“ ‘ಪ್ರಭುವಿಗಾಗಿ ಮಾರ್ಗವನ್ನು ಸಿದ್ಧಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆಮಾಡಿರಿ’ ಎಂದು ಅಡವಿಯಲ್ಲಿ ಒಬ್ಬನು ಕೂಗುತ್ತಿದ್ದಾನೆ” ಯೆಶಾಯ 40:3 ಎಂದು ಸ್ನಾನಿಕ ಯೋಹಾನನನ್ನೇ ಕುರಿತು ಪ್ರವಾದಿಯಾದ ಯೆಶಾಯ ಹೇಳಿದ್ದನು.
ಅನೇಕ ಫರಿಸಾಯರು ಮತ್ತು ಸದ್ದುಕಾಯರು ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಲು ಬಂದರು. ಯೋಹಾನನು ಅವರನ್ನು ನೋಡಿ, “ನೀವೆಲ್ಲರು ಸರ್ಪಗಳು! ಬರಲಿರುವ ದೇವರ ಕೋಪದಿಂದ ತಪ್ಪಿಸಿಕೊಳ್ಳಲು ನಿಮಗೆ ಎಚ್ಚರಿಸಿದವರು ಯಾರು?
“ನಿಮ್ಮ ಮನಸ್ಸು ದೇವರ ಕಡೆಗೆ ತಿರುಗಿಕೊಂಡಿದೆ ಎಂಬುದಕ್ಕೆ ಗುರುತಾಗಿ ನಾನು ನಿಮಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುವೆನು. ಆದರೆ ನನ್ನ ಹಿಂದೆ ಬರುವವನು ನನಗಿಂತ ಹೆಚ್ಚಿನವನು. ಆತನ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ. ಆತನು ನಿಮಗೆ ಪವಿತ್ರಾತ್ಮನಲ್ಲಿಯೂ ಬೆಂಕಿಯಲ್ಲಿಯೂ ದೀಕ್ಷಾಸ್ನಾನ ಮಾಡಿಸುವನು.
ಆತನು ಕಾಳನ್ನು ಸ್ವಚ್ಛಗೊಳಿಸಲು ಸಿದ್ಧನಾಗಿದ್ದಾನೆ. ಆತನು ಕಾಳನ್ನು ಹೊಟ್ಟಿನಿಂದ ಬೇರ್ಪಡಿಸಿ ಒಳ್ಳೆಯ ಕಾಳುಗಳನ್ನು ಕಣಜದಲ್ಲಿ ತುಂಬಿಸಿ ಹೊಟ್ಟನ್ನು ನಂದಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವನು” ಎಂದು ಹೇಳಿದನು.
ಆದರೆ ಯೋಹಾನನು, “ನಾನೇ ನಿನ್ನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕಾಗಿದೆ. ಹೀಗಿರಲು ನನ್ನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಲು ನೀನು ಬರುವುದೇಕೆ?” ಎಂದು ಹೇಳಿ ಆತನನ್ನು ತಡೆಯಲೆತ್ನಿಸಿದನು.
ಯೇಸು ದೀಕ್ಷಾಸ್ನಾನ ಮಾಡಿಸಿಕೊಂಡು ನೀರಿನಿಂದ ಮೇಲಕ್ಕೆ ಬಂದನು. ಕೂಡಲೇ ಆಕಾಶವು ತೆರೆಯಿತು. ದೇವರಾತ್ಮನು ಪಾರಿವಾಳದ ರೂಪದಲ್ಲಿ ಕೆಳಗಿಳಿದು ತನ್ನ ಮೇಲೆ ಬರುತ್ತಿರುವುದನ್ನು ಯೇಸು ಕಂಡನು.