನೂ ತೆಗೆದುಕೊಂಡರು. |
5
|
ಮದುಮಗನ ಆಗಮನ ತಡವಾಯಿತು. ಅವರೆಲ್ಲರೂ ಆಯಾಸದಿಂದ ತೂಕಡಿಸುತ್ತಾ ನಿದ್ರೆಹೋದರು. |
6
|
“ಮಧ್ಯರಾತ್ರಿಯಲ್ಲಿ, ‘ಮದುಮಗನು ಬರುತ್ತಿದ್ದಾನೆ! ಬನ್ನಿರಿ, ಆತನನ್ನು ಸಂಧಿಸಿರಿ!’ ಎಂದು ಯಾರೋ ಒಬ್ಬನು ಪ್ರಕಟಿಸಿದನು. |
7
|
“ಆಗ ಕನ್ನಿಕೆಯರೆಲ್ಲ ಎಚ್ಚರಗೊಂಡು ತಮ್ಮ ದೀಪಾರತಿಗಳನ್ನು ಸಿದ್ಧಮಾಡಿಕೊಂಡರು. |
8
|
ಬುದ್ಧಿಹೀನ ಕನ್ನಿಕೆಯರು ಬುದ್ಧಿವಂತ ಕನ್ನಿಕೆಯರಿಗೆ, ‘ನಿಮ್ಮ ಎಣ್ಣೆಯಲ್ಲಿ ನಮಗೆ ಸ್ವಲ್ಪ ಕೊಡಿ. ನಮ್ಮ ದೀಪಾರತಿಗಳಲ್ಲಿದ್ದ ಎಣ್ಣೆಯೆಲ್ಲಾ ಮುಗಿಯಿತು’ ಎಂದರು |
9
|
“ಬುದ್ಧಿವಂತೆಯರು, ‘ಇಲ್ಲ! ನಮ್ಮಲ್ಲಿರುವ ಎಣ್ಣೆ ನಮಗೇ ಸಾಕಾಗದಿರಬಹುದು. ಅಂಗಡಿಗೆ ಹೋಗಿ ಕೊಂಡುಕೊಳ್ಳಿರಿ’ ಎಂದು ಉತ್ತರಕೊಟ್ಟರು. |
10
|
“ಆದ್ದರಿಂದ ಐದು ಮಂದಿ ಬುದ್ಧಿಹೀನ ಕನ್ನಿಕೆಯರು ಎಣ್ಣೆ ಕೊಂಡುಕೊಳ್ಳುವುದಕ್ಕೆ ಹೋದರು. ಅವರು ಹೋಗುತ್ತಿರುವಾಗ, ಮದುಮಗನು ಬಂದನು. ಸಿದ್ಧವಾಗಿದ್ದ ಕನ್ನಿಕೆಯರು ಮದುಮಗನ ಜೊತೆಯಲ್ಲಿ ಔತಣಕ್ಕೆ ಹೋದರು. ನಂತರ ಬಾಗಿಲು ಮುಚ್ಚಲಾಯಿತು. |
11
|
“ತರುವಾಯ ಬುದ್ಧಿಹೀನ ಕನ್ನಿಕೆಯರು ಬಂದು, ‘ಸ್ವಾಮೀ, ಸ್ವಾಮೀ, ಒಳಗೆ ಬರಲು ನಮಗೆ ಬಾಗಿಲು ತೆರೆ’ ಅಂದರು. |
12
|
“ಆದರೆ ಮದುಮಗನು, ‘ನಾನು ನಿಮಗೆ ಸತ್ಯವನ್ನೇ ಹೇಳುತ್ತೇನೆ. ನೀವು ಯಾರೋ ನನಗೆ ಗೊತ್ತಿಲ್ಲ’ ಎಂದು ಉತ್ತರಕೊಟ್ಟನು. |
13
|
“ಆದ್ದರಿಂದ ಯಾವಾಗಲೂ ಸಿದ್ಧವಾಗಿರಿ. ಮನುಷ್ಯಕುಮಾರನು ಬರುವ ದಿನವಾಗಲಿ ಸಮಯವಾಗಲಿ ನಿಮಗೆ ಗೊತ್ತಿಲ್ಲ. |
14
|
“ಪರಲೋಕರಾಜ್ಯವು, ತನ್ನ ಮನೆಯನ್ನು ಬಿಟ್ಟು ಬೇರೆ ಸ್ಥಳವನ್ನು ಸಂದರ್ಶಿಸುವುದಕ್ಕೆ ಪ್ರಯಾಣ ಮಾಡಿದ ಒಬ್ಬ ಮನುಷ್ಯನಿಗೆ ಹೋಲಿಕೆಯಾಗಿದೆ. ಆ ಮನುಷ್ಯನು ತಾನು ಹೊರಡುವುದಕ್ಕೆ ಮುಂಚೆ ತನ್ನ ಸೇವಕರೊಂದಿಗೆ ಮಾತನಾಡಿ, ತನ್ನ ಆಸ್ತಿಯನ್ನು ನೋಡಿಕೊಳ್ಳಲು ಅವರಿಗೆ ಹೇಳಿದನು. |
15
|
ಅವನು ಆ ಸೇವಕರ ಸಾಮರ್ಥ್ಯಕ್ಕನುಸಾರವಾಗಿ ಎಷ್ಟೆಷ್ಟು ಜವಾಬ್ದಾರಿಕೆಯನ್ನು ಕೊಡಬೇಕೆಂಬುದನ್ನು ನಿರ್ಧರಿಸಿದನು. ಅವನು ಒಬ್ಬ ಸೇವಕನಿಗೆ ಐದು ತಲಾಂತು ಮತ್ತೊಬ್ಬನಿಗೆ ಎರಡು ತಲಾಂತು ಕೊಟ್ಟನು. ಮೂರನೇ ಸೇವಕನಿಗೆ ಒಂದು ತಲಾಂತು ಕೊಟ್ಟನು. ಬಳಿಕ ಅವನು ಬೇರೆ ಸ್ಥಳಕ್ಕೆ ಹೊರಟು ಹೋದನು. |
16
|
ಐದು ತಲಾಂತು ತೆಗೆದುಕೊಂಡ ಸೇವಕನು ತಕ್ಷಣವೇ ಹೋಗಿ ಆ ಹಣವನ್ನು ವ್ಯಾಪಾರಕ್ಕೆ ಹಾಕಿ ಇನ್ನೂ ಐದು ತಲಾಂತು ಸಂಪಾದಿಸಿದನು. |
17
|
ಎರಡು ತಲಾಂತು ಹೊಂದಿದ ಸೇವಕನೂ ಅದೇ ರೀತಿ ಆ ಹಣವನ್ನು ವ್ಯಾಪಾರಕ್ಕೆ ಹಾಕಿ ಇನ್ನೂ ಎರಡು ತಲಾಂತು ಸಂಪಾದಿಸಿದನು. |
18
|
ಆದರೆ ಒಂದು ತಲಾಂತು ಹೊಂದಿದವನು ಹೊರಟು ಹೋಗಿ ನೆಲದಲ್ಲಿ ಒಂದು ಗುಂಡಿ ತೋಡಿ ಆ ಹಣವನ್ನು ಅಡಗಿಸಿಟ್ಟನು. |
19
|
“ಬಹುಕಾಲದ ನಂತರ ಯಜಮಾನನು ಮನೆಗೆ ಬಂದನು. ತಾನು ಕೊಟ್ಟಿದ್ದ ಹಣದ ಕುರಿತಾಗಿ ಅವನು ಸೇವಕರನ್ನು ವಿಚಾರಿಸಿ ಲೆಕ್ಕ ಕೇಳಿದನು. |
20
|
ಐದು ತಲಾಂತು ಪಡೆದ ಸೇವಕನು ಇನ್ನೂ ಐದು ತಲಾಂತನ್ನು ತನ್ನ ಯಜಮಾನನ ಬಳಿಗೆ ತಂದು, ‘ಧಣಿಯೇ, ನೀನು ನನ್ನಲ್ಲಿ ಭರವಸೆಯಿಟ್ಟು ಐದು ತಲಾಂತನ್ನು ಕೊಟ್ಟೆ ನಾನು ಅದನ್ನು ವಿನಿಯೋಗಿಸಿ ಇನ್ನೂ ಐದು ತಲಾಂತು ಸಂಪಾದಿಸಿದ್ದೇನೆ’ ಎಂದನು. |
21
|
“ಯಜಮಾನನು, ‘ನೀನು ನಂಬಿಗಸ್ತನಾದ ಒಳ್ಳೆಯ ಸೇವಕ. ಆ ಸ್ವಲ್ಪ ಹಣವನ್ನು ಒಳ್ಳೆಯ ರೀತಿಯಲ್ಲಿ ಉಪಯೋಗಿಸಿದೆ. ಆದ್ದರಿಂದ ನಾನು ನಿನಗೆ ಇದಕ್ಕಿಂತಲೂ ದೊಡ್ಡ ಕೆಲಸವನ್ನು ಕೊಡುತ್ತೇನೆ. ಬಂದು ನನ್ನ ಸೌಭಾಗ್ಯದಲ್ಲಿ ಸೇರು’ ಎಂದು ಉತ್ತರಕೊಟ್ಟನು. |
22
|
“ಆಮೇಲೆ ಎರಡು ತಲಾಂತು ಹೊಂದಿದ್ದ ಸೇವಕನು ಯಜಮಾನನ ಬಳಿಗೆ ಬಂದು, ‘ಧಣಿಯೇ, ನೀನು ನನಗೆ ಎರಡು ತಲಾಂತು ಕೊಟ್ಟೆ. ನಾನು ಆ ಹಣವನ್ನು ಉಪಯೋಗಿಸಿ ಇನ್ನೂ ಎರಡು ತಲಾಂತು ಸಂಪಾದಿಸಿರುವೆ’ ಅಂದನು. |
23
|
“ಯಜಮಾನನು, ‘ನೀನು ನಂಬಿಗಸ್ತನಾದ ಒಳ್ಳೆಯ ಸೇವಕ. ನೀನು ಆ ಸ್ವಲ್ಪ ಹಣವನ್ನು ಒಳ್ಳೆಯ ರೀತಿಯಲ್ಲಿ ಉಪಯೋಗಿಸಿದೆ. ಆದ್ದರಿಂದ ನಾನು ನಿನಗೆ ಇದಕ್ಕಿಂತಲೂ ದೊಡ್ಡ ಕೆಲಸವನ್ನು ಕೊಡುತ್ತೇನೆ. ಬಂದು, ನನ್ನ ಸೌಭಾಗ್ಯದಲ್ಲಿ ಸೇರು’ ಎಂದು ಉತ್ತರಕೊಟ್ಟನು. |
24
|
“ಬಳಿಕ ಒಂದು ತಲಾಂತು ಹೊಂದಿದ್ದ ಸೇವಕನು ಯಜಮಾನನ ಬಳಿಗೆ ಬಂದು, ‘ಧಣಿಯೇ, ನೀನು ಬಹಳ ಕಠಿಣ ಮನುಷ್ಯನು ಎಂದು ನಾನು ಬಲ್ಲೆ. ನೀನು ನೆಡದ ಕಡೆಯಲ್ಲಿ ರಾಶಿ ಮಾಡಿಕೊಳ್ಳುವವನು ಮತ್ತು ಬೀಜ ಬಿತ್ತದ ಕಡೆಯಲ್ಲಿ ಕೊಯ್ಯುವವನು. |
25
|
ಆದ್ದರಿಂದ ನಾನು ಹೆದರಿಕೊಂಡು ನಿನ್ನ ಹಣವನ್ನು ಭೂಮಿಯಲ್ಲಿ ಅಡಗಿಸಿಟ್ಟೆನು. ನೀನು ನನಗೆ ಕೊಟ್ಟ ಹಣ ಇಲ್ಲಿದೆ, ತೆಗೆದುಕೊ’ ಅಂದನು. |
26
|
“ಅದಕ್ಕೆ ಯಜಮಾನನು, ‘ನೀನು ಸೋಮಾರಿಯಾದ ಕೆಟ್ಟ ಸೇವಕ! ನಾನು ನೆಡದ ಕಡೆಯಲ್ಲಿ ರಾಶಿ ಮಾಡಿಕೊಳ್ಳುವವನೆಂದು ಮತ್ತು ಬೀಜ ಬಿತ್ತದ ಕಡೆಯಲ್ಲಿ ಕೊಯ್ಯುವವನೆಂದು ನಿನಗೆ ಗೊತ್ತಿತ್ತೇ? |
27
|
ಹಾಗಿದ್ದರೆ ನೀನು ನನ್ನ ಹಣವನ್ನು ಬಡ್ಡಿಗೆ ಕೊಡಬೇಕಿತ್ತು. ಆಗ ನಾನು ಅಸಲಿನೊಡನೆ ಬಡ್ಡಿಯನ್ನೂ ಪಡೆದುಕೊಳ್ಳುತ್ತಿದ್ದೆನು’ ಎಂದು ಉತ್ತರಕೊಟ್ಟನು. |
28
|
“ಬಳಿಕ ಯಜಮಾನನು ತನ್ನ ಬೇರೆ ಸೇವಕರಿಗೆ, ‘ಅವನ ಒಂದು ತಲಾಂತನ್ನು ತೆಗೆದುಕೊಂಡು ಐದು ತಲಾಂತು ಹೊಂದಿರುವ ಸೇವಕನಿಗೆ ಕೊಡಿರಿ. |
29
|
ತನ್ನಲ್ಲಿರುವುದನ್ನು ವಿನಿಯೋಗಿಸುವ ಪ್ರತಿಯೊಬ್ಬನಿಗೂ ಹೆಚ್ಚಾಗಿ ಕೊಡಲ್ಪಡುವುದು, ಆದರೆ ತನ್ನಲ್ಲಿರುವುದನ್ನು ವಿನಿಯೋಗಿಸದಿರುವ ವ್ಯಕ್ತಿಯಿಂದ ಇದ್ದದ್ದನ್ನೂ ಕಸಿದುಕೊಳ್ಳಲಾಗುವುದು’ ಎಂದು ಹೇಳಿದನು. |
30
|
ಬಳಿಕ ಆ ಯಜಮಾನನು, ‘ಕೆಲಸಕ್ಕೆ ಬಾರದ ಆ ಸೇವಕನನ್ನು ಹೊರಗಿನ ಕಗ್ಗತ್ತಲೆಗೆ ದಬ್ಬಿರಿ’ ಎಂದು ಆಜ್ಞಾಪಿಸಿದನು. ಆ ಸ್ಥಳದಲ್ಲಿ ಜನರು ಗೋಳಾಡುತ್ತಾ ಬಾಧೆಯಿಂದ ತಮ್ಮ ಹಲ್ಲುಗಳನ್ನು ಕಡಿಯುತ್ತಿರುವರು.’ |
31
|
“ಮನುಷ್ಯಕುಮಾರನು ತನ್ನ ಮಹಿಮೆಯಲ್ಲಿ ಸಮಸ್ತ ದೇವದೂತರ ಸಮೇತ ಮತ್ತೆ ಬರುವಾಗ ರಾಜನಾಗಿ ಮಹಾಸಿಂಹಾಸನದ ಮೇಲೆ ಕುಳಿತುಕೊಳ್ಳುತ್ತಾನೆ. |
32
|
ಭೂಲೋಕದ ಜನರೆಲ್ಲರೂ ಆತನ ಮುಂದೆ ಒಟ್ಟುಗೂಡುತ್ತಾರೆ. ಕುರುಬನು ಕುರಿಗಳನ್ನು ಆಡುಗಳಿಂದ ಪ್ರತ್ಯೇಕಿಸಿದಂತೆ ಆತನು ಅವರನ್ನು ಬೇರ್ಪಡಿಸುವನು; |
33
|
ಮನುಷ್ಯಕುಮಾರನು ಕುರಿಗಳನ್ನು ತನ್ನ ಬಲಗಡೆಯಲ್ಲಿಯೂ ಮತ್ತು ಆಡುಗಳನ್ನು ತನ್ನ ಎಡಗಡೆಯಲ್ಲಿಯೂ ನಿಲ್ಲಿಸುವನು. |
34
|
“ಆಗ ರಾಜನು ತನ್ನ ಬಲಗಡೆಯಲ್ಲಿರುವ ಜನರಿಗೆ, ‘ಬನ್ನಿರಿ, ನನ್ನ ತಂದೆ ನಿಮಗೆ ಮಹಾ ಆಶೀರ್ವಾದಗಳನ್ನು ಕೊಟ್ಟಿದ್ದಾನೆ. ಬನ್ನಿರಿ, ದೇವರು ನಿಮಗೆ ವಾಗ್ದಾನ ಮಾಡಿದ ರಾಜ್ಯವನ್ನು ಪಡೆದುಕೊಳ್ಳಿರಿ. ಆ ರಾಜ್ಯವು ಲೋಕ ಉಂಟಾದಂದಿನಿಂದ ನಿಮಗಾಗಿ ಸಿದ್ಧಮಾಡಲ್ಪಟ್ಟಿದೆ. |
35
|
ನೀವು ಈ ರಾಜ್ಯವನ್ನು ಪಡೆದುಕೊಳ್ಳಿರಿ. ಏಕೆಂದರೆ ನಾನು ಹಸಿದಿದ್ದೆನು. ನೀವು ನನಗೆ ಊಟ ಕೊಟ್ಟಿರಿ. ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವುದಕ್ಕೆ ಕೊಟ್ಟಿರಿ. ನಾನು ಒಬ್ಬಂಟಿಗನಾಗಿ ಮನೆಯಿಂದ ದೂರದಲ್ಲಿ ಇದ್ದಾಗ, ನೀವು ನನ್ನನ್ನು ನಿಮ್ಮ ಮನೆಯೊಳಗೆ ಸೇರಿಸಿಕೊಂಡಿರಿ. |
36
|
ನಾನು ಬಟ್ಟೆಯಿಲ್ಲದವನಾಗಿದ್ದೆನು. ನೀವು ನನಗೆ ಉಡುವುದಕ್ಕೆ ಕೊಟ್ಟಿರಿ. ನಾನು ಕಾಯಿಲೆಯಲ್ಲಿ ಬಿದ್ದಿದ್ದೆನು, ನೀವು ನನಗೆ ಆರೈಕೆ ಮಾಡಿದಿರಿ. ನಾನು ಸೆರೆಯಲ್ಲಿದ್ದೆನು, ನೀವು ನನ್ನನ್ನು ನೋಡುವುದಕ್ಕೆ ಬಂದಿರಿ’ ಎಂದು ಹೇಳುತ್ತಾನೆ. |
37
|
“ಆಗ ಒಳ್ಳೆಯ ಜನರು, ‘ಪ್ರಭುವೇ, ನೀನು ಹಸಿದಿದ್ದನ್ನು ನೋಡಿ ಯಾವಾಗ ನಿನಗೆ ಆಹಾರ ಕೊಟ್ಟೆವು? ನೀನು ಬಾಯಾರಿದ್ದನ್ನು ನೋಡಿ ಯಾವಾಗ ಕುಡಿಯುವುದಕ್ಕೆ ಕೊಟ್ಟೆವು? |
38
|
ನೀನು ಒಬ್ಬಂಟಿಗನಾಗಿ ಮನೆಯಿಂದ ದೂರವಾಗಿ ಇದ್ದದ್ದನ್ನು ನೋಡಿ ಯಾವಾಗ ನಿನ್ನನ್ನು ನಮ್ಮ ಮನೆಗಳೊಳಗೆ ಸೇರಿಸಿಕೊಂಡೆವು? ನಿನಗೆ ಬಟ್ಟೆಯಿಲ್ಲದಿರುವುದನ್ನು ನೋಡಿ ಯಾವಾಗ ಉಡುವುದಕ್ಕೆ ಕೊಟ್ಟೆವು? |
39
|
ನೀನು ಕಾಯಿಲೆ ಬಿದ್ದಿದ್ದನ್ನು ಅಥವಾ ಸೆರೆಯಲ್ಲಿ ಇದ್ದದ್ದನ್ನು ನೋಡಿ ಯಾವಾಗ ನಿನ್ನನ್ನು ಆರೈಕೆ ಮಾಡಿದೆವು?’ ಎಂದು ಹೇಳುವರು. |
40
|
“ಆಗ ರಾಜನು, ‘ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಇಲ್ಲಿ ನನ್ನ ಜನರಿಗಾಗಿ ಏನೇನು ಮಾಡುತ್ತೀರೊ ಅದೆಲ್ಲವನ್ನು ನನಗೂ ಮಾಡಿದಂತಾಯಿತು’ ಎಂದು ಉತ್ತರಕೊಡುವನು. |
41
|
“ಆಮೇಲೆ ರಾಜನು ತನ್ನ ಎಡಗಡೆಯಿದ್ದ ಜನರಿಗೆ, ‘ನನ್ನಿಂದ ತೊಲಗಿಹೋಗಿರಿ, ನಿಮಗೆ ಶಿಕ್ಷೆಯಾಗಬೇಕೆಂದು ದೇವರು ತೀರ್ಮಾನಿಸಿದ್ದಾನೆ. ಸೈತಾನನಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ. |
42
|
ಏಕೆಂದರೆ ನಾನು ಹಸಿದಿದ್ದೆನು, ನೀವು ನನಗೆ ಊಟ ಕೊಡಲಿಲ್ಲ. ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯಲು ಕೊಡಲಿಲ್ಲ. |
43
|
ನಾನು ಪರದೇಶಿಯಾಗಿದ್ದೆನು, ನೀವು ನನ್ನನ್ನು ನಿಮ್ಮ ಮನೆಯೊಳಕ್ಕೆ ಸೇರಿಸಿಕೊಳ್ಳಲಿಲ್ಲ. ನಾನು ಬಟ್ಟೆಯಿಲ್ಲದವನಾಗಿದ್ದೆನು. ನೀವು ನನಗೆ ಉಡುವುದಕ್ಕೆ ಕೊಡಲಿಲ್ಲ. ನಾನು ಕಾಯಿಲೆಯಲ್ಲಿ ಬಿದ್ದಿದ್ದೆನು ಮತ್ತು ಸೆರೆಯಲ್ಲಿದ್ದೆನು, ನೀವು ನನ್ನನ್ನು ನೋಡಿಕೊಳ್ಳಲಿಲ್ಲ’ ಎಂದು ಹೇಳುವನು. |
44
|
“ಅವರು, ‘ಪ್ರಭುವೇ, ನೀನು ಯಾವಾಗ ಹಸಿದಿದ್ದೆ ಮತ್ತು ಬಾಯಾರಿದ್ದೆ? ನೀನು ಯಾವಾಗ ಆಶ್ರಯವಿಲ್ಲದವನಾಗಿದ್ದೆ? ನಿನಗೆ ಯಾವಾಗ ಬಟ್ಟೆಯಿರಲಿಲ್ಲ? ನೀನು ಯಾವಾಗ ಕಾಯಿಲೆ ಬಿದ್ದಿದ್ದೆ ಮತ್ತು ಸೆರೆವಾಸದಲ್ಲಿದ್ದೆ? ಇವೆಲ್ಲವನ್ನು ನಾವು ನೋಡಿಯೂ ನಿನಗೆ ಸಹಾಯ ಮಾಡದೆ ಹೋದದ್ದು ಯಾವಾಗ? ಎಂದು ಉತ್ತರಿಸುವರು. |
45
|
“ಆಗ ರಾಜನು, ‘ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಇಲ್ಲಿ ನನ್ನ ಜನರಿಗೆ ಏನೇನು ಮಾಡಲಿಲ್ಲವೊ ಅದನ್ನು ನನಗೂ ಮಾಡದಂತಾಯಿತು’ಎಂದು ಉತ್ತರಕೊಡುವನು. |
46
|
“ಆಗ ಕೆಟ್ಟಜನರು ಅಲ್ಲಿಂದ ಹೊರಟು ಹೋಗುವರು. ಅವರಿಗೆ ನಿತ್ಯದಂಡನೆಯಾಗುವುದು. ಒಳ್ಳೆಯ ಜನರಾದರೊ ನಿತ್ಯಜೀವವನ್ನು ಹೊಂದುವರು.”ು. ೆದುಕೊ’ಗೆ ಕೊಟ್ಟ ಹನ್ನ ಹಣನಡದ ಕಡೆಯನ ಬಳಿಗೆ ಬ0ದ0ಪಡದ ಸೇವಕನು ಇನ್ನೂ ಐದು ತಲಾ0ತನ್ನು ತನ್ನ ಯಡಲಾ0ತು ಕೊಟ್ಟ |
Matthew 25:41 Kannada Language Bible Words basic statistical display
COMING SOON ...