ಆ ಸೈನಿಕರ ಗುರಾಣಿಗಳು ಕೆಂಪಗಿವೆ. ಅವರ ಸಮವಸ್ತ್ರಗಳು ಕೆಂಪುಬಣ್ಣದಿಂದ ಹೊಳೆಯುತ್ತಿವೆ. ಅವರ ರಥಗಳು ಯುದ್ಧಕ್ಕಾಗಿ ಸಾಲುಗಟ್ಟಿ ನಿಂತಿವೆ ಮತ್ತು ಬೆಂಕಿಯ ಜ್ವಾಲೆಯಂತೆ ಹೊಳೆಯುತ್ತಿವೆ. ಅವರ ಭರ್ಜಿಗಳು ಎತ್ತಲ್ಪಟ್ಟಿವೆ.
ಈಗ ನಿನೆವೆಯು ಖಾಲಿಯಾಯಿತು. ಎಲ್ಲಾ ದೋಚಲ್ಪಟ್ಟಿತು. ನಗರವು ನಾಶವಾಯಿತು. ಜನರು ತಮ್ಮ ಧೈರ್ಯ ಕಳೆದುಕೊಂಡಿದ್ದಾರೆ. ಭಯದಿಂದ ಅವರ ಹೃದಯವು ಕರಗುತ್ತಿದೆ. ಮೊಣಕಾಲುಗಳು ನಡುಗುತ್ತಿದೆ. ಅವರ ದೇಹವು ಅಲ್ಲಾಡುತ್ತಿದೆ. ಭಯದಿಂದ ಅವರ ಮುಖವು ರಕ್ತಹೀನವಾಗಿದೆ.
ನಿನೆವೆಯು (ಅರಸನಾದ ಸಿಂಹವು) ಜನರನ್ನು ಕೊಂದಿತು. ತನ್ನ ಮರಿಗಳಿಗೂ ಸಿಂಹಿಣಿಗೂ ಆಹಾರವನ್ನು ಕೊಟ್ಟಿತು. ತನ್ನ ಗುಹೆಯನ್ನು (ನಿನೆವೆ ರಾಜನು) ಮನುಷ್ಯರ ಶರೀರಗಳಿಂದಲೂ ತಾನು ಕೊಂದ ಹೆಂಗಸರಿಂದಲೂ ತುಂಬಿಸಿತು.
ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ನಿನೆವೆಯೇ, ನಾನು ನಿನಗೆ ವಿರೋಧವಾಗಿದ್ದೇನೆ. ನಿನ್ನ ರಥಗಳನ್ನು ಸುಟ್ಟುಹಾಕುತ್ತೇನೆ. ನಿನ್ನ ಎಳೆ ಸಿಂಹಗಳನ್ನು ರಣರಂಗದಲ್ಲಿ ಸಾಯಿಸುತ್ತೇನೆ. ಈ ಭೂಮಿಯ ಮೇಲೆ ಇನ್ನು ಯಾರನ್ನೂ ಭೇಟಿ ಮಾಡದಿರುವೆ. ನಿನ್ನ ಸಂದೇಶವಾಹಕರಿಂದ ಕೆಟ್ಟ ಸಮಾಚಾರವನ್ನು ಜನರು ಇನ್ನು ಎಂದಿಗೂ ಕೇಳರು.”