1
|
ಮೋಶೆಯು ಇಥಿಯೋಪ್ಯದ ಸ್ತ್ರೀಯನ್ನು ಮದುವೆ ಮಾಡಿಕೊಂಡ ಕಾರಣ ಮಿರ್ಯಾಮಳೂ ಆರೋನನೂ ಮೋಶೆಗೆ ವಿರೋಧವಾಗಿ ಮಾತಾಡಿದರು. |
2
|
ಅವರು, “ಯೆಹೋವನು ಮೋಶೆಯೊಡನೆ ಮಾತ್ರ ಮಾತಾಡಿದ್ದಾನೋ? ಆತನು ನಮ್ಮೊಡನೆಯೂ ಮಾತಾಡಿದನಲ್ಲವೇ?” ಅಂದರು. ಯೆಹೋವನು ಅವರ ಮಾತುಗಳನ್ನು ಕೇಳಿದನು. |
3
|
(ಮೋಶೆಯು ಬಹಳ ದೀನನಾದ ವ್ಯಕ್ತಿ. ಅವನು ಭೂಮಿಯ ಮೇಲಿರುವ ಎಲ್ಲಾ ಮನುಷ್ಯರಿಗಿಂತಲೂ ದೀನನಾಗಿದ್ದನು.) |
4
|
ಆದ್ದರಿಂದ ಕೂಡಲೇ ಯೆಹೋವನು, ಮೋಶೆ, ಆರೋನರ ಮತ್ತು ಮಿರ್ಯಾಮಳ ಸಂಗಡ ಮಾತಾಡಿ, “ನೀವು ಮೂವರು ದೇವದರ್ಶನಗುಡಾರಕ್ಕೆ ಬನ್ನಿ” ಎಂದು ಹೇಳಿದನು. ಆದ್ದರಿಂದ ಮೋಶೆ, ಆರೋನರು ಮತ್ತು ಮಿರ್ಯಾಮಳು ದೇವದರ್ಶನಗುಡಾರಕ್ಕೆ ಹೋದರು. |
5
|
ಯೆಹೋವನು ಎತ್ತರವಾದ ಮೇಘದಲ್ಲಿ ಇಳಿದು ಬಂದು ದೇವದರ್ಶನಗುಡಾರದ ಪ್ರವೇಶದ್ವಾರದ ಬಳಿ ನಿಂತನು. ಯೆಹೋವನು ಆರೋನನನ್ನೂ ಮಿರ್ಯಾಮಳನ್ನೂ ಕರೆದನು. ಆರೋನನೂ ಮಿರ್ಯಾಮಳೂ ಹತ್ತಿರಕ್ಕೆ ಹೋದರು. |
6
|
ದೇವರು, “ನನ್ನ ಮಾತನ್ನು ಕೇಳಿರಿ. ನಿಮ್ಮಲ್ಲಿ ಪ್ರವಾದಿಯಿದ್ದರೆ, ನಾನು ಅವನಿಗೆ ನನ್ನನ್ನು ದರ್ಶನದಲ್ಲಿ ಗೊತ್ತುಪಡಿಸಿಕೊಳ್ಳುವೆನು ಅಥವಾ ಸ್ವಪ್ನದಲ್ಲಿ ಅವನ ಸಂಗಡ ಮಾತಾಡುವೆನು. |
7
|
ಆದರೆ ಮೋಶೆಯೊಡನೆ ನಾನು ಆ ರೀತಿ ಮಾಡುವುದಿಲ್ಲ. ಮೋಶೆಯು ನನ್ನ ನಂಬಿಗಸ್ತನಾದ ಸೇವಕನು. ಅವನ ಮೇಲೆ ನನಗೆ ಭರವಸೆಯಿದೆ. |
8
|
ನಾನು ಅವನೊಂದಿಗೆ ಗೂಡಾರ್ಥದಿಂದ ಮಾತಾಡದೆ ನೇರವಾಗಿಯೂ ಸ್ಪಷ್ಟವಾಗಿಯೂ ಮಾತಾಡುತ್ತೇನೆ. ಅವನು ನನ್ನ ಸ್ವರೂಪವನ್ನೇ ನೋಡಬಲ್ಲನು. ನನ್ನ ಸೇವಕನಾದ ಮೋಶೆಗೆ ವಿರೋಧವಾಗಿ ಮಾತಾಡಲು ನೀವು ಯಾಕೆ ಭಯಪಡಲಿಲ್ಲ?” ಎಂದು ಹೇಳಿದನು. |
9
|
ಯೆಹೋವನು ಅವರ ಮೇಲೆ ಬಹಳವಾಗಿ ಕೋಪಗೊಂಡು ಹೊರಟುಹೋದನು. |
10
|
ಮೇಘವು ಗುಡಾರದಿಂದ ಮೇಲಕ್ಕೆ ಎದ್ದಿತು. ಆರೋನನು ಹಿಂತಿರುಗಿ ಮಿರ್ಯಾಮಳನ್ನು ನೋಡಿದನು. ಆಕೆಯ ಚರ್ಮವು ಹಿಮದಂತೆ ಬೆಳ್ಳಗಾಗಿತ್ತು. ಆಕೆಗೆ ಭಯಂಕರವಾದ ಚರ್ಮರೋಗ ಹಿಡಿದಿತ್ತು. |
11
|
ಆಗ ಆರೋನನು ಮೋಶೆಗೆ, “ಸ್ವಾಮೀ, ನಾವು ಮೂರ್ಖತನದಿಂದ ಮಾಡಿದ ಪಾಪಕ್ಕೆ ದಯವಿಟ್ಟು ನಮ್ಮನ್ನು ದಂಡಿಸಬೇಡ. |
12
|
ಗರ್ಭದಲ್ಲೇ ಅರ್ಧ ಮಾಂಸ ಕೊಳೆತುಹೋಗಿ, ಹುಟ್ಟುವಾಗಲೇ ಸತ್ತ ಮಗುವಿನಂತೆ ಈಕೆಗೆ ಆಗದಂತೆ ದಯವಿಟ್ಟು ಕಾಪಾಡು” ಎಂದು ಬೇಡಿಕೊಂಡನು. |
13
|
ಆದ್ದರಿಂದ ಮೋಶೆ ಯೆಹೋವನಿಗೆ ಪ್ರಾರ್ಥಿಸಿ, “ದೇವರೇ, ದಯಮಾಡಿ ಈಕೆಯನ್ನು ವಾಸಿಮಾಡು” ಎಂದು ಮೊರೆಯಿಟ್ಟನು. |
14
|
ಅದಕ್ಕೆ ಯೆಹೋವನು, “ಆಕೆಯ ತಂದೆ ಮುಖದ ಮೇಲೆ ಉಗುಳಿದ್ದರೆ ಆಕೆ ಏಳು ದಿವಸ ನಾಚಿಕೆಯಿಂದ ಇರುತ್ತಿರಲಿಲ್ಲವೇ? ಹಾಗಾದರೆ ಆಕೆ ಏಳು ದಿವಸ ಪಾಳೆಯದ ಹೊರಗೆ ಇರಬೇಕು. ತರುವಾಯ ಆಕೆ ಪಾಳೆಯದೊಳಗೆ ಬರಬಹುದು” ಎಂದು ಉತ್ತರಿಸಿದನು. |
15
|
ಆದಕಾರಣ ಅವರು ಮಿರ್ಯಾಮಳನ್ನು ಏಳು ದಿವಸಗಳವರೆಗೆ ಪಾಳೆಯದ ಹೊರಗೆ ಇಟ್ಟರು. ಆಕೆ ತಿರುಗಿ ಸೇರಿಕೊಳ್ಳುವ ತನಕ ಇಸ್ರೇಲರು ಪ್ರಯಾಣ ಮಾಡಲಿಲ್ಲ. |
16
|
ಇದಾದನಂತರ, ಜನರು ಹಚೇರೋತಿನಿಂದ ಹೊರಟು ಪಾರಾನ್ ಮರುಭೂಮಿಯಲ್ಲಿ ಪಾಳೆಯ ಮಾಡಿಕೊಂಡರು. |
Numbers 12:8 Kannada Language Bible Words basic statistical display
COMING SOON ...