“ಆ ದಿನಗಳಲ್ಲಿ ಪರಲೋಕರಾಜ್ಯವು ಹೇಗಿರುತ್ತದೆ ಎನ್ನುವುದಕ್ಕೆ ಈ ಸಾಮ್ಯವು ಉದಾಹರಣೆಯಾಗಿದೆ. ಹತ್ತು ಮಂದಿ ಕನ್ನಿಕೆಯರು ತಮ್ಮ ದೀಪಗಳನ್ನು ತೆಗೆದುಕೊಂಡು ಮದುಮಗನನ್ನು ಎದುರುಗೊಳ್ಳಲು ಹೊರಟರು.
“ಆದ್ದರಿಂದ ಐದು ಮಂದಿ ಬುದ್ಧಿಹೀನ ಕನ್ನಿಕೆಯರು ಎಣ್ಣೆ ಕೊಂಡುಕೊಳ್ಳುವುದಕ್ಕೆ ಹೋದರು. ಅವರು ಹೋಗುತ್ತಿರುವಾಗ, ಮದುಮಗನು ಬಂದನು. ಸಿದ್ಧವಾಗಿದ್ದ ಕನ್ನಿಕೆಯರು ಮದುಮಗನ ಜೊತೆಯಲ್ಲಿ ಔತಣಕ್ಕೆ ಹೋದರು. ನಂತರ ಬಾಗಿಲು ಮುಚ್ಚಲಾಯಿತು.
“ಪರಲೋಕರಾಜ್ಯವು, ತನ್ನ ಮನೆಯನ್ನು ಬಿಟ್ಟು ಬೇರೆ ಸ್ಥಳವನ್ನು ಸಂದರ್ಶಿಸುವುದಕ್ಕೆ ಪ್ರಯಾಣ ಮಾಡಿದ ಒಬ್ಬ ಮನುಷ್ಯನಿಗೆ ಹೋಲಿಕೆಯಾಗಿದೆ. ಆ ಮನುಷ್ಯನು ತಾನು ಹೊರಡುವುದಕ್ಕೆ ಮುಂಚೆ ತನ್ನ ಸೇವಕರೊಂದಿಗೆ ಮಾತನಾಡಿ, ತನ್ನ ಆಸ್ತಿಯನ್ನು ನೋಡಿಕೊಳ್ಳಲು ಅವರಿಗೆ ಹೇಳಿದನು.
ಅವನು ಆ ಸೇವಕರ ಸಾಮರ್ಥ್ಯಕ್ಕನುಸಾರವಾಗಿ ಎಷ್ಟೆಷ್ಟು ಜವಾಬ್ದಾರಿಕೆಯನ್ನು ಕೊಡಬೇಕೆಂಬುದನ್ನು ನಿರ್ಧರಿಸಿದನು. ಅವನು ಒಬ್ಬ ಸೇವಕನಿಗೆ ಐದು ತಲಾಂತು [*ತಲಾಂತು ಒಂದು ತಲಾಂತು ಅಂದರೆ 30,000 ದಿನಾರಿ. ಒಂದು ದಿನಾರಿ ಅಂದರೆ ಒಬ್ಬನ ಒಂದು ದಿನದ ಸಂಬಳ.] ಮತ್ತೊಬ್ಬನಿಗೆ ಎರಡು ತಲಾಂತು ಕೊಟ್ಟನು. ಮೂರನೇ ಸೇವಕನಿಗೆ ಒಂದು ತಲಾಂತು ಕೊಟ್ಟನು. ಬಳಿಕ ಅವನು ಬೇರೆ ಸ್ಥಳಕ್ಕೆ ಹೊರಟುಹೋದನು.
ಐದು ತಲಾಂತು ಪಡೆದ ಸೇವಕನು ಇನ್ನೂ ಐದು ತಲಾಂತನ್ನು ತನ್ನ ಯಜಮಾನನ ಬಳಿಗೆ ತಂದು, ‘ಧಣಿಯೇ, ನೀನು ನನ್ನಲ್ಲಿ ಭರವಸೆಯಿಟ್ಟು ಐದು ತಲಾಂತನ್ನು ಕೊಟ್ಟೆ. ನಾನು ಅದನ್ನು ವಿನಿಯೋಗಿಸಿ ಇನ್ನೂ ಐದು ತಲಾಂತು ಸಂಪಾದಿಸಿದ್ದೇನೆ’ ಎಂದನು.
“ಯಜಮಾನನು, ‘ನೀನು ನಂಬಿಗಸ್ತನಾದ ಒಳ್ಳೆಯ ಸೇವಕ. ಆ ಸ್ವಲ್ಪ ಹಣವನ್ನು ಒಳ್ಳೆಯ ರೀತಿಯಲ್ಲಿ ಉಪಯೋಗಿಸಿದೆ. ಆದ್ದರಿಂದ ನಾನು ನಿನಗೆ ಇದಕ್ಕಿಂತಲೂ ದೊಡ್ಡ ಕೆಲಸವನ್ನು ಕೊಡುತ್ತೇನೆ. ಬಂದು ನನ್ನ ಸೌಭಾಗ್ಯದಲ್ಲಿ ಸೇರು’ ಎಂದು ಉತ್ತರಕೊಟ್ಟನು.
“ಆಮೇಲೆ ಎರಡು ತಲಾಂತು ಹೊಂದಿದ್ದ ಸೇವಕನು ಯಜಮಾನನ ಬಳಿಗೆ ಬಂದು, ‘ಧಣಿಯೇ, ನೀನು ನನಗೆ ಎರಡು ತಲಾಂತು ಕೊಟ್ಟೆ. ನಾನು ಆ ಹಣವನ್ನು ಉಪಯೋಗಿಸಿ ಇನ್ನೂ ಎರಡು ತಲಾಂತು ಸಂಪಾದಿಸಿರುವೆ’ ಅಂದನು.
“ಯಜಮಾನನು, ‘ನೀನು ನಂಬಿಗಸ್ತನಾದ ಒಳ್ಳೆಯ ಸೇವಕ. ನೀನು ಆ ಸ್ವಲ್ಪ ಹಣವನ್ನು ಒಳ್ಳೆಯ ರೀತಿಯಲ್ಲಿ ಉಪಯೋಗಿಸಿದೆ. ಆದ್ದರಿಂದ ನಾನು ನಿನಗೆ ಇದಕ್ಕಿಂತಲೂ ದೊಡ್ಡ ಕೆಲಸವನ್ನು ಕೊಡುತ್ತೇನೆ. ಬಂದು, ನನ್ನ ಸೌಭಾಗ್ಯದಲ್ಲಿ ಸೇರು’ ಎಂದು ಉತ್ತರಕೊಟ್ಟನು.
“ಬಳಿಕ ಒಂದು ತಲಾಂತು ಹೊಂದಿದ್ದ ಸೇವಕನು ಯಜಮಾನನ ಬಳಿಗೆ ಬಂದು, ‘ಧಣಿಯೇ, ನೀನು ಬಹಳ ಕಠಿಣ ಮನುಷ್ಯನು ಎಂದು ನಾನು ಬಲ್ಲೆ. ನೀನು ನೆಡದ ಕಡೆಯಲ್ಲಿ ರಾಶಿ ಮಾಡಿಕೊಳ್ಳುವವನು ಮತ್ತು ಬೀಜ ಬಿತ್ತದ ಕಡೆಯಲ್ಲಿ ಕೊಯ್ಯುವವನು.
ತನ್ನಲ್ಲಿರುವುದನ್ನು ವಿನಿಯೋಗಿಸುವ ಪ್ರತಿಯೊಬ್ಬನಿಗೂ ಹೆಚ್ಚಾಗಿ ಕೊಡಲ್ಪಡುವುದು, ಆದರೆ ತನ್ನಲ್ಲಿರುವುದನ್ನು ವಿನಿಯೋಗಿಸದಿರುವ ವ್ಯಕ್ತಿಯಿಂದ ಇದ್ದದ್ದನ್ನೂ ಕಸಿದುಕೊಳ್ಳಲಾಗುವುದು’ ಎಂದು ಹೇಳಿದನು.
“ಆಗ ರಾಜನು ತನ್ನ ಬಲಗಡೆಯಲ್ಲಿರುವ ಜನರಿಗೆ, ‘ಬನ್ನಿರಿ, ನನ್ನ ತಂದೆ ನಿಮಗೆ ಮಹಾ ಆಶೀರ್ವಾದಗಳನ್ನು ಕೊಟ್ಟಿದ್ದಾನೆ. ಬನ್ನಿರಿ, ದೇವರು ನಿಮಗೆ ವಾಗ್ದಾನ ಮಾಡಿದ ರಾಜ್ಯವನ್ನು ಪಡೆದುಕೊಳ್ಳಿರಿ. ಆ ರಾಜ್ಯವು ಲೋಕ ಉಂಟಾದಂದಿನಿಂದ ನಿಮಗಾಗಿ ಸಿದ್ಧಮಾಡಲ್ಪಟ್ಟಿದೆ.
ನೀವು ಈ ರಾಜ್ಯವನ್ನು ಪಡೆದುಕೊಳ್ಳಿರಿ. ಏಕೆಂದರೆ ನಾನು ಹಸಿದಿದ್ದೆನು. ನೀವು ನನಗೆ ಊಟ ಕೊಟ್ಟಿರಿ. ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವುದಕ್ಕೆ ಕೊಟ್ಟಿರಿ. ನಾನು ಒಬ್ಬಂಟಿಗನಾಗಿ ಮನೆಯಿಂದ ದೂರದಲ್ಲಿ ಇದ್ದಾಗ, ನೀವು ನನ್ನನ್ನು ನಿಮ್ಮ ಮನೆಯೊಳಗೆ ಸೇರಿಸಿಕೊಂಡಿರಿ.
ನಾನು ಬಟ್ಟೆಯಿಲ್ಲದವನಾಗಿದ್ದೆನು. ನೀವು ನನಗೆ ಉಡುವುದಕ್ಕೆ ಕೊಟ್ಟಿರಿ. ನಾನು ಕಾಯಿಲೆಯಲ್ಲಿ ಬಿದ್ದಿದ್ದೆನು, ನೀವು ನನಗೆ ಆರೈಕೆ ಮಾಡಿದಿರಿ. ನಾನು ಸೆರೆಯಲ್ಲಿದ್ದೆನು, ನೀವು ನನ್ನನ್ನು ನೋಡುವುದಕ್ಕೆ ಬಂದಿರಿ’ ಎಂದು ಹೇಳುತ್ತಾನೆ.
ನೀನು ಒಬ್ಬಂಟಿಗನಾಗಿ ಮನೆಯಿಂದ ದೂರವಾಗಿ ಇದ್ದದ್ದನ್ನು ನೋಡಿ ಯಾವಾಗ ನಿನ್ನನ್ನು ನಮ್ಮ ಮನೆಗಳೊಳಗೆ ಸೇರಿಸಿಕೊಂಡೆವು? ನಿನಗೆ ಬಟ್ಟೆಯಿಲ್ಲದಿರುವುದನ್ನು ನೋಡಿ ಯಾವಾಗ ಉಡುವುದಕ್ಕೆ ಕೊಟ್ಟೆವು?
“ಆಮೇಲೆ ರಾಜನು ತನ್ನ ಎಡಗಡೆಯಿದ್ದ ಜನರಿಗೆ, ‘ನನ್ನಿಂದ ತೊಲಗಿಹೋಗಿರಿ, ನಿಮಗೆ ಶಿಕ್ಷೆಯಾಗಬೇಕೆಂದು ದೇವರು ತೀರ್ಮಾನಿಸಿದ್ದಾನೆ. ಸೈತಾನನಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ.
ನಾನು ಪರದೇಶಿಯಾಗಿದ್ದೆನು, ನೀವು ನನ್ನನ್ನು ನಿಮ್ಮ ಮನೆಯೊಳಕ್ಕೆ ಸೇರಿಸಿಕೊಳ್ಳಲಿಲ್ಲ. ನಾನು ಬಟ್ಟೆಯಿಲ್ಲದವನಾಗಿದ್ದೆನು. ನೀವು ನನಗೆ ಉಡುವುದಕ್ಕೆ ಕೊಡಲಿಲ್ಲ. ನಾನು ಕಾಯಿಲೆಯಲ್ಲಿ ಬಿದ್ದಿದ್ದೆನು ಮತ್ತು ಸೆರೆಯಲ್ಲಿದ್ದೆನು, ನೀವು ನನ್ನನ್ನು ನೋಡಿಕೊಳ್ಳಲಿಲ್ಲ’ ಎಂದು ಹೇಳುವನು.
“ಅವರು, ‘ಪ್ರಭುವೇ, ನೀನು ಯಾವಾಗ ಹಸಿದಿದ್ದೆ ಮತ್ತು ಬಾಯಾರಿದ್ದೆ? ನೀನು ಯಾವಾಗ ಆಶ್ರಯವಿಲ್ಲದವನಾಗಿದ್ದೆ? ನಿನಗೆ ಯಾವಾಗ ಬಟ್ಟೆಯಿರಲಿಲ್ಲ? ನೀನು ಯಾವಾಗ ಕಾಯಿಲೆ ಬಿದ್ದಿದ್ದೆ ಮತ್ತು ಸೆರೆವಾಸದಲ್ಲಿದ್ದೆ? ಇವೆಲ್ಲವನ್ನು ನಾವು ನೋಡಿಯೂ ನಿನಗೆ ಸಹಾಯ ಮಾಡದೆ ಹೋದದ್ದು ಯಾವಾಗ?’ ಎಂದು ಉತ್ತರಿಸುವರು.