1
|
ಯೆಹೋವನ ಮಾತುಗಳು ಮೀಕನಿಗೆ ಬಂದವು. ಅರಸರಾದ ಯೇಥಾಮ, ಅಹಾಜ ಮತ್ತು ಹಿಜ್ಕೀಯರ ಆಳ್ವಿಕೆಯ ಸಮಯದಲ್ಲಿ ಇದು ನಡೆಯಿತು. ಇವರು ಯೆಹೂದ ರಾಜ್ಯದ ಅರಸರು. ಮೀಕನು ಮೋರೆಷೆತ್ನವನು. ಇವನು ಸಮಾರ್ಯ ಮತ್ತು ಜೆರುಸಲೇಮಿನ ವಿಷಯವಾಗಿ ದೇವದರ್ಶನವನ್ನು ಹೊಂದಿದನು. |
2
|
ಎಲ್ಲಾ ಜನರೇ, ಕೇಳಿರಿ! ಭೂಮಿಯೂ ಅದರಲ್ಲಿರುವವರೆಲ್ಲರೂ ಕೇಳಿರಿ! ನನ್ನ ಒಡೆಯನಾದ ಯೆಹೋವನು ತನ್ನ ಪವಿತ್ರ ಆಲಯದಿಂದ ಬರುವನು. ನಿಮ್ಮ ವಿರುದ್ಧ ಸಾಕ್ಷಿಯಾಗಿ ಆತನು ಬರುವನು. |
3
|
ಯೆಹೋವನು ತನ್ನ ಸ್ಥಳದಿಂದ ಹೊರಟು ಬರುವುದನ್ನು ನೋಡಿರಿ. ಆತನು ಲೋಕದ ಬೆಟ್ಟಗಳ ಮೇಲೆ ನಡೆಯಲು ಬರುತ್ತಿದ್ದಾನೆ. |
4
|
ಬೆಂಕಿಯಲ್ಲಿ ಮೇಣವು ಕರಗುವಂತೆ ಬೆಟ್ಟಗಳು ಆತನ ಪಾದದಡಿಯಿಂದ ಕರಗಿ ಹೋಗುತ್ತವೆ. ತಗ್ಗುಗಳು ಇಬ್ಭಾಗವಾಗಿ ನೀರಿನಂತೆ ಕಡಿದಾದ ಸ್ಥಳದಿಂದ ಹರಿದು ಹೋಗುತ್ತವೆ. |
5
|
ಇದಕ್ಕೆಲ್ಲಾ ಕಾರಣ ಯಾಕೋಬನ ಪಾಪಗಳೇ, ಇಸ್ರೇಲರ ದ್ರೋಹಗಳೇ! ಯಾಕೋಬು ಪಾಪ ಮಾಡಿದ್ದಕ್ಕೆ ಕಾರಣವೇನು? ಸಮಾರ್ಯವೇ ಕಾರಣ. ಯೆಹೂದದ ಎತ್ತರವಾದ ಸ್ಥಳ ಯಾವುದು? ಅದೇ ಜೆರುಸಲೇಮ್. |
6
|
ಆದುದರಿಂದ ನಾನು ಸಮಾರ್ಯವನ್ನು ಕಲ್ಲಿನ ರಾಶಿಯನ್ನಾಗಿ ಮಾಡುವೆನು. ಅದು ದ್ರಾಕ್ಷಾಬಳ್ಳಿ ನೆಡಲು ಸಿದ್ಧವಾಗುವುದು. ಸಮಾರ್ಯದ ಕಲ್ಲುಗಳನ್ನೆಲ್ಲಾ ತಗ್ಗಿಗೆ ನೂಕಿಬಿಡುವೆನು; ಆಗ ಅಲ್ಲಿ ಬರಿ ಅಸ್ತಿವಾರಗಳು ಕಾಣುವವು. |
7
|
ಆಕೆಯ ವಿಗ್ರಹಗಳೆಲ್ಲಾ ಒಡೆದು ಪುಡಿ ಮಾಡಲ್ಪಡುವವು. ಆಕೆಯ ಸೂಳೇತನದ ಹಣವು ಬೆಂಕಿಯಲ್ಲಿ ಸುಡಲ್ಪಡುವುದು. ಆಕೆಯ ಸುಳ್ಳುದೇವರ ವಿಗ್ರಹಗಳನ್ನೆಲ್ಲಾ ನಾಶಮಾಡುವೆನು. ಯಾಕಂದರೆ ಸಮಾರ್ಯ ನನಗೆ ಅಪನಂಬಿಗಸ್ತಳಾಗಿ ಧನಿಕಳಾದಳು. ನನಗೆ ನಂಬಿಗಸ್ತರಲ್ಲದವರು ಆಕೆಯಿಂದ ಅದನ್ನು ಕಸಿದುಕೊಳ್ಳುವರು. |
8
|
ಮುಂಬರುವ ಸಂಭವಗಳಿಗಾಗಿ ನಾನು ಬಹಳ ದುಃಖಿತನಾಗಿದ್ದೇನೆ. ಬಟ್ಟೆಬರೆ, ಕೆರಗಳಿಲ್ಲದೆ ನಾನು ನಡೆಯುವೆನು. ನಾಯಿಯಂತೆ ಮೊರೆಯಿಡುವೆನು, ಪಕ್ಷಿಯಂತೆ ಮುಲುಗುವೆನು. |
9
|
ಸಮಾರ್ಯದ ಗಾಯವು ವಾಸಿಯಾಗದು. ಆಕೆಯ ರೋಗವು (ಪಾಪ) ಯೆಹೂದಕ್ಕೆ ಹಬ್ಬಿಯದೆ. ಅದು ನನ್ನ ಜನರ ಪಟ್ಟಣದ ಹೆಬ್ಬಾಗಿಲಿನವರೆಗೆ ಹೋಗಿದೆ. ಜೆರುಸಲೇಮಿನ ತನಕ ಪಸರಿಸಿಯದೆ. |
10
|
ಇದನ್ನು ಗತ್ನಲ್ಲಿ ತಿಳಿಸಬೇಡಿ. ಅಕ್ಕೊದಲ್ಲಿ ಅಳಬೇಡಿರಿ. ಬೆತ್ ಒಫ್ರದ ಧೂಳಿನಲ್ಲಿ ಹೊರಳಾಡಿರಿ. |
11
|
ಶಾಫೀರ್ನಲ್ಲಿ ವಾಸಿಸುವವರೇ, ಬೆತ್ತಲೆಯಾಗಿ ನಾಚಿಕೆಯಿಂದ ನಡೆಯಿರಿ. ಚಾನಾನ್ನಲ್ಲಿ ವಾಸಿಸುವವರು ಹೊರಗೆ ಬರುವದಿಲ್ಲ. ಬೇತೇಚೆಲಿನ ಜನರು ಅಳುವರು, ನಿಮಗೆ ಅವರು ನೀಡುತ್ತಿದ್ದ ಬೆಂಬಲವನ್ನು ಹಿಂತೆಗೆದುಕೊಳ್ಳುವರು. |
12
|
ಮಾರೊತ್ನಲ್ಲಿ ವಾಸಿಸುವ ಜನರು ಬಲಹೀನರಾಗಿದ್ದಾರೆ. ಅವರು ಶುಭವಾರ್ತೆಗಾಗಿ ಕಾಯುತ್ತಿದ್ದಾರೆ. ಯಾಕೆಂದರೆ ಜೆರುಸಲೇಮಿನ ನಗರ ದ್ವಾರದ ಬಳಿಗೆ ಯೆಹೋವನಿಂದ ಆಪತ್ತು ಬಂದಿದೆ. |
13
|
ಲಾಕೀಷಿನ ಸ್ತ್ರೀಯೇ, ವೇಗವಾಗಿ ಓಡುವ ಕುದುರೆಯನ್ನು ನಿನ್ನ ಬಂಡಿಗೆ ಬಿಗಿ. ಚೀಯೋನಿನ ಪಾಪವು ಲಾಕೀಷಿನಲ್ಲಿ ಪ್ರಾರಂಭವಾಯಿತು. ಯಾಕೆಂದರೆ ನೀನು ಇಸ್ರೇಲಿನ ಪಾಪವನ್ನು ಅನುಸರಿಸಿದಿ. |
14
|
ಆದುದರಿಂದ ಗತ್ನಲ್ಲಿರುವ ಮೋರೆಷತ್ಗೆ ವಿದಾಯ ಕಾಣಿಕೆಗಳನ್ನು ಕೊಡು. ಅಕ್ಜೀಬಿನ ಕುಟುಂಬಗಳು ಇಸ್ರೇಲ್ ಅರಸರನ್ನು ಮೋಸಪಡಿಸುವವು. |
15
|
ಮಾರೇಷದಲ್ಲಿ ವಾಸಿಸುವ ಜನರೇ, ನಿಮಗೆ ವಿರುದ್ಧವಾಗಿ ನಾನು ಒಬ್ಬ ವ್ಯಕ್ತಿಯನ್ನು ಕರೆತರುವೆನು. ಅವನು ನಿಮ್ಮ ಬಳಿಯಲ್ಲಿರುವ ವಸ್ತುಗಳನ್ನು ಕಿತ್ತುಕೊಳ್ಳುವನು. ಇಸ್ರೇಲಿನ ಮಹಿಮೆಯು (ದೇವರ) ಅದುಲ್ಲಾಮಿಗೆ ಬರುವವು. |
16
|
ನಿನ್ನ ಕೂದಲನ್ನು ಬೋಳಿಸು; ಯಾಕೆಂದರೆ ನೀನು ಪ್ರೀತಿಸುವ ಮಕ್ಕಳಿಗಾಗಿ ನೀನು ಅಳುವೆ. ಗಿಡುಗನಂತೆ ನಿನ್ನ ತಲೆ ಬೋಳಾಗಲಿ. ನಿನ್ನ ದುಃಖವನ್ನು ಪ್ರದರ್ಶಿಸು. ಯಾಕೆಂದರೆ ನಿನ್ನ ಮಕ್ಕಳು ನಿನ್ನಿಂದ ತೆಗೆಯಲ್ಪಡುವರು. |
Micah 1:5 Kannada Language Bible Words basic statistical display
COMING SOON ...