ಇಸ್ರೇಲರು ಮೋಶೆ ಆರೋನರ ವಿರುದ್ಧ ಗುಣುಗುಟ್ಟಿದರು. ಜನರೆಲ್ಲರೂ ಒಟ್ಟಾಗಿ ಮೋಶೆ ಆರೋನರ ಬಳಿಗೆ ಬಂದು, “ನಾವು ಈಜಿಪ್ಟಿನಲ್ಲಿಯಾಗಲೀ ಅಥವಾ ಈ ಮರುಭೂಮಿಯಲ್ಲಾಗಲಿ ಸತ್ತಿದ್ದರೆ ಒಳ್ಳೆಯದಿತ್ತು.
ಯುದ್ಧದಲ್ಲಿ ನಾವು ಸತ್ತುಹೋಗುವಂತೆ ಯೆಹೋವನು ನಮ್ಮನ್ನು ಈ ಹೊಸ ದೇಶಕ್ಕೆ ತರುತ್ತಿರುವುದೇಕೆ? ವೈರಿಗಳು ನಮ್ಮನ್ನು ಕೊಂದು ನಮ್ಮ ಹೆಂಡತಿಯರನ್ನೂ ಮಕ್ಕಳನ್ನೂ ತೆಗೆದುಕೊಳ್ಳುವರು. ನಾವು ಈಜಿಪ್ಟಿಗೆ ಮರಳಿಹೋಗುವುದೇ ಉತ್ತಮ” ಎಂದು ಹೇಳಿದರು.
ಹೀಗಿರುವುದರಿಂದ ಯೆಹೋವನಿಗೆ ವಿರುದ್ಧವಾಗಿ ಏಳಬೇಡಿರಿ. ಆ ದೇಶದ ಜನರಿಗೆ ಭಯಪಡಬೇಡಿರಿ. ನಾವು ಅವರನ್ನು ಸೋಲಿಸಬಹುದು. ಅವರಿಗೆ ಯಾವ ಸಂರಕ್ಷಣೆ ಇರುವುದಿಲ್ಲ. ಆದರೆ ನಮ್ಮ ಕಡೆ ಯೆಹೋವನು ಇದ್ದಾನೆ. ಆದ್ದರಿಂದ ಭಯಪಡಬೇಡಿರಿ” ಅಂದರು.
ಎಲ್ಲಾ ಜನರು ಯೆಹೋಶುವನನ್ನು ಮತ್ತು ಕಾಲೇಬನನ್ನು ಕಲ್ಲೆಸೆದು ಕೊಲ್ಲಬೇಕೆಂದು ಮಾತಾಡತೊಡಗಿದರು. ಆದರೆ ಯೆಹೋವನ ಮಹಿಮೆ ದೇವದರ್ಶನಗುಡಾರ ಮೇಲೆ ಪ್ರತ್ಯಕ್ಷವಾದದ್ದು ಇಸ್ರೇಲರೆಲ್ಲರಿಗೆ ಕಾಣಿಸಿತು. ಯೆಹೋವನು ಮೋಶೆಯೊಡನೆ ಮಾತಾಡಿ,
“ಈ ಜನರು ಇನ್ನೆಷ್ಟು ಕಾಲದವರೆಗೆ ನನ್ನನ್ನು ತಿರಸ್ಕರಿಸುವರು? ನಾನು ಮಾಡಿದ ಎಲ್ಲಾ ಮಹತ್ಕಾರ್ಯಗಳನ್ನು ಇವರು ಪ್ರತ್ಯಕ್ಷವಾಗಿ ನೋಡಿದಾಗ್ಯೂ ಇನ್ನೆಷ್ಟು ಕಾಲದವರೆಗೆ ನನ್ನನ್ನು ನಂಬದೆ ಇರುವರು?
ಅದಕ್ಕೆ ಮೋಶೆ ಯೆಹೋವನಿಗೆ, “ನೀನು ನಿನ್ನ ಜನರಾದ ಇಸ್ರೇಲರನ್ನು ನಿನ್ನ ಶಕ್ತಿಯ ಮೂಲಕ ಈಜಿಪ್ಟಿನಿಂದ ಕರೆದುಕೊಂಡು ಬಂದೆ. ನೀನು ನಿನ್ನ ಜನರನ್ನು ನಾಶಮಾಡಿದರೆ, ಈಜಿಪ್ಟಿನವರು ಈ ಸುದ್ದಿಯನ್ನು ಕೇಳಿ ಕಾನಾನಿನ ನಿವಾಸಿಗಳಿಗೆ ಅದರ ಬಗ್ಗೆ ತಿಳಿಸುವರು.
ಅದಲ್ಲದೆ, ಈ ದೇಶದವರು ನೀನು ಇಸ್ರೇಲರ ಮಧ್ಯದಲ್ಲಿರುವ ಸಂಗತಿಯನ್ನು ಕೇಳಿದ್ದಾರೆ. ನೀನು ಇಸ್ರೇಲರಿಗೆ ಪ್ರತ್ಯಕ್ಷನಾಗಿ ಕಾಣಿಸಿಕೊಂಡದ್ದು ಅವರಿಗೆ ತಿಳಿದಿದೆ. ನಿನ್ನ ಮೇಘವು ಇಸ್ರೇಲರ ಮೇಲಿರುವುದು ಅವರಿಗೆ ಗೊತ್ತಿದೆ. ನೀನು ಇಸ್ರೇಲರನ್ನು ಹಗಲಲ್ಲಿ ಮೇಘಸ್ತಂಭದ ಮೂಲಕವಾಗಿಯೂ ರಾತ್ರಿಯಲ್ಲಿ ಅಗ್ನಿಸ್ತಂಭದ ಮೂಲಕವಾಗಿಯೂ ಮುನ್ನಡೆಸುತ್ತಿರುವುದು ಅವರಿಗೆ ತಿಳಿದಿದೆ.
ನೀನು ನಿನ್ನ ವಿಷಯದಲ್ಲಿ ‘ಯೆಹೋವನು ದೀರ್ಘಶಾಂತನು, ಬಹುಪ್ರೀತಿಯುಳ್ಳವನು, ಅಪರಾಧ, ಪಾಪಗಳನ್ನು ಕ್ಷಮಿಸುವವನಾಗಿದ್ದರೂ ಎಲ್ಲಾ ದಂಡನೆಯನ್ನು ರದ್ದುಪಡಿಸದವನು, ತಂದೆಗಳ ಪಾಪಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುವವನು’ ಎಂದು ನೀನೇ ಹೇಳಿರುವಿಯಲ್ಲಾ!
ನಾವು ಈಜಿಪ್ಟಿನಿಂದ ಬಂದದ್ದು ಮೊದಲುಗೊಂಡು ಇದುವರೆಗೆ ನೀನು ಈ ಜನರ ಪಾಪಗಳನ್ನು ಕ್ಷಮಿಸಿದ ಪ್ರಕಾರವೇ ಈಗಲೂ ಮಹಾಕೃಪೆಯಿಂದ ಇವರ ಪಾಪವನ್ನು ಕ್ಷಮಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ” ಎಂದು ಪ್ರಾರ್ಥಿಸಿದನು.
ಈಜಿಪ್ಟಿನಲ್ಲಿಯೂ ಮರುಭೂಮಿಯಲ್ಲಿಯೂ ನಾನು ನಡಿಸಿರುವ ಮಹಾತ್ಕಾರ್ಯಗಳನ್ನೂ ನನ್ನ ಮಹಿಮೆಯನ್ನೂ ನೋಡಿದ ಈ ಜನರೆಲ್ಲರೂ ಪದೇಪದೇ ನನ್ನನ್ನು ಪರೀಕ್ಷಿಸಿದ್ದರಿಂದ ಮತ್ತು ನನಗೆ ವಿಧೇಯರಾಗದಿದ್ದ ಕಾರಣ,
ಆದರೆ ನನ್ನ ಸೇವಕನಾದ ಕಾಲೇಬನು ಅವರ ಹಾಗಲ್ಲ, ಅವನು ನನ್ನನ್ನು ಮನಃಪೂರ್ವಕವಾಗಿ ಹಿಂಬಾಲಿಸಿದ್ದಾನೆ. ಆದ್ದರಿಂದ ಅವನು ಸಂಚರಿಸಿ ನೋಡಿದ ದೇಶಕ್ಕೆ ಅವನನ್ನು ಬರಮಾಡುವೆನು ಮತ್ತು ಅವನ ಸಂತತಿಯವರು ಆ ದೇಶವನ್ನು ಹೊಂದುವರು.
(26-27) ಯೆಹೋವನು ಮೋಶೆ ಆರೋನರಿಗೆ, “ಈ ದುಷ್ಟ ಸಮೂಹದವರು ನನಗೆ ವಿರುದ್ಧವಾಗಿ ಇನ್ನೆಷ್ಟರವರೆಗೆ ಗುಣುಗುಟ್ಟುತ್ತಲೇ ಇರುತ್ತಾರೆ. ಇಸ್ರೇಲರು ನನಗೆ ವಿರೋಧವಾಗಿ ಗುಣುಗುಟ್ಟುವುದು ನನಗೆ ಕೇಳಿಸಿದೆ.
ನಿಮ್ಮ ಶವಗಳು ಈ ಮರುಭೂಮಿಯಲ್ಲಿಯೇ ಬೀಳುವವು. ನೀವು ನನಗೆ ವಿರೋಧವಾಗಿ ಗುಣುಗುಟ್ಟಿದ್ದರಿಂದ ನಿಮ್ಮಲ್ಲಿ ಲೆಕ್ಕಿಸಲ್ಪಟ್ಟವರೆಲ್ಲರೂ ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರೆಲ್ಲರೂ ಮರುಭೂಮಿಯಲ್ಲೇ ಸಾಯುವರು.
ನೀವು ಆ ದೇಶವನ್ನು ಸಂಚರಿಸಿ ನೋಡಿದ ನಲವತ್ತು ದಿನಗಳಿಗೆ ಸಮನಾಗಿ, ದಿನ ಒಂದಕ್ಕೆ ಒಂದು ಸಂವತ್ಸರದ ಮೇರೆಗೆ ನಲವತ್ತು ವರ್ಷ ನಿಮ್ಮ ಪಾಪದ ಫಲವನ್ನು ಅನುಭವಿಸುವಿರಿ. ನನ್ನನ್ನು ತಿರಸ್ಕರಿಸುವುದೆಂದರೆ ಏನೆಂಬುದು ನಿಮಗೆ ಗೊತ್ತಾಗುತ್ತದೆ.’
“ಇದು ಯೆಹೋವನೆಂಬ ನಾನು ಹೇಳಿದ ಮಾತು. ನನಗೆ ವಿರೋಧವಾಗಿ ಕೂಡಿಕೊಂಡಿರುವ ಈ ದುಷ್ಟ ಸಮೂಹದವರೆಲ್ಲರಿಗೆ ಈ ಮಾತಿನ ಮೇರೆಗೆ ಖಂಡಿತವಾಗಿ ಮಾಡುತ್ತೇನೆ. ಈ ಮರುಭೂಮಿಯಲ್ಲಿಯೇ ಇವರೆಲ್ಲರೂ ಸಾಯಬೇಕು” ಎಂದು ಹೇಳಿದನು.
(36-37) ಆ ದೇಶವನ್ನು ಸಂಚರಿಸಿ ನೋಡುವುದಕ್ಕೆ ಮೋಶೆಯಿಂದ ಕಳುಹಿಸಲ್ಪಟ್ಟು ಹಿಂದಿರುಗಿಬಂದು ಆ ದೇಶದ ವಿಷಯದಲ್ಲಿ ಅಶುಭಸಮಾಚಾರವನ್ನು ಹೇಳಿ ಸರ್ವಸಮೂಹದರವರನ್ನು ಅವರಿಗೆ ವಿರೋಧವಾಗಿ ಗುಣುಗುಟ್ಟುವಂತೆ ಮಾಡಿದ ಹತ್ತು ಜನರು ಯೆಹೋವನಿಂದ ವ್ಯಾಧಿಗೊಳಗಾಗಿ ಸತ್ತರು.
ಅಮಾಲೇಕ್ಯರೂ ಕಾನಾನ್ಯರೂ ನಿಮ್ಮನ್ನು ಎದುರಿಸಲು ಅಲ್ಲಿರುವುದರಿಂದ ನೀವು ಅವರ ಖಡ್ಗದಿಂದ ಸಾಯುವಿರಿ. ನೀವು ಯೆಹೋವನಿಗೆ ವಿರೋಧವಾಗಿ ದಂಗೆಯೆದ್ದ ಕಾರಣ ಆತನು ನಿಮ್ಮೊಂದಿಗೆ ಇರುವುದಿಲ್ಲ” ಎಂದು ಹೇಳಿದನು.