1
|
ಯೇಸು ದೋಣಿಯನ್ನು ಹತ್ತಿ ಸರೋವರವನ್ನು ದಾಟಿ ತನ್ನ ಸ್ವಂತ ಊರಿಗೆ ಹೋದನು. |
2
|
ಕೆಲವರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಯೇಸುವಿನ ಬಳಿಗೆ ತಂದರು. ಅವನು ತನ್ನ ಹಾಸಿಗೆಯ ಮೇಲೆ ಮಲಗಿದ್ದನು. ಯೇಸು ಈ ಜನರಲ್ಲಿದ್ದ ದೊಡ್ಡ ನಂಬಿಕೆಯನ್ನು ಕಂಡು ಪಾರ್ಶ್ವವಾಯು ರೋಗಿಗೆ, “ಯುವಕನೇ, ಸಂತೋಷಪಡು. ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ” ಎಂದು ಹೇಳಿದನು. |
3
|
ಅಲ್ಲಿದ್ದ ಧರ್ಮೋಪದೇಶಕರು ಇದನ್ನು ಕೇಳಿ, “ಇದು ದೇವದೂಷಣೆ” ಎಂದು ತಮ್ಮೊಳಗೆ ಅಂದುಕೊಂಡರು. |
4
|
ಅವರು ಹೀಗೆ ಆಲೋಚಿಸುತ್ತಿರುವುದು ಯೇಸುವಿಗೆ ತಿಳಿದಿತ್ತು. ಆತನು ಅವರಿಗೆ, “ನೀವು ಏಕೆ ದುರಾಲೋಚನೆ ಮಾಡುತ್ತಿದ್ದೀರಿ? |
5
|
ಯಾವುದು ಸುಲಭ? ಈ ಪಾರ್ಶ್ವವಾಯು ರೋಗಿಗೆ, ‘ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ’ ಎಂದು ಹೇಳುವುದೇ ಅಥವಾ ‘ಮೇಲಕ್ಕೆದ್ದು ನಡೆ’ ಎಂದು ಹೇಳುವುದೇ? |
6
|
ಆದರೆ ಮನುಷ್ಯಕುಮಾರನಿಗೆ ಪಾಪಗಳನ್ನು ಕ್ಷಮಿಸಲು ಭೂಲೋಕದಲ್ಲಿ ಅಧಿಕಾರವಿದೆ ಎಂಬುದನ್ನು ನಾನು ನಿಮಗೆ ನಿರೂಪಿಸುತ್ತೇನೆ” ಎಂದನು. ನಂತರ ಯೇಸು ಪಾರ್ಶ್ವವಾಯು ರೋಗಿಗೆ, “ಎದ್ದುನಿಲ್ಲು, ನಿನ್ನ ಹಾಸಿಗೆಯನ್ನು ತೆಗೆದುಕೊಂಡು ಮನೆಗೆ ಹೋಗು” ಎಂದನು. |
7
|
ಆ ಮನುಷ್ಯನು ಎದ್ದುನಿಂತು ಮನೆಗೆ ಹೋದನು. |
8
|
ಜನರು ಇದನ್ನು ನೋಡಿ ಆಶ್ಚರ್ಯಚಕಿತರಾದರು. ಮನುಷ್ಯರಿಗೆ ಇಂಥ ಅಧಿಕಾರವನ್ನು ಕೊಟ್ಟಿದ್ದಕ್ಕಾಗಿ ಜನರು ದೇವರನ್ನು ಕೊಂಡಾಡಿದರು. |
9
|
[This verse may not be a part of this translation] |
10
|
ಯೇಸು ಮತ್ತಾಯನ ಮನೆಯಲ್ಲಿ ಊಟಕ್ಕೆ ಕುಳಿತುಕೊಂಡನು. ಅನೇಕ ಮಂದಿ ಸುಂಕವಸೂಲಿಗಾರರು ಮತ್ತು ಕೆಟ್ಟ ಜನರು ಸಹ ಯೇಸುವಿನ ಸಂಗಡ ಮತ್ತು ಆತನ ಹಿಂಬಾಲಕರ ಸಂಗಡ ಊಟಕ್ಕೆ ಕುಳಿತುಕೊಂಡರು. |
11
|
ಇದನ್ನು ಕಂಡ ಫರಿಸಾಯರು ಯೇಸುವಿನ ಶಿಷ್ಯರಿಗೆ, “ನಿಮ್ಮ ಬೋಧಕನು ಸುಂಕವಸೂಲಿಗಾರರೊಂದಿಗೆ ಮತ್ತು ಕೆಟ್ಟ ಜನರೊಂದಿಗೆ ಏಕೆ ಊಟಮಾಡುತ್ತಾನೆ?” ಎಂದು ಕೇಳಿದರು. |
12
|
ಫರಿಸಾಯರು ಹೇಳಿದ್ದನ್ನು ಕೇಳಿಸಿಕೊಂಡ ಯೇಸು ಅವರಿಗೆ, “ಆರೋಗ್ಯವುಳ್ಳ ಜನರಿಗೆ ವೈದ್ಯನ ಅವಶ್ಯಕತೆಯಿಲ್ಲ. ಕಾಯಿಲೆಯ ಜನರಿಗೆ ವೈದ್ಯನು ಅವಶ್ಯ. |
13
|
ನೀವು ಹೋಗಿ, ‘ನನಗೆ ಯಜ್ಞಬೇಡ, ದಯೆಬೇಕು’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿರುವ ವಾಕ್ಯದ ಅರ್ಥವನ್ನು ಕಲಿತುಕೊಳ್ಳಿ. ನಾನು ನೀತಿವಂತರನ್ನು ಕರೆಯಲು ಬರಲಿಲ್ಲ, ಪಾಪಿಗಳನ್ನು ಕರೆಯಲು ಬಂದೆನು” ಎಂದು ಹೇಳಿದನು. |
14
|
ನಂತರ ಯೋಹಾನನ ಶಿಷ್ಯರು ಯೇಸುವಿನ ಬಳಿಗೆ ಬಂದರು. ಅವರು ಯೇಸುವಿಗೆ, “ನಾವು ಮತ್ತು ಫರಿಸಾಯರು ಆಗಾಗ್ಗೆ ಉಪವಾಸ ಮಾಡುತ್ತೇವೆ. ಆದರೆ ನಿನ್ನ ಶಿಷ್ಯರು ಏಕೆ ಉಪವಾಸ ಮಾಡುವುದಿಲ್ಲ?” ಎಂದು ಕೇಳಿದರು. |
15
|
ಯೇಸು, “ಮದುವೆ ಸಮಯದಲ್ಲಿ ಮದುಮಗನ ಸಂಗಡವಿರುವ ಅವನ ಸ್ನೇಹಿತರು ದುಃಖಪಡುವುದಿಲ್ಲ. ಆದರೆ ಮದುಮಗನು ಅವರನ್ನು ಬಿಟ್ಟುಹೋಗುವ ಸಮಯ ಬರುತ್ತದೆ. ಆಗ ಅವರು ದುಃಖಪಡುತ್ತಾರೆ ಮತ್ತು ಉಪವಾಸ ಮಾಡುತ್ತಾರೆ. |
16
|
“ಒಬ್ಬನು ಹರಿದುಹೋದ ಹಳೆ ಮೇಲಂಗಿಗೆ ಹೊಸ ಬಟ್ಟೆಯ ತುಂಡನ್ನು ತೇಪೆಹಾಕಿ ಹೊಲಿಯುವುದಿಲ್ಲ. ಒಂದು ವೇಳೆ ಹೊಲಿದರೆ, ಆ ತೇಪೆಯು ಹಿಂಜಿಕೊಂಡು ಮೇಲಂಗಿಯಿಂದ ಕಿತ್ತುಬರುವುದು. ಆಗ ಆ ಮೇಲಂಗಿಯು ಮತ್ತಷ್ಟು ಹರಿದು ಹೋಗುವುದು. |
17
|
ಇದಲ್ಲದೆ ಜನರು ಹೊಸ ದ್ರಾಕ್ಷಾರಸವನ್ನು ಹಳೆ ದ್ರಾಕ್ಷಾರಸದ ಬುದ್ದಲಿಗಳಲ್ಲಿ ಹಾಕುವುದಿಲ್ಲ; ಏಕೆಂದರೆ ಹಳೆ ಬುದ್ದಲಿಗಳು ಒಡೆದು ಹೋಗುತ್ತವೆ; ಮತ್ತು ದ್ರಾಕ್ಷಾರಸವು ಚೆಲ್ಲಿ ಹೋಗುತ್ತದೆ. ಆದ್ದರಿಂದ ಜನರು ಯಾವಾಗಲೂ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡುವರು. ಆಗ ಎರಡೂ ಉಳಿಯುತ್ತವೆ” ಅಂದನು. |
18
|
ಯೇಸು ಈ ಸಂಗತಿಗಳನ್ನು ಹೇಳುತ್ತಿರುವಾಗ ಸಭಾಮಂದಿರದ ಅಧಿಕಾರಿಯೊಬ್ಬನು ಆತನ ಬಳಿಗೆ ಬಂದು ಆತನಿಗೆ ಬಾಗಿ ನಮಸ್ಕರಿಸಿ, “ನನ್ನ ಮಗಳು ಈಗ ತಾನೇ ಸತ್ತುಹೋದಳು. ನೀನು ಬಂದು ಅವಳನ್ನು ಮುಟ್ಟಿದರೆ ಅವಳು ಮತ್ತೆ ಜೀವಂತಳಾಗುವಳು” ಎಂದು ಹೇಳಿದನು. |
19
|
ಆದ್ದರಿಂದ ಯೇಸು ಎದ್ದು ಅಧಿಕಾರಿಯ ಸಂಗಡ ಹೋದನು. ಯೇಸುವಿನ ಶಿಷ್ಯರು ಸಹ ಹೋದರು. |
20
|
ಹನ್ನೆರಡು ವರ್ಷಗಳಿಂದ ರಕ್ತಸ್ರಾವ ಕಾಯಿಲೆ ಹೊಂದಿದ್ದ ಒಬ್ಬ ಹೆಂಗಸು ಅಲ್ಲಿದ್ದಳು. ಆ ಹೆಂಗಸು ಯೇಸುವಿನ ಹಿಂದೆಯೇ ಬಂದು ಆತನ ಮೇಲಂಗಿಯ ತುದಿಯನ್ನು ಮುಟ್ಟಿದಳು. |
21
|
ಆ ಹೆಂಗಸು, “ನಾನು ಆತನ ಅಂಗಿಯನ್ನು ಮುಟ್ಟಿದರೆ ಸಾಕು, ನಾನು ಗುಣವಾಗಬಲ್ಲೆ” ಎಂದು ಆಲೋಚನೆ ಮಾಡಿಕೊಂಡಿದ್ದಳು. |
22
|
ಯೇಸು ಹಿಂತಿರುಗಿ ಆ ಹೆಂಗಸನ್ನು ನೋಡಿ, “ಮಗಳೇ, ಸಂತೋಷಪಡು! ನಿನ್ನ ನಂಬಿಕೆಯಿಂದಲೇ ಗುಣವಾಯಿತು” ಎಂದು ಹೇಳಿದನು. ಆಗ ಅವಳು ಗುಣಮುಖಳಾದಳು. |
23
|
ಬಳಿಕ ಯೇಸು ಅಧಿಕಾರಿಯೊಡನೆ ಮುಂದೆ ಸಾಗಿ ಅವನ ಮನೆಯೊಳಕ್ಕೆ ಹೋದನು. ಶವಸಂಸ್ಕಾರಕ್ಕಾಗಿ ಬಂದಿದ್ದ ವಾದ್ಯವೃಂದದವರಿಗೂ ಗೋಳಾಡುತ್ತಿದ್ದವರಿಗೂ ಯೇಸು, |
24
|
“ದೂರ ಹೋಗಿರಿ, ಹುಡುಗಿ ಸತ್ತಿಲ್ಲ. ಅವಳು ನಿದ್ದೆ ಮಾಡುತ್ತಿದ್ದಾಳೆ” ಅಂದನು. ಆದರೆ ಅವರು ಯೇಸುವನ್ನು ಅಪಹಾಸ್ಯ ಮಾಡಿದರು. |
25
|
ಜನರನ್ನು ಮನೆಯ ಹೊರಗೆ ಕಳುಹಿಸಿದ ಮೇಲೆ ಯೇಸು ಹುಡುಗಿಯ ಕೋಣೆಯ ಒಳಗೆ ಹೋದನು. ಯೇಸು ಹುಡುಗಿಯ ಕೈಯನ್ನು ಹಿಡಿದಾಗ ಆ ಹುಡುಗಿಯು ಎದ್ದುನಿಂತಳು. |
26
|
ಈ ಸುದ್ದಿಯು ಸುತ್ತಮುತ್ತಲಿನ ಪ್ರದೇಶದಲ್ಲೆಲ್ಲಾ ಹಬ್ಬಿತು. |
27
|
ಯೇಸು ಅಲ್ಲಿಂದ ಹೊರಡುತ್ತಿರುವಾಗ ಇಬ್ಬರು ಕುರುಡರು ಆತನನ್ನು ಹಿಂಬಾಲಿಸಿದರು. ಅವರು “ದಾವೀದನ ಕುಮಾರನೇ, ನಮಗೆ ದಯೆ ತೋರು” ಎಂದು ಗಟ್ಟಿಯಾಗಿ ಕೂಗಿದರು. |
28
|
ಯೇಸು ಮನೆಯೊಳಗೆ ಹೋದನು. ಕುರುಡರೂ ಆತನ ಸಂಗಡ ಹೋದರು. ಯೇಸು ಅವರಿಗೆ, “ನಾನು ನಿಮ್ಮನ್ನು ಗುಣಪಡಿಸಬಲ್ಲೆನೆಂದು ನೀವು ನಂಬುತ್ತೀರೋ?” ಎಂದು ಕೇಳಿದನು. ಕುರುಡರು, “ಹೌದು ಪ್ರಭುವೇ, ನಾವು ನಂಬುತ್ತೇವೆ” ಎಂದು ಉತ್ತರಕೊಟ್ಟರು. |
29
|
ಆಗ ಯೇಸು ಅವರ ಕಣ್ಣುಗಳನ್ನು ಮುಟ್ಟಿ, “ನೀವು ನಂಬಿದಂತೆಯೇ ನಿಮಗೆ ಗುಣವಾಗಲಿ” ಅಂದನು. |
30
|
ಕೂಡಲೇ ಅವರಿಗೆ ದೃಷ್ಟಿ ಬಂದಿತು. “ಈ ವಿಷಯವನ್ನು ಯಾರಿಗೂ ಹೇಳಬಾರದು” ಎಂದು ಯೇಸು ಅವರಿಗೆ ಎಚ್ಚರಿಕೆ ನೀಡಿದನು. |
31
|
ಆದರೆ ಆ ಕುರುಡರು ಅಲ್ಲಿಂದ ಹೊರಟುಹೋಗಿ ಯೇಸುವಿನ ಸುದ್ದಿಯನ್ನು ಆ ಪ್ರದೇಶದ ಸುತ್ತಮುತ್ತಲೆಲ್ಲಾ ಹಬ್ಬಿಸಿದರು. |
32
|
ಅವರಿಬ್ಬರು ಹೋಗುತ್ತಿರುವಾಗ ಕೆಲವರು ಬೇರೊಬ್ಬನನ್ನು ಯೇಸುವಿನ ಬಳಿಗೆ ತಂದರು. ಅವನಲ್ಲಿ ದೆವ್ವವಿದ್ದುದರಿಂದ ಅವನು ಮೂಕನಾಗಿದ್ದನು. |
33
|
ಯೇಸು ಆ ದೆವ್ವಕ್ಕೆ ಅವನನ್ನು ಬಿಟ್ಟು ಹೋಗುವಂತೆ ಆಜ್ಞಾಪಿಸಿದನು. ಅವನು ಮಾತನಾಡತೊಡಗಿದನು. ಇದನ್ನು ಕಂಡ ಜನರು ಆಶ್ಚರ್ಯಚಕಿತರಾಗಿ, “ಇಸ್ರೇಲಿನಲ್ಲಿ ಇಂಥ ಕಾರ್ಯವನ್ನು ನೋಡಿಯೇ ಇಲ್ಲ” ಅಂದರು. |
34
|
ಆದರೆ ಫರಿಸಾಯರು, “ಇವನು ದೆವ್ವಗಳ ಒಡೆಯನ ಶಕ್ತಿಯಿಂದಲೇ ದೆವ್ವಗಳನ್ನು ಬಿಡಿಸುತ್ತಾನೆ” ಎಂದರು. |
35
|
ಯೇಸು ಊರುಗಳಲ್ಲೆಲ್ಲಾ ಮತ್ತು ಹಳ್ಳಿಗಳಲ್ಲೆಲ್ಲಾ ಸಂಚಾರ ಮಾಡಿದನು. ಯೇಸು ಅವರ ಸಭಾಮಂದಿರಗಳಲ್ಲಿ ಉಪದೇಶಿಸಿ ಪರಲೋಕರಾಜ್ಯದ ವಿಷಯವಾಗಿ ಶುಭವಾರ್ತೆಯನ್ನು ಹೇಳಿದನು. ಎಲ್ಲಾ ತರದ ರೋಗಗಳನ್ನು ಬೇನೆಗಳನ್ನು ವಾಸಿಮಾಡಿದನು. |
36
|
ನೋವಿನಿಂದ ನರಳುತ್ತಿದ್ದ ಮತ್ತು ಅಸಹಾಯಕರಾಗಿದ್ದ ಅನೇಕ ಜನರನ್ನು ಯೇಸು ನೋಡಿ ದುಃಖಪಟ್ಟನು. ಕುರುಬನಿಲ್ಲದ ಕುರಿಗಳಂತೆ ಅವರಿದ್ದರು. |
37
|
ಯೇಸು ತನ್ನ ಶಿಷ್ಯರಿಗೆ, “ಬೆಳೆಯು ಬಹಳ, ಆದರೆ ಕೆಲಸಗಾರರು ಸ್ವಲ್ಪ. |
38
|
ಬೆಳೆಯ ಯಜಮಾನ ದೇವರೇ. ಆದ್ದರಿಂದ ಹೆಚ್ಚು ಕೆಲಸಗಾರರನ್ನು ಸುಗ್ಗಿಗಾಗಿ ಕಳುಹಿಸಿ ಕೊಡುವಂತೆ ಆತನಿಗೆ ಪ್ರಾರ್ಥನೆ ಮಾಡಿರಿ” ಎಂದು ಹೇಳಿದನು. |
Matthew 9:22 Kannada Language Bible Words basic statistical display
COMING SOON ...