ಯೇಸು ಅವನಿಗೆ, “ ‘ಮನುಷ್ಯನು ಬದುಕುವುದು ಕೇವಲ ರೊಟ್ಟಿಯಿಂದಲ್ಲ, ಮನುಷ್ಯನ ಜೀವಿತವು ದೇವರು ಹೇಳುವ ಪ್ರತಿಯೊಂದು ಮಾತನ್ನು ಅವಲಂಬಿಸಿಕೊಂಡಿದೆ’ ಧರ್ಮೋಪದೇಶ. 8:3 ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ” ಎಂಬುದಾಗಿ ಉತ್ತರಕೊಟ್ಟನು.
“ನೀನು ದೇವರ ಮಗನಾಗಿದ್ದರೆ, ಕೆಳಕ್ಕೆ ದುಮುಕು. ‘ದೇವರು ನಿನಗೋಸ್ಕರ ತನ್ನ ದೂತರಿಗೆ ಆಜ್ಞಾಪಿಸುವನು. ನಿನ್ನ ಪಾದಗಳು ಬಂಡೆಗೆ ಅಪ್ಪಳಿಸದಂತೆ ಅವರು ನಿನ್ನನ್ನು ಕೈಗಳಲ್ಲಿ ಎತ್ತಿಕೊಳ್ಳುವರು’ ಕೀರ್ತನೆ. 91:11-12 ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆಯಲ್ಲ” ಎಂದನು.
ಯೇಸು ಸೈತಾನನಿಗೆ, “ಇಲ್ಲಿಂದ ತೊಲಗು! ‘ನಿನ್ನ ದೇವರಾದ ಪ್ರಭುವನ್ನೇ ಆರಾಧಿಸಬೇಕು, ಆತನೊಬ್ಬನನ್ನೇ ಸೇವಿಸಬೇಕು’ ಧರ್ಮೋಪದೇಶ. 6:13 ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ” ಎಂದು ಹೇಳಿದನು.
ಅಂದಿನಿಂದ ಯೇಸು ಬೋಧಿಸುವುದಕ್ಕೆ ಪ್ರಾರಂಭಿಸಿದನು. “ಪರಲೋಕರಾಜ್ಯವು ಬೇಗನೆ ಬರಲಿದೆ. ಆದ್ದರಿಂದ ನೀವು ನಿಮ್ಮ ಹೃದಯಗಳನ್ನು ಮತ್ತು ಜೀವಿತಗಳನ್ನು ಮಾರ್ಪಡಿಸಿಕೊಳ್ಳಿರಿ” ಎಂದು ಯೇಸು ಬೋಧಿಸಿದನು.
(ಮಾರ್ಕ 1:16-20; ಲೂಕ 5:1-11) ಗಲಿಲಾಯ ಸರೋವರದ ತೀರದಲ್ಲಿ ಯೇಸು ತಿರುಗಾಡುತ್ತಾ ಇದ್ದನು. ಆತನು ಸೀಮೋನ (ಈತನನ್ನೇ ಪೇತ್ರ ಎಂದು ಕರೆಯಲಾಯಿತು.) ಮತ್ತು ಸೀಮೋನನ ಸಹೋದರನಾದ ಅಂದ್ರೆಯ ಎಂಬ ಇಬ್ಬರು ಸಹೋದರರನ್ನು ಕಂಡನು. ಬೆಸ್ತರಾಗಿದ್ದ ಇವರಿಬ್ಬರು ಅಂದು ಸರೋವರದ ತೀರದಲ್ಲಿ ಬಲೆ ಹಾಕಿ ಮೀನು ಹಿಡಿಯುತ್ತಿದ್ದರು.
ಯೇಸು ಗಲಿಲಾಯ ಸರೋವರದ ತೀರದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಜೆಬೆದಾಯನ ಮಕ್ಕಳಾದ ಯಾಕೋಬ ಮತ್ತು ಯೋಹಾನರೆಂಬ ಇಬ್ಬರು ಸಹೋದರರನ್ನು ನೋಡಿದನು. ಅವರು ತಮ್ಮ ತಂದೆಯಾದ ಜೆಬೆದಾಯನ ಸಂಗಡ ದೋಣಿಯಲ್ಲಿದ್ದರು. ಅವರು ಮೀನು ಹಿಡಿಯಲು ತಮ್ಮ ಬಲೆಗಳನ್ನು ಸರಿಪಡಿಸಿಕೊಳ್ಳುತ್ತಿದ್ದರು. ಯೇಸು ಇವರನ್ನು ಕರೆದನು.
ಯೇಸು ಗಲಿಲಾಯ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿದನು. ಯೇಸು ಸಭಾಮಂದಿರಗಳಲ್ಲಿ ಬೋಧಿಸಿದನು ಮತ್ತು ಪರಲೋಕರಾಜ್ಯದ ವಿಷಯವಾದ ಶುಭವಾರ್ತೆಯನ್ನು ಉಪದೇಶಿಸಿದನು. ಯೇಸು ಎಲ್ಲಾ ಜನರ ಕಾಯಿಲೆಗಳನ್ನು ಮತ್ತು ರೋಗಗಳನ್ನು ವಾಸಿಮಾಡಿದನು.
ಯೇಸುವಿನ ವಿಷಯವಾದ ಸುದ್ದಿಯು ಸಿರಿಯ ದೇಶದಲ್ಲೆಲ್ಲಾ ಹರಡಿತು. ಜನರು ಕಾಯಿಲೆಯವರನ್ನೆಲ್ಲ ಯೇಸುವಿನ ಬಳಿಗೆ ತಂದರು. ಅವರು ನಾನಾ ವಿಧವಾದ ವ್ಯಾಧಿಗಳಿಂದ ಮತ್ತು ನೋವಿನಿಂದ ಬಾಧೆಪಡುತ್ತಿದ್ದರು. ಕೆಲವರು ತೀವ್ರವಾದ ನೋವಿನಿಂದ ನರಳುತ್ತಿದ್ದರು. ಕೆಲವರು ದೆವ್ವಗಳಿಂದ ಪೀಡಿತರಾಗಿದ್ದರು. ಕೆಲವರು ಮೂರ್ಛಾರೋಗಿಗಳಾಗಿದ್ದರು. ಕೆಲವರು ಪಾರ್ಶ್ವವಾಯು ರೋಗಿಗಳಾಗಿದ್ದರು. ಯೇಸು ಇವರನ್ನೆಲ್ಲಾ ಗುಣಪಡಿಸಿದನು.
ಅನೇಕಾನೇಕ ಜನರು ಯೇಸುವನ್ನು ಹಿಂಬಾಲಿಸಿದರು. ಈ ಜನರು ಗಲಿಲಾಯದಿಂದಲೂ ದೆಕಪೊಲಿ ಎಂಬ ಹತ್ತು ಊರುಗಳಿಂದಲೂ ಜೆರುಸಲೇಮಿನಿಂದಲೂ ಜುದೇಯದಿಂದಲೂ ಮತ್ತು ಜೋರ್ಡನ್ ನದಿಯ ಆಚೆಕಡೆಯ ಪ್ರದೇಶದಿಂದಲೂ ಬಂದಿದ್ದರು.