1
|
ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: |
2
|
“ಇಸ್ರೇಲರಿಗೆ ಹೀಗೆ ಆಜ್ಞಾಪಿಸಬೇಕು: ನಾನು ನಿಮ್ಮ ನಿವಾಸಕ್ಕಾಗಿ ಒಂದು ದೇಶವನ್ನು ಕೊಡುತ್ತಿದ್ದೇನೆ. ನೀವು ಆ ದೇಶಕ್ಕೆ ಸೇರಿದ ನಂತರ |
3
|
ನೀವು ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವುದಕ್ಕಾಗಿ ನಿಮ್ಮ ಮಂದೆಯಿಂದಾಗಲಿ ಹಿಂಡಿನಿಂದಾಗಲಿ ಅಗ್ನಿಯ ಮೂಲಕ ಯಜ್ಞವನ್ನರ್ಪಿಸುವವನು ಸರ್ವಾಂಗಹೋಮ ಮಾಡಿದರೂ ಅಥವಾ ಸಮಾಧಾನ ಯಜ್ಞಮಾಡಿದರೂ ಹರಕೆಯ ಯಜ್ಞಮಾಡಿದರೂ ಅಥವಾ ಸ್ವಇಚ್ಛೆಯಿಂದ ಯಜ್ಞಮಾಡಿದರೂ ನಿಯಮಿತ ಹಬ್ಬಗಳಲ್ಲಿ ಯಜ್ಞಮಾಡಿದರೂ |
4
|
ಅದರೊಂದಿಗೆ ಧಾನ್ಯನೈವೇದ್ಯಕ್ಕಾಗಿ ಒಂದೂವರೆ ಸೇರು ಎಣ್ಣೆ ಬೆರಸಿದ ಮೂರು ಸೇರು ಗೋಧಿಯ ಹಿಟ್ಟನ್ನೂ |
5
|
ಪಾನದ್ರವ್ಯಕ್ಕಾಗಿ ಒಂದೂವರೆ ಸೇರು ದ್ರಾಕ್ಷಾರಸವನ್ನೂ ತರಬೇಕು. ನೀವು ಸರ್ವಾಂಗಹೋಮವಾಗಿ ಇಲ್ಲವೆ ಸಮಾಧಾನ ಯಜ್ಞವಾಗಿ ಸಮರ್ಪಿಸುವ ಒಂದೊಂದು ಕುರಿಯೊಂದಿಗೆ ಇದನ್ನೂ ಸಮರ್ಪಿಸಬೇಕು. |
6
|
“ನೀವು ಟಗರನ್ನು ಸಮರ್ಪಿಸುವುದಾದರೆ, ಧಾನ್ಯನೈವೇದ್ಯಕ್ಕಾಗಿ ಎರಡು ಸೇರು ಎಣ್ಣೆ ಬೆರಸಿದ ಆರು ಸೇರು ಒಳ್ಳೆಯ ಗೋಧಿಯ ಹಿಟ್ಟನ್ನೂ |
7
|
ಪಾನದ್ರವ್ಯಕ್ಕಾಗಿ ಎರಡು ಸೇರು ದ್ರಾಕ್ಷಾರಸವನ್ನೂ ಸಮರ್ಪಿಸಬೇಕು. ಅದು ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವ ಯಜ್ಞವಾಗಿರುತ್ತದೆ. |
8
|
“ನಿಮ್ಮಲ್ಲಿ ಎಳೆಹೋರಿಯನ್ನು ಯೆಹೋವನಿಗೆ ಸರ್ವಾಂಗಹೋಮವನ್ನಾಗಲಿ ಹರಕೆಯ ಯಜ್ಞವನ್ನಾಗಲಿ ಸಮಾಧಾನ ಯಜ್ಞವನ್ನಾಗಲಿ ಅರ್ಪಿಸುವವನು |
9
|
ಅದರೊಂದಿಗೆ ಧಾನ್ಯನೈವೇದ್ಯಕ್ಕಾಗಿ ಮೂರು ಸೇರು ಎಣ್ಣೆ ಬೆರಸಿದ ಒಂಭತ್ತು ಸೇರು ಗೋಧಿಯ ಹಿಟ್ಟನ್ನೂ |
10
|
ಪಾನದ್ರವ್ಯಕ್ಕಾಗಿ ಮೂರು ಸೇರು ದ್ರಾಕ್ಷಾರಸವನ್ನೂ ತಂದು ಸಮರ್ಪಿಸಬೇಕು. ಇದು ಅಗ್ನಿಯ ಮೂಲಕ ಸಮರ್ಪಿಸುವ ಯಜ್ಞವಾಗಿದೆ. ಇದರ ಸುವಾಸನೆಯು ಯೆಹೋವನಿಗೆ ಮೆಚ್ಚಿಕೆಯನ್ನು ಉಂಟುಮಾಡುತ್ತದೆ. |
11
|
ಕುರಿ, ಆಡು, ಟಗರು, ಹೋರಿ ಇವುಗಳಲ್ಲಿ ಯಾವುದನ್ನು ಅರ್ಪಿಸಿದರೂ ಇದನ್ನು ಮಾಡಲೇಬೇಕು. |
12
|
ನೀವು ಸಮರ್ಪಿಸುವ ಪಶುಗಳ ಲೆಕ್ಕದ ಪ್ರಕಾರವೇ ಒಂದೊಂದು ಪಶುವಿನ ಸಂಗಡ ಈ ರೀತಿಯಾಗಿ ಮಾಡಬೇಕು. |
13
|
“ಇಸ್ರೇಲಿನ ಪ್ರತಿಯೊಬ್ಬ ಸ್ವದೇಶಿಯೂ ಯೆಹೋವನಿಗೆ ಸುಗಂಧಹೋಮವನ್ನು ಸಮರ್ಪಿಸುವಾಗ ಈ ರೀತಿಯಾಗಿ ಮಾಡಬೇಕು. |
14
|
ನಿಮ್ಮ ಮಧ್ಯದಲ್ಲಿ ವಾಸಿಸುವ ವಿದೇಶಿಯರಲ್ಲಿ ಯಾವನೇ ಆಗಲಿ, ಯೆಹೋವನಿಗೆ ಸುಗಂಧಹೋಮ ಮಾಡಬೇಕಾದರೆ ನಿಮ್ಮಂತೆಯೇ ಅವನು ಮಾಡಬೇಕು. |
15
|
ನಿಮಗೂ ನಿಮ್ಮಲ್ಲಿರುವ ಪರದೇಶದವರಿಗೂ ಒಂದೇ ವಿಧಿಯಿರಬೇಕು. ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತ ನಿಯಮ. ಯೆಹೋವನ ಸನ್ನಿಧಿಯಲ್ಲಿ ನೀವೂ ಪರದೇಶಿಯರೂ ಒಂದೇ ಆಗಿದ್ದೀರಿ. |
16
|
ನಿಮಗೂ ನಿಮ್ಮ ಬಳಿಯಲ್ಲಿ ವಾಸಿಸುವ ಪರದೇಶದವನಿಗೂ ಒಂದೇ ವಿಧವಾದ ಪ್ರಮಾಣ ವಿಧಿಗಳಿರಬೇಕು.” |
17
|
ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: |
18
|
“ಇಸ್ರೇಲರಿಗೆ ಈ ಸಂಗತಿಗಳನ್ನು ತಿಳಿಸು: ನಾನು ನಿಮ್ಮನ್ನು ಇನ್ನೊಂದು ದೇಶಕ್ಕೆ ಕರೆದುಕೊಂಡು ಹೋಗುತ್ತಿದ್ದೇನೆ. |
19
|
ನೀವು ಆ ದೇಶದ ಭೂಮಿಯ ಬೆಳೆಯನ್ನು ಅನುಭೋಗಿಸುವಾಗ, ಸ್ವಲ್ಪವನ್ನು ಯೆಹೋವನಿಗೋಸ್ಕರ ಪ್ರತ್ಯೇಕಿಸಬೇಕು. |
20
|
ನೀವು ಕಣದಲ್ಲಿರುವ ಗೋಧಿಯಲ್ಲಿ ಪ್ರಥಮಫಲವನ್ನು ಯೆಹೋವನಿಗೆ ಕಾಣಿಕೆಯಾಗಿ ಕೊಡುವಂತೆಯೇ ನೀವು ಪ್ರಥಮವಾಗಿ ನಾದಿದ ಹಿಟ್ಟಿನಿಂದ ಒಂದು ರೊಟ್ಟಿಯನ್ನು ಯೆಹೋವನಿಗೆ ಕಾಣಿಕೆಯಾಗಿ ಕೊಡಬೇಕು. |
21
|
ನೀವೂ ನಿಮ್ಮ ಸಂತತಿಯವರೂ ಕಣಕದಿಂದ ಮಾಡುವ ಮೊದಲನೆಯ ರೊಟ್ಟಿಯನ್ನು ಯೆಹೋವನಿಗೋಸ್ಕರ ಪ್ರತ್ಯೇಕಿಸಬೇಕು. |
22
|
[This verse may not be a part of this translation] |
23
|
[This verse may not be a part of this translation] |
24
|
ನಿರುದ್ದೇಶದಿಂದ ಮತ್ತು ಸಮುದಾಯಕ್ಕೆ ತಿಳಿಯದಂತೆ ಇದನ್ನು ಮಾಡಿದ್ದಾಗಿದ್ದರೆ, ಯೆಹೋವನಿಗೆ ಸುಗಂಧ ವಾಸನೆಯನ್ನು ಉಂಟುಮಾಡುವುದಕ್ಕಾಗಿ ಒಂದು ಎಳೆಹೋರಿಯನ್ನು ಸರ್ವಾಂಗಹೋಮವಾಗಿ ಅರ್ಪಿಸಬೇಕು ಮತ್ತು ಅದರೊಡನೆ ಧಾನ್ಯಾರ್ಪಣೆಯನ್ನೂ ಪಾನಾರ್ಪಣೆಯನ್ನೂ ಪಾಪಪರಿಹಾರಕ ಯಜ್ಞವಾಗಿ ಒಂದು ಹೋತವನ್ನೂ ಅರ್ಪಿಸಬೇಕು. |
25
|
“ಈ ರೀತಿಯಲ್ಲಿ ಇಸ್ರೇಲರ ಇಡೀ ಸಮುದಾಯದವರ ಕ್ಷಮೆಗಾಗಿ ಯಾಜಕನು ಪ್ರಾಯಶ್ಚಿತ್ತ ಮಾಡುವನು. ಯಾಕೆಂದರೆ ಅದು ತಿಳಿಯದೆ ಮಾಡಿದ ತಪ್ಪಾಗಿತ್ತು ಮತ್ತು ಆ ತಪ್ಪಿಗಾಗಿ ಅವರು ತಮ್ಮ ಅರ್ಪಣೆಯನ್ನು ಯೆಹೋವನಿಗೆ ಕಾಣಿಕೆಯಾಗಿ ತಂದರು ಮತ್ತು ಯೆಹೋವನ ಎದುರಿನಲ್ಲಿ ಪಾಪಪರಿಹಾರಕ ಯಜ್ಞವನ್ನು ಅರ್ಪಿಸಿದರು. |
26
|
ಆದ್ದರಿಂದ ಇಡೀ ಇಸ್ರೇಲ್ ಸಮುದಾಯದವರಿಗೆ ಕ್ಷಮಾಪಣೆಯಾಗುವುದು ಮತ್ತು ಅವರ ಮಧ್ಯದಲ್ಲಿ ವಾಸಿಸುವ ಪರದೇಶಸ್ಥರಿಗೂ ಕ್ಷಮಾಪಣೆಯಾಗುವುದು; ಯಾಕೆಂದರೆ ಜನರೆಲ್ಲರೂ ನಿರುದ್ದೇಶದಿಂದ ಮಾಡಿದ ಆ ತಪ್ಪಿನಲ್ಲಿ ಸಿಕ್ಕಿಕೊಂಡಿದ್ದರು. |
27
|
“ಆದರೆ ಒಬ್ಬನು ತಿಳಿಯದೆ ಪಾಪಮಾಡಿದರೆ, ಅವನು ಒಂದು ವರುಷದ ಹೆಣ್ಣು ಆಡನ್ನು ದೋಷ ಪರಿಹಾರಕ ಯಜ್ಞವಾಗಿ ಅರ್ಪಿಸಬೇಕು. |
28
|
ಆಗ ಯಾಜಕನು ನಿರುದ್ದೇಶದಿಂದ ತಪ್ಪುಮಾಡಿದವನ ಕ್ಷಮಾಪಣೆಗಾಗಿ ಯೆಹೋವನ ಸನ್ನಿಧಿಯಲ್ಲಿ ಪ್ರಾಯಶ್ಚಿತ್ತ ಮಾಡುವನು. |
29
|
ನಿರುದ್ದೇಶದಿಂದ ತಪ್ಪುಮಾಡಿದ ಪ್ರತಿಯೊಬ್ಬರಿಗೂ ಈ ನಿಯಮ ಅನ್ವಯಿಸುತ್ತದೆ. ಈ ವಿಷಯದಲ್ಲಿ ಇಸ್ರೇಲರಲ್ಲಿರುವ ಸ್ವದೇಶದವರಿಗೂ ಪರದೇಶದವರಿಗೂ ಒಂದೇ ವಿಧಿಯಿರಬೇಕು. |
30
|
“ಆದರೆ ಉದ್ದೇಶಪೂರ್ವಕವಾಗಿ ಪಾಪಮಾಡುವವನು ಯೆಹೋವನಿಗೆ ಅವಮಾನ ಮಾಡುವವನಾಗಿದ್ದಾನೆ. ಅವನನ್ನು ಕುಲದಿಂದ ಬಹಿಷ್ಕರಿಸಬೇಕು. ಈ ನಿಯಮವು ಇಸ್ರೇಲರಲ್ಲಿ ಹುಟ್ಟಿದ ಪ್ರತಿಯೊಬ್ಬನಿಗೂ ಹಾಗೂ ಪರದೇಶಸ್ಥರಿಗೂ ಅನ್ವಯಿಸುವುದು. |
31
|
ಆ ಮನುಷ್ಯನು ಯೆಹೋವನ ಮಾತನ್ನು ತಾತ್ಸಾರಮಾಡಿ ಆತನ ಆಜ್ಞೆಯನ್ನು ಮೀರಿದ್ದರಿಂದ ಕುಲದಿಂದ ತೆಗೆದುಹಾಕಲ್ಪಡಲೇಬೇಕು. ಅವನು ತನ್ನ ಪಾಪದ ಫಲವನ್ನು ಅನುಭವಿಸಲಿ.” |
32
|
ಇಸ್ರೇಲರು ಮರುಭೂಮಿಯಲ್ಲಿ ಇನ್ನೂ ಇದ್ದಾಗ ಒಬ್ಬನು ಸಬ್ಬತ್ದಿನದಲ್ಲಿ ಕಟ್ಟಿಗೆ ಕೂಡಿಸುವುದನ್ನು ಜನರು ಕಂಡರು. |
33
|
ಕಂಡವರು ಅವನನ್ನು ಮೋಶೆ ಆರೋನರ ಮತ್ತು ಸರ್ವಸಮೂಹದವರ ಬಳಿಗೆ ಹಿಡುಕೊಂಡು ಬಂದರು. |
34
|
ಅವನನ್ನು ಶಿಕ್ಷಿಸಬೇಕಾದ ವಿಧಿಯನ್ನು ಅವರು ತಿಳಿಯದೆ ಇದ್ದುದರಿಂದ ಅವನನ್ನು ಕಾವಲಲ್ಲಿಟ್ಟರು. |
35
|
ಆಗ ಯೆಹೋವನು ಮೋಶೆಗೆ, “ಆ ಮನುಷ್ಯನು ಸಾಯಬೇಕು. ಅವನನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ ಎಲ್ಲಾ ಜನರು ಕಲ್ಲೆಸೆದು ಕೊಲ್ಲಬೇಕು” ಎಂದು ಹೇಳಿದನು. |
36
|
ಆಗ ಜನರು ಅವನನ್ನು ಪಾಳೆಯದ ಹೊರಗೆ ಕರೆದುಕೊಂಡು ಹೋಗಿ ಕಲ್ಲೆಸೆದು ಕೊಂದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಅವರು ಇದನ್ನು ಮಾಡಿದರು. |
37
|
ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: |
38
|
“ಇಸ್ರೇಲರಿಗೆ ಈ ಸಂಗತಿಗಳನ್ನು ತಿಳಿಸು: ನನ್ನ ಅಪ್ಪಣೆಗಳನ್ನು ಜ್ಞಾಪಕಮಾಡುವುದಕ್ಕೆ ನಿಮಗೆ ಒಂದು ಗುರುತನ್ನು ಕೊಡುತ್ತೇನೆ. ನಿಮ್ಮ ಬಟ್ಟೆಗಳ ಮೂಲೆಯಲ್ಲಿ ಗೊಂಡೆಗಳನ್ನು ಕಟ್ಟಿಕೊಳ್ಳಬೇಕು. ಪ್ರತಿಯೊಂದು ಗೊಂಡೆಯೂ ಒಂದೊಂದು ನೀಲಿದಾರದಿಂದ ಕೂಡಿರಬೇಕು. ನೀವು ಇವುಗಳನ್ನು ಇಂದಿನಿಂದ ಯಾವಾಗಲೂ ಧರಿಸಿಕೊಳ್ಳಬೇಕು. |
39
|
ಈ ಗೊಂಡೆಗಳನ್ನು ನೀವು ನೋಡುವಾಗ, ಯೆಹೋವನು ನಿಮಗೆ ಕೊಟ್ಟ ಅಪ್ಪಣೆಗಳನ್ನೆಲ್ಲ ಜ್ಞಾಪಕಮಾಡಿಕೊಳ್ಳಬೇಕು ಮತ್ತು ಅವುಗಳಿಗೆ ವಿಧೇಯರಾಗಬೇಕು. ನೀವು ನಿಮ್ಮ ಮನಸ್ಸಿಗೆ ಮತ್ತು ಕಣ್ಣಿಗೆ ತೋರಿದ ಪ್ರಕಾರ ನಡೆಯದೆ ನಂಬಿಗಸ್ತರಾಗಿರಬೇಕು. |
40
|
ನೀವು ನನ್ನ ಎಲ್ಲಾ ಆಜ್ಞೆಗಳನ್ನು ಜ್ಞಾಪಿಸಿಕೊಂಡು ವಿಧೇಯರಾಗಿರಬೇಕು. ಆಗ ನೀವು ನಿಮ್ಮ ದೇವರ ವಿಶೇಷವಾದ ಜನರಾಗಿರುವಿರಿ. |
41
|
“ನಿಮ್ಮ ದೇವರಾಗಿರುವುದಕ್ಕೆ ನಿಮ್ಮನ್ನು ಈಜಿಪ್ಟಿನಿಂದ ಹೊರಗೆ ಕರೆತಂದ ನಿಮ್ಮ ದೇವರಾದ ಯೆಹೋವನು ನಾನೇ.” |
Numbers 15:8 Kannada Language Bible Words basic statistical display
COMING SOON ...