1
|
“ಎಚ್ಚರವಾಗಿರಿ! ನೀವು ಒಳ್ಳೆಯ ಕಾರ್ಯಗಳನ್ನು ಜನರ ಮುಂದೆ ಮಾಡಬೇಡಿ. ಜನರು ನೋಡಲೆಂದು ನೀವು ಅವುಗಳನ್ನು ಮಾಡಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯಿಂದ ನಿಮಗೆ ಪ್ರತಿಫಲ ದೊರೆಯುವುದಿಲ್ಲ. |
2
|
“ನೀವು ಬಡಜನರಿಗೆ ಮಾಡುವ ದಾನವನ್ನು ಪ್ರಕಟಿಸಬೇಡಿ. ನೀವು ಕಪಟಿಗಳಂತೆ ಮಾಡಕೂಡದು. ತಾವು ಮಾಡುವ ದಾನವನ್ನು ಜನರಿಗೆ ತೋರಿಸಿಕೊಳ್ಳುವುದಕ್ಕಾಗಿ ಕಪಟಿಗಳು ಸಭಾಮಂದಿರಗಳಲ್ಲಿ ಮತ್ತು ಬೀದಿಗಳಲ್ಲಿ ತುತ್ತೂರಿ ಊದಿಸುತ್ತಾರೆ. ಜನರಿಂದ ಗೌರವ ಪಡೆಯಬೇಕೆಂಬುದೇ ಅವರ ಉದ್ದೇಶ. |
3
|
ಆದ್ದರಿಂದ ನೀವು ಬಡಜನರಿಗೆ ಕೊಡುವಾಗ ಬಹಳ ಗುಟ್ಟಾಗಿ ಕೊಡಿ. ನೀವು ಮಾಡುವಂಥದ್ದು ಯಾರಿಗೂ ತಿಳಿಯದಿರಲಿ. |
4
|
ನೀವು ದಾನವನ್ನು ರಹಸ್ಯವಾಗಿ ಕೊಡಬೇಕು. ರಹಸ್ಯದಲ್ಲಿ ನಡೆಯುವ ಕಾರ್ಯಗಳನ್ನು ನೋಡಬಲ್ಲ ನಿಮ್ಮ ತಂದೆ ನಿಮಗೆ ಪ್ರತಿಫಲ ಕೊಡುವನು. |
5
|
“ನೀವು ಪ್ರಾರ್ಥಿಸುವಾಗ ಕಪಟಿಗಳ ಹಾಗೆ ಪ್ರಾರ್ಥಿಸಬೇಡಿ. ಕಪಟಿಗಳು ಸಭಾಮಂದಿರಗಳಲ್ಲಿ ಮತ್ತು ಬೀದಿಯ ಮೂಲೆಗಳಲ್ಲಿ ನಿಂತುಕೊಂಡು ಗಟ್ಟಿಯಾಗಿ ಪ್ರಾರ್ಥಿಸಲು ಇಷ್ಟಪಡುತ್ತಾರೆ. ತಾವು ಪ್ರಾರ್ಥಿಸುವುದನ್ನು ಜನರು ನೋಡಬೇಕೆಂಬುದೇ ಅವರ ಬಯಕೆ. ಅವರು ಆಗಲೇ ಅದರ ಪೂರ್ಣ ಪ್ರತಿಫಲವನ್ನು ಹೊಂದಿಕೊಂಡಾಯಿತೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. |
6
|
ನೀವು ಪ್ರಾರ್ಥನೆ ಮಾಡಬೇಕಾದರೆ, ನಿಮ್ಮ ಕೋಣೆಯೊಳಗೆ ಹೋಗಿ ಬಾಗಿಲನ್ನು ಮುಚ್ಚಿಕೊಂಡು ನಿಮಗೆ ಕಾಣದಿರುವ ನಿಮ್ಮ ತಂದೆಗೆ ಪ್ರಾರ್ಥಿಸಿ. ರಹಸ್ಯದಲ್ಲಿ ನಡೆಯುವ ಕಾರ್ಯಗಳನ್ನು ನೋಡಬಲ್ಲ ನಿಮ್ಮ ತಂದೆಯು ನಿಮಗೆ ಪ್ರತಿಫಲವನ್ನು ಕೊಡುವನು. |
7
|
“ನೀವು ಪ್ರಾರ್ಥಿಸುವಾಗ ದೇವರನ್ನು ತಿಳಿದಿಲ್ಲದ ಜನರಂತೆ ಪ್ರಾರ್ಥಿಸಬೇಡಿ. ಅವರು ಅರ್ಥವಿಲ್ಲದ ಸಂಗತಿಗಳನ್ನು ಹೇಳುತ್ತಲೇ ಇರುತ್ತಾರೆ. ಆ ರೀತಿ ಪ್ರಾರ್ಥಿಸಬೇಡಿ. ತಾವು ಅನೇಕ ವಿಷಯಗಳನ್ನು ಹೇಳುವುದರಿಂದ ದೇವರು ತಮ್ಮ ಪ್ರಾರ್ಥನೆಯನ್ನು ಕೇಳುತ್ತಾನೆಂಬುದು ಅವರ ಆಲೋಚನೆ. |
8
|
ನೀವು ಅವರಂತಾಗಬೇಡಿ. ನೀವು ಕೇಳುವುದಕ್ಕೆ ಮೊದಲೇ ನಿಮಗೆ ಏನೇನು ಬೇಕು ಎಂಬುದು ನಿಮ್ಮ ತಂದೆಗೆ ತಿಳಿದಿದೆ. |
9
|
ಆದ್ದರಿಂದ ನೀವು ಹೀಗೆ ಪ್ರಾರ್ಥಿಸಿರಿ: ‘ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ಹೆಸರು ಪರಿಶುದ್ಧವಾಗಿರಲಿ. |
10
|
ನಿನ್ನ ರಾಜ್ಯ ಬರಲಿ. ನಿನ್ನ ಚಿತ್ತ ಪರಲೋಕದಲ್ಲಿ ನೆರವೇರುವಂತೆ ಭೂಲೋಕದಲ್ಲಿಯೂ ನೆರವೇರಲಿ. |
11
|
ನಮ್ಮ ಅನುದಿನದ ಆಹಾರವನ್ನು ಈ ಹೊತ್ತು ನಮಗೆ ದಯಪಾಲಿಸು. |
12
|
ನಮಗೆ ತಪ್ಪು ಮಾಡಿದವರನ್ನು ನಾವು ಕ್ಷಮಿಸಿದಂತೆಯೆ ನಮ್ಮ ಪಾಪಗಳನ್ನು ಕ್ಷಮಿಸು. |
13
|
ನಮ್ಮನ್ನು ಶೋಧನೆಗೆ ಒಳಪಡಿಸದೆ ಕೆಡುಕನಿಂದ (ಸೈತಾನನಿಂದ) ನಮ್ಮನ್ನು ರಕ್ಷಿಸು.’ |
14
|
ಹೌದು, ಬೇರೆಯವರು ನಿಮಗೆ ಮಾಡಿದ ತಪ್ಪುಗಳನ್ನು ನೀವು ಕ್ಷಮಿಸಿದರೆ, ಪರಲೋಕದಲ್ಲಿರುವ ನಿಮ್ಮ ತಂದೆಯೂ ನಿಮ್ಮ ತಪ್ಪುಗಳನ್ನು ಕ್ಷಮಿಸುತ್ತಾನೆ. |
15
|
ಆದರೆ ಜನರು ನಿಮಗೆ ಮಾಡಿದ ತಪ್ಪುಗಳನ್ನು ನೀವು ಕ್ಷಮಿಸದಿದ್ದರೆ, ಪರಲೋಕದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವುದಿಲ್ಲ. |
16
|
“ನೀವು ಉಪವಾಸ ಮಾಡುವಾಗ ನಿಮ್ಮ ಮುಖವನ್ನು ಸಪ್ಪಗೆ ಮಾಡಿಕೊಳ್ಳಬೇಡಿ. ಕಪಟಿಗಳು ಹಾಗೆ ಮಾಡುತ್ತಾರೆ. ಆದರೆ ನೀವು ಕಪಟಿಗಳಂತಿರಬೇಡಿ. ತಾವು ಉಪವಾಸ ಮಾಡುತ್ತಿರುವುದಾಗಿ ಜನರಿಗೆ ತೋರ್ಪಡಿಸಿಕೊಳ್ಳಲು ಅವರು ತಮ್ಮ ಮುಖಗಳನ್ನು ವಿಕಾರ ಮಾಡಿಕೊಳ್ಳುತ್ತಾರೆ. ಆ ಕಪಟಿಗಳು ತಮಗೆ ಬರತಕ್ಕ ಪ್ರತಿಫಲವನ್ನು ಸಂಪೂರ್ಣವಾಗಿ ಹೊಂದಾಯಿತೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. |
17
|
ಆದ್ದರಿಂದ ನೀವು ಉಪವಾಸ ಮಾಡುವಾಗ, ಮುಖವನ್ನು ತೊಳೆದುಕೊಳ್ಳಿರಿ; ತಲೆಗೆ ಎಣ್ಣೆಯನ್ನು ಹಚ್ಚಿಕೊಳ್ಳಿರಿ. |
18
|
ಆಗ ನೀವು ಉಪವಾಸ ಮಾಡುತ್ತಿದ್ದೀರೆಂದು ಜನರಿಗೆ ಗೊತ್ತಾಗುವುದಿಲ್ಲ. ಆದರೆ ನಿಮಗೆ ಅಗೋಚರವಾಗಿರುವ ನಿಮ್ಮ ತಂದೆಯು ನಿಮ್ಮನ್ನು ನೋಡುತ್ತಾನೆ. ರಹಸ್ಯದಲ್ಲಿ ನಡೆಯುವ ಸಂಗತಿಗಳನ್ನು ನೋಡಬಲ್ಲ ನಿಮ್ಮ ತಂದೆಯು ನಿಮಗೆ ಪ್ರತಿಫಲವನ್ನು ಕೊಡುತ್ತಾನೆ. |
19
|
“ನಿಮಗೋಸ್ಕರ ಈ ಭೂಮಿಯ ಮೇಲೆ ಭಂಡಾರಗಳನ್ನು ಮಾಡಿಕೊಳ್ಳಬೇಡಿ. ಅವು ಕಿಲುಬುಹತ್ತಿ ಹಾಳಾಗುತ್ತವೆ. ಕಳ್ಳರು ನಿಮ್ಮ ಮನೆಯೊಳಗೆ ಕನ್ನಕೊರೆದು ನಿಮ್ಮಲ್ಲಿರುವುದನ್ನು ಕದಿಯಬಲ್ಲರು. |
20
|
ಆದ್ದರಿಂದ ನಿಮ್ಮ ಭಂಡಾರಗಳನ್ನು ಪರಲೋಕದಲ್ಲಿ ಮಾಡಿಟ್ಟುಕೊಳ್ಳಿ. ಅಲ್ಲಿ ಅವುಗಳಿಗೆ ನುಸಿ ಹಿಡಿಯುವುದಿಲ್ಲ. ಕಿಲುಬುಹತ್ತುವುದಿಲ್ಲ. ಕಳ್ಳರು ಕನ್ನಕೊರೆದು ಕದಿಯುವುದಿಲ್ಲ. |
21
|
ನಿಮ್ಮ ಭಂಡಾರ ಎಲ್ಲಿರುವುದೋ ಅಲ್ಲೇ ನಿಮ್ಮ ಮನಸ್ಸಿರುವುದು. |
22
|
“ಕಣ್ಣು ಶರೀರಕ್ಕೆ ಬೆಳಕಾಗಿದೆ. ನಿನ್ನ ಕಣ್ಣು ಸರಿಯಿದ್ದರೆ, ನಿನ್ನ ದೇಹವೆಲ್ಲಾ ಬೆಳಕಿನಿಂದ ಕೂಡಿರುವುದು. |
23
|
ಆದರೆ ನಿನ್ನ ಕಣ್ಣು ಕೆಟ್ಟಿದ್ದರೆ, ನಿನ್ನ ಶರೀರವೆಲ್ಲ ಕತ್ತಲೆಯಿಂದ (ಪಾಪದಿಂದ) ತುಂಬಿರುವದು. ನಿನ್ನಲ್ಲಿರುವ ಒಂದೇ ಬೆಳಕು ನಿಜವಾಗಿಯೂ ಕತ್ತಲಾದರೆ, ಆಗ ನೀನು ಕಗ್ಗತ್ತಲಲ್ಲಿರುವೆ. |
24
|
“ಯಾವನೂ ಇಬ್ಬರು ಯಜಮಾನರಿಗೆ ಒಂದೇ ಸಮಯದಲ್ಲಿ ಸೇವೆ ಮಾಡಲಾರನು. ಅವನು ಒಬ್ಬ ಯಜಮಾನನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುತ್ತಾನೆ ಅಥವಾ ಒಬ್ಬ ಯಜಮಾನನನ್ನು ಹಿಂಬಾಲಿಸಿ ಮತ್ತೊಬ್ಬನನ್ನು ತಾತ್ಸಾರ ಮಾಡುತ್ತಾನೆ. ಆದ್ದರಿಂದ ನೀನು ದೇವರಿಗೆ ಮತ್ತು ಹಣಕ್ಕೆ ಒಂದೇ ಸಮಯದಲ್ಲಿ ಸೇವೆ ಮಾಡಲಾರೆ. |
25
|
“ಆದ್ದರಿಂದ ನಿಮ್ಮ ಪ್ರಾಣಧಾರಣೆಗೆ ಬೇಕಾದ ಆಹಾರಕ್ಕಾಗಲಿ ದೇಹಕ್ಕೆ ಬೇಕಾದ ಬಟ್ಟೆಗಾಗಲಿ ನೀವು ಚಿಂತಿಸಬಾರದು. ಪ್ರಾಣವು ಆಹಾರಕ್ಕಿಂತಲೂ ದೇಹವು ಬಟ್ಟೆಗಿಂತಲೂ ಬಹಳ ಮುಖ್ಯವಾದದ್ದೆಂದು ನಾನು ನಿಮಗೆ ಹೇಳುತ್ತೇನೆ. |
26
|
ಪಕ್ಷಿಗಳ ಕಡೆಗೆ ನೋಡಿ. ಅವು ಬಿತ್ತುವುದಿಲ್ಲ ಕೊಯ್ಯುವುದಿಲ್ಲ ಇಲ್ಲವೇ ಕಣಜಗಳಲ್ಲಿ ತುಂಬಿಟ್ಟುಕೊಳ್ಳುವುದಿಲ್ಲ. ಆದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ಅವುಗಳಿಗೆ ಆಹಾರವನ್ನು ನೀಡುತ್ತಾನೆ. ನೀವು ಆ ಪಕ್ಷಿಗಳಿಗಿಂತ ಎಷ್ಟೋ ಅಮೂಲ್ಯರೆಂಬುದು ನಿಮಗೆ ಗೊತ್ತಿದೆ. |
27
|
ನೀವು ಚಿಂತಿಸುವುದರಿಂದ ನಿಮ್ಮ ಆಯುಷ್ಯು ಹೆಚ್ಚೇನೂ ಆಗುವುದಿಲ್ಲ. |
28
|
“ಬಟ್ಟೆಗಾಗಿ ಚಿಂತಿಸುವುದೇಕೆ? ಹೊಲದಲ್ಲಿರುವ ಹೂವುಗಳನ್ನು ನೋಡಿ. ಅವು ಬೆಳೆಯುವ ಬಗೆಯನ್ನು ಗಮನಿಸಿ. ಅವು ದುಡಿಯುವುದಿಲ್ಲ ಅಥವಾ ತಮಗಾಗಿ ಬಟ್ಟೆಗಳನ್ನು ನೇಯುವುದಿಲ್ಲ. |
29
|
ಆದರೆ ನಾನು ನಿಮಗೆ ಹೇಳುವುದೇನೆಂದರೆ, ಸೊಲೊಮೋನನು ತನ್ನ ವೈಭವದಿಂದ ಇದ್ದಾಗಲೂ ಈ ಹೂವುಗಳಲ್ಲಿ ಒಂದಕ್ಕಿರುವಷ್ಟು ಸೌಂದರ್ಯವುಳ್ಳ ಬಟ್ಟೆಗಳನ್ನು ಧರಿಸಲಿಲ್ಲ. |
30
|
ಬಯಲಿನಲ್ಲಿರುವ ಹುಲ್ಲಿಗೂ ದೇವರು ಹಾಗೆ ಹೊದಿಸುತ್ತಾನೆ. ಹುಲ್ಲಾದರೊ ಈ ಹೊತ್ತು ಇದ್ದು ನಾಳೆ ಬೆಂಕಿಯ ಪಾಲಾಗುತ್ತದೆ. ಆದ್ದರಿಂದ ದೇವರು ನಿಮಗೆ ಎಷ್ಟೋ ಹೆಚ್ಚಾಗಿ ತೊಡಿಸುತ್ತಾನೆಂದು ನಿಮಗೆ ಗೊತ್ತಿದೆ. ಅಲ್ಪವಿಶ್ವಾಸಿಗಳಾಗಿರಬೇಡಿ! |
31
|
“ನಾವು ಏನು ತಿನ್ನಬೇಕು? ಏನು ಕುಡಿಯಬೇಕು? ಏನನ್ನು ಧರಿಸಬೇಕು?’ ಎಂದು ಚಿಂತಿಸಬೇಡಿ. |
32
|
ದೇವರನ್ನು ತಿಳಿಯದ ಜನರೆಲ್ಲರೂ ಇವುಗಳನ್ನು ಪಡೆಯಲು ಪ್ರಯತ್ನಿಸುತ್ತಾರೆ. ಚಿಂತಿಸಬೇಡಿರಿ, ಏಕೆಂದರೆ ಈ ವಸ್ತುಗಳು ನಿಮಗೆ ಅಗತ್ಯವೆಂದು ಪರಲೋಕದಲ್ಲಿರುವ ನಿಮ್ಮ ತಂದೆಗೆ ತಿಳಿದಿದೆ. |
33
|
ಆದ್ದರಿಂದ ನೀವು ದೇವರ ರಾಜ್ಯಕ್ಕಾಗಿ ಮತ್ತು ಆತನ ಚಿತ್ತಕ್ಕನುಸಾರವಾಗಿ ಕಾರ್ಯಗಳನ್ನು ಮಾಡಲು ಬಹಳ ತವಕ ಪಡಬೇಕು. ಆಗ ನಿಮಗೆ ಅಗತ್ಯವಾದ ಉಳಿದವುಗಳನ್ನು ಸಹ ಕೊಡಲಾಗುವುದು. |
34
|
ಆದ್ದರಿಂದ ನಾಳೆಗಾಗಿ ಚಿಂತಿಸಬೇಡಿ. ಪ್ರತಿದಿನವು ತನ್ನದೇ ಆದ ಎಷ್ಟೋ ಕಷ್ಟಗಳನ್ನು ಹೊಂದಿರುತ್ತದೆ. ನಾಳೆಯು ಸಹ ತನ್ನದೇ ಆದ ಚಿಂತೆಗಳನ್ನು ಹೊಂದಿದೆ. |
Matthew 6:16 Kannada Language Bible Words basic statistical display
COMING SOON ...