Bible Languages

Indian Language Bible Word Collections

Bible Versions

Books

Micah Chapters

Micah 2 Verses

Bible Versions

Books

Micah Chapters

Micah 2 Verses

1 ಪಾಪ ಮಾಡಲು ಯೋಚಿಸುವವರಿಗೆ ಸಂಕಟವು ಒದಗುವದು. ಇವರು ಹಾಸಿಗೆಯ ಮೇಲೆ ಬಿದ್ದುಕೊಂಡು ಪಾಪ ಮಾಡಲು ಯೋಚಿಸುತ್ತಾರೆ. ಬೆಳಿಗ್ಗೆ ಸೂರ್ಯ ಮೂಡಲು ತಾವು ಯೋಚಿಸಿದ ಪಾಪವನ್ನು ಕಾರ್ಯಗತ ಮಾಡುತ್ತಾರೆ. ಯಾಕೆ? ಯಾಕೆಂದರೆ ಅವರಿಗೆ ತಮ್ಮ ಇಷ್ಟಪ್ರಕಾರ ನಡೆದುಕೊಳ್ಳಲು ಬಲವಿದೆ.
2 ಅವರಿಗೆ ಹೊಲಗದ್ದೆಗಳು ಬೇಕು, ಅದನ್ನು ಅವರು ತೆಗೆದುಕೊಳ್ಳುವರು. ಅವರಿಗೆ ಮನೆಮಠಗಳು ಬೇಕು, ಅದನ್ನು ಅವರು ತೆಗೆದುಕೊಳ್ಳುವರು. ಒಬ್ಬನಿಗೆ ಮೋಸಮಾಡಿ ಅವನ ಮನೆಯನ್ನು ಕಿತ್ತುಕೊಳ್ಳುವರು. ಇನ್ನೊಬ್ಬನಿಗೆ ಮೋಸಮಾಡಿ ಅವನ ಹೊಲಗದ್ದೆಗಳನ್ನು ಕಿತ್ತುಕೊಳ್ಳುವರು.
3 ಅದಕ್ಕಾಗಿಯೇ ಯೆಹೋವನು ಹೀಗೆ ಹೇಳುತ್ತಾನೆ: “ನೋಡಿ, ನಾನು ಈ ಕುಟುಂಬದ ವಿರುದ್ಧವಾಗಿ ಸಂಕಟ ತರಲು ಯೋಚಿಸುತ್ತಿದ್ದೇನೆ. ನಿನ್ನನ್ನು ನೀನು ರಕ್ಷಿಸಲು ಸಾಧ್ಯವಿರುವುದಿಲ್ಲ. ಭಯಂಕರ ದಿವಸಗಳು ಬರುವದರಿಂದ ನೀನು ಉಬ್ಬಿಕೊಳ್ಳುವುದನ್ನು ನಿಲ್ಲಿಸುವಿ.
4 ಆಗ ಜನರು ನಿಮ್ಮ ಬಗ್ಗೆ ಹಾಡನ್ನು ಹಾಡುವರು. ಜನರು ಶೋಕಗೀತೆಯನ್ನು ಹಾಡುವರು. ‘ನಾವು ನಾಶವಾದೆವು! ಯೆಹೋವನು ನಮ್ಮ ದೇಶವನ್ನು ನಮ್ಮಿಂದ ತೆಗೆದುಕೊಂಡನು ಮತ್ತು ಇತರ ಜನರಿಗೆ ಕೊಟ್ಟನು. ಹೌದು, ಆತನು ನಮ್ಮ ಭೂಮಿಯನ್ನು ನಮ್ಮಿಂದ ತೆಗೆದುಕೊಂಡುಬಿಟ್ಟನು, ನಮ್ಮ ಗದ್ದೆಗಳನ್ನು ಯೆಹೋವನು ನಮ್ಮ ವೈರಿಗಳಿಗೆ ಪಾಲುಮಾಡಿಕೊಟ್ಟನು.
5 ಈಗ ನಾವು ನಮ್ಮ ದೇಶವನ್ನು ಅಳತೆಮಾಡಿ ದೇವ ಜನರಿಗೆ ಹಂಚಲು ಆಗುವದಿಲ್ಲ.”
6 ಜನರು, “ನೀನು ನಮಗೆ ಬೋಧಿಸಬೇಡ, ಆ ಕೆಟ್ಟ ವಿಷಯಗಳನ್ನು ನಮಗೆ ಹೇಳಬೇಡ, ನಮಗೆ ಯಾವ ಕೆಟ್ಟ ವಿಷಯವೂ ಸಂಭವಿಸುವುದಿಲ್ಲ” ಎಂದು ಹೇಳುತ್ತಾರೆ.
7 ಆದರೆ ಯಾಕೋಬಿನ ಜನರೇ, ನಾನು ನಿಮಗೆ ಹೇಳಲೇಬೇಕು. ನಿಮ್ಮ ದುಷ್ಟತನದ ನಿಮಿತ್ತ ಯೆಹೋವನು ತನ್ನ ತಾಳ್ಮೆಯನ್ನು ಕಳಕೊಂಡಿದ್ದಾನೆ. ನೀವು ನ್ಯಾಯವಾದ ರೀತಿಯಲ್ಲಿ ಜೀವಿಸುತ್ತಿದ್ದರೆ ನಾನು ನಿಮಗೆ ಒಳ್ಳೇ ಸಂಗತಿಗಳನ್ನು ತಿಳಿಸುತ್ತಿದ್ದೆ.
8 ಆದರೆ ನನಗೆ ವೈರಿಯಂತೆ ಎದ್ದು ನಿಂತಿರುವ ನನ್ನ ಜನರೇ, ನೀವು ಹಾದು ಹೋಗುವವರ ಬಟ್ಟೆಯನ್ನು ಅವರ ಬೆನ್ನಿನ ಮೇಲಿಂದ ಕಿತ್ತುಕೊಳ್ಳುತ್ತೀರಿ. ನಿಭರ್ಯವಾಗಿ ಓಡಾಡುವ ಜನರಿಂದ ಕೈದಿಗಳೋ ಎಂಬಂತೆ ಸುಲಿದುಕೊಳ್ಳುತ್ತೀರಿ.
9 ನನ್ನ ಜನರು ಸ್ತ್ರೀಯರ ಕೈಯಿಂದ ಅಂದವಾದ ಮನೆಗಳನ್ನು ಕಿತ್ತುಕೊಂಡಿದ್ದೀರಿ; ಅವರ ಚಿಕ್ಕಮಕ್ಕಳಿಂದ ನನ್ನ ಐಶ್ವರ್ಯವನ್ನು ನಿರಂತರಕ್ಕೂ ಕಿತ್ತುಕೊಂಡಿದ್ದೀರಿ.
10 ಎದ್ದು ಈ ಸ್ಥಳವನ್ನು ಬಿಟ್ಟುಹೋಗು. ಇದು ನಿನ್ನ ವಿಶ್ರಾಂತಿಯ ಸ್ಥಳವಲ್ಲ. ನೀನು ಇದನ್ನು ಹಾಳು ಮಾಡಿರುತ್ತೀ; ಹೊಲಸು ಮಾಡಿರುವೆ; ಆದುದರಿಂದ ಇದು ನಾಶವಾಗುವದು; ಭಯಂಕರ ರೀತಿಯಲ್ಲಿ ಕೆಡವಲ್ಪಡುವದು.
11 ಈ ಜನರು ನನ್ನ ಮಾತುಗಳನ್ನು ಕೇಳಲು ಇಷ್ಟಪಡುವದಿಲ್ಲ. ಆದರೆ ಬೇರೊಬ್ಬನ ಸುಳ್ಳು ಮಾತುಗಳನ್ನು ಕೇಳಲು ಇಷ್ಟಪಡವರು. ಸುಳ್ಳು ಪ್ರವಾದಿಯು ಬಂದು, “ನಿಮಗೆ ಒಳ್ಳೆಯ ಭವಿಷ್ಯವಿದೆ. ಬೇಕಾದಷ್ಟು ದ್ರಾಕ್ಷಾರಸ, ಮದ್ಯವು ನಿಮಗೆ ದೊರಕುವವು” ಎಂದು ಹೇಳಿದರೆ ಅವರು ಅವನನ್ನು ನಂಬಿ ಸ್ವೀಕರಿಸಿಕೊಳ್ಳುವರು.
12 ಯಾಕೋಬಿನ ಜನರೇ, ನಾನು ನಿಮ್ಮೆಲ್ಲರನ್ನು ಒಟ್ಟು ಸೇರಿಸುತ್ತೇನೆ. ಇಸ್ರೇಲಿನಲ್ಲಿ ಉಳಿದವರನ್ನೆಲ್ಲಾ ಒಟ್ಟುಗೂಡಿಸುತ್ತೇನೆ. ಹಟ್ಟಿಯೊಳಗೆ ಕುರಿಗಳನ್ನು ಸೇರಿಸುವಂತೆ, ಹುಲ್ಲುಗಾವಲಿನಲ್ಲಿ ಕುರಿಮಂದೆ ಸೇರಿಸಲ್ಪಡುವಂತೆ ನಾನು ಅವರನ್ನು ಒಟ್ಟು ಮಾಡುವೆನು. ಆಗ ಆ ಸ್ಥಳವು ಜನಸಮೂಹದ ಗದ್ದಲದಿಂದ ತುಂಬಿಹೋಗುವುದು.
13 ಆಗ ಒಡೆದು ಹಾಕುವವನು ಜನಗಳ ಮುಂದೆ ಮುನ್ನುಗ್ಗಿ ಹೋಗಿ, ದ್ವಾರಗಳನ್ನು ಒಡೆದು ಹಾಕಿದಾಗ ಜನರು ಪಟ್ಟಣವನ್ನು ಬಿಟ್ಟುಹೋಗುವರು. ಅವರು ತಮ್ಮ ರಾಜನನ್ನೂ ಕರ್ತನನ್ನೂ ಹಿಂಬಾಲಿಸಿಕೊಂಡು ಅಲ್ಲಿಂದ ಹೋಗುವರು.

Micah 2:1 Kannada Language Bible Words basic statistical display

COMING SOON ...

×

Alert

×