1
|
“ಏಳನೆಯ ತಿಂಗಳಿನ ಮೊದಲನೆ ದಿನದಲ್ಲಿ ವಿಶೇಷ ಸಭೆ ಸೇರಬೇಕು. ಆ ದಿನದಲ್ಲಿ ನೀವು ಯಾವ ಪ್ರಯಾಸದ ಕೆಲಸವನ್ನೂ ಮಾಡಬಾರದು. ಅದು ತುತ್ತೂರಿಗಳ ಧ್ವನಿಯಿಂದ ಪ್ರಕಟವಾಗುವ ದಿನವಾಗಿದೆ. |
2
|
ಅದರಲ್ಲಿ ನೀವು ಯೆಹೋವನಿಗೆ ಸುಗಂಧಕರವಾದ ಸರ್ವಾಂಗಹೋಮಕ್ಕಾಗಿ ಒಂದು ಹೋರಿಯನ್ನೂ ಒಂದು ಟಗರನ್ನೂ ಒಂದು ವರುಷದ ಏಳು ಕುರಿಮರಿಗಳನ್ನೂ ಸಮರ್ಪಿಸಬೇಕು. ಇವುಗಳೆಲ್ಲ ಪೂರ್ಣಾಂಗವಾದವುಗಳಾಗಿರಬೇಕು. |
3
|
ಇವುಗಳೊಡನೆ ಧಾನ್ಯ ಸಮರ್ಪಣೆಗಾಗಿ ಹೋರಿಗೆ ಒಂಭತ್ತು ಸೇರು, ಟಗರಿಗೆ ಆರು ಸೇರು ಮತ್ತು |
4
|
ಪ್ರತಿಯೊಂದು ಕುರಿಮರಿಗೆ ಮೂರು ಸೇರು, ಈ ಮೇರೆಗೆ ಎಣ್ಣೆ ಬೆರೆಸಿದ ಗೋಧಿಹಿಟ್ಟನ್ನು ಸಮರ್ಪಿಸಬೇಕು. |
5
|
ಪಾಪಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನು ಅರ್ಪಿಸಬೇಕು. |
6
|
ಅಮಾವಾಸ್ಯೆಯಲ್ಲಿ ಅರ್ಪಿಸುವ ಸರ್ವಾಂಗಹೋಮ ಮತ್ತು ಅದರೊಡನೆ ಅರ್ಪಿಸುವ ಧಾನ್ಯಾರ್ಪಣೆ ಮತ್ತು ಕ್ರಮವಾಗಿ ಪ್ರತಿನಿತ್ಯ ಅರ್ಪಿಸುವ ಸರ್ವಾಂಗಹೋಮ ಮತ್ತು ಅದರೊಡನೆ ಅರ್ಪಿಸುವ ಧಾನ್ಯಾರ್ಪಣೆ ಮತ್ತು ಪಾನದ್ರವ್ಯಾರ್ಪಣೆ ಇವುಗಳಲ್ಲದೆ ಈ ಅರ್ಪಣೆಗಳನ್ನು ಅರ್ಪಿಸಬೇಕು. ಇವುಗಳನ್ನು ನಿಯಮಗಳ ಪ್ರಕಾರವಾಗಿ ಮಾಡಬೇಕು. ಅವು ಯೆಹೋವನಿಗೆ ಸುಗಂಧ ವಾಸನೆಯಾಗಿಯೂ ತ್ಯಾಗಮಯವಾದ ಕಾಣಿಕೆಯಾಗಿಯೂ ಇವೆ. |
7
|
“ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ವಿಶೇಷ ಸಭೆ ಸೇರಬೇಕು. ಆ ದಿನದಲ್ಲಿ ನೀವು ಉಪವಾಸ ಮಾಡಬೇಕು; ಯಾವ ಕೆಲಸವನ್ನೂ ಮಾಡಬಾರದು. |
8
|
ನೀವು ಯೆಹೋವನಿಗೆ ಸುಗಂಧಕರವಾಗಿರುವ ಸರ್ವಾಂಗಹೋಮವನ್ನಾಗಿ ಒಂದು ಹೋರಿಯನ್ನೂ ಒಂದು ಟಗರನ್ನೂ ಒಂದು ವರ್ಷದ ಏಳು ಗಂಡು ಕುರಿಮರಿಗಳನ್ನೂ ಅರ್ಪಿಸಬೇಕು. ಇವು ಪೂರ್ಣಾಂಗವಾದವುಗಳಾಗಿರಬೇಕು. |
9
|
ಇವುಗಳೊಡನೆ, ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರೆಸಿದ ಗೋಧಿಹಿಟ್ಟನ್ನು ಒಂದು ಹೋರಿಗೆ ಒಂಭತ್ತು ಸೇರು, ಟಗರಿಗೆ ಆರು ಸೇರು |
10
|
ಮತ್ತು ಒಂದು ಕುರಿಮರಿಗೆ ಮೂರು ಸೇರು ಸಮರ್ಪಿಸಬೇಕು. |
11
|
ಪಾಪಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು. ದೋಷಪರಿಹಾರಕ ದಿನಕ್ಕೋಸ್ಕರ ಅರ್ಪಿಸುವ ಪಾಪಪರಿಹಾರಕ ಯಜ್ಞ, ಕ್ರಮವಾಗಿ ಪ್ರತಿನಿತ್ಯ ಅರ್ಪಿಸುವ ಸರ್ವಾಂಗಹೋಮ ಮತ್ತು ಅದರ ಧಾನ್ಯಾರ್ಪಣೆ ಮತ್ತು ಇವುಗಳೊಡನೆ ಅರ್ಪಿಸುವ ದ್ರವ್ಯಾರ್ಪಣೆ ಇವುಗಳಲ್ಲದೆ ಮೇಲೆ ಹೇಳಿದವುಗಳನ್ನೂ ಅರ್ಪಿಸಬೇಕು. ಇವು ಯೆಹೋವನಿಗೆ ಸುಗಂಧಕರವಾಗಿವೆ. |
12
|
“ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ವಿಶೇಷ ಸಭೆ ಸೇರಬೇಕು. ಇದು ಪರ್ಣಶಾಲೆಗಳ ಹಬ್ಬವಾಗಿದೆ. ಆ ದಿವಸ ನೀವು ಯಾವ ಪ್ರಯಾಸದ ಕೆಲಸವನ್ನೂ ಮಾಡಬಾರದು. ಯೆಹೋವನಿಗೆ ಗೌರವಾರ್ಥವಾಗಿ “ಪರ್ಣಶಾಲೆಗಳ ಹಬ್ಬ” ವನ್ನು ನೀವು ಏಳು ದಿನಗಳವರೆಗೆ ಆಚರಿಸಬೇಕು. |
13
|
ನೀವು ಯೆಹೋವನಿಗೆ ಸರ್ವಾಂಗಹೋಮಗಳನ್ನು ಅರ್ಪಿಸಬೇಕು. ಅದರ ಸುವಾಸನೆಯು ಯೆಹೋವನಿಗೆ ಮೆಚ್ಚಿಗೆಕರವಾಗಿದೆ. ಸರ್ವಾಂಗಹೋಮವಾಗಿ ಹದಿಮೂರು ಹೋರಿಗಳನ್ನು, ಎರಡು ಟಗರುಗಳನ್ನು ಮತ್ತು ಒಂದು ವರ್ಷದ ಹದಿನಾಲ್ಕು ಗಂಡು ಕುರಿಮರಿಗಳನ್ನು ಅರ್ಪಿಸಬೇಕು. |
14
|
ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರೆಸಿದ ಗೋಧಿಹಿಟ್ಟನ್ನು ಅರ್ಪಿಸಬೇಕು. ಅಂದರೆ ಪ್ರತಿಯೊಂದು ಹೋರಿಗೆ ಒಂಭತ್ತು ಸೇರು, ಟಗರಿಗೆ ಆರು ಸೇರು |
15
|
ಮತ್ತು ಒಂದು ಕುರಿಮರಿಗೆ ಮೂರು ಸೇರು ಸಮರ್ಪಿಸಬೇಕು. |
16
|
ಕ್ರಮವಾಗಿ ಪ್ರತಿನಿತ್ಯ ಅರ್ಪಿಸುವ ಸರ್ವಾಂಗಹೋಮ ಮತ್ತು ಅದರೊಡನೆ ಅರ್ಪಿಸುವ ಧಾನ್ಯಾರ್ಪಣೆ ಮತ್ತು ಪಾನದ್ರವ್ಯಾರ್ಪಣೆಗಳಲ್ಲದೆ ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು. |
17
|
“ಆ ಉತ್ಸವದ ಎರಡನೆಯ ದಿನದಲ್ಲಿ ನೀವು ಹನ್ನೆರಡು ಹೋರಿಗಳನ್ನು, ಎರಡು ಟಗರುಗಳನ್ನು ಮತ್ತು ಒಂದು ವರ್ಷದ ಹದಿನಾಲ್ಕು ಗಂಡು ಕುರಿಮರಿಗಳನ್ನು ಅರ್ಪಿಸಬೇಕು. ಇವುಗಳೆಲ್ಲ ಪೂರ್ಣಾಂಗವಾದವುಗಳಾಗಿರಬೇಕು. |
18
|
ಅಲ್ಲದೆ ಈ ಪಶುಗಳಲ್ಲಿ ಪ್ರತಿಯೊಂದಕ್ಕೂ ನೇಮಕಗೊಂಡ ಧಾನ್ಯಾರ್ಪಣೆಯನ್ನು ಮತ್ತು ಪಾನದ್ರವ್ಯಾರ್ಪಣೆಯನ್ನು ಸರಿಯಾದ ಪ್ರಮಾಣದಲ್ಲಿ ಅರ್ಪಿಸಬೇಕು. |
19
|
ಪಾಪಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು. ಕ್ರಮವಾಗಿ ಪ್ರತಿನಿತ್ಯ ಅರ್ಪಿಸುವ ಸರ್ವಾಂಗಹೋಮ ಮತ್ತು ಅದರೊಡನೆ ಅರ್ಪಿಸುವ ಧಾನ್ಯಾರ್ಪಣೆ ಮತ್ತು ಪಾನದ್ರವ್ಯಾರ್ಪಣೆಗಳಲ್ಲದೆ ಮೇಲೆ ಹೇಳಿದವುಗಳನ್ನೂ ಅರ್ಪಿಸಬೇಕು. |
20
|
“ಈ ಉತ್ಸವದ ಮೂರನೆಯ ದಿನದಲ್ಲಿ ನೀವು ಹನ್ನೊಂದು ಹೋರಿಗಳನ್ನು, ಎರಡು ಟಗರುಗಳನ್ನು ಮತ್ತು ಒಂದು ವರ್ಷದ ಹದಿನಾಲ್ಕು ಗಂಡು ಕುರಿಮರಿಗಳನ್ನು ಅರ್ಪಿಸಬೇಕು. ಇವುಗಳು ಪೂರ್ಣಾಂಗವಾದವುಗಳಾಗಿರಬೇಕು. |
21
|
ಈ ಪಶುಗಳಲ್ಲಿ ಪ್ರತಿಯೊಂದಕ್ಕೂ ನೇಮಕವಾಗಿರುವ ಧಾನ್ಯಾರ್ಪಣೆಯನ್ನು ಮತ್ತು ಪಾನದ್ರವ್ಯಾರ್ಪಣೆಯನ್ನು ಸರಿಯಾದ ಪ್ರಮಾಣದಲ್ಲಿ ಅರ್ಪಿಸಬೇಕು. |
22
|
ದೋಷಪರಿಹಾರಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು. ಕ್ರಮಾನುಸಾರವಾದ ದೈನಂದಿನ ಸರ್ವಾಂಗಹೋಮ ಮತ್ತು ಅದರೊಡನೆ ಅರ್ಪಿಸುವ ಧಾನ್ಯಾರ್ಪಣೆ ಮತ್ತು ಪಾನದ್ರವ್ಯಾರ್ಪಣೆಗಳಲ್ಲದೆ ಮೇಲ್ಕಂಡವುಗಳನ್ನು ಅರ್ಪಿಸಬೇಕು. |
23
|
ಈ ಉತ್ಸವದ ನಾಲ್ಕನೆಯ ದಿನದಲ್ಲಿ ನೀವು ಹತ್ತು ಹೋರಿಗಳನ್ನು, ಎರಡು ಟಗರುಗಳನ್ನು ಮತ್ತು ಒಂದು ವರ್ಷದ ಹದಿನಾಲ್ಕು ಗಂಡು ಕುರಿಮರಿಗಳನ್ನು ಅರ್ಪಿಸಬೇಕು. ಇವು ಪೂರ್ಣಾಂಗವುಳ್ಳವುಗಳಾಗಿರಬೇಕು. |
24
|
ಈ ಪಶುಗಳಲ್ಲಿ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯಾರ್ಪಣೆಯನ್ನು ಮತ್ತು ಪಾನದ್ರವ್ಯಾರ್ಪಣೆಯನ್ನು ಸರಿಯಾದ ಪ್ರಮಾಣದಲ್ಲಿ ಅರ್ಪಿಸಬೇಕು. |
25
|
ಪಾಪಪರಿಹಾರಕಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು. ಕ್ರಮವಾಗಿ ಪ್ರತಿನಿತ್ಯ ಅರ್ಪಿಸುವ ಸರ್ವಾಂಗಹೋಮ ಮತ್ತು ಅದರೊಡನೆ ಅರ್ಪಿಸುವ ಧಾನ್ಯಾರ್ಪಣೆ ಮತ್ತು ಪಾನದ್ರವ್ಯಾರ್ಪಣೆಗಳಲ್ಲದೆ ಮೇಲೆ ಹೇಳಿದವುಗಳನ್ನೂ ಅರ್ಪಿಸಬೇಕು. |
26
|
“ಈ ಉತ್ಸವದ ಐದನೆಯ ದಿನದಲ್ಲಿ ನೀವು ಒಂಭತ್ತು ಹೋರಿಗಳನ್ನು, ಎರಡು ಟಗರುಗಳನ್ನು ಮತ್ತು ಒಂದು ವರ್ಷದ ಹದಿನಾಲ್ಕು ಗಂಡು ಕುರಿಮರಿಗಳನ್ನು ಅರ್ಪಿಸಬೇಕು. ಇವುಗಳೆಲ್ಲಾ ಪೂರ್ಣಾಂಗವಾದವುಗಳಾಗಿರಬೇಕು. |
27
|
ಈ ಪಶುಗಳಲ್ಲಿ ಪ್ರತಿಯೊಂದಕ್ಕೂ ನೇಮಕಗೊಂಡ ಧಾನ್ಯಾರ್ಪಣೆಯನ್ನು ಮತ್ತು ಪಾನದ್ರವ್ಯಾರ್ಪಣೆಯನ್ನು ಸರಿಯಾದ ಪ್ರಮಾಣದಲ್ಲಿ ಅರ್ಪಿಸಬೇಕು. |
28
|
ಪಾಪಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು. ಕ್ರಮವಾದ ದೈನಂದಿನ ಸರ್ವಾಂಗಹೋಮ ಮತ್ತು ಅದರೊಡನೆ ಅರ್ಪಿಸಬೇಕಾದ ಧಾನ್ಯಾರ್ಪಣೆ ಮತ್ತು ಪಾನದ್ರವ್ಯಾರ್ಪಣೆಗಳಲ್ಲದೆ ಮೇಲೆ ಹೇಳಿದವುಗಳನ್ನೂ ಅರ್ಪಿಸಬೇಕು. |
29
|
“ಈ ಉತ್ಸವದ ಆರನೆಯ ದಿನದಲ್ಲಿ ನೀವು ಎಂಟು ಹೋರಿಗಳನ್ನು, ಎರಡು ಟಗರುಗಳನ್ನು ಮತ್ತು ಒಂದು ವರ್ಷದ ಹದಿನಾಲ್ಕು ಗಂಡು ಕುರಿಮರಿಗಳನ್ನು ಅರ್ಪಿಸಬೇಕು. ಇವುಗಳೆಲ್ಲ ಪೂರ್ಣಾಂಗವುಳ್ಳವುಗಳಾಗಿರಬೇಕು. |
30
|
ಈ ಪಶುಗಳಲ್ಲಿ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯಾರ್ಪಣೆಯನ್ನೂ ಪಾನದ್ರವ್ಯಾರ್ಪಣೆಯನ್ನೂ ಸರಿಯಾದ ಪ್ರಮಾಣದಲ್ಲಿ ಮಾಡಬೇಕು. |
31
|
ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು. ಕ್ರಮವಾಗಿ ಪ್ರತಿನಿತ್ಯ ಅರ್ಪಿಸುವ ಸರ್ವಾಂಗಹೋಮ ಮತ್ತು ಅದರೊಡನೆ ಅರ್ಪಿಸುವ ಧಾನ್ಯಾರ್ಪಣೆ ಮತ್ತು ಪಾನದ್ರವ್ಯಾರ್ಪಣೆಗಳಲ್ಲದೆ ಮೇಲೆ ಹೇಳಿದವುಗಳನ್ನೂ ಅರ್ಪಿಸಬೇಕು. |
32
|
“ಈ ಉತ್ಸವದ ಏಳನೆಯ ದಿನದಲ್ಲಿ ನೀವು ಏಳು ಹೋರಿಗಳನ್ನು, ಎರಡು ಟಗರುಗಳನ್ನು ಮತ್ತು ಒಂದು ವರ್ಷದ ಹದಿನಾಲ್ಕು ಗಂಡು ಕುರಿಮರಿಗಳನ್ನು ಅರ್ಪಿಸಬೇಕು. ಅವುಗಳೆಲ್ಲ ಪೂರ್ಣಾಂಗವಾದವುಗಳಾಗಿರಬೇಕು. |
33
|
ಈ ಪಶುಗಳಲ್ಲಿ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯಾರ್ಪಣೆಗಳನ್ನು ಮತ್ತು ಪಾನದ್ರವ್ಯಾರ್ಪಣೆಗಳನ್ನು ಸರಿಯಾದ ಪ್ರಮಾಣದಲ್ಲಿ ಅರ್ಪಿಸಬೇಕು. |
34
|
ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು. ಕ್ರಮವಾಗಿ ಪ್ರತಿನಿತ್ಯ ಅರ್ಪಿಸುವ ಸರ್ವಾಂಗಹೋಮ ಮತ್ತು ಅದರೊಡನೆ ಅರ್ಪಿಸುವ ಧಾನ್ಯಾರ್ಪಣೆ ಮತ್ತು ಪಾನದ್ರವ್ಯಾರ್ಪಣೆಗಳಲ್ಲದೆ ಮೇಲೆ ಹೇಳಿದವುಗಳನ್ನೂ ಅರ್ಪಿಸಬೇಕು. |
35
|
“ಎಂಟನೆಯ ದಿನದಲ್ಲಿ ಮುಕ್ತಾಯ ಸಭಾಕೂಟವಿರುವುದು. ಆ ದಿನದಲ್ಲಿ ಯಾವ ಪ್ರಯಾಸದ ಕೆಲಸವನ್ನೂ ಮಾಡಬಾರದು. |
36
|
ನೀವು ಈ ಕೆಳಕಂಡವುಗಳನ್ನು ಯೆಹೋವನಿಗೆ ಸುಗಂಧಕರವಾದ ತ್ಯಾಗಮಯವಾದ ಸರ್ವಾಂಗಹೋಮವನ್ನಾಗಿ ಒಂದು ಹೋರಿಯನ್ನೂ ಒಂದು ಟಗರನ್ನೂ ಒಂದು ವರ್ಷದ ಏಳು ಗಂಡು ಕುರಿಮರಿಗಳನ್ನೂ ಅರ್ಪಿಸಬೇಕು. ಇವುಗಳೆಲ್ಲ ಪೂರ್ಣಾಂಗವಾದವುಗಳಾಗಿರಬೇಕು. |
37
|
ಈ ಪಶುಗಳಲ್ಲಿ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯಾರ್ಪಣೆಗಳನ್ನು ಮತ್ತು ಪಾನದ್ರವ್ಯಾರ್ಪಣೆಗಳನ್ನು ಸರಿಯಾದ ಪ್ರಮಾಣದಲ್ಲಿ ಅರ್ಪಿಸಬೇಕು. |
38
|
ಪಾಪಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು. ಕ್ರಮವಾಗಿ ಪ್ರತಿನಿತ್ಯ ಅರ್ಪಿಸುವ ಸರ್ವಾಂಗಹೋಮ ಮತ್ತು ಅದರೊಡನೆ ಅರ್ಪಿಸುವ ಧಾನ್ಯಾರ್ಪಣೆ ಮತ್ತು ಅದರ ಪಾನದ್ರವ್ಯಾರ್ಪಣೆಗಳಲ್ಲದೆ ಮೇಲೆ ಹೇಳಿದವುಗಳನ್ನೂ ಅರ್ಪಿಸಬೇಕು. |
39
|
“ಮೇಲೆ ತಿಳಿಸಿರುವ ಸಾರ್ವಜನಿಕ ಯಜ್ಞಗಳನ್ನು ಇಡೀ ಸಮುದಾಯಕ್ಕೋಸ್ಕರ ಹಬ್ಬದ ದಿನಗಳಲ್ಲಿ ನಿಮ್ಮ ಸರ್ವಾಂಗಹೋಮಗಳನ್ನಾಗಿಯೂ ಧಾನ್ಯಾರ್ಪಣೆಗಳನ್ನಾಗಿಯೂ ಪಾನದ್ರವ್ಯಾರ್ಪಣೆಗಳನ್ನಾಗಿಯೂ ಮತ್ತು ಸಮಾಧಾನ ಯಜ್ಞಗಳನ್ನಾಗಿಯೂ ಅರ್ಪಿಸಬೇಕು. ನಿಮ್ಮ ವೈಯಕ್ತಿಕ ಹರಕೆಯ ಅರ್ಪಣೆ ಮತ್ತು ಸ್ವಯಿಚ್ಛಾರ್ಪಣೆಗಳಲ್ಲದೆ ಮೇಲೆ ಹೇಳಿದವುಗಳನ್ನೂ ಅರ್ಪಿಸಬೇಕು.” |
40
|
“ಯೆಹೋವನು ಆಜ್ಞಾಪಿಸಿದ್ದನ್ನೆಲ್ಲಾ ಮೋಶೆಯು ಇಸ್ರೇಲರಿಗೆ ತಿಳಿಸಿದನು. ವಿಶೇಷ ಹರಕೆಗಳು |
Numbers 29:1 Kannada Language Bible Words basic statistical display
COMING SOON ...