1
|
ಯೆಹೋವನು ಮೋಶೆಯೊಡನೆ ಮಾತಾಡಿ ಹೀಗೆಂದನು: |
2
|
“ನೀನು ಇಸ್ರೇಲರಿಗೋಸ್ಕರ ಮಿದ್ಯಾನ್ಯರ ಮೇಲೆ ಆಕ್ರಮಣಮಾಡಿ ಸೇಡು ತೀರಿಸಿಕೊ. ಇದಾದ ನಂತರ ನೀನು ಸಾಯುವಿ.” |
3
|
ಆಗ ಮೋಶೆ ಇಸ್ರೇಲರಿಗೆ, “ಮಿದ್ಯಾನ್ಯರು ಯೆಹೋವನಿಗೆ ವಿರೋಧವಾಗಿ ಮಾಡಿದ ಕೃತ್ಯಗಳಿಗಾಗಿ ಅವರ ಮೇಲೆ ಆಕ್ರಮಣ ಮಾಡಿ ದಂಡಿಸಲು ನಿಮ್ಮಲ್ಲಿರುವ ಗಂಡಸರಲ್ಲಿ ಕೆಲವರನ್ನು ದಂಡೆಯಾತ್ರೆಗೆ ಆರಿಸಿಕೊಳ್ಳಬೇಕು. |
4
|
ಇಸ್ರೇಲಿನ ಕುಲಗಳವರಲ್ಲಿ ಪ್ರತಿಯೊಂದು ಕುಲದಿಂದ ಒಂದು ಸಾವಿರ ಗಂಡಸರನ್ನು ದಂಡೆಯಾತ್ರೆಗೆ ಕಳುಹಿಸಬೇಕು. |
5
|
ಆದುದರಿಂದ ಇಸ್ರೇಲರ ಕುಲಗಳಿಂದ ಪ್ರತಿಯೊಂದು ಕುಲಕ್ಕೆ ಒಂದು ಸಾವಿರ ಗಂಡಸರ ಪ್ರಕಾರ ಹನ್ನೆರಡು ಸಾವಿರ ಗಂಡಸರನ್ನು ಯುದ್ಧಕ್ಕೆ ಆರಿಸಿಕೊಳ್ಳಬೇಕು” ಅಂದನು. |
6
|
ಮೋಶೆಯು ಅವರನ್ನು ಯುದ್ಧಕ್ಕೆ ಕಳುಹಿಸಿದನು. ಅವರ ಸಂಗಡ ಎಲ್ಲಾಜಾರನ ಮಗನಾದ ಫೀನೆಹಾಸನನ್ನೂ ಕಳುಹಿಸಿದನು. ಫೀನೆಹಾಸನು ಪವಿತ್ರವಸ್ತುಗಳನ್ನು ತೆಗೆದುಕೊಂಡನು ಮತ್ತು ಸೂಚನೆ ಕೊಡುವುದಕ್ಕಾಗಿ ತುತ್ತೂರಿಗಳನ್ನು ತೆಗೆದುಕೊಂಡನು. |
7
|
ಯೆಹೋವನು ಆಜ್ಞಾಪಿಸಿದಂತೆಯೇ ಇಸ್ರೇಲರು ಮಿದ್ಯಾನ್ಯರೊಡನೆ ಯುದ್ಧಮಾಡಿದರು. ಅವರು ಮಿದ್ಯಾನ್ಯರ ಗಂಡಸರೆಲ್ಲರನ್ನು ಕೊಂದರು. |
8
|
ಅವರು ಕೊಂದವರಲ್ಲಿ ಎವೀ, ರೆಕೆಮ್, ಜೂರ್, ಹೂರ್ ಮತ್ತು ರೆಬಾ ಎಂಬ ಮಿದ್ಯಾನ್ಯರ ಐದು ಮಂದಿ ರಾಜರು ಸೇರಿದ್ದರು. ಅವರು ಕತ್ತಿಯಿಂದ ಬೆಯೋರನ ಮಗನಾದ ಬಿಳಾಮನನ್ನೂ ಕೊಂದರು. |
9
|
ಇಸ್ರೇಲರು ಮಿದ್ಯಾನ್ಯರ ಹೆಂಗಸರನ್ನು ಮತ್ತು ಮಕ್ಕಳನ್ನು ಸೆರೆಹಿಡಿದರು. ಅವರು ಮಿದ್ಯಾನ್ಯರ ಎಲ್ಲಾ ಪಶುಗಳನ್ನು, ಮತ್ತು ಇತರ ಅಮೂಲ್ಯವಾದ ವಸ್ತುಗಳನ್ನು ತೆಗೆದುಕೊಂಡರು. |
10
|
ಅವರು ನೆಲೆಸಿದ್ದ ಊರುಗಳನ್ನೂ ಪಾಳೆಯಗಳನ್ನೂ ಸುಟ್ಟುಹಾಕಿದರು. |
11
|
ಎಲ್ಲಾ ಜನರನ್ನೂ ಪಶುಗಳನ್ನೂ ಹಿಡಿದು, |
12
|
ತಾವು ಸೆರೆಹಿಡಿದವರನ್ನೂ ಪಶುಗಳನ್ನೂ ಆಸ್ತಿಯನ್ನೂ ತೆಗೆದುಕೊಂಡು ಜೆರಿಕೊ ಪಟ್ಟಣದ ಆಚೆ ಜೋರ್ಡನ್ ಹೊಳೆಯ ತೀರದಲ್ಲಿ ಮೋವಾಬ್ಯರ ಬಯಲಿನಲ್ಲಿದ್ದ ಪಾಳೆಯಕ್ಕೆ ಅಂದರೆ ಮೋಶೆ, ಯಾಜಕನಾದ ಎಲ್ಲಾಜಾರ್ ಮತ್ತು ಇಸ್ರೇಲರ ಸರ್ವಸಮೂಹದವರು ಇದ್ದಲ್ಲಿಗೆ ಬಂದರು. |
13
|
ಮೋಶೆಯೂ ಯಾಜಕನಾದ ಎಲ್ಲಾಜಾರನೂ ಸಮೂಹದ ಪ್ರಧಾನರೂ ಪಾಳೆಯದ ಹೊರಗೆ ಬಂದು ಸೈನಿಕರನ್ನು ಎದುರುಗೊಂಡರು. |
14
|
ಮೋಶೆಯು ಯುದ್ಧದಿಂದ ಹಿಂತಿರುಗಿ ಬರುತ್ತಿದ್ದ ಸೈನ್ಯಾಧಿಕಾರಿಗಳ ಮೇಲೆ ಅಂದರೆ ಸಹಸ್ರಾಧಿಪತಿಗಳ ಮತ್ತು ಶತಾಧಿಪತಿಗಳ ಮೇಲೆ ಕೋಪಗೊಂಡನು. |
15
|
ಅವನು ಅವರಿಗೆ, “ನೀವು ಎಲ್ಲಾ ಹೆಂಗಸರನ್ನು ಉಳಿಸಿದ್ದೇಕೆ? |
16
|
ಬಿಳಾಮನ ಸಲಹೆಯನ್ನು ಅನುಸರಿಸಿ, ಯೆಹೋವನಿಗೆ ವಿರೋಧವಾಗಿ ಇಸ್ರೇಲರು ಪಾಪಮಾಡುವಂತೆ ಮಾಡಿ ಪೆಗೋರದ ಬಾಳನ ಸಂಗತಿಗೆ ಕಾರಣರಾದವರು ಇವರೇ ಅಲ್ಲವೇ? ಅದರ ಫಲವಾಗಿ ಭಯಂಕರವಾದ ಕಾಯಿಲೆಯು ಜನರಿಗೆ ಬಂದಿತು. |
17
|
ಆದುದರಿಂದ ಈ ಗುಂಪಿನಲ್ಲಿರುವ ಎಲ್ಲಾ ಗಂಡುಮಕ್ಕಳನ್ನೂ ಪುರುಷಸಂಗಮ ಮಾಡಿದ ಎಲ್ಲಾ ಮಿದ್ಯಾನ್ ಹೆಂಗಸರನ್ನೂ ಕೊಲ್ಲಬೇಕು. |
18
|
ಪುರುಷಸಂಗಮ ಮಾಡದಿರುವ ಕನ್ಯೆಯರನ್ನು ನಿಮಗಾಗಿ ಉಳಿಸಿರಿ. |
19
|
ನೀವಾದರೋ ಏಳು ದಿನಗಳವರೆಗೂ ಪಾಳೆಯದ ಹೊರಗೆ ಇರಬೇಕು. ಮನುಷ್ಯರನ್ನು ಕೊಂದವರೂ ಶವಸೋಂಕಿದವರೂ ನಿಮ್ಮವರಾಗಿರಲಿ ಸೆರೆಯವರಾಗಿರಲಿ ಮೂರನೆಯ ಮತ್ತು ಏಳನೆಯ ದಿನದಲ್ಲಿ ನಿಮ್ಮನ್ನು ಶುದ್ಧೀಕರಿಸಿಕೊಳ್ಳಬೇಕು. |
20
|
ಅದಲ್ಲದೆ ಎಲ್ಲಾ ಬಟ್ಟೆಗಳನ್ನೂ ತೊಗಲಿನ ಸಾಮಾನುಗಳನ್ನೂ ಮೇಕೆ ಕೂದಲಿನ ವಸ್ತುಗಳನ್ನೂ ಮರದ ಸಾಮಾನನ್ನೂ ಶುದ್ಧ ಮಾಡಬೇಕು.” |
21
|
ಆಗ ಯಾಜಕನಾದ ಎಲ್ಲಾಜಾರನು ಸೈನಿಕರೊಡನೆ ಮಾತಾಡಿ ಇಂತೆಂದೆನು: “ಯೆಹೋವನು ಮೋಶೆಗೆ ಯುದ್ಧದಿಂದ ಮರಳಿಬರುವ ಸೈನಿಕರ ಬಗ್ಗೆ ಆ ನಿಯಮಗಳನ್ನು ಕೊಟ್ಟನು: |
22
|
[This verse may not be a part of this translation] |
23
|
[This verse may not be a part of this translation] |
24
|
ಏಳನೆಯ ದಿನದಲ್ಲಿ ನಿಮ್ಮ ಬಟ್ಟೆಗಳನ್ನು ಒಗೆದುಕೊಂಡ ನಂತರ ನೀವು ಶುದ್ಧರಾಗುವಿರಿ. ಆಮೇಲೆ ನೀವು ಪಾಳೆಯದೊಳಗೆ ಬರಬಹುದು.” |
25
|
ತರುವಾಯ ಯೆಹೋವನು ಮೋಶೆಗೆ, |
26
|
“ನೀನೂ ಯಾಜಕನಾದ ಎಲ್ಲಾಜಾರನೂ ಸಮುದಾಯದ ಎಲ್ಲಾ ಕುಲಪ್ರಧಾನರೂ ಸೆರೆಸಿಕ್ಕಿದ ಮನುಷ್ಯರನ್ನು ಮತ್ತು ಪಶುಗಳನ್ನು ಲೆಕ್ಕಿಸಿ ಪಟ್ಟಿಮಾಡಬೇಕು. |
27
|
ಅವುಗಳನ್ನು ಎರಡು ಭಾಗಮಾಡಿ ಯುದ್ಧಕ್ಕೆ ಹೋದ ಸೈನಿಕರಿಗೆ ಅರ್ಧವನ್ನು ಮಿಕ್ಕ ಸಮೂಹದವರಿಗೆ ಅರ್ಧವನ್ನು ಹಂಚಿಕೊಡಬೇಕು. |
28
|
ಯುದ್ಧಕ್ಕೆ ಹೋದ ಸೈನಿಕರಿಗೆ ಬರುವ ಭಾಗದಿಂದ ಮನುಷ್ಯರನ್ನು, ದನಕರುಗಳನ್ನು, ಕತ್ತೆಗಳನ್ನು ಮತ್ತು ಕುರಿಗಳನ್ನು |
29
|
ನೀನು ಐನೂರರಲ್ಲಿ ಒಂದರ ಮೇರೆಗೆ ಯೆಹೋವನಿಗೋಸ್ಕರ ಕಪ್ಪವನ್ನು ತೆಗೆದುಕೊಂಡು, ಅದನ್ನು ಪ್ರತ್ಯೇಕಿಸಿ ಯಾಜಕನಾದ ಎಲ್ಲಾಜಾರನಿಗೆ ಒಪ್ಪಿಸಬೇಕು. |
30
|
ಮಿಕ್ಕ ಇಸ್ರೇಲರಿಗೆ ಬರುವ ಭಾಗದಿಂದ ಮನುಷ್ಯರನ್ನು, ದನಕರುಗಳನ್ನು, ಕತ್ತೆಗಳನ್ನು, ಕುರಿಗಳನ್ನು ಐವತ್ತರಲ್ಲಿ ಒಂದರ ಮೇರೆಗೆ ತೆಗೆದುಕೊಳ್ಳಬೇಕು. ಅದನ್ನು ಯೆಹೋವನ ಪವಿತ್ರ ಗುಡಾರವನ್ನು ನೋಡಿಕೊಳ್ಳುವ ಲೇವಿಯರಿಗೆ ಕೊಡಬೇಕು” ಎಂದು ಆಜ್ಞಾಪಿಸಿದನು. |
31
|
ಯೆಹೋವನು ಆಜ್ಞಾಪಿಸಿದ್ದಂತೆಯೇ ಮೋಶೆ ಮತ್ತು ಎಲ್ಲಾಜಾರನು ಮಾಡಿದರು. |
32
|
ಸೈನಿಕರು ಆರು ಲಕ್ಷದ ಎಪ್ಪತ್ತೈದು ಸಾವಿರ ಕುರಿಗಳನ್ನು, |
33
|
ಎಪ್ಪತ್ತೆರಡು ಸಾವಿರ ದನಕರುಗಳನ್ನು, |
34
|
ಅರವತ್ತೊಂದು ಸಾವಿರ ಕತ್ತೆಗಳನ್ನು, |
35
|
ಮೂವತ್ತೆರಡು ಸಾವಿರ ಕನ್ನಿಕೆಯರನ್ನು ಪಡೆದುಕೊಂಡರು. |
36
|
ಯುದ್ಧಕ್ಕೆ ಹೋದ ಸೈನಿಕರು ಅರ್ಧಭಾಗವನ್ನು ಅಂದರೆ ಮೂರು ಲಕ್ಷದ ಮೂವತ್ತೇಳು ಸಾವಿರದ ಐನೂರು ಕುರಿಗಳನ್ನು ಪಡೆದುಕೊಂಡರು. |
37
|
ಅವರು ಆರುನೂರ ಐವತ್ತೇಳು ಕುರಿಗಳನ್ನು ಯೆಹೋವನಿಗೆ ಕೊಟ್ಟರು. |
38
|
ಸೈನಿಕರು ಮೂವತ್ತಾರು ಸಾವಿರ ದನಕರುಗಳನ್ನು ಪಡೆದುಕೊಂಡರು. ಅವುಗಳಲ್ಲಿ ಎಪ್ಪತ್ತೆರಡು ದನಕರುಗಳನ್ನು ಯೆಹೋವನಿಗೆ ಕೊಟ್ಟರು. |
39
|
ಸೈನಿಕರು ಮೂವತ್ತು ಸಾವಿರದ ಐನೂರು ಕತ್ತೆಗಳನ್ನು ಪಡೆದುಕೊಂಡರು. ಅವರು ಅರವತ್ತೊಂದು ಕತ್ತೆಗಳನ್ನು ಯೆಹೋವನಿಗೆ ಕೊಟ್ಟರು. |
40
|
ಸೈನಿಕರು ಹದಿನಾರು ಸಾವಿರ ಮಂದಿ ಕನ್ನಿಕೆಯರನ್ನು ಪಡೆದುಕೊಂಡರು. ಅವರು ಮೂವತ್ತೆರಡು ಮಂದಿ ಕನ್ನಿಕೆಯರನ್ನು ಯೆಹೋವನಿಗೆ ಕೊಟ್ಟರು. |
41
|
ಮೋಶೆಯು ಯೆಹೋವನ ಅಪ್ಪಣೆಯ ಮೇರೆಗೆ ಆ ಕಪ್ಪವನ್ನೆಲ್ಲ ಯೆಹೋವನಿಗೆ ಕೊಡುಗೆಯಾಗಿ ಯಾಜಕನಾದ ಎಲ್ಲಾಜಾರನಿಗೆ ಕೊಟ್ಟನು. |
42
|
[This verse may not be a part of this translation] |
43
|
[This verse may not be a part of this translation] |
44
|
ಮೂವತ್ತಾರು ಸಾವಿರ ದನಕರುಗಳು, |
45
|
ಮೂವತ್ತು ಸಾವಿರದ ಐನೂರು ಕತ್ತೆಗಳು |
46
|
ಮತ್ತು ಹದಿನಾರು ಸಾವಿರ ಸ್ತ್ರೀಯರು. |
47
|
ಇಸ್ರೇಲ್ ಜನರಿಗೆ ದೊರಕಿದ ಅರ್ಧ ಭಾಗದಿಂದ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಮೋಶೆ ಐವತ್ತನೆ ಒಂದು ಭಾಗವನ್ನು ತೆಗೆದುಕೊಂಡು ಯೆಹೋವನ ಪವಿತ್ರಗುಡಾರವನ್ನು ನೋಡಿಕೊಳ್ಳುತ್ತಿದ್ದ ಲೇವಿಯರಿಗೆ ಕೊಟ್ಟನು. |
48
|
ಆಗ ದಂಡಿನ ಸಹಸ್ರಾಧಿಪತಿಗಳೂ ಶತಾಧಿಪತಿಗಳೂ ಮೋಶೆಯ ಬಳಿಗೆ ಬಂದು, |
49
|
“ನಿನ್ನ ದಾಸರಾದ ನಾವು ನಮ್ಮ ಅಧಿಕಾರದೊಳಗೆ ಇದ್ದ ಸೈನಿಕರನ್ನು ಲೆಕ್ಕಿಸಲಾಗಿ ಒಬ್ಬನಾದರೂ ಕಡಿಮೆಯಾಗಿಲ್ಲವೆಂದು ತಿಳಿಯಿತು. |
50
|
ಆದಕಾರಣ ಯೆಹೋವನು ಕಾಪಾಡಿದ ನಮ್ಮ ಪ್ರಾಣಗಳಿಗೆ ಈಡಾಗಿ ಆತನಿಗೋಸ್ಕರ ಕಾಣಿಕೆಯಾಗಿ ನಮ್ಮಲ್ಲಿ ಒಬ್ಬೊಬ್ಬನು ತನಗೆ ಸಿಕ್ಕಿದ ಚಿನ್ನದ ಒಡವೆಗಳನ್ನು ಅಂದರೆ ತೋಳ್ಬಳೆ, ಕಡಗ, ಮುದ್ರೆಯುಂಗುರ, ಮುರುವು, ಕಂಠಮಾಲೆ ಮುಂತಾದವುಗಳನ್ನು ನಮ್ಮ ಶುದ್ಧೀಕರಣಕ್ಕಾಗಿ ಯೆಹೋವನಿಗೆ ತಂದಿದ್ದೇವೆ” ಅಂದರು. |
51
|
ಅವರು ಕೊಟ್ಟ ಎಲ್ಲಾ ಚಿನ್ನದ ಒಡವೆಗಳನ್ನು ಮೋಶೆಯು ಮತ್ತು ಯಾಜಕನಾದ ಎಲ್ಲಾಜಾರನು ತೆಗೆದುಕೊಂಡರು. ಅವುಗಳನ್ನು ಕುಶಲತೆಯಿಂದ ತಯಾರಿಸಿದ ಒಡವೆಗಳಾಗಿದ್ದವು. |
52
|
ಸಹಸ್ರಾಧಿಪತಿಗಳು ಮತ್ತು ಶತಾಧಿಪತಿಗಳು ಯೆಹೋವನಿಗೆ ಕೊಟ್ಟ ಚಿನ್ನವು ನಾನೂರಿಪ್ಪತ್ತು ಪೌಂಡು ತೂಕವಿತ್ತು. |
53
|
ಉಳಿದದ್ದನ್ನು ಸೈನಿಕರು ತಮಗಾಗಿ ಇಟ್ಟುಕೊಂಡರು. |
54
|
ಸಹಸ್ರಾಧಿಪತಿಗಳೂ ಶತಾಧಿಪತಿಗಳೂ ಕೊಟ್ಟ ಚಿನ್ನವನ್ನು ಮೋಶೆಯೂ ಯಾಜಕನಾದ ಎಲ್ಲಾಜಾರನೂ ತೆಗೆದುಕೊಂಡು ದೇವದರ್ಶನಗುಡಾರದಲ್ಲಿ ಇಟ್ಟರು. ಇಸ್ರೇಲರ ವಿಷಯದಲ್ಲಿ ಜ್ಞಾಪಕಾರ್ಥವಾಗಿ ಇದು ಯೆಹೋವನ ಸನ್ನಿಧಿಯಲ್ಲಿ ಇಡಲ್ಪಟ್ಟಿತು. |
Numbers 31:44 Kannada Language Bible Words basic statistical display
COMING SOON ...