Bible Languages

Indian Language Bible Word Collections

Bible Versions

Books

Nehemiah Chapters

Nehemiah 10 Verses

Bible Versions

Books

Nehemiah Chapters

Nehemiah 10 Verses

1 ಮುದ್ರೆ ಹಾಕಿದ ಒಡಂಬಡಿಕೆಯಲ್ಲಿದ್ದ ಹೆಸರುಗಳು: ರಾಜ್ಯಪಾಲನಾದ ನೆಹೆಮೀಯ, ಇವನು ಹಕಲ್ಯನ ಮಗನು.
2 ಚಿದ್ಕೀಯ, ಸೆರಾಯ, ಅಜರ್ಯ, ಯೆರೆಮೀಯ,
3 ಪಷ್ಹೂರ್, ಅಮರ್ಯ, ಮಲ್ಕೀಯ,
4 ಹಟ್ಟೂಷ್, ಶೆಬನ್ಯ, ಮಲ್ಲೂಕ್,
5 ಹಾರೀಮ್, ಮೆರೇಮೋತ್, ಓಬದ್ಯ,
6 ದಾನಿಯೇಲ್, ಗಿನ್ನೆತೋನ್, ಬಾರೂಕ್,
7 ಮೆಷುಲ್ಲಾಮ್, ಅಬೀಯ, ಮಿಯ್ಯಾಮೀನ್,
8 ಮಾಜ್ಯ, ಬಿಲ್ಲೈ ಮತ್ತು ಶೆಮಾಯ ಈ ಎಲ್ಲಾ ಯಾಜಕರು ಮುದ್ರೆಹಾಕಿ ಒಡಂಬಡಿಕೆಯಲ್ಲಿ ಹೆಸರು ಬರೆಸಿದವರು.
9 ಲೇವಿಯರಲ್ಲಿ ಒಡಂಬಡಿಕೆಗೆ ಸಹಿ ಹಾಕಿದವರು: ಅಜನ್ಯನ ಮಗನಾದ ಯೇಷೂವ, ಹೇನಾದಾದ್‌ನ ಸಂತತಿಯವನಾದ ಬಿನ್ನೂಯ್,
10 ಕದ್ಮೀಯೇಲ್ ಮತ್ತು ಅವನ ಸಹೋದರರಾದ ಶೆಬನ್ಯ, ಹೋದೀಯ, ಕೆಲೀಟ, ಪೆಲಾಯ ಮತ್ತು ಹಾನಾನ್;
11 [This verse may not be a part of this translation]
12 [This verse may not be a part of this translation]
13 ಹೋದೀಯ, ಬಾನೀ, ಮತ್ತು ಬೆನೀನೂ.
14 ಒಡಂಬಡಿಕೆಗೆ ಸಹಿ ಹಾಕಿದ ನಾಯಕರುಗಳು: ಪರೋಷ್, ಪಹತ್‌ಮೋವಾಬ್, ಏಲಾಮ್, ಜತ್ತೂ, ಬಾನೀ,
15 ಬುನ್ನೀ, ಅಜ್ಗಾದ್, ಬೇಬೈ,
16 ಅದೋನೀಯ, ಬಿಗ್ವೈ, ಆದೀನ್,
17 ಆಟೇರ್, ಹಿಜ್ಕೀಯ, ಆಜ್ಜೂರ್,
18 ಹೋದೀಯ, ಹಾಷುಮ್, ಬೇಚೈ,
19 ಹಾರೀಫ್, ಅನಾತೋತ್, ನೇಬೈ,
20 ಮಗ್ಪೀಯಾಷ್, ಮೆಷುಲ್ಲಾಮ್, ಹೇಜೀರ್,
21 ಮೆಷೇಜಬೇಲ್, ಚಾದೋಕ್, ಯದ್ದೂವ,
22 ಪೆಲಟ್ಯ, ಹಾನಾನ್, ಅನಾಯ,
23 ಹೋಷೇಯ, ಹನನ್ಯ, ಹಷ್ಷೂಬ್,
24 ಹಲೋಹೇಷ, ಪಿಲ್ಹ, ಶೋಬೇಕ್,
25 ರೆಹೂಮ್, ಹಷಬ್ನ, ಮಾಸೇಯ,
26 ಅಹೀಯ, ಹಾನಾನ್, ಅನಾನ್,
27 ಮಲ್ಲೂಕ್, ಹಾರಿಮ್ ಮತ್ತು ಬಾನ.
28 [This verse may not be a part of this translation]
29 [This verse may not be a part of this translation]
30 “ನಮ್ಮ ಗಂಡು ಮತ್ತು ಹೆಣ್ಣುಮಕ್ಕಳು ನಮ್ಮ ಸುತ್ತಲಿರುವ ಅನ್ಯರನ್ನು ಮದುವೆಯಾಗಲು ಬಿಡುವುದಿಲ್ಲ” ಎಂದು ಪ್ರತಿಜ್ಞೆ ಮಾಡಿದರು.
31 “ಸಬ್ಬತ್ ದಿನದಲ್ಲಿ ಯಾವ ಕೆಲಸವನ್ನೂ ಮಾಡುವುದಿಲ್ಲವೆಂದು ಪ್ರಮಾಣಮಾಡುತ್ತೇವೆ. ನಮ್ಮ ಸುತ್ತಮುತ್ತಲಿನ ಜನರು ಸಬ್ಬತ್ ದಿನದಲ್ಲಿ ಮಾರಲು ದವಸಧಾನ್ಯವನ್ನಾಗಲಿ ಬೇರೆ ವಸ್ತುಗಳನ್ನಾಗಲಿ ತಂದರೆ ನಾವು ಸಬ್ಬತ್ ದಿನದಲ್ಲಿ ಮತ್ತು ಇತರ ಯಾವುದೇ ಹಬ್ಬದ ದಿನದಲ್ಲಿ ಅವುಗಳನ್ನು ಕೊಂಡುಕೊಳ್ಳುವುದಿಲ್ಲ. ಪ್ರತಿ ಏಳನೆಯ ವರ್ಷ ನಾವು ನೆಡುವುದೂ ಇಲ್ಲ. ಹೊಲದಲ್ಲಿ ಕೆಲಸ ಮಾಡುವುದೂ ಇಲ್ಲ. ನಮಗೆ ಬೇರೆಯವರು ಕೊಡಬೇಕಾಗಿರುವ ಸಾಲವನ್ನು ಏಳನೆಯ ವರ್ಷದಲ್ಲಿ ವಜಾ ಮಾಡುತ್ತೇವೆ.
32 “ದೇವಾಲಯವನ್ನು ನಡಿಸುವ ಖರ್ಚಿನ ಜವಾಬ್ದಾರಿಕೆಯನ್ನು ನಾವು ಹೊರುತ್ತೇವೆ. ನಾವು ಒಂದು ಬೆಳ್ಳಿನಾಣ್ಯವನ್ನು ಪ್ರತಿವರ್ಷ ನಮ್ಮ ದೇವರಿಗೆ ಕಾಣಿಕೆ ಕೊಡುತ್ತೇವೆ. ಇದು ದೇವಾಲಯದ ಕೆಲಸ ಕಾರ್ಯಗಳಿಗೆ ಉಪಯೋಗಿಲ್ಪಡಬೇಕು.
33 ಪ್ರತಿದಿನ ದೇವಾಲಯದೊಳಗೆ ಮೇಜಿನ ಮೇಲೆ ಇಡುವ ರೊಟ್ಟಿಗಳಿಗಾಗಿಯೂ ದಿನನಿತ್ಯದ ಸರ್ವಾಂಗಹೋಮಗಳಿಗೂ ಧಾನ್ಯಸರ್ಮರ್ಪಣೆಗೂ ಈ ಹಣವನ್ನು ಉಪಯೋಗಿಸಿರಿ. ಅಮವಾಸ್ಯೆ, ಸಬ್ಬತ್ ಮತ್ತು ಇತರ ವಿಶೇಷ ಸಭಾಕೂಟಗಳಲ್ಲಿ ಮಾಡುವ ಯಜ್ಞಗಳಿಗಾಗಿ ಈ ಹಣವನ್ನು ಉಪಯೋಗಿಸಿರಿ. ಇಸ್ರೇಲರನ್ನು ಶುದ್ಧರನ್ನಾಗಿ ಮಾಡುವ ಪವಿತ್ರ ಯಜ್ಞಗಳಿಗಾಗಿ ಮತ್ತು ಪಾಪಪರಿಹಾರಕ ಯಜ್ಞಗಳಿಗಾಗಿ ಈ ಹಣವನ್ನು ಉಪಯೋಗಿಸಿರಿ. ನಮ್ಮ ದೇವರ ಆಲಯದ ಯಾವ ಕಾರ್ಯಗಳಿಗೆ ಬೇಕಾದರೂ ಈ ಹಣವನ್ನು ಉಪಯೋಗಿಸಿರಿ.
34 “ನಾವು ಅಂದರೆ ಯಾಜಕರು, ಲೇವಿಯರು ಮತ್ತು ಇತರ ಜನರು ಒಟ್ಟಾಗಿ ಸೇರಿ ದೇವಾಲಯದಲ್ಲಿ ಯಜ್ಞ ಹೋಮಗಳನ್ನರ್ಪಿಸುವುದಕ್ಕೆ ಬೇಕಾದ ಕಟ್ಟಿಗೆಯನ್ನು ಪ್ರತಿಯೊಂದು ಕುಟುಂಬವು ವರ್ಷಕ್ಕೊಮ್ಮೆ ತಮಗೆ ನಿಗದಿತವಾದ ಸಮಯದಲ್ಲಿ ತಂದು ಒದಗಿಸುವುದಕ್ಕೆ ಚೀಟು ಹಾಕಿದೆವು. ಧರ್ಮಶಾಸ್ತ್ರದಲ್ಲಿ ಬರೆದಂತೆಯೇ ನಾವು ಮಾಡಬೇಕಲ್ಲಾ!
35 “ನಮ್ಮ ಬೆಳೆಗಳಲ್ಲಿ ಮತ್ತು ಹಣ್ಣಿನ ಮರಗಳಲ್ಲಿ ಬೆಳೆದ ಪ್ರಥಮ ಫಲಗಳನ್ನೆಲ್ಲಾ ಪ್ರತಿವರ್ಷ ದೇವಾಲಯಕ್ಕೆ ತಂದು ಅರ್ಪಿಸುವುದಕ್ಕೆ ಒಪ್ಪಿಕೊಂಡೆವು.
36 “ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ನಾವು ನಮ್ಮ ಚೊಚ್ಚಲು ಮಕ್ಕಳನ್ನು, ಚೊಚ್ಚಲು ದನ, ಕುರಿ, ಆಡುಗಳನ್ನು ದೇವಾಲಯದಲ್ಲಿ ಸೇವೆಮಾಡುತ್ತಿರುವ ಯಾಜಕರಿಗೆ ಒಪ್ಪಿಸುವೆವು.
37 “ಪ್ರಥಮ ಫಲದ ಹಿಟ್ಟನ್ನು, ಪ್ರಥಮ ಫಲದ ಹಣ್ಣುಗಳನ್ನು, ಹೊಸ ದ್ರಾಕ್ಷಾರಸವನ್ನು, ಹೊಸ ಎಣ್ಣೆಯನ್ನು ಯಾಜಕರಿಗೋಸ್ಕರವಾಗಿ ದೇವಾಲಯದ ಉಗ್ರಾಣಗಳಲ್ಲಿ ತಂದಿಡುವೆವು. ನಮ್ಮ ಬೆಳೆಗಳಲ್ಲಿ ಹತ್ತನೆಯ ಒಂದು ಭಾಗವನ್ನು ಲೇವಿಯರಿಗೆ ತಂದುಕೊಡುವೆವು. ನಾವು ಕೆಲಸ ಮಾಡುತ್ತಿರುವ ಊರುಗಳಿಂದ ಲೇವಿಯರು ಇವುಗಳನ್ನು ತೆಗೆದುಕೊಳ್ಳಬೇಕು.
38 ನಮ್ಮಿಂದ ಆ ಕಾಣಿಕೆಗಳನ್ನು ಅವರು ಸ್ವೀಕರಿಸುವಾಗ ಆರೋನನ ವಂಶದವರಾದ ಯಾಜಕನೊಬ್ಬನು ಅವರ ಜೊತೆಯಲ್ಲಿ ಇರಬೇಕು. ಲೇವಿಯರು ಆ ಕಾಣಿಕೆಗಳನ್ನು ದೇವಾಲಯಕ್ಕೆ ತಂದು ಅದರ ಉಗ್ರಾಣಗಳಲ್ಲಿ ಶೇಖರಿಸಿಡಬೇಕು.
39 ಇಸ್ರೇಲ್ ಜನರು ಮತ್ತು ಲೇವಿಯರು ತಮ್ಮ ಕಾಣಿಕೆಗಳಾದ ದವಸಧಾನ್ಯ, ಹೊಸ ದ್ರಾಕ್ಷಾರಸ, ಎಣ್ಣೆ ಇವುಗಳನ್ನು ತಂದು ದೇವಾಲಯದ ಉಗ್ರಾಣಗಳಲ್ಲಿ ಇಡಬೇಕು. ದೇವಾಲಯಕ್ಕೋಸ್ಕರ ಮೀಸಲಾದ ಎಲ್ಲಾ ವಸ್ತುಗಳನ್ನು ಆ ಉಗ್ರಾಣಗಳಲ್ಲಿ ಇಡಬೇಕು. ಕೆಲಸದಲ್ಲಿ ನಿರತರಾಗಿರುವ ಯಾಜಕರು, ಗಾಯಕರು, ದ್ವಾರಪಾಲಕರು ಅಲ್ಲೇ ಇರಬೇಕು. “ನಮ್ಮ ದೇವರ ಆಲಯವನ್ನು ನಾವು ನೋಡಿಕೊಳ್ಳುವುದಾಗಿ ನಾವೆಲ್ಲರೂ ಪ್ರಮಾಣಮಾಡುತ್ತೇವೆ!”

Nehemiah 10:21 Kannada Language Bible Words basic statistical display

COMING SOON ...

×

Alert

×