1
|
ಇವು ನೆಹೆಮೀಯನ ಮಾತುಗಳು; ನೆಹೆಮೀಯನು ಹಕಲ್ಯನ ಮಗ. ಕಿಸ್ಲೇವ್ ತಿಂಗಳಿನಲ್ಲಿ ರಾಜಧಾನಿಯಾದ ಶೂಷನ್ನಲ್ಲಿ ನಾನು ಇದ್ದೆನು. ಅದು ಅರ್ತಷಸ್ತನ ಆಳ್ವಿಕೆಯ ಇಪ್ಪತ್ತನೆಯ ವರ್ಷವಾಗಿತ್ತು. |
2
|
ನಾನು ಶೂಷನ್ನಲ್ಲಿದ್ದಾಗ ನನ್ನ ಸಹೋದರರಲ್ಲಿ ಒಬ್ಬನಾದ ಹನಾನೀ ಮತ್ತು ಇನ್ನಿತರರು ಯೆಹೂದ ಪ್ರಾಂತ್ಯದಿಂದ ಬಂದಿದ್ದರು. ನಾನು ಅಲ್ಲಿರುವ ಯೆಹೂದ್ಯರ ಯೋಗಕ್ಷೇವುದ ಬಗ್ಗೆ ವಿಚಾರಿಸಿದೆನು. ಈ ಯೆಹೂದ್ಯರು ಸೆರೆವಾಸದಿಂದ ತಪ್ಪಿಸಿಕೊಂಡು ಇನ್ನೂ ಯೆಹೂದದಲ್ಲಿ ವಾಸವಾಗಿದ್ದರು. ಜೆರುಸಲೇಮ್ ನಗರದ ವಿಷಯವಾಗಿಯೂ ವಿಚಾರಿಸಿದೆನು. |
3
|
ಆಗ ಹನಾನೀ ಮತ್ತು ಅವನ ಜೊತೆಗಾರರು, “ನೆಹೆಮೀಯನೇ, ಸೆರೆಯಿಂದ ತಪ್ಪಿಸಿಕೊಂಡು ಯೆಹೂದ ಪ್ರಾಂತ್ಯಕ್ಕೆ ಹೋಗಿರುವವರು ತುಂಬಾ ಶೋಚನೀಯ ಸ್ಥಿತಿಯಲ್ಲಿದ್ದಾರೆ. ಅವರು ಅನೇಕ ಸಮಸ್ಯೆಗಳಲ್ಲಿ ಸಿಕ್ಕಿಕೊಂಡು ಅವಮಾನಕ್ಕೀಡಾಗಿದ್ದಾರೆ. ಯಾಕೆಂದರೆ ಜೆರುಸಲೇಮಿನ ಪೌಳಿಗೋಡೆಗಳು ಕೆಡವಲ್ಪಟ್ಟಿವೆ; ಅದರ ಬಾಗಿಲುಗಳೆಲ್ಲಾ ಸುಟ್ಟುಹೋಗಿವೆ” ಎಂದು ಹೇಳಿದರು. |
4
|
ಜೆರುಸಲೇಮಿನ ಪೌಳಿಗೋಡೆಯ ಮತ್ತು ಅಲ್ಲಿಯ ಜನರ ವಿಚಾರವಾಗಿ ಕೇಳಿದಾಗ ನಾನು ತುಂಬಾ ಗಲಿಬಿಲಿಗೊಂಡೆನು; ನಾನು ಅಲ್ಲಿಯೇ ನೆಲದ ಮೇಲೆ ಕುಳಿತು ಅತ್ತೆನು; ದುಃಖಕ್ರಾಂತನಾದೆನು; ಅಲ್ಲದೆ ಅನೇಕ ದಿವಸಗಳವರೆಗೆ ಉಪವಾಸಮಾಡಿ ಪರಲೋಕದ ದೇವರಿಗೆ ಪ್ರಾರ್ಥಿಸಿದೆನು. |
5
|
ನಂತರ ನಾನು ಈ ಪ್ರಾರ್ಥನೆ ಮಾಡಿದೆನು: ಪರಲೋಕದ ದೇವರಾದ ಯೆಹೋವನೇ, ನೀನು ಮಹಾ ದೇವರೂ ಪರಾಕ್ರಮವುಳ್ಳ ದೇವರೂ ಆಗಿರುವಿ. ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳಿಗೆ ವಿಧೇಯರಾಗುವವರಿಗೆ ನೀನು ಮಾಡಿದ ವಾಗ್ದಾನವನ್ನು ನೆರವೇರಿಸುವವನಾಗಿರುವಿ. |
6
|
ಹಗಲಿರುಳು ನಿನ್ನಲ್ಲಿ ಪ್ರಾರ್ಥಿಸುವ ನಿನ್ನ ಸೇವಕನನ್ನು ಕಣ್ತೆರೆದು ನೋಡು: ಅವನ ಪ್ರಾರ್ಥನೆಗೆ ಕಿವಿಗೊಟ್ಟು ಆಲಿಸು. ನಿನ್ನ ಸೇವಕರಾದ ಇಸ್ರೇಲರಿಗಾಗಿ ನಾನು ಪ್ರಾರ್ಥಿಸುತ್ತಿದ್ದೇನೆ. ಇಸ್ರೇಲರಾದ ನಾವು ನಿನಗೆ ವಿರೋಧವಾಗಿ ಮಾಡಿದ ಪಾಪಗಳನ್ನು ನಾನು ನಿನಗೆ ಅರಿಕೆ ಮಾಡುತ್ತೇನೆ. ನಾನೂ ನನ್ನ ತಂದೆಯ ಮನೆಯವರೂ ನಿನಗೆ ವಿರುದ್ಧವಾಗಿ ಮಾಡಿದ ಪಾಪಗಳನ್ನು ನಿನಗೆ ಅರಿಕೆ ಮಾಡುತ್ತೇವೆ. |
7
|
ಇಸ್ರೇಲರಾದ ನಾವು ನಿನಗೆ ಕೆಟ್ಟವರಾಗಿ ಜೀವಿಸಿದೆವು; ನೀನು ನಿನ್ನ ಸೇವಕನಾದ ಮೋಶೆಗೆ ಕೊಟ್ಟ ವಿಧಿನಿಯಮಗಳಿಗೆ ನಾವು ವಿಧೇಯರಾಗಲಿಲ್ಲ. |
8
|
ನಿನ್ನ ಸೇವಕನಾದ ಮೋಶೆಗೆ ನೀನು ಹೇಳಿದ್ದನ್ನು ನೆನಪುಮಾಡಿಕೊ, ನೀನು ಅವನಿಗೆ, “ಇಸ್ರೇಲ್ ಜನರಾದ ನೀವು ನಂಬಿಗಸ್ತರಾಗದಿದ್ದಲ್ಲಿ ನಿಮ್ಮನ್ನು ಅನ್ಯದೇಶಗಳಲ್ಲಿ ಚದರಿಸಿಬಿಡುವೆನು. |
9
|
ಆದರೆ ನೀವು ಹಿಂತಿರುಗಿ ನನ್ನ ಬಳಿಗೆ ಬಂದು, ನನ್ನ ಕಟ್ಟಳೆಗಳಿಗೆ ವಿಧೇಯರಾದರೆ, ನಿಮ್ಮ ಜನರನ್ನು ಬಲವಂತವಾಗಿ ಭೂಲೋಕದ ಕಟ್ಟಕಡೆಯವರೆಗೆ ಕೊಂಡೊಯ್ದಿದ್ದರೂ ಅಲ್ಲಿಂದ ನನ್ನ ಹೆಸರನ್ನು ನೆಲೆಗೊಳಿಸುವುದಕ್ಕಾಗಿ ನಾನು ಆರಿಸಿಕೊಂಡ ಸ್ಥಳಕ್ಕೆ ಕರೆದುಕೊಂಡು ಬರುವೆನು” ಎಂದು ಹೇಳಿರುವೆ. |
10
|
ಇಸ್ರೇಲ್ ಜನರು ನಿನ್ನ ಜನಾಂಗ; ಅವರು ನಿನ್ನ ಸೇವಕರಾಗಿದ್ದಾರೆ. ನೀನು ನಿನ್ನ ಮಹಾಶಕ್ತಿಯನ್ನು ಉಪಯೋಗಿಸಿ ಅವರನ್ನು ರಕ್ಷಿಸಿರುವೆ. |
11
|
ಆದುದರಿಂದ ಯೆಹೋವನೇ, ನನ್ನ ಪ್ರಾರ್ಥನೆಯನ್ನು ಆಲೈಸು. ನಾನು ನಿನ್ನ ಸೇವಕ. ನಿನ್ನ ಹೆಸರನ್ನು ಗೌರವಿಸುವ ನಿನ್ನ ಸೇವಕರ ಪ್ರಾರ್ಥನೆಗೆ ಕಿವಿಗೊಡು. ನಾನು ಅರಸನ ಪಾನದಾಯಕನಾಗಿದ್ದೇನೆಂದು ನೀನು ತಿಳಿದಿರುವೆ. ಆದುದರಿಂದ ಈ ಹೊತ್ತು ನನಗೆ ಸಹಾಯ ಮಾಡು. ಅರಸನಲ್ಲಿ ಸಹಾಯಕ್ಕಾಗಿ ಕೇಳಿಕೊಳ್ಳುವಾಗ ನನಗೆ ನೆರವು ನೀಡು; ನನಗೆ ಯಶಸ್ಸನ್ನು ದಯಪಾಲಿಸು; ರಾಜನಿಗೆ ನಾನು ಮೆಚ್ಚಿಕೆಯುಳ್ಳವನಾಗಿ ಕಂಡುಬರುವಂತೆ ಸಹಾಯಮಾಡು. |
Nehemiah 1:1 Kannada Language Bible Words basic statistical display
COMING SOON ...