Bible Languages

Indian Language Bible Word Collections

Bible Versions

Books

Matthew Chapters

Matthew 27 Verses

Bible Versions

Books

Matthew Chapters

Matthew 27 Verses

1 ಮರುದಿನ ಮುಂಜಾನೆ, ಮಹಾಯಾಜಕರೆಲ್ಲರೂ ಮತ್ತು ಹಿರಿಯ ನಾಯಕರೆಲ್ಲರೂ ಯೇಸುವನ್ನು ಕೊಲ್ಲಲು ತೀರ್ಮಾನಿಸಿದರು.
2 ಅವರು ಆತನನ್ನು ಸರಪಣಿಗಳಿಂದ ಬಂಧಿಸಿ ರಾಜ್ಯಪಾಲನಾದ ಪಿಲಾತನ ಬಳಿಗೆ ಕರೆದೊಯ್ದು ಅವನಿಗೆ ಒಪ್ಪಿಸಿದರು.
3 ಯೇಸುವನ್ನು ಆತನ ವೈರಿಗಳಿಗೆ ಒಪ್ಪಿಸಿಕೊಟ್ಟ ಯೂದನು, ಯೇಸುವಿಗೆ ಸಂಭವಿಸಿದ್ದನ್ನು ಕಂಡು, ತಾನು ಮಾಡಿದ ದ್ರೋಹಕ್ಕಾಗಿ ಬಹಳ ಪಶ್ಚಾತ್ತಾಪಪಟ್ಟನು. ಅವನು ಬೆಳ್ಳಿಯ ನಾಣ್ಯಗಳನ್ನು ಮಹಾಯಾಜಕರ ಮತ್ತು ಹಿರಿಯನಾಯಕರ ಬಳಿಗೆ ತೆಗೆದುಕೊಂಡು ಹೋಗಿ,
4 ‘ನಾನು ಪಾಪ ಮಾಡಿದೆ, ನಿರಪರಾಧಿಯನ್ನು ಕೊಲ್ಲಲು ನಿಮಗೆ ಒಪ್ಪಿಸಿಬಿಟ್ಟೆ” ಎಂದು ಹೇಳಿದನು. ಯೆಹೂದ್ಯ ನಾಯಕರು, “ಅದಕ್ಕೆ ನಾವೇನು ಮಾಡೋಣ! ಅದು ನಿನ್ನ ಸಮಸ್ಯೆ, ನಮ್ಮದಲ್ಲ!” ಎಂದು ಉತ್ತರಕೊಟ್ಟರು.
5 ಆಗ ಯೂದನು ಆ ಹಣವನ್ನು ದೇವಾಲಯದೊಳಗೆ ಬಿಸಾಡಿ ಹೊರಟುಹೋಗಿ ನೇಣು ಹಾಕಿಕೊಂಡನು.
6 ಮಹಾಯಾಜಕರು ದೇವಾಲಯದಲ್ಲಿದ್ದ ಬೆಳ್ಳಿಯ ನಾಣ್ಯಗಳನ್ನು ಆಯ್ದುಕೊಂಡು, “ಈ ಹಣವನ್ನು ಒಬ್ಬ ಮನುಷ್ಯನ ಹತ್ಯೆಗಾಗಿ ಕೊಟ್ಟಿದ್ದ ಕಾರಣ ಇದನ್ನು ದೇವಾಲಯದ ಹಣದೊಂದಿಗೆ ಸೇರಿಸುವುದು ನಮ್ಮ ಧರ್ಮಶಾಸ್ತ್ರಕ್ಕೆ ವಿರುದ್ಧ” ಎಂದು ಹೇಳಿದರು.
7 ಆದ್ದರಿಂದ ಅವರು ಆ ಹಣದಿಂದ “ಕುಂಬಾರನ ಹೊಲ” ಎಂಬ ಜಮೀನನ್ನು ಕೊಂಡುಕೊಳ್ಳಲು ತೀರ್ಮಾನಿಸಿದರು. ಜೆರುಸಲೇಮಿಗೆ ಪ್ರವಾಸ ಬಂದವರು ಸತ್ತರೆ, ಅವರನ್ನು ಈ ಹೊಲದಲ್ಲಿ ಸಮಾಧಿ ಮಾಡಬೇಕೆಂದು ನಿರ್ಧರಿಸಲಾಯಿತು.
8 ಆದ ಕಾರಣವೇ ಆ ಹೊಲವನ್ನು ಇಂದಿಗೂ “ಜೀವಹತ್ಯೆಯ ಹೊಲ”ವೆಂದು ಕರೆಯುತ್ತಾರೆ.
9 ಹೀಗೆ ಪ್ರವಾದಿಯಾದ ಯೆರೆಮೀಯನು ಹೇಳಿದ ಮಾತು ನೆರವೇರಿತು. ಅದೇನೆಂದರೆ: “ಅವರು ಮೂವತ್ತು ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡರು. ಯೆಹೂದ್ಯರು ಆತನ ಜೀವಕ್ಕೆ ನಿರ್ಧರಿಸಿದ ಬೆಲೆಯೇ ಅಷ್ಟು.
10 ಪ್ರಭುವು ನನಗೆ ಆಜ್ಞಾಪಿಸಿದಂತೆ, ಅವರು ಮೂವತ್ತು ಬೆಳ್ಳಿಯ ನಾಣ್ಯಗಳಿಂದ ‘ಕುಂಬಾರನ ಹೊಲವನ್ನು’ ಕೊಂಡುಕೊಂಡರು.”
11 ಯೇಸುವನ್ನು ರಾಜ್ಯಪಾಲ ಪಿಲಾತನ ಎದುರಿನಲ್ಲಿ ನಿಲ್ಲಿಸಿದರು. ಪಿಲಾತನು ಆತನಿಗೆ, “ನೀನು ಯೆಹೂದ್ಯರ ರಾಜನೇ?” ಎಂದು ಕೇಳಿದನು. ಯೇಸು, “ಹೌದು, ನೀನು ಹೇಳಿದಂತೆ ಆತನೇ ನಾನು” ಎಂದು ಉತ್ತರಕೊಟ್ಟನು.
12 ಮಹಾಯಾಜಕರು ಮತ್ತು ಯೆಹೂದ್ಯರ ಹಿರಿಯ ನಾಯಕರು ಯೇಸುವಿನ ಮೇಲೆ ದೂರು ಹೇಳಿದಾಗ, ಆತನು ಮೌನವಾಗಿದ್ದನು.
13 ಆದ್ದರಿಂದ ಪಿಲಾತನು ಯೇಸುವನ್ನು, “ಈ ಜನರು ನಿನ್ನ ಮೇಲೆ ಹೇಳುತ್ತಿರುವ ಈ ದೂರುಗಳನ್ನೆಲ್ಲ ನೀನು ಕೇಳುತ್ತಿದ್ದರೂ ಏಕೆ ಉತ್ತರ ಕೊಡುತ್ತಿಲ್ಲ?” ಎಂದು ಕೇಳಿದನು.
14 ಆದರೆ ಯೇಸು ಪಿಲಾತನಿಗೆ ಉತ್ತರ ಕೊಡಲೇ ಇಲ್ಲ. ಪಿಲಾತನಿಗೆ ಬಹಳ ಆಶ್ಚರ್ಯವಾಯಿತು.
15 ಪ್ರತಿವರ್ಷವೂ ಪಸ್ಕಹಬ್ಬದ ಸಮಯದಲ್ಲಿ ಜನರು ಬಯಸುವ ಕೈದಿಗಳಲ್ಲಿ ಒಬ್ಬನನ್ನು ರಾಜ್ಯಪಾಲನು ಬಿಡುಗಡೆ ಮಾಡಬೇಕೆಂಬುದು ಅಂದಿನ ಪದ್ಧತಿಯಾಗಿತ್ತು.
16 ಆ ಕಾಲದಲ್ಲಿ ಪ್ರಸಿದ್ಧನಾದ ಕೈದಿಯೊಬ್ಬನು ಸೆರೆಮನೆಯಲ್ಲಿದ್ದನು. ಅವನ ಹೆಸರು ಬರಬ್ಬ.
17 ಜನರೆಲ್ಲರೂ ಪಿಲಾತನ ಭವನದ ಬಳಿ ನೆರೆದಿದ್ದರು. ಪಿಲಾತನು ಅವರಿಗೆ, “ನಾನು ನಿಮಗಾಗಿ ಯಾವ ಕೈದಿಗಳನ್ನು ಬಿಡುಗಡೆ ಮಾಡಲಿ, ಬರಬ್ಬನನ್ನೇ ಅಥವಾ ಕ್ರಿಸ್ತನೆಂದು ಕರೆಸಿಕೊಳ್ಳುವ ಯೇಸುವನ್ನೇ?” ಎಂದು ಕೇಳಿದನು.
18 ಜನರು ಹೊಟ್ಟೆಕಿಚ್ಚಿನಿಂದ ಯೇಸುವನ್ನು ತನಗೆ ಒಪ್ಪಿಸಿದ್ದಾರೆಂಬುದು ಪಿಲಾತನಿಗೆ ಗೊತ್ತಿತ್ತು.
19 ಪಿಲಾತನು ನ್ಯಾಯಸ್ಥಾನದಲ್ಲಿ ಕುಳಿತುಕೊಂಡಿದ್ದಾಗ ಅವನ ಪತ್ನಿಯು ಒಂದು ಸಂದೇಶವನ್ನು ಕಳುಹಿಸಿದ್ದಳು. “ಆ ಮನುಷ್ಯನಿಗೆ ಏನನ್ನೂ ಮಾಡಬೇಡ. ಅವನು ತಪ್ಪಿತಸ್ಥನಲ್ಲ. ಆತನ ನಿಮಿತ್ತ ಕಳೆದ ರಾತ್ರಿ ಕನಸಿನಲ್ಲಿ ಬಹಳ ಸಂಕಟಪಟ್ಟಿದ್ದೇನೆ” ಎಂಬುದೇ ಆ ಸಂದೇಶ.
20 ಆದರೆ ಮಹಾಯಾಜಕರು ಮತ್ತು ಹಿರಿಯ ಯೆಹೂದ್ಯ ನಾಯಕರು, ಬರಬ್ಬನನ್ನು ಬಿಡುಗಡೆ ಮಾಡಬೇಕೆಂದೂ ಯೇಸುವನ್ನು ಕೊಲ್ಲಿಸಬೇಕೆಂದೂ ಕೇಳಿಕೊಳ್ಳಲು ಜನರಿಗೆ ಹೇಳಿಕೊಟ್ಟರು.
21 ಪಿಲಾತನು, “ನಿಮಗಾಗಿ ನಾನು ಯಾರನ್ನು ಬಿಡುಗಡೆ ಮಾಡಲಿ? ಬರಬ್ಬನನ್ನೇ? ಯೇಸುವನ್ನೇ?” ಎಂದು ಕೇಳಿದನು. ಜನರು “ಬರಬ್ಬನನ್ನು!” ಎಂದು ಉತ್ತರಕೊಟ್ಟರು.
22 ಪಿಲಾತನು, “ಹಾಗಾದರೆ ಕ್ರಿಸ್ತನೆಂದು ಕರೆಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ?” ಎಂದು ಕೇಳಿದನು. ಜನರೆಲ್ಲರೂ, “ಅವನನ್ನು ಶಿಲುಬೆಗೇರಿಸು!” ಎಂದು ಉತ್ತರಕೊಟ್ಟರು.
23 ಪಿಲಾತನು, “ಅವನನ್ನು ಶಿಲುಬೆಗೇರಿಸೆಂದು ನೀವು ಕೇಳುವುದೇಕೆ? ಅವನೇನು ತಪ್ಪುಮಾಡಿದ್ದಾನೆ?” ಎಂದು ಕೇಳಿದನು. ಆದರೆ ಜನರೆಲ್ಲರೂ, “ಅವನನ್ನು ಶಿಲುಬೆಗೇರಿಸು!” ಎಂದು ಜೋರಾಗಿ ಕೂಗಿದರು.
24 ಜನರ ಮನಸ್ಸನ್ನು ಬದಲಾಯಿಸಲು ತನಗೆ ಸಾಧ್ಯವಿಲ್ಲ ಎಂತಲೂ ಜನರು ಗಲಭೆ ಆರಂಭಿಸಲಿದ್ದಾರೆ ಎಂಬುದನ್ನೂ ತಿಳಿದುಕೊಂಡ ಪಿಲಾತನು ಸ್ವಲ್ಪ ನೀರನ್ನು ತೆಗೆದುಕೊಂಡು ಜನರೆಲ್ಲರ ಎದುರಿನಲ್ಲಿ ತನ್ನ ಕೈಗಳನ್ನು ತೊಳೆದುಕೊಳ್ಳುತ್ತಾ, “ಈ ಮನುಷ್ಯನ ಸಾವಿಗೆ ನಾನು ಜವಾಬ್ದಾರನಲ್ಲ. ಆತನನ್ನು ಶಿಲುಬೆಗೇರಿಸುತ್ತಿರುವವರು ನೀವೇ!” ಎಂದು ಹೇಳಿದನು.
25 ಜನರೆಲ್ಲರೂ, “ಅವನ ಸಾವಿಗೆ ನಾವೇ ಜವಾಬ್ದಾರರು. ಅವನ ಸಾವಿಗೆ ಏನಾದರೂ ದಂಡನೆಯಿದ್ದರೆ ಅದನ್ನು ನಾವು ಮತ್ತು ನಮ್ಮ ಮಕ್ಕಳು ಅನುಭವಿಸುತ್ತೇವೆ” ಎಂದು ಉತ್ತರಕೊಟ್ಟರು.
26 ಆಗ ಪಿಲಾತನು ಬರಬ್ಬನನ್ನು ಬಿಡುಗಡೆ ಮಾಡಿ, ಯೇಸುವನ್ನು ಕೊರಡೆಗಳಿಂದ ಹೊಡೆಯಿಸಿ ಶಿಲುಬೆಗೇರಿಸಲು ಸೈನಿಕರಿಗೆ ಒಪ್ಪಿಸಿಬಿಟ್ಟನು.
27 ಪಿಲಾತನ ಸೈನಿಕರು ಯೇಸುವನ್ನು ರಾಜಭವನದ ಒಳಕ್ಕೆ ಕರೆದೊಯ್ದರು. ಸೈನಿಕರೆಲ್ಲರೂ ಯೇಸುವನ್ನು ಸುತ್ತುಗಟ್ಟಿದರು.
28 ಸೈನಿಕರು ಆತನ ಬಟ್ಟೆಗಳನ್ನು ತೆಗೆದುಹಾಕಿ ಆತನಿಗೆ ಒಂದು ಕೆಂಪು ನಿಲುವಂಗಿಯನ್ನು ತೊಡಿಸಿದರು.
29 ಮುಳ್ಳಿನ ಬಳ್ಳಿಯಿಂದ ಒಂದು ಕಿರೀಟವನ್ನು ಹೆಣೆದು ಆತನ ತಲೆಯ ಮೇಲಿಟ್ಟರು. ಆತನ ಬಲಗೈಗೆ ಒಂದು ಕೋಲನ್ನು ಕೊಟ್ಟರು. ಬಳಿಕ ಸೈನಿಕರು ಯೇಸುವಿನ ಮುಂದೆ ಬಾಗಿ, “ಯೆಹೂದ್ಯರ ರಾಜನೇ, ನಮಸ್ಕಾರ” ಎಂದು ಅಪಹಾಸ್ಯ ಮಾಡಿದರು.
30 ಆತನ ಮೇಲೆ ಉಗುಳಿದರು. ಆತನ ಕೈಯಿಂದ ಕೋಲನ್ನು ತೆಗೆದುಕೊಂಡು ತಲೆಯ ಮೇಲೆ ಹೊಡೆದರು.
31 ಹೀಗೆ ಅಪಹಾಸ್ಯ ಮಾಡಿದ ಬಳಿಕ, ಆತನ ನಿಲುವಂಗಿಯನ್ನು ತೆಗೆದುಹಾಕಿ ಆತನ ಬಟ್ಟೆಗಳನ್ನು ಮತ್ತೆ ಆತನಿಗೆ ತೊಡಿಸಿ ಶಿಲುಬೆಗೇರಿಸಲು ಕರೆದೊಯ್ದರು.
32 ಸೈನಿಕರು ಯೇಸುವಿನೊಂದಿಗೆ ನಗರದಿಂದ ಹೊರಕ್ಕೆ ಹೋಗುತ್ತಿರುವಾಗ ಸಿರೇನ ಪಟ್ಟಣದ “ಸಿಮೋನ” ಎಂಬ ವ್ಯಕ್ತಿಯನ್ನು ಕಂಡರು. ಆತನ ಶಿಲುಬೆ ಹೊರುವುದಕ್ಕಾಗಿ ಅವರು ಅವನನ್ನು ಬಲವಂತಪಡಿಸಿದರು.
33 ಅವರು ಗೊಲ್ಗೊಥಾ ಎಂಬ ಸ್ಥಳಕ್ಕೆ ಬಂದರು. (ಗೊಲ್ಗೊಥಾ ಎಂದರೆ “ಕಪಾಲ ಸ್ಥಳ” ಎಂದರ್ಥ.)
34 ಗೊಲ್ಗೊಥಾದಲ್ಲಿ ಸೈನಿಕರು ಆತನಿಗೆ ಕುಡಿಯಲು ದ್ರಾಕ್ಷಾರಸವನ್ನು ಕೊಟ್ಟರು. ಈ ದ್ರಾಕ್ಷಾರಸಕ್ಕೆ ನೋವು ನಿವಾರಕ ಔಷಧಿಯನ್ನು ಬೆರೆಸಿದ್ದರು. ಆತನು ದ್ರಾಕ್ಷಾರಸದ ರುಚಿ ನೋಡಿ ಅದನ್ನು ಕುಡಿಯಲಿಲ್ಲ.
35 ಸೈನಿಕರು ಆತನನ್ನು ಶಿಲುಬೆಗೆ ಮೊಳೆಗಳಿಂದ ಜಡಿದರು. ನಂತರ ಉಡುಪಿಗಾಗಿ ತಮ್ಮಲ್ಲಿಯೇ ಚೀಟಿಹಾಕಿ ತೆಗೆದುಕೊಂಡರು.
36 ಸೈನಿಕರು ಯೇಸುವನ್ನು ಕಾಯುತ್ತಾ ಅಲ್ಲೇ ಕುಳಿತಿದ್ದರು.
37 ಇದಲ್ಲದೆ ಆತನ ಮೇಲೆ ಹೊರಿಸಿದ ಅಪರಾಧವನ್ನು ಬರೆದು ಆತನ ತಲೆಯ ಮೇಲ್ಗಡೆ ಹಚ್ಚಿದರು. “ಈತನು ಯೇಸು, ಯೆಹೂದ್ಯರ ರಾಜ” ಎಂಬುದೇ ಆ ಅಪರಾಧ.
38 ಯೇಸುವಿನ ಪಕ್ಕದಲ್ಲಿ ಇಬ್ಬರು ಕಳ್ಳರನ್ನು ಶಿಲುಬೆಗೆ ಹಾಕಿದ್ದರು. ಒಬ್ಬ ಕಳ್ಳನನ್ನು ಯೇಸುವಿನ ಬಲಗಡೆಯಲ್ಲಿಯೂ ಮತ್ತೊಬ್ಬ ಕಳ್ಳನನ್ನು ಯೇಸುವಿನ ಎಡಗಡೆಯಲ್ಲಿಯೂ ಹಾಕಿದ್ದರು.
39 ದಾರಿಯಲ್ಲಿ ಹೋಗುತ್ತಿದ್ದ ಜನರು ತಲೆಯಾಡಿಸುತ್ತಾ,
40 “ನೀನು ದೇವಾಲಯವನ್ನು ಕೆಡವಿ, ಅದನ್ನು ಮತ್ತೆ ಮೂರು ದಿನಗಳಲ್ಲಿ ನಿರ್ಮಿಸುತ್ತೇನೆಂದು ಹೇಳುತ್ತಿದ್ದೆ. ಆದರೆ ಈಗ ನಿನ್ನನ್ನು ನೀನು ರಕ್ಷಿಸಿಕೊ! ನೀನು ನಿಜವಾಗಿಯೂ ದೇವರ ಮಗನಾಗಿದ್ದರೆ, ಶಿಲುಬೆಯಿಂದ ಕೆಳಗಿಳಿದು ಬಾ!” ಎಂದು ಹಾಸ್ಯಮಾಡಿದರು.
41 ಮಹಾಯಾಜಕರೂ ಧರ್ಮೋಪದೇಶಕರೂ ಮತ್ತು ಹಿರಿಯ ಯೆಹೂದ್ಯ ನಾಯಕರೂ ಅಲ್ಲಿದ್ದರು. ಇವರು ಸಹ ಇತರ ಜನರಂತೆ ಯೇಸುವನ್ನು ಗೇಲಿ ಮಾಡಿದರು.
42 “ಇವನು ಬೇರೆಯವರನ್ನು ರಕ್ಷಿಸಿದನು. ಆದರೆ ತನ್ನನ್ನು ರಕ್ಷಿಸಿಕೊಳ್ಳಲಾರ! ಇಸ್ರೇಲರ ರಾಜ ಎಂದು ಜನ ಹೇಳುತ್ತಾರೆ. ಇವನು ರಾಜನಾಗಿದ್ದರೆ ಶಿಲುಬೆಯಿಂದ ಕೆಳಗಿಳಿದು ಬರಲಿ. ಆಗ ನಾವು ಇವನನ್ನು ನಂಬುತ್ತೇವೆ.
43 ಇವನು ದೇವರನ್ನು ನಂಬಿದ್ದನು. ಈಗ ದೇವರಿಗೆ ನಿಜವಾಗಿಯೂ ಇವನು ಬೇಕಿದ್ದರೆ, ದೇವರೇ ಇವನನ್ನು ಕಾಪಾಡಲಿ. ‘ನಾನು ದೇವರ ಮಗನು’ ಎಂದು ಇವನೇ ಹೇಳಿಕೊಂಡನಲ್ಲಾ” ಎಂದು ಅವರು ಹೇಳಿದರು.
44 ಅದೇ ರೀತಿಯಲ್ಲಿ ಯೇಸುವಿನ ಎಡಬಲಗಳಲ್ಲಿ ಶಿಲುಬೆಗೆ ಹಾಕಲ್ಪಟ್ಟಿದ್ದ ಕಳ್ಳರು ಸಹ ಆತನನ್ನು ನಿಂದಿಸಿದರು.
45 ಅಂದು ಮಧ್ಯಾಹ್ನ ಹನ್ನೆರಡು ಗಂಟೆಯಿಂದ ಮೂರು ಗಂಟೆಯವರೆಗೆ ದೇಶದಲ್ಲೆಲ್ಲಾ ಕತ್ತಲೆ ಕವಿಯಿತು.
46 ಸುಮಾರು ಮೂರು ಗಂಟೆಯ ಸಮಯದಲ್ಲಿ ಯೇಸು, “ಏಲೀ, ಏಲೀ, ಲಮಾ ಸಬಕ್ತಾನಿ?” ಎಂದು ಗಟ್ಟಿಯಾದ ಧ್ವನಿಯಲ್ಲಿ ಕೂಗಿದನು. ಹೀಗೆಂದರೆ, “ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈ ಬಿಟ್ಟುಬಿಟ್ಟೆ?” ಎಂದರ್ಥ.
47 ಅಲ್ಲಿ ನಿಂತಿದ್ದ ಕೆಲವು ಜನರು ಇದನ್ನು ಕೇಳಿ, “ಇವನು ಎಲೀಯನನ್ನು ಕರೆಯುತ್ತಿದ್ದಾನೆ” ಎಂದು ಹೇಳಿದರು.
48 ಆ ಜನರಲ್ಲಿ ಒಬ್ಬನು ಓಡಿಹೋಗಿ ಸ್ಪಂಜನ್ನು ತಂದು, ಅದರಲ್ಲಿ ಹುಳಿರಸವನ್ನು ತುಂಬಿಸಿ, ಅದನ್ನು ಒಂದು ಕೋಲಿಗೆ ಕಟ್ಟಿ ಆ ಕೋಲಿನಿಂದ ಸ್ಪಂಜನ್ನು ಯೇಸುವಿಗೆ ಕುಡಿಯಲು ಕೊಟ್ಟನು.
49 ಆದರೆ ಇತರ ಜನರು, “ಅವನ ಬಗ್ಗೆ ಚಿಂತಿಸಬೇಡ, ಅವನನ್ನು ರಕ್ಷಿಸಲು ಎಲೀಯನು ಬರಬಹುದೇನೊ ನೋಡೋಣ” ಎಂದು ಹೇಳಿದರು.
50 ಬಳಿಕ ಯೇಸು ಮತ್ತೆ ಗಟ್ಟಿಯಾದ ಧ್ವನಿಯಲ್ಲಿ ಕೂಗಿ ಪ್ರಾಣಬಿಟ್ಟನು.
51 ಆಗ ದೇವಾಲಯದ ತೆರೆಯು ಮೇಲ್ಗಡೆಯಿಂದ ತಳಭಾಗದವರೆಗೂ ಹರಿದು ಎರಡು ಭಾಗವಾಯಿತು. ಭೂಮಿಯು ನಡುಗಿತು. ಬಂಡೆಗಳು ಒಡೆದುಹೋದವು.
52 ಸಮಾಧಿಗಳು ತೆರೆದವು, ಸತ್ತುಹೋಗಿದ್ದ ಅನೇಕ ದೇವಜನರು ಸಮಾಧಿಗಳೊಳಗಿಂದ ಜೀವಂತವಾಗಿ ಮೇಲೆದ್ದರು.
53 ಯೇಸು ಪುನರುತ್ಥಾನ ಹೊಂದಿದ ಬಳಿಕ, ಅವರು ಪವಿತ್ರ ನಗರವಾದ ಜೆರುಸಲೇಮಿಗೆ ಹೋದರು. ಜನರು ಅವರನ್ನು ಕಣ್ಣಾರೆ ಕಂಡರು.
54 ಯೇಸುವನ್ನು ಕಾಯುತ್ತಿದ್ದ ಸೇನಾಧಿಪತಿ ಮತ್ತು ಸೈನಿಕರು ಭೂಕಂಪವನ್ನು ಮತ್ತು ನಡೆದದ್ದನ್ನು ಕಂಡು ಬಹಳವಾಗಿ ಹೆದರಿ, “ಈತನು ನಿಜವಾಗಿಯೂ ದೇವರ ಮಗನಾಗಿದ್ದನು!” ಎಂದು ಹೇಳಿದರು.
55 ಯೇಸುವಿನ ಸೇವೆ ಮಾಡುತ್ತಾ ಗಲಿಲಾಯದಿಂದ ಆತನನ್ನು ಹಿಂಬಾಲಿಸಿಕೊಂಡು ಬಂದಿದ್ದ ಅನೇಕ ಸ್ತ್ರೀಯರು ದೂರದಲ್ಲಿ ನೋಡುತ್ತಾ ನಿಂತಿದ್ದರು.
56 ಮಗ್ದಲದ ಮರಿಯಳು, ಯಾಕೋಬ ಮತ್ತು ಯೋಸೇಫನ ತಾಯಿಯಾದ ಮರಿಯಳು, ಹಾಗೂ ಯೋಹಾನ ಮತ್ತು ಯಾಕೋಬನ ತಾಯಿ ಅಲ್ಲಿದ್ದರು.
57 ಆ ಸಂಜೆ ಯೋಸೇಫ ಎಂಬ ಶ್ರೀಮಂತ ವ್ಯಕ್ತಿ ಜೆರುಸಲೇಮಿಗೆ ಬಂದನು. ಅರಿಮತಾಯ ಪಟ್ಟಣದವನಾದ ಇವನು ಯೇಸುವಿನ ಶಿಷ್ಯನಾಗಿದ್ದನು.
58 ಇವನು ಪಿಲಾತನ ಬಳಿಗೆ ಹೋಗಿ, ಯೇಸುವಿನ ದೇಹವನ್ನು ತನಗೆ ಕೊಡಬೇಕೆಂದು ಕೇಳಿದನು. ಯೇಸುವಿನ ದೇಹವನ್ನು ಯೋಸೇಫನಿಗೆ ಕೊಡುವಂತೆ ಪಿಲಾತನು ಸೈನಿಕರಿಗೆ ಅಪ್ಪಣೆ ಮಾಡಿದನು.
59 ಯೋಸೇಫನು ಆತನ ದೇಹವನ್ನು ತೆಗೆದುಕೊಂಡು, ಅದನ್ನು ಹೊಸ ನಾರುಮಡಿಯ ಬಟ್ಟೆಯಿಂದ ಸುತ್ತಿ
60 ಬಂಡೆಯಲ್ಲಿ ತಾನು ತೋಡಿಸಿದ್ದ ಹೊಸ ಸಮಾಧಿಯಲ್ಲಿ ಇಟ್ಟನು. ಸಮಾಧಿಯ ಬಾಗಿಲಿಗೆ ಒಂದು ದೊಡ್ಡ ಬಂಡೆಯನ್ನು ಉರುಳಿಸಿ ಹೊರಟು ಹೋದನು.
61 ಮಗ್ದಲದ ಮರಿಯಳು ಮತ್ತು ಇನ್ನೊಬ್ಬ ಮರಿಯಳು ಆ ಸಮಾಧಿಯ ಹತ್ತಿರ ಕುಳಿತುಕೊಂಡಿದ್ದರು.
62 ಶುಕ್ರವಾರ ಮುಗಿದ ಮೇಲೆ ಮಹಾಯಾಜಕರು ಮತ್ತು ಫರಿಸಾಯರು ಪಿಲಾತನ ಬಳಿಗೆ ಹೋಗಿ,
63 “ಸ್ವಾಮೀ, ಆ ಸುಳ್ಳುಗಾರನು ಬದುಕಿದ್ದಾಗ, ‘ಮೂರು ದಿನಗಳ ಬಳಿಕ ನಾನು ಪುನರುತ್ಥಾನ ಹೊಂದುತ್ತೇನೆ’ ಎಂದು ಹೇಳಿದ್ದು ನಮಗಿನ್ನೂ ನೆನಪಿದೆ.
64 ಆದ್ದರಿಂದ ಮೂರು ದಿನಗಳವರೆಗೆ ಆ ಸಮಾಧಿಯನ್ನು ಭದ್ರವಾಗಿ ಕಾಯಲು ಆಜ್ಞಾಪಿಸಿರಿ. ಅವನ ಶಿಷ್ಯರು ಬಂದು, ಅವನ ದೇಹವನ್ನು ಕದ್ದುಕೊಂಡು ಹೋಗಿ, ಅವನು ಸಮಾಧಿಯಿಂದ ಮೇಲೆದ್ದಿದ್ದಾನೆ ಎಂದು ಜನರಿಗೆ ಹೇಳಬಹುದು. ಆಗ ಮೊದಲನೆಯ ಮೋಸಕ್ಕಿಂತ ಕಡೆಯದೇ ಕಡು ಮೋಸವಾದೀತು” ಎಂದು ಹೇಳಿದರು.
65 ಪಿಲಾತನು, “ಕೆಲವು ಸೈನಿಕರನ್ನು ಕರೆದುಕೊಂಡು ಹೋಗಿ, ನಿಮಗೆ ಬೇಕಾದ ರೀತಿಯಲ್ಲಿ ಸಮಾಧಿಯನ್ನು ಭದ್ರಪಡಿಸಿರಿ” ಎಂದು ಹೇಳಿದನು.
66 ಅವರು ಹೋಗಿ, ಸಮಾಧಿಗೆ ಮುದ್ರೆ ಹಾಕಿ, ಸೈನಿಕರನ್ನು ಕಾವಲಿರಿಸಿ, ಸಮಾಧಿಯನ್ನು ಸುಭದ್ರಪಡಿಸಿದರು.

Matthew 27:9 Kannada Language Bible Words basic statistical display

COMING SOON ...

×

Alert

×