Bible Languages

Indian Language Bible Word Collections

Bible Versions

Books

Nehemiah Chapters

Nehemiah 11 Verses

Bible Versions

Books

Nehemiah Chapters

Nehemiah 11 Verses

1 ಇಸ್ರೇಲರ ನಾಯಕರುಗಳು ಜೆರುಸಲೇಮ್ ನಗರದೊಳಗೆ ಬಂದು ನೆಲೆಸಿದ್ದರು. ಬೇರೆ ಯಾರು ಪಟ್ಟಣದೊಳಗೆ ನೆಲೆಸಬಹುದೆಂಬುದನ್ನು ಉಳಿದ ಇಸ್ರೇಲರು ತೀರ್ಮಾನ ಮಾಡಬೇಕಿತ್ತು. ಆದ್ದರಿಂದ ಚೀಟು ಹಾಕಿದರು. ಹತ್ತು ಮಂದಿಯಲ್ಲಿ ಒಬ್ಬನು ಪರಿಶುದ್ಧ ನಗರವಾದ ಜೆರುಸಲೇಮಿನಲ್ಲಿ ವಾಸಿಸಬೇಕೆಂದೂ ಉಳಿದ ಒಂಭತ್ತು ಮಂದಿ ತಮ್ಮ ಸ್ವಂತ ಊರುಗಳಲ್ಲಿ ವಾಸಿಸಬಹುದೆಂದೂ ಇದರಿಂದ ತಿಳಿದುಬಂತು.
2 ಕೆಲವರು ಜೆರುಸಲೇಮಿನಲ್ಲಿ ವಾಸಿಸುವುದಕ್ಕೆ ತಾವೇ ಮುಂದೆ ಬಂದರು. ಉಳಿದವರು ತಾವಾಗಿಯೇ ಮುಂದೆ ಬಂದವರನ್ನು ವಂದಿಸಿ ಆಶೀರ್ವದಿಸಿದರು.
3 ಜೆರುಸಲೇಮಿನಲ್ಲಿ ವಾಸಿಸಿದ ಪ್ರಾಂತ್ಯಾಧಿಕಾರಿಗಳ ಪಟ್ಟಿ, (ಕೆಲವು ಇಸ್ರೇಲ್ ಜನರು, ಯಾಜಕರು, ಲೇವಿಯರು, ಆಲಯದ ಸೇವಕರು ಮತ್ತು ಸೊಲೊಮೋನನ ಸೇವಕರ ಸಂತಾನದವರು ಯೆಹೂದ ಪ್ರಾಂತ್ಯದ ಊರುಗಳಲ್ಲಿ ವಾಸಿಸಿದರು. ಇವರೆಲ್ಲರು ತಮ್ಮ ಊರುಗಳಲ್ಲಿದ್ದ ತಮ್ಮ ಸ್ವಂತ ಸ್ಥಳಗಳಲ್ಲಿ ಜೀವಿಸಿದರು.
4 ಯೆಹೂದ ಮತ್ತು ಬೆನ್ಯಾಮೀನನ ಕುಟುಂಬಗಳ ಇತರರು ಜೆರುಸಲೇಮ್ ನಗರದಲ್ಲಿ ವಾಸಿಸಿದರು.) ಜೆರುಸಲೇಮಿಗೆ ಬಂದ ಯೆಹೂದನ ಸಂತಾನದವರು ಯಾರೆಂದರೆ: ಉಜ್ಜೀಯನ ಮಗನಾದ ಅತಾಯ. (ಉಜ್ಜೀಯನು ಜೆಕರ್ಯನ ಮಗ; ಜೆಕರ್ಯನು ಅಮರ್ಯನ ಮಗ; ಅಮರ್ಯನು ಶೆಫಟ್ಯನ ಮಗ; ಶೆಫಟ್ಯನು ಮಹಲಲೇಲನ ಮಗ; ಮಹಲಲೇಲ ಪೆರೆಚನ ಸಂತಾನದವನು.)
5 ಇನ್ನೊಬ್ಬನು ಬಾರೂಕನ ಮಗನಾದ ಮಾಸೇಯ. (ಬಾರೂಕನು ಕೊಲ್ಹೋಜೆಯ ಮಗನು; ಕೊಲ್ಹೋಜೆಯು ಹಜಾಯನ ಮಗ; ಹಜಾಯನು ಅದಾಯನ ಮಗ; ಅದಾಯನು ಯೋಯಾರೀಬನ ಮಗ; ಯೋಯಾರೀಬನು ಜೆಕರ್ಯನ ಮಗ; ಜೆಕರ್ಯ ಶೇಲಹನ ಸಂತಾನದವನು).
6 ಪೆರೆಚನ ಸಂತಾನಕ್ಕೆ ಒಟ್ಟು ನಾನೂರ ಅರವತ್ತೆಂಟು ಮಂದಿ ಜೆರುಸಲೇಮ್ ನಗರದಲ್ಲಿ ವಾಸಿಸಿದರು. ಇವರೆಲ್ಲಾ ಧೈರ್ಯಶಾಲಿಗಳಾದ ವೀರರು.
7 ಜೆರುಸಲೇಮಿಗೆ ವಾಸಿಸಲು ಬಂದ ಬೆನ್ಯಾಮೀನನ ಸಂತಾನದವರು ಯಾರೆಂದರೆ: ಮೆಷುಲ್ಲಾಮನ ಮಗನಾದ ಸಲ್ಲು, (ಮೆಷುಲ್ಲಾಮನು ಯೋವೇದನ ಮಗ; ಯೋವೇದನು ಪೆದಾಯನ ಮಗ; ಪೆದಾಯನು ಕೋಲಾಯನ ಮಗ; ಕೋಲಾಯನು ಮಾಸೇಯ ಮಗ; ಮಾಸೇಯು ಈತಿಯೇಲನ ಮಗ; ಈತಿಯೇಲನು ಯೆಶಾಯನ ಮಗ;)
8 ಗಬ್ಬೈ ಮತ್ತು ಸಲ್ಲು ಎಂಬುವರು ಯೆಶಾಯನನ್ನು ಹಿಂಬಾಲಿಸಿದರು. ಹೀಗೆ ಒಟ್ಟು ಒಂಭೈನೂರ ಇಪ್ಪತೆಂಟು ಮಂದಿ.
9 ಜಿಕ್ರಿಯ ಮಗನಾದ ಯೋವೇಲನು ಅವರಿಗೆ ಮುಖ್ಯಸ್ತನಾಗಿದ್ದನು. ಹಸ್ಸೆನೂವನ ಮಗನಾದ ಯೆಹೂದನು ಜೆರಿಸಲೇಮಿನ ಎರಡನೆ ಜಿಲ್ಲೆಗೆ ಮುಖ್ಯಸ್ತನಾಗಿದ್ದನು.
10 ಜೆರುಸಲೇಮಿನೊಳಗೆ ವಾಸಿಸಲು ಬಂದ ಯಾಜಕರು ಯಾರೆಂದರೆ: ಯೋಯಾರೀಬನ ಮಗನಾದ ಯೆದಾಯ, ಯಾಕೀನ್,
11 ಮತ್ತು ಹಿಲ್ಕೀಯನ ಮಗನಾದ ಸೆರಾಯ. (ಹಿಲ್ಕೀಯನು ಮೆಷುಲ್ಲಾಮನ ಮಗನು; ಮೆಷುಲ್ಲಾಮನು ಚಾದೋಕನ ಮಗನು; ಚಾದೋಕನು ಮೆರಾಯೋತನ ಮಗನು; ಮೆರಾಯೋತನು ದೇವಾಲಯದ ಮೇಲ್ವಿಚಾರಕನಾಗಿದ್ದ ಅಹೀಟೂಬನ ಸಂತಾನಕ್ಕೆ ಸೇರಿದವನು.)
12 ದೇವಾಲಯದೊಳಗೆ ಸೇವೆ ಮಾಡುವ ಎಂಟುನೂರ ಇಪ್ಪತ್ತೆರಡು ಮಂದಿ, ಮತ್ತು ಯೆರೋಹಾಮನ ಮಗನಾದ ಅದಾಯ. ಯೆರೋಹಾಮನು ಪೆಲಲ್ಯನ ಮಗ; ಪೆಲಲ್ಯನು ಅಮ್ಚೀಯ ಮಗ; ಅಮ್ಚೀಯು ಜೆಕರ್ಯನ ಮಗ; ಜೆಕರ್ಯನು ಪಷ್ಹೂರನ ಮಗ; ಪಷ್ಹೂರನು ಮಲ್ಕೀಯನ ಮಗ.
13 ಮಲ್ಕೀಯನ ವಂಶದ ಒಟ್ಟು ಜನರು ಇನ್ನೂರ ನಲವತ್ತೆರಡು ಮಂದಿ. ಇವರೆಲ್ಲಾ ಕುಟುಂಬಗಳ ನಾಯಕರಾಗಿದ್ದರು. ಅಜರೇಲನ ಮಗನು ಅಮಷ್ಪೈ (ಅಜರೇಲನು ಅಹಜೈಯ ಮಗ; ಅಹಜೈಯು ಮೆಪಿಲ್ಲೇಮೋತನ ಮಗ; ಮೆಪಿಲ್ಲೇಮೋತನು ಇಮ್ಮೇರನ ಮಗ.)
14 ಈ ವಂಶದವರ ಒಟ್ಟು ಸಂಖ್ಯೆ ನೂರ ಇಪ್ಪತ್ತೆಂಟು ಮಂದಿ. ಇವರೆಲ್ಲಾ ಧೈರ್ಯಶಾಲಿಗಳಾದ ಯುದ್ಧ ಯೋಧರು. ಇವರ ಮುಖ್ಯಸ್ಥನು ಹಗ್ಗೆದೋಲೀಮನ ಮಗನಾದ ಜಬ್ದೀಯೇಲ.)
15 ಜೆರುಸಲೇಮಿಗೆ ವಾಸಿಸಲು ಬಂದ ಲೇವಿಯರು ಹಷ್ಷೂಬನ ಮಗನಾದ ಶೆಮಾಯ; (ಹಷ್ಷೂಬನು ಅಜ್ರೀಕಾಮನ ಮಗ; ಅಜ್ರೀಕಾಮನು ಹಷಬ್ಯನ ಮಗ; ಹಷಬ್ಯನು ಬುನ್ನೀಯ ಮಗ.);
16 ಶಬ್ಬೆತೈ ಮತ್ತು ಯೋಜಾಬಾದ್. (ಇವರಿಬ್ಬರೂ ಲೇವಿಯರ ನಾಯಕರು. ಇವರು ದೇವಾಲಯದ ಹೊರಕೆಲಸಗಳನ್ನು ನೋಡಿಕೊಳ್ಳುತ್ತಿದ್ದರು.
17 ಮತ್ತನ್ಯ, (ಮತ್ತನ್ಯನು ಮೀಕನ ಮಗ; ಮೀಕನು ಜಬ್ದೀಯ ಮಗ; ಜಬ್ದೀಯು ಆಸಾಫನ ಮಗ. ಆಸಾಫನು ಗಾಯಕರ ನಾಯಕನಾಗಿದ್ದು ಪ್ರಾರ್ಥನೆ ಮತ್ತು ಸ್ತುತಿಗೀತೆಗಳಲ್ಲಿ ಜನರನ್ನು ನಡೆಸುತ್ತಿದ್ದನು.) ಬಕ್ಬುಕ್ಯ (ಇವನು ತನ್ನ ಸಹೋದರರಲ್ಲಿ ಎರಡನೆ ಸ್ಥಾನ ಪಡೆದಿದ್ದನು,) ಮತ್ತು ಶಮ್ಮೂವನ ಮಗನಾದ ಅಬ್ದ, (ಶಮ್ಮೂವನು ಗಾಲಾಲನ ಮಗ; ಗಾಲಾಲನು ಯೆದೂತೂನನ ಮಗ.)
18 ಹೀಗೆ ಒಟ್ಟು ಇನ್ನೂರ ಎಂಭತ್ತ ನಾಲ್ಕು ಮಂದಿ ಲೇವಿಯರು ಪರಿಶುದ್ಧ ನಗರದಲ್ಲಿ ವಾಸಿಸಲು ಬಂದರು.
19 ದ್ವಾರಪಾಲಕರಲ್ಲಿ ಅಕ್ಕೂಬ್, ಟಲ್ಮೋನ್ ಮತ್ತು ಅವರ ನೂರ ಎಪ್ಪತ್ತೆರಡು ಮಂದಿ ಸಹೋದರರು. ಅವರು ನಗರದ ಬಾಗಿಲುಗಳನ್ನು ಕಾವಲು ಕಾಯುವವರಾಗಿದ್ದರು.
20 ಉಳಿದ ಜನರೂ ಯಾಜಕರೂ ಮತ್ತು ಲೇವಿಯರೂ ಯೆಹೂದದ ಬೇರೆಬೇರೆ ಊರು ಪಟ್ಟಣಗಳಲ್ಲಿ ವಾಸಿಸಿದರು. ತಮ್ಮತಮ್ಮ ಪೂರ್ವಿಕರು ನೆಲೆಸಿದ ಸ್ಥಳಗಳಲ್ಲಿಯೇ ನೆಲೆಸಿದರು.
21 ಓಪೇಲ್ ಬೆಟ್ಟದಲ್ಲಿ ದೇವಾಲಯದ ಸೇವಕರು ವಾಸಿಸಿದರು. ಚೀಹ ಮತ್ತು ಗಿಷ್ಪ ಅವರ ಮುಖ್ಯಸ್ತರು.
22 ಮೀಕ ವಂಶಕ್ಕೆ ಸೇರಿದ ಉಜ್ಜೀಯು ಜೆರುಸಲೇಮಿನಲ್ಲಿ ಲೇವಿಯರಿಗೆಲ್ಲಾ ಮುಖ್ಯಸ್ಥನಾಗಿದ್ದನು. ಉಜ್ಜೀಯು ಬಾನೀಯ ಮಗ. (ಬಾನೀಯು ಹಷಬ್ಯನ ಮಗ; ಹಷಬ್ಯನು ಮತ್ತನ್ಯನ ಮಗ; ಮತ್ತನ್ಯನು ಮೀಕನ ಮಗ.) ಉಜ್ಜೀಯು ಆಸಾಫನ ಸಂತಾನಕ್ಕೆ ಸೇರಿದವನಾಗಿದ್ದನು.
23 ಗಾಯಕರಾಗಿದ್ದ ಇವರು ದೇವಾಲಯದ ಸೇವಾಕಾರ್ಯಗಳಲ್ಲಿ ಹಾಡುತ್ತಿದ್ದರು. ಇವರ ಅನುದಿನದ ಕರ್ತವ್ಯವನ್ನು ರಾಜನೇ ತಿಳಿಸುತ್ತಿದ್ದನು. ಇವರು ಅದಕ್ಕೆ ವಿಧೇಯರಾಗುತ್ತಿದ್ದರು.
24 ಪೆತಹ್ಯನು ಪ್ರಜೆಗಳ ವಿಷಯದಲ್ಲಿ ರಾಜನ ಪ್ರತಿನಿಧಿಯಾಗಿದ್ದನು. (ಪೆತಹ್ಯನು ಮೆಷೇಜಬೇಲನ ಮಗ; ಮೆಷೇಜಬೇಲನು ಜೆರಹನ ಮಗ; ಜೆರಹನು ಯೆಹೂದನ ಮಗ.)
25 ಯೆಹೂದ ಸಂಸ್ಥಾನದ ಜನರು ಈ ಪಟ್ಟಣಗಳಲ್ಲಿ ವಾಸಿಸಿದರು. ಕಿರ್ಯತರ್ಬ ಮತ್ತು ಸುತ್ತಮುತ್ತಲಿರುವ ಚಿಕ್ಕ ಪಟ್ಟಣಗಳಲ್ಲಿ, ದೀಬೋನ್ ಮತ್ತು ಅದರ ಸುತ್ತಲಿರುವ ಚಿಕ್ಕ ಪಟ್ಟಣಗಳಲ್ಲಿ, ಯಕಬ್ಜೆಯೇಲ್ ಮತ್ತು ಅದರ ಸುತ್ತಲಿದ್ದ ಚಿಕ್ಕ ಪಟ್ಟಣಗಳಲ್ಲಿ ವಾಸಿಸಿದರು.
26 ಅನಂತರ ಯೇಷೂವ, ಮೋಲಾದ, ಬೇತ್ಪಲೆಟ್,
27 ಹಚರ್ಷೂವಲ್, ಬೇರ್ಷೆಬ, ಅದರ ಸುತ್ತಲೂ ಇದ್ದ ಚಿಕ್ಕ ಪಟ್ಟಣಗಳಲ್ಲಿ,
28 ಚಿಕ್ಲಗ್, ಮೆಕೋನ, ಮತ್ತು ಸುತ್ತಲಿದ್ದ ಚಿಕ್ಕ ಪಟ್ಟಣಗಳು,
29 ಏನ್ರಿಮ್ಮೋನ್, ಚೊರ್ರ, ಯರ್ಮೂತ್,
30 ಜನೋಹ, ಅದುಲ್ಲಾಮ್, ಅದರ ಸುತ್ತಲಿದ್ದ ಚಿಕ್ಕ ನಗರಗಳು, ಲಾಕೀಷ್ ಅದರ ಸುತ್ತಲಿದ್ದ ಹೊಲಗಳು, ಅಜೇಕ, ಅದರ ಸುತ್ತಲಿದ್ದ ಚಿಕ್ಕ ಪಟ್ಟಣಗಳು. ಹೀಗೆ ಯೆಹೂದ ಪ್ರಾಂತ್ಯದ ಜನರು ಬೇರ್ಷೆಬದಿಂದ ಹಿಡಿದು ಹಿನ್ನೋಮ್ ಕಣಿವೆಯ ತನಕ ಬೇರೆ ಬೇರೆ ಪಟ್ಟಣಗಳಲ್ಲಿ ವಾಸಿಸಿದರು.
31 ಗೆಬದ ಬೆನ್ನಾಮೀನ್ ವಂಶದ ಜನರು ಮಿಕ್ಮಾಷಿನಲ್ಲಿಯೂ, ಅಯ್ಯಾ, ಬೇತೇಲ್ ಮತ್ತು ಸುತ್ತಲಿದ್ದ ಸಣ್ಣ ಪಟ್ಟಣಗಳಲ್ಲಿಯೂ ನೆಲೆಸಿದರು.
32 ಅನಾತೋತ್, ನೋಬ್ ಮತ್ತು ಅನನ್ಯ,
33 ಹಾಚೋರ್, ರಾಮಾ, ಮತ್ತು ಗಿತ್ತಯಿಮ್,
34 ಹಾದೀದ್, ಚೆಬೋಮಿಮ್ ಮತ್ತು ನೆಬಲ್ಲಾಟ್,
35 ಲೋದ್, ಓನೋ ಮತ್ತು ಗೇಹರಾಷೀಮ್ ಶಿಲ್ಪಿಯವರ ಕಣಿವೆ ಇವುಗಳಲ್ಲಿ ನೆಲೆಸಿದರು.
36 ಲೇವಿಕುಲದವರಲ್ಲಿ ಕೆಲವು ವರ್ಗಗಳವರು ಬೆನ್ಯಾಮೀನರ ಪ್ರದೇಶಕ್ಕೆ ಹೋದರು.

Nehemiah 11:1 Kannada Language Bible Words basic statistical display

COMING SOON ...

×

Alert

×