2
|
“ಕಾನಾನ್ ದೇಶದ ಬಗ್ಗೆ ವಿಷಯವನ್ನು ಸಂಗ್ರಹಿಸಿಕೊಂಡು ಬರಲು ಗೂಢಚಾರರನ್ನು ಕಳುಹಿಸು. ನಾನು ಇಸ್ರೇಲರಿಗೆ ಕೊಡುವ ದೇಶ ಇದಾಗಿದೆ. ಹನ್ನೆರಡು ಕುಲಗಳಿಂದ ಒಬ್ಬೊಬ್ಬ ನಾಯಕನನ್ನು ಕಳುಹಿಸು” ಎಂದು ಹೇಳಿದನು. |
3
|
ಜನರು ಪಾರಾನ್ ಮರುಭೂಮಿಯಲ್ಲಿ ಇಳಿದುಕೊಂಡಿದ್ದಾಗ ಯೆಹೋವನ ಆಜ್ಞೆಗನುಸಾರವಾಗಿ ಮೋಶೆಯು ಈ ನಾಯಕರನ್ನು ಕಳುಹಿಸಿದನು. |
4
|
ಆ ನಾಯಕರು ಯಾರೆಂದರೆ: ರೂಬೇನ್ ಕುಲದಿಂದ ಜಕ್ಕೂರನ ಮಗನಾದ ಶಮ್ಮೂವ, |
5
|
ಸಿಮೆಯೋನ್ ಕುಲದಿಂದ ಹೋರಿಯ ಮಗನಾದ ಶಾಫಾಟ್, |
6
|
ಯೆಹೂದ ಕುಲದಿಂದ ಯೆಫುನ್ನೆಯ ಮಗನಾದ ಕಾಲೇಬ್, |
7
|
ಇಸ್ಸಾಕಾರ್ ಕುಲದಿಂದ ಯೋಸೇಫನ ಮಗನಾದ ಇಗಾಲ್, |
8
|
ಎಫ್ರಾಯೀಮ್ ಕುಲದಿಂದ ನೂನನ ಮಗನಾದ ಹೋಶೇಯ, |
9
|
ಬೆನ್ಯಾಮೀನ್ ಕುಲದಿಂದ ರಾಫೂವನ ಮಗನಾದ ಪಲ್ಟೀ, |
10
|
ಜೆಬುಲೂನ್ ಕುಲದಿಂದ ಸೋದೀಯ ಮಗನಾದ ಗದ್ದೀಯೇಲ್, |
11
|
ಯೋಸೇಫನ ಮಗನಾದ ಮನಸ್ಸೆ ಕುಲದಿಂದ ಸೂಸೀಯ ಮಗನಾದ ಗದ್ದೀ. |
12
|
ದಾನ್ ಕುಲದಿಂದ ಗೆಮಲ್ಲೀಯ ಮಗನಾದ ಅಮ್ಮೀಯೇಲ್. |
13
|
ಆಶೇರ್ ಕುಲದಿಂದ ಮೀಕಾಯೇಲನ ಮಗನಾದ ಸೆತೂರ್, |
14
|
ನಫ್ತಾಲಿ ಕುಲದಿಂದ ವಾಪೆಸೀಯನ ಮಗನಾದ ನಹಬೀ, |
15
|
ಗಾದ್ ಕುಲದಿಂದ ಮಾಕೀಯನ ಮಗನಾದ ಗೆಯೂವೇಲ್. |
16
|
ದೇಶದ ವಿಷಯವನ್ನು ಸಂಗ್ರಹಿಸಿಕೊಂಡು ಬರಲು ಮೋಶೆ ಕಳುಹಿಸಿದ ಗೂಢಚಾರರ ಹೆಸರುಗಳು ಇವೇ. (ಮೋಶೆಯು ನೂನನ ಮಗನಾದ ಹೋಶೇಯನಿಗೆ ಯೆಹೋಶುವನೆಂದು ಹೆಸರಿಟ್ಟನು.) |
17
|
ಕಾನಾನ್ ದೇಶದ ವಿಷಯವನ್ನು ಸಂಗ್ರಹಿಸಿಕೊಂಡು ಬರಲು ಮೋಶೆ ಅವರನ್ನು ಕಳುಹಿಸುವಾಗ ಅವರಿಗೆ, “ನೀವು ಬೆಟ್ಟದ ಸೀಮೆಗೆ ನೆಗೆವ್ ಮೂಲಕ ಹತ್ತಿ ಹೋಗಿ |
18
|
ಆ ದೇಶದ ಸಂಗತಿಯನ್ನೆಲ್ಲಾ ತಿಳಿದುಕೊಳ್ಳಿರಿ. ಅಲ್ಲಿನ ನಿವಾಸಿಗಳು ಬಲಿಷ್ಠರೋ ಅಥವಾ ಬಲಹೀನರೋ, ಬಹಳ ಮಂದಿಯೋ ಅಥವಾ ಸ್ವಲ್ಪ ಮಂದಿಯೋ, |
19
|
ಅವರ ದೇಶ ಒಳ್ಳೆಯದೋ ಅಥವಾ ಕೆಟ್ಟದ್ದೋ, ಅವರ ಪಟ್ಟಣಗಳು ಗೋಡೆಗಳನ್ನು ಹೊಂದಿವೆಯೋ ಅಥವಾ ಇಲ್ಲವೋ, |
20
|
ಭೂಮಿಯು ಸಾರವಾದದ್ದೋ ಅಥವಾ ನಿಸ್ಸಾರವಾದದ್ದೋ, ಮರಗಳನ್ನು ಹೊಂದಿದೆಯೋ ಅಥವಾ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಿ. ಅದಲ್ಲದೆ ಆ ದೇಶದ ಉತ್ಪನ್ನಗಳಲ್ಲಿ ಕೆಲವನ್ನು ತರಲು ಪ್ರಯತ್ನ ಮಾಡಿ” ಎಂದು ಹೇಳಿದನು. (ಆಗ ದ್ರಾಕ್ಷಾಲತೆಗಳ ಪ್ರಥಮ ಫಲದ ಕಾಲವಾಗಿತ್ತು.) |
21
|
ಅವರು ಬೆಟ್ಟದ ಸೀಮೆಗೆ ಹತ್ತಿಹೋಗಿ, ಚಿನ್ ಮರುಭೂಮಿಯಿಂದಿಡಿದು ಲೆಬೊಹಮಾತಿನ ಬಳಿಯಲ್ಲಿರುವ ರೆಹೋಬಿನವರೆಗೂ ದೇಶದ ವಿಷಯಗಳನ್ನು ಸಂಗ್ರಹಿಸಿಕೊಂಡರು. |
22
|
ಅವರು ನೆಗೆವ್ ಮೂಲಕ ದೇಶವನ್ನು ಪ್ರವೇಶಿಸಿ ಹೆಬ್ರೋನಿಗೆ ಹೋದರು. ಹೆಬ್ರೋನ್ ಪಟ್ಟಣವು ಈಜಿಪ್ಟ್ ದೇಶದಲ್ಲಿರುವ ಚೋವನ್ ಪಟ್ಟಣಕ್ಕಿಂತ ಏಳು ವರುಷಗಳ ಮುಂಚೆ ಕಟ್ಟಲ್ಪಟ್ಟಿತ್ತು. ಅಲ್ಲಿ ಅಹೀಮನ್, ಶೇಫೈ ಮತ್ತು ತಲ್ಮೈ ಎಂಬವರು ವಾಸಿಸುತ್ತಿದ್ದರು. ಇವರು ಅನಾಕನ ಸಂತತಿಯವರು. |
23
|
ಬಳಿಕ ಅವರು ಎಷ್ಕೋಲ್ ಕಣಿವೆಗೆ ಹೋದರು. ಅಲ್ಲಿ ಅವರು ದ್ರಾಕ್ಷಾಲತೆಯಿಂದ ಒಂದು ಕೊಂಬೆಯನ್ನು ಕಡಿದರು. ಆ ಕೊಂಬೆಯಲ್ಲಿ ದ್ರಾಕ್ಷೆಯ ಗೊಂಚಲಿತ್ತು. ಅವರು ಅದನ್ನು ಒಂದು ಕೋಲಿಗೆ ಕಟ್ಟಿ ಇಬ್ಬರು ಅದನ್ನು ಹೊತ್ತುಕೊಂಡು ಬಂದರು. ಕೆಲವು ದಾಳಿಂಬೆ ಹಣ್ಣುಗಳನ್ನು ಮತ್ತು ಅಂಜೂರದ ಹಣ್ಣುಗಳನ್ನು ಹೊತ್ತು ತಂದರು. |
24
|
ಇಸ್ರೇಲರು ಅಲ್ಲಿ ದ್ರಾಕ್ಷೆಯ ಗೊಂಚಲನ್ನು ಕತ್ತರಿಸಿದ್ದರಿಂದ ಆ ಸ್ಥಳಕ್ಕೆ ಎಷ್ಕೋಲ್ ಕಣಿವೆ ಎಂದು ಹೆಸರಾಯಿತು. |
25
|
ಜನರು ನಲವತ್ತು ದಿನಗಳವರೆಗೆ ದೇಶವನ್ನು ಸಂಚರಿಸಿ ನೋಡಿ, ತಮ್ಮ ಪಾಳೆಯಕ್ಕೆ ಹಿಂತಿರುಗಿದರು. |
26
|
ಇಸ್ರೇಲರು ಪಾರಾನ್ ಮರುಭೂಮಿಯ ಕಾದೇಶಿನಲ್ಲಿ ತಂಗಿದ್ದರು. ಅವರು ನೋಡಿದ್ದರ ಬಗ್ಗೆ ಎಲ್ಲವನ್ನು ಮೋಶೆಗೂ ಆರೋನನಿಗೂ ಎಲ್ಲಾ ಇಸ್ರೇಲರಿಗೂ ತಿಳಿಸಿದರು. ಅವರು ಕಾನಾನ್ ದೇಶದಿಂದ ತಂದ ಹಣ್ಣುಗಳನ್ನು ತೋರಿಸಿದರು. |
27
|
ಜನರು ಮೋಶೆಗೆ, “ನೀನು ಕಳುಹಿಸಿದ ದೇಶಕ್ಕೆ ನಾವು ಹೋಗಿ ಸಂಚರಿಸಿ ನೋಡಿದೆವು. ಅದು ಹಾಲೂ ಜೇನೂ ಹರಿಯುವ ದೇಶವಾಗಿದೆ. ಇಗೋ, ಹಣ್ಣುಗಳಲ್ಲಿ ಕೆಲವು ಇಲ್ಲಿವೆ. |
28
|
ಅಲ್ಲಿನ ಜನರು ಬಲಿಷ್ಠರು. ಪಟ್ಟಣಗಳೂ ಬಹಳ ದೊಡ್ಡದಾಗಿವೆ. ಪಟ್ಟಣಗಳು ಕೋಟೆಕೊತ್ತಲುಗಳುಳ್ಳದಾಗಿವೆ. ನಾವು ಕೆಲವು ಅನಾಕ್ಯರನ್ನು ಸಹ ನೋಡಿದೆವು. |
29
|
ಅಮಾಲೇಕ್ಯರು ನೆಗೆವ್ನಲ್ಲಿ ವಾಸಿಸುತ್ತಾರೆ. ಹಿತ್ತಿಯರು, ಯೆಬೂಸಿಯರು ಮತ್ತು ಅಮೋರಿಯರು ಪರ್ವತ ಪ್ರದೇಶದಲ್ಲಿ ವಾಸಿಸುತ್ತಾರೆ. ಕಾನಾನ್ಯರು ಸಮುದ್ರ ತೀರದಲ್ಲಿಯೂ ಮತ್ತು ಯೋರ್ದನ್ ನದಿಯ ಉದ್ದಕ್ಕೂ ವಾಸಿಸುತ್ತಾರೆ” ಎಂದು ಹೇಳಿದರು. |
30
|
ಕಾಲೇಬನು ಮೋಶೆಯ ಬಳಿಯಲ್ಲಿದ್ದ ಗುಣುಗುಟ್ಟುವ ಜನರನ್ನು ಸುಮ್ಮನಿರಿಸಿ, “ನಾವು ಹೋಗಿ ದೇಶವನ್ನು ವಶಪಡಿಸಿಕೊಳ್ಳಬೇಕು. ನಾವು ಸುಲಭವಾಗಿ ದೇಶವನ್ನು ವಶಪಡಿಸಿಕೊಳ್ಳಬಹುದು” ಎಂದು ಹೇಳಿದನು. |
31
|
ಆದರೆ ಅವನೊಡನೆ ಹೋದ ಜನರು, “ನಾವು ಆ ಜನರೊಡನೆ ಹೋರಾಡಲಾರೆವು, ಅವರು ನಮಗಿಂತಲೂ ಬಲಿಷ್ಠರು” ಎಂದು ಹೇಳಿದರು. |
32
|
“ನಾವು ಸಂಚರಿಸಿ ವಿಷಯ ಸಂಗ್ರಹಿಸಿಕೊಂಡು ಬಂದ ದೇಶವು ಅಲ್ಲಿ ವಾಸಿಸುವವರನ್ನು ನಾಶಪಡಿಸುವ ದೇಶವಾಗಿದೆ. ನಾವು ಅಲ್ಲಿ ನೋಡಿದ ಎಲ್ಲಾ ಜನರು ರಾಕ್ಷಸರಂತಿದ್ದಾರೆ. |
33
|
ಷಸರಾದ ನೆಫೀಲಿಯರು ಅಲ್ಲಿ ವಾಸವಾಗಿರುವುದನ್ನು ನಾವು ನೋಡಿದೆವು. (ಅನಾಕ್ಯರು ನೆಫೀಲಿಯ ಜನರ ಸಂತತಿಯವರಾಗಿದ್ದಾರೆ.) ಅವರ ಮುಂದೆ ನಾವು ಮಿಡತೆಗಳೊ ಎಂದೆನಿಸಿತು. ಅವರಿಗೂ ಸಹ ನಾವು ಮಿಡತೆಗಳಂತೆ ಕಂಡುಬಂದೆವು” ಎಂದರು. |
Numbers 13:1 Kannada Language Bible Words basic statistical display
COMING SOON ...