1
|
ರೂಬೇನ್ ಕುಲದವರಿಗೂ ಗಾದ್ ಕುಲದವರಿಗೂ ಬಹಳ ದನಗಳಿದ್ದವು. ಅವರು ಯಗ್ಜೇರ್ ಮತ್ತು ಗಿಲ್ಯಾದ್ ಪ್ರದೇಶಗಳನ್ನು ನೋಡಿದಾಗ ಅವು ಅವರ ಪಶುಗಳ ಮೇವಿಗೆ ಒಳ್ಳೆಯ ಸ್ಥಳವೆಂದು ತಿಳಿದುಕೊಂಡರು. |
2
|
ಆದ್ದರಿಂದ ರೂಬೇನ್ ಮತ್ತು ಗಾದ್ ಕುಲದವರು ಮೋಶೆಯ ಬಳಿಗೆ ಬಂದರು. ಅವರು ಮೋಶೆಯ ಸಂಗಡದಲ್ಲೂ ಯಾಜಕನಾದ ಎಲ್ಲಾಜಾರನ ಸಂಗಡದಲ್ಲೂ ಜನರ ನಾಯಕರ ಸಂಗಡದಲ್ಲೂ ಮಾತಾಡಿ ಹೀಗೆ ಹೇಳಿದರು: |
3
|
[This verse may not be a part of this translation] |
4
|
[This verse may not be a part of this translation] |
5
|
ಆದ್ದರಿಂದ ಈ ಪ್ರದೇಶವನ್ನೇ ನಮಗೆ ಸ್ವಾಸ್ತ್ಯವನ್ನಾಗಿ ಕೊಟ್ಟರೆ ನಮಗೆ ಉಪಕಾರ ಮಾಡಿದಂತಾಗುವುದು. ನಾವು ಜೋರ್ಡನ್ ನದಿಯನ್ನು ದಾಟಿ ಹೋಗುವಂತೆ ಮಾಡಬೇಡ.” |
6
|
ಮೋಶೆಯು ರೂಬೇನ್ ಮತ್ತು ಗಾದ್ ಕುಲಗಳವರಿಗೆ, “ನಿಮ್ಮ ಸಹೋದರರು ಯುದ್ಧಕ್ಕೆ ಹೋಗುವಾಗ ನೀವು ಇಲ್ಲೇ ಕುಳಿತಿರಬೇಕೇ? |
7
|
ಯೆಹೋವನು ಇಸ್ರೇಲರಿಗೆ ಕೊಟ್ಟ ದೇಶಕ್ಕೆ ಅವರು ಹೋಗದಂತೆ ನೀವು ಯಾಕೆ ಅವರಿಗೆ ಅಧೈರ್ಯವನ್ನು ಹುಟ್ಟಿಸುತ್ತೀರಿ? |
8
|
ಆ ದೇಶವನ್ನು ನೋಡಿಕೊಂಡು ಬರುವುದಕ್ಕೆ ನಾನು ಕಾದೇಶ್ ಬರ್ನೇಯದಿಂದ ನಿಮ್ಮ ಪೂರ್ವಿಕರನ್ನು ಗೂಢಚಾರರನ್ನಾಗಿ ಕಳುಹಿಸಿದಾಗ ಅವರೂ ಹಾಗೆಯೇ ಮಾಡಿದರಲ್ಲಾ. |
9
|
ಅವರು ಎಷ್ಕೋಲ್ ತಗ್ಗಿಗೆ ಬಂದು ಆ ದೇಶವನ್ನು ನೋಡಿ ಇಸ್ರೇಲರಿಗೆ ಅಧೈರ್ಯವನ್ನು ಹುಟ್ಟಿಸಿದ್ದರಿಂದ ಇಸ್ರೇಲರು ತಮಗೆ ಯೆಹೋವನು ವಾಗ್ದಾನ ಮಾಡಿದ್ದ ದೇಶಕ್ಕೆ ಹೋಗಲೇ ಇಲ್ಲ. |
11
|
[This verse may not be a part of this translation] |
12
|
[This verse may not be a part of this translation] |
13
|
“ಆದ್ದರಿಂದ ಯೆಹೋವನು ಇಸ್ರೇಲರ ಮೇಲೆ ಕೋಪಗೊಂಡು, ತನ್ನನ್ನು ಬೇಸರಗೊಳಿಸಿದ್ದ ಇಡೀ ತಲೆಮಾರು ಸಾಯುವತನಕ ಇಸ್ರೇಲರನ್ನು ಮರುಭೂಮಿಯಲ್ಲಿ ನಲವತ್ತು ವರ್ಷಗಳ ಕಾಲ ಅಲೆದಾಡಿಸಿದನು. |
14
|
ದುಷ್ಟ ಸಂತತಿಯವರೇ, ಈಗ ನೀವು ಯೆಹೋವನ ಭಯಂಕರವಾದ ಕೋಪವನ್ನು ಇನ್ನೂ ಹೆಚ್ಚಾಗಿ ಮಾಡಲು ನಿಮ್ಮ ಪೂರ್ವಿಕರ ಸ್ಥಾನವನ್ನು ತೆಗೆದುಕೊಂಡಿದ್ದೀರಿ. |
15
|
ನೀವು ಆತನನ್ನು ಹಿಂಬಾಲಿಸದೆ ಹೋದರೆ, ಆತನು ಇಸ್ರೇಲರನ್ನು ಮರುಭೂಮಿಯಲ್ಲಿ ಇನ್ನೂ ಹೆಚ್ಚು ಕಾಲ ಬಿಟ್ಟುಬಿಡುವನು. ಈ ಜನರೆಲ್ಲರ ನಾಶನಕ್ಕೆ ನೀವೇ ಕಾರಣರಾಗುವಿರಿ” ಎಂದು ಹೇಳಿದನು. |
16
|
ಆಗ ಅವರು ಮೋಶೆಯ ಬಳಿಗೆ ಬಂದು, “ನಮ್ಮ ಪಶುಗಳಿಗಾಗಿ ನಾವು ಬೇಲಿಯನ್ನು ಹಾಕೋಣ ಮತ್ತು ಸ್ತ್ರೀಯರಿಗಾಗಿ ಮತ್ತು ಮಕ್ಕಳಿಗಾಗಿ ಊರುಗಳನ್ನು ಕಟ್ಟುವೆವು. |
17
|
ಬಳಿಕ ಇಸ್ರೇಲರನ್ನು ಅವರವರ ಸ್ಥಳಗಳಿಗೆ ಸೇರಿಸುವವರೆಗೆ ನಾವು ಅವರ ಮುಂದೆ ಹೋಗುವ ಸೈನಿಕರಾಗಿ ಹೊರಡುವೆವು ಅಲ್ಲದೆ ನಮ್ಮ ಸ್ತ್ರೀಯರು ಮತ್ತು ಮಕ್ಕಳು ಈ ದೇಶದ ಇತರ ನಿವಾಸಿಗಳಿಂದ ತೊಂದರೆಗೊಳಗಾಗದೆ ಕೋಟೆಗಳುಳ್ಳ ಊರುಗಳಲ್ಲಿ ಸುರಕ್ಷಿತವಾಗಿರುವರು. |
18
|
ಪ್ರತಿಯೊಬ್ಬ ಇಸ್ರೇಲನು ದೇಶದಲ್ಲಿ ತನಗೆ ಬರಬೇಕಾದ ಸ್ವಾಸ್ತ್ಯವನ್ನು ತೆಗೆದುಕೊಳ್ಳುವ ತನಕ ನಾವು ನಮ್ಮ ಮನೆಗಳಿಗೆ ಹೋಗುವುದಿಲ್ಲ. |
19
|
ನಮಗೆ ಜೋರ್ಡನ್ ಹೊಳೆಯ ಈಚೆ ಪೂರ್ವದಿಕ್ಕಿನಲ್ಲಿ ಸ್ವಾಸ್ತ್ಯವು ದೊರಕಿದ್ದರಿಂದ ನಾವು ಹೊಳೆಯ ಆಚೆ ಎಲ್ಲಿಯೂ ಅವರೊಂದಿಗೆ ಸ್ವಾಸ್ತ್ಯವನ್ನು ಅಪೇಕ್ಷಿಸುವುದಿಲ್ಲ” ಅಂದರು. |
20
|
[This verse may not be a part of this translation] |
21
|
[This verse may not be a part of this translation] |
22
|
[This verse may not be a part of this translation] |
23
|
4ಆದರೆ ನೀವು ಈ ಸಂಗತಿಗಳನ್ನು ಮಾಡಿದಿದ್ದರೆ, ಯೆಹೋವನಿಗೆ ವಿರೋಧವಾಗಿ ಪಾಪ ಮಾಡಿದವರಾಗಿರುವಿರಿ. ಮತ್ತು ನಿಮ್ಮ ಪಾಪವು ನಿಮ್ಮನ್ನು ಹಿಡಿಯುವ ತನಕ ಹುಡುಕಿಕೊಂಡೇ ಬರುವುದು ಎಂದು ಖಚಿತವಾಗಿ ತಿಳಿದುಕೊಳ್ಳಿರಿ. |
24
|
ನಿಮ್ಮ ಸ್ತ್ರೀಯರಿಗಾಗಿಯೂ ಮಕ್ಕಳಿಗಾಗಿಯೂ ಊರುಗಳನ್ನು ಕಟ್ಟಿರಿ ಮತ್ತು ಪಶುಗಳಿಗಾಗಿ ದೊಡ್ಡಿಯನ್ನು ಕಟ್ಟಿರಿ. ಬಳಿಕ ನೀವು ವಾಗ್ದಾನ ಮಾಡಿದಂತೆಯೇ ಮಾಡಿರಿ” ಎಂದನು. |
25
|
ಆಗ ಗಾದ್ಯರು ಮತ್ತು ರೂಬೇನ್ಯರು ಮೋಶೆಗೆ, “ಸ್ವಾಮೀ, ನಾವು ನಿನ್ನ ಸೇವಕರಾಗಿದ್ದೇವೆ. ಆದ್ದರಿಂದ ನೀನು ಆಜ್ಞಾಪಿಸಿದಂತೆಯೇ ನಾವು ಮಾಡುತ್ತೇವೆ. |
26
|
ನಮ್ಮ ಹೆಂಡತಿಯರು, ಮಕ್ಕಳು, ಪಶುಗಳು ಮತ್ತು ಇತರ ಪ್ರಾಣಿಗಳು ಗಿಲ್ಯಾದಿನ ಊರುಗಳಲ್ಲಿ ವಾಸಿಸುವರು. |
27
|
ಆದರೆ ನಿನ್ನ ಸೇವಕರಾದ ನಾವು ಮತ್ತು ದಂಡೆಯಾತ್ರೆಗಾಗಿ ಆರಿಸಲ್ಪಟ್ಟವರು ನಿನ್ನ ಆಜ್ಞೆಯ ಪ್ರಕಾರ ಜೋರ್ಡನ್ ನದಿಯನ್ನು ಯೆಹೋವನ ಮುಂದೆ ದಾಟಿಹೋಗಿ ಹೋರಾಡುತ್ತೇವೆ” ಎಂದರು. |
28
|
ಆದ್ದರಿಂದ ಮೋಶೆಯು, ಅವರ ಬಗ್ಗೆ ಯಾಜಕ ಎಲ್ಲಾಜಾರನಿಗೂ ನೂನನ ಮಗನಾದ ಯೆಹೋಶುವನಿಗೂ ಇಸ್ರೇಲ್ ಕುಲಗಳ ಗೋತ್ರಪ್ರಧಾನರಿಗೂ ಆದೇಶಗಳನ್ನು ಕೊಟ್ಟನು. |
29
|
ಮೋಶೆ ಅವರಿಗೆ, “ಗಾದ್ ಮತ್ತು ರೂಬೇನ್ ಕುಲಗಳಿಂದ ಯುದ್ಧಕ್ಕಾಗಿ ಆರಿಸಲ್ಪಟ್ಟವರು ಜೋರ್ಡನ್ ನದಿಯನ್ನು ಯೆಹೋವನ ಮುಂದೆ ದಾಟಿ ಆ ದೇಶವನ್ನು ಗೆದ್ದುಕೊಂಡರೆ, ನೀವು ಅವರಿಗೆ ಗಿಲ್ಯಾದ್ ಪ್ರಾಂತ್ಯವನ್ನು ಸ್ವಾಸ್ತ್ಯವಾಗಿ ಕೊಡಬೇಕು. |
30
|
ಆದರೆ ಆರಿಸಲ್ಪಟ್ಟವರು ನಿಮ್ಮೊಂದಿಗೆ ನದಿಯನ್ನು ದಾಟದಿದ್ದರೆ, ಅವರು ನಿಮ್ಮೊಂದಿಗೆ ಕಾನಾನ್ ದೇಶದಲ್ಲಿ ಭೂಮಿಯನ್ನು ಪಡೆದುಕೊಳ್ಳಬೇಕು” ಎಂದು ಹೇಳಿದನು. |
31
|
ಅದಕ್ಕೆ ಗಾದ್ ಮತ್ತು ರೂಬೇನ್ ಕುಲಗಳವರು ಒಪ್ಪಿ, “ನಿನ್ನ ಸೇವಕರಾದ ನಾವು ಯೆಹೋವನ ಆಜ್ಞೆಯಂತೆಯೇ ಮಾಡುವೆವು. |
32
|
ನಾವೇ ಯುದ್ಧ ಮಾಡುವ ಸೈನಿಕರಾಗಿ ನದಿಯನ್ನು ದಾಟಿ ಯೆಹೋವನ ಮುಂದೆ ಕಾನಾನ್ ದೇಶದೊಳಗೆ ಹೋಗುವೆವು. ಆದರೆ ನಮ್ಮ ಸ್ವಾಸ್ತ್ಯವಾದ ಭೂಮಿಯು ಜೋರ್ಡನ್ ನದಿಯ ಈಚೆಕಡೆಯಲ್ಲಿರುವುದು” ಎಂದರು. |
33
|
ಆಗ ಮೋಶೆಯು ಗಾದ್ ಮತ್ತು ರೂಬೇನ್ ಕುಲಗಳವರಿಗೆ ಮತ್ತು ಯೋಸೇಫನ ಮಗನಾದ ಮನಸ್ಸೆಯ ಅರ್ಧಕುಲದವರಿಗೆ ಅಮೋರಿಯರ ರಾಜನಾದ ಸೀಹೋನನ ರಾಜ್ಯವನ್ನೂ ಬಾಷಾನಿನ ರಾಜನಾದ ಓಗನ ರಾಜ್ಯವನ್ನೂ ಅವುಗಳ ಎಲ್ಲಾ ಊರುಗಳನ್ನೂ ಆ ಊರುಗಳಿಗೆ ಸೇರಿದ ಭೂಮಿಗಳನ್ನೂ ಕೊಟ್ಟನು. |
34
|
ಗಾದ್ ಕುಲದವರು ದೀಬೋನ್, ಅಟಾರೋತ್, ಅರೋಯೇರ್, |
35
|
ಅಟ್ರೋತ್ಷೋಫಾನ್, ಯಗ್ಜೇರ್, ಯೊಗ್ಬೆಹಾ, ಬೇತ್ನಿಮ್ರಾ, |
36
|
ಬೇತ್ಹಾರಾನ್ ಎಂಬ ಕೋಟೆಗಳುಳ್ಳ ಊರುಗಳನ್ನು ಹೊಸದಾಗಿ ಕಟ್ಟಿಕೊಂಡರು ಮತ್ತು ತಮ್ಮ ಪಶುಗಳಿಗಾಗಿ ದೊಡ್ಡಿಗಳನ್ನು ಕಟ್ಟಿಕೊಂಡರು. |
37
|
[This verse may not be a part of this translation] |
38
|
[This verse may not be a part of this translation] |
39
|
ಮಾಕೀರನ ವಂಶದವರು ಗಿಲ್ಯಾದಿಗೆ ಹೋದರು. (ಮಾಕೀರನು ಮನಸ್ಸೆಯ ಮಗ.) ಅವರು ಆ ಪಟ್ಟಣದಲ್ಲಿ ವಾಸಿಸುತ್ತಿದ್ದ ಅಮೋರಿಯರನ್ನು ಓಡಿಸಿ ಅದನ್ನು ವಶಪಡಿಸಿಕೊಂಡರು. |
40
|
ಆದ್ದರಿಂದ ಮೋಶೆಯು ಗಿಲ್ಯಾದನ್ನು ಮನಸ್ಸೆಯ ಮಗನಾದ ಮಾಕೀರನ ತಿಯವರಿಗೆ ಕೊಟ್ಟನು. ಮಾಕೀರನ ವಂಶದವರು ಅಲ್ಲಿ ನೆಲೆಸಿದರು. |
41
|
ಮನಸ್ಸೆಯ ಕುಲದವನಾದ ಯಾಯೀರನು ಅಮೋರಿಯರ ಕೋಟೆಗಳುಳ್ಳ ಹಳ್ಳಿಗಳನ್ನು ವಶಪಡಿಸಿಕೊಂಡು ಅವುಗಳಿಗೆ, “ಯಾಯೀರನ ಹಳ್ಳಿಗಳು” ಎಂದು ಹೆಸರಿಟ್ಟನು. |
42
|
ನೋಬಹ ಎಂಬವನು ಕೆನಾತ್ ಮತ್ತು ಅದರ ಹತ್ತಿರವಿದ್ದ ಚಿಕ್ಕ ಊರುಗಳನ್ನು ವಶಪಡಿಸಿಕೊಂಡು ಅವುಗಳಿಗೆ “ನೋಬಹ” ಎಂಬ ತನ್ನ ಹೆಸರನ್ನೇ ಕೊಟ್ಟನು. |
Numbers 32:1 Kannada Language Bible Words basic statistical display
COMING SOON ...