“ಇಸ್ರೇಲರ ಸಂಗಡ ಮಾತಾಡಿ ಹೀಗೆ ಮಾಡಬೇಕು: ಅವರ ಕುಲಗಳ ಪ್ರತಿಯೊಬ್ಬ ಪ್ರಧಾನನಿಂದ ಒಂದೊಂದು ಕೋಲಿನ ಮೇರೆಗೆ ಹನ್ನೆರಡು ಕೋಲುಗಳನ್ನು ತೆಗೆದುಕೊಳ್ಳಬೇಕು. ಅವನವನ ಕೋಲಿನ ಮೇಲೆ ಆಯಾ ಕುಲಪ್ರಧಾನನ ಹೆಸರನ್ನು ಬರೆಯಿಸಬೇಕು.
ಅದಕ್ಕನುಸಾರವಾಗಿ ಮೋಶೆಯು ಇಸ್ರೇಲರ ಸಂಗಡ ಮಾತಾಡಲಾಗಿ ಅವರ ಕುಲಪ್ರಧಾನರೆಲ್ಲ ಅವನಿಗೆ, ಒಬ್ಬ ಕುಲಪ್ರಧಾನನಿಗೆ ಒಂದು ಕೋಲಿನಂತೆ, ಹನ್ನೆರಡು ಕೋಲುಗಳನ್ನು ಕೊಟ್ಟರು. ಅವುಗಳೊಡನೆ ಆರೋನನ ಕೋಲೂ ಇತ್ತು.
ಮೋಶೆ ಎಲ್ಲಾ ಕೋಲುಗಳನ್ನು ಯೆಹೋವನ ಸನ್ನಿಧಿಯಿಂದ ಹೊರಗೆ ತೆಗೆದುಕೊಂಡು ಬಂದು ಅವುಗಳನ್ನೆಲ್ಲಾ ಇಸ್ರೇಲರಿಗೆ ತೋರಿಸಿದನು. ಪ್ರಧಾನರು ಆ ಕೋಲುಗಳನ್ನು ನೋಡಿ, ತಮ್ಮತಮ್ಮ ಕೋಲುಗಳನ್ನು ತೆಗೆದುಕೊಂಡರು.
ತರುವಾಯ ಯೆಹೋವನು ಮೋಶೆಗೆ, “ಆರೋನನ ಕೋಲನ್ನು ಮತ್ತೆ ಒಡಂಬಡಿಕೆಯ ಪೆಟ್ಟಿಗೆಯ ಮುಂದಿಡು. ದಂಗೆಕೋರರಿಗೆ ಅದು ಎಚ್ಚರಿಕೆಯಾಗಿ ಅಲ್ಲೇ ಇರಬೇಕು, ಇವರು ಇನ್ನು ಮುಂದೆ ನನಗೆ ವಿರೋಧವಾಗಿ ಗುಣುಗುಟ್ಟಿ, ಮರಣಕ್ಕೆ ಗುರಿಯಾಗದಂತೆ ನೀನು ಹೀಗೆ ಮಾಡಬೇಕು” ಎಂದು ಆಜ್ಞಾಪಿಸಿದನು.