“ನೀವು ನನ್ನನ್ನು ಹಿಂಬಾಲಿಸುವುದರಿಂದ ಜನರು ನಿಮ್ಮನ್ನು ಅಪಹಾಸ್ಯ ಮಾಡಿದರೆ, ಹಿಂಸೆಪಡಿಸಿದರೆ ಮತ್ತು ನಿಮ್ಮ ಮೇಲೆ ಕೆಟ್ಟಕೆಟ್ಟ ವಿಷಯಗಳನ್ನು ಸುಳ್ಳಾಗಿ ಹೊರಿಸಿದರೆ ನೀವು ಧನ್ಯರಾಗಿದ್ದೀರಿ.
ಸಂತೋಷಪಡಿರಿ, ಆನಂದಿಸಿರಿ. ಪರಲೋಕದಲ್ಲಿ ನಿಮಗಾಗಿ ಕಾದಿರುವ ಹೆಚ್ಚಿನ ಪ್ರತಿಫಲವನ್ನು ನೀವು ಹೊಂದುವಿರಿ. ನಿಮಗಿಂತ ಮುಂಚೆ ಜೀವಿಸಿದ್ದ ಪ್ರವಾದಿಗಳಿಗೂ ಜನರು ಹೀಗೆಯೇ ಮಾಡಿದರು. ನೀವು ಉಪ್ಪಿನಂತಿದ್ದೀರಿ, ಬೆಳಕಿನಂತಿದ್ದೀರಿ (ಮಾರ್ಕ 9:50; ಲೂಕ 14:34-35)
“ನೀವು ಭೂಮಿಗೆ ಉಪ್ಪಾಗಿದ್ದೀರಿ. ಆದರೆ ಉಪ್ಪೇ ತನ್ನ ರುಚಿಯನ್ನು ಕಳೆದುಕೊಂಡರೆ ಅದನ್ನು ಮತ್ತೆ ಉಪ್ಪನ್ನಾಗಿ ಮಾಡಲು ಸಾಧ್ಯವಿಲ್ಲ; ಅಂಥ ಉಪ್ಪಿನಿಂದ ಪ್ರಯೋಜನವೇನೂ ಇಲ್ಲ. ಜನರು ಅದನ್ನು ಹೊರಗೆ ಬಿಸಾಡಿ ಅದರ ಮೇಲೆ ನಡೆದಾಡುವರು.
“ನಾನು ಮೋಶೆಯ ಧರ್ಮಶಾಸ್ತ್ರವನ್ನಾಗಲಿ ಪ್ರವಾದಿಗಳ ಉಪದೇಶಗಳನ್ನಾಗಲಿ ತೆಗೆದುಹಾಕುವುದಕ್ಕೆ ಬಂದೆನೆಂದು ನೆನೆಸಬೇಡಿರಿ. ನಾನು ಅವುಗಳನ್ನು ನಾಶಮಾಡುವುದಕ್ಕಾಗಿ ಬರದೆ ಅವುಗಳನ್ನು ನೆರವೇರಿಸುವುದಕ್ಕಾಗಿ ಬಂದೆನು.
ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಆಕಾಶ ಮತ್ತು ಭೂಮಿ ಅಳಿದುಹೋಗುವವರೆಗೂ ಧರ್ಮಶಾಸ್ತ್ರದಿಂದ ಏನೂ ಅಳಿದುಹೋಗುವುದಿಲ್ಲ. ಎಲ್ಲಾ ನೆರವೇರುವ ತನಕ ಧರ್ಮಶಾಸ್ತ್ರದ ಒಂದು ಅಕ್ಷರವಾಗಲಿ ಅಥವಾ ಅದರ ಒಂದು ಚುಕ್ಕೆಯಾಗಲಿ ಅಳಿದುಹೋಗುವುದಿಲ್ಲ.
“ಮನುಷ್ಯನು ಪ್ರತಿ ಆಜ್ಞೆಗೂ, ಅಂದರೆ ಸಣ್ಣಸಣ್ಣ ಆಜ್ಞೆಗೂ ವಿಧೇಯನಾಗಿರಬೇಕು. ಒಬ್ಬನು ಯಾವ ಆಜ್ಞೆಗಾದರೂ ಅವಿಧೇಯನಾಗಿ ಜೀವಿಸುತ್ತಾ ಆ ಆಜ್ಞೆಗೆ ಬೇರೆಯವರೂ ಅವಿಧೇಯರಾಗಿರಬೇಕೆಂದು ಬೋಧಿಸಿದರೆ ಅವನು ಪರಲೋಕರಾಜ್ಯದಲ್ಲಿ ಅತ್ಯಲ್ಪನಾಗಿರುವನು. ಆದರೆ ಧರ್ಮಶಾಸ್ತ್ರಕ್ಕೆ ವಿಧೇಯನಾಗಿ ಜೀವಿಸುತ್ತಾ ಧರ್ಮಶಾಸ್ತ್ರಕ್ಕೆ ವಿಧೇಯರಾಗಬೇಕೆಂದು ಬೇರೆಯವರಿಗೂ ಬೋಧಿಸುವವನು ಪರಲೋಕರಾಜ್ಯದಲ್ಲಿ ಪ್ರಮುಖನಾಗಿರುವನು.
“ ‘ಯಾರನ್ನೂ ಕೊಲೆಮಾಡಬಾರದು. [✡ಉಲ್ಲೇಖನ: ವಿಮೋಚನ. 20:13; ಧರ್ಮೋಪದೇಶ. 5:17.] ಕೊಲೆ ಮಾಡುವವನು ನ್ಯಾಯತೀರ್ಪಿಗೆ ಒಳಗಾಗುವನು’ ಎಂದು ಬಹುಕಾಲದ ಹಿಂದೆ ನಮ್ಮ ಜನರಿಗೆ ಹೇಳಿದ್ದನ್ನು ನೀವು ಕೇಳಿದ್ದೀರಿ.
ಆದರೆ ನಾನು ನಿಮಗೆ ಹೇಳುವುದೇನೆಂದರೆ ಯಾರ ಮೇಲೂ ಕೋಪಗೊಳ್ಳಬೇಡಿ. ಪ್ರತಿಯೊಬ್ಬನೂ ನಿಮ್ಮ ಸಹೋದರ. ನೀವು ಬೇರೆಯವರ ಮೇಲೆ ಕೋಪಗೊಂಡರೆ ನ್ಯಾಯತೀರ್ಪಿಗೆ ಗುರಿಯಾಗುವಿರಿ. ನೀವು ಯಾರಿಗಾದರೂ ಕೆಟ್ಟ ಮಾತುಗಳನ್ನಾಡಿದರೆ, ಯೆಹೂದ್ಯರ ನ್ಯಾಯಸಭೆಯ ವಿಚಾರಣೆಗೆ ಗುರಿಯಾಗುವಿರಿ. ನೀವು ಯಾರನ್ನಾದರೂ ‘ಮೂರ್ಖ’ ಎಂದು ಕರೆದರೆ, ಅಗ್ನಿನರಕಕ್ಕೆ ಸೇರುವ ಅಪಾಯದಲ್ಲಿದ್ದೀರಿ.
“ನಿಮ್ಮ ವಿರೋಧಿಯು ನಿಮ್ಮನ್ನು ನ್ಯಾಯಾಲಯಕ್ಕೆ ಎಳೆದೊಯ್ಯುವಾಗ ಬೇಗನೆ ಅವನೊಂದಿಗೆ ಸ್ನೇಹಿತರಾಗಿ. ನೀವು ನ್ಯಾಯಾಲಯಕ್ಕೆ ಹೋಗುವ ಮೊದಲೇ ಇದನ್ನು ಮಾಡಬೇಕು. ನೀವು ಅವನ ಸ್ನೇಹಿತರಾಗದಿದ್ದರೆ, ಅವನು ನಿಮ್ಮನ್ನು ನ್ಯಾಯಾಧಿಪತಿಗೆ ಒಪ್ಪಿಸಬಹುದು. ನ್ಯಾಯಾಧಿಪತಿಯು ನಿಮ್ಮನ್ನು ಸೆರೆಮನೆಗೆ ಹಾಕಲು ಕಾವಲುಗಾರನಿಗೆ ಒಪ್ಪಿಸಬಹುದು.
ಆದರೆ ಒಬ್ಬನು ಪರಸ್ತ್ರೀಯನ್ನು ನೋಡಿ ಅವಳೊಂದಿಗೆ ಲೈಂಗಿಕ ಸಂಪರ್ಕ ಹೊಂದಲು ಬಯಸಿದರೆ, ಅವನು ಆಗಲೇ ತನ್ನ ಮನಸ್ಸಿನಲ್ಲಿ ಅವಳೊಂದಿಗೆ ವ್ಯಭಿಚಾರವನ್ನು ಮಾಡಿದ್ದಾನೆಂದು ನಾನು ನಿಮಗೆ ಹೇಳುತ್ತೇನೆ.
ನಿನ್ನ ಬಲಗಣ್ಣು ನಿನ್ನನ್ನು ಪಾಪಕ್ಕೊಳಗಾಗುವಂತೆ ಮಾಡಿದರೆ, ಅದನ್ನು ಕಿತ್ತು ಬಿಸಾಡು. ನಿನ್ನ ಪೂರ್ಣಶರೀರವು ನರಕಕ್ಕೆ ಬೀಳುವುದಕ್ಕಿಂತ ನಿನ್ನ ಶರೀರದ ಒಂದು ಭಾಗವನ್ನು ಕಳೆದುಕೊಳ್ಳುವುದೇ ಮೇಲು.
ನಿನ್ನ ಬಲಗೈ ನಿನ್ನನ್ನು ಪಾಪಕ್ಕೊಳಗಾಗುವಂತೆ ಮಾಡಿದರೆ, ಅದನ್ನು ಕತ್ತರಿಸಿ ಬಿಸಾಡು. ನಿನ್ನ ಪೂರ್ಣ ಶರೀರವು ನರಕಕ್ಕೆ ಹೋಗುವುದಕ್ಕಿಂತ ನಿನ್ನ ಶರೀರದ ಒಂದು ಭಾಗವನ್ನು ಕಳೆದುಕೊಳ್ಳುವುದೇ ಮೇಲು.
(ಮಾರ್ಕ 19:9; ಮಾರ್ಕ 10:11-12; ಲೂಕ 16:18) “ ‘ತನ್ನ ಹೆಂಡತಿಯನ್ನು ಬಿಟ್ಟುಬಿಡಬೇಕೆಂದಿರುವವನು, ಅವಳಿಗೆ ವಿವಾಹ ವಿಚ್ಛೇದನ ಪತ್ರವನ್ನು ಕೊಡಲಿ’ [✡ಉಲ್ಲೇಖನ: ಧರ್ಮೋಪದೇಶ. 24:1.] ಎಂದು ಹೇಳಲ್ಪಟ್ಟಿದೆ.
ಆದರೆ ನಾನು ಹೇಳುವುದೇನೆಂದರೆ, ತನ್ನ ಹೆಂಡತಿಯನ್ನು ಬಿಟ್ಟುಬಿಡುವವನೇ ಅವಳು ವ್ಯಭಿಚಾರಿಣಿಯಾಗುವುದಕ್ಕೆ ಕಾರಣನಾಗುತ್ತಾನೆ. ಹೆಂಡತಿಯು ಬೇರೊಬ್ಬ ಪುರುಷನೊಂದಿಗೆ ಲೈಂಗಿಕ ಸಂಬಂಧವಿಟ್ಟುಕೊಂಡಿದ್ದರೆ ಮಾತ್ರ ಅವಳನ್ನು ಗಂಡನು ಬಿಟ್ಟುಬಿಡಬಹುದು. ವಿವಾಹ ವಿಚ್ಛೇದನ ಹೊಂದಿದವಳನ್ನು ಮದುವೆಯಾಗುವವನು ಸಹ ವ್ಯಭಿಚಾರ ಮಾಡಿದವನಾಗುತ್ತಾನೆ.
ಆಗ ನೀವು ಪರಲೋಕದಲ್ಲಿರುವ ನಿಮ್ಮ ತಂದೆಯ ನಿಜವಾದ ಮಕ್ಕಳಾಗುವಿರಿ. ನಿಮ್ಮ ತಂದೆಯು ಒಳ್ಳೆಯವರಿಗಾಗಿ ಮತ್ತು ಕೆಟ್ಟವರಿಗಾಗಿ ಸೂರ್ಯನನ್ನು ಉದಯಿಸುತ್ತಾನೆ ಮತ್ತು ಮಳೆಯನ್ನು ಸುರಿಸುತ್ತಾನೆ.