1
|
ಮೋಶೆ ಮತ್ತು ಆರೋನರ ನೇತೃತ್ವದಲ್ಲಿ ಈಜಿಪ್ಟ್ ದೇಶದಿಂದ ಹೊರಬಂದ ಇಸ್ರೇಲರ ಪ್ರಯಾಣಗಳ ವಿವರ: |
2
|
ಮೋಶೆ ಯೆಹೋವನ ಅಪ್ಪಣೆಯನ್ನು ಹೊಂದಿ ಇಸ್ರೇಲರು ಪ್ರಯಾಣಗಳಲ್ಲಿ ಇಳಿದುಕೊಂಡ ಸ್ಥಳಗಳ ಹೆಸರುಗಳನ್ನು ಬರೆದನು. |
3
|
ಮೊದಲನೆ ತಿಂಗಳಿನ ಹದಿನೈದನೆಯ ದಿನದಲ್ಲಿ ಅವರು ರಮ್ಸೇಸ್ ಪಟ್ಟಣವನ್ನು ಬಿಟ್ಟು ಹೊರಟರು. ಪಸ್ಕಹಬ್ಬದ ಮರುದಿನದಲ್ಲಿ ಇಸ್ರೇಲರು ಜಯದೊಂದಿಗೆ ತಮ್ಮ ಕೈಗಳನ್ನು ಎತ್ತಿಕೊಂಡು ಈಜಿಪ್ಟಿನಿಂದ ಹೊರಗೆ ನಡೆದರು. ಈಜಿಪ್ಟಿನ ಜನರೆಲ್ಲರೂ ಇದನ್ನು ನೋಡಿದರು. |
4
|
ಈಜಿಪ್ಟಿನವರು ಯೆಹೋವನು ಕೊಂದುಹಾಕಿದ ತಮ್ಮ ಚೊಚ್ಚಲು ಮಕ್ಕಳನ್ನು ಹೂಳಿಡುತ್ತಿದ್ದರು. ಯೆಹೋವನು ಈಜಿಪ್ಟಿನ ದೇವರುಗಳನ್ನು ಶಿಕ್ಷಿಸಿದನು. |
5
|
ಇಸ್ರೇಲರು ರಮ್ಸೇಸ್ನಿಂದ ಹೊರಟು ಸುಕ್ಕೋತಿಗೆ ಪ್ರಯಾಣಮಾಡಿ ಅಲ್ಲಿ ಪಾಳೆಯ ಮಾಡಿಕೊಂಡರು. |
6
|
ಸುಕ್ಕೋತಿನಿಂದ ಅವರು ಏತಾಮಿಗೆ ಪ್ರಯಾಣಮಾಡಿ ಅಲ್ಲಿ ಪಾಳೆಯ ಮಾಡಿಕೊಂಡರು. ಜನರು ಅಲ್ಲಿ ಮರುಭೂಮಿಯ ಗಡಿಯಲ್ಲಿ ಪಾಳೆಯಮಾಡಿಕೊಂಡರು. |
7
|
ಅವರು ಏತಾಮನ್ನು ಬಿಟ್ಟು ಪೀಹಹೀರೋತಿಗೆ ಪ್ರಯಾಣಮಾಡಿ ಅಲ್ಲಿ ಪಾಳೆಯ ಮಾಡಿಕೊಂಡರು. ಇದು ಬಾಳ್ಚೆಫೋನಿನ ಹತ್ತಿರವಿತ್ತು. ಜನರು ಮಿಗ್ದೋಲಿನ ಬಳಿ ಪಾಳೆಯ ಮಾಡಿಕೊಂಡರು. |
8
|
ಜನರು ಪೀಹಹೀರೋತನ್ನು ಬಿಟ್ಟು ಸಮುದ್ರದ ಮಧ್ಯದಲ್ಲೇ ನಡೆದು ಮರುಭೂಮಿಗೆ ಬಂದರು. ಅವರು ಏತಾಮ್ ಮರುಭೂಮಿಯಲ್ಲಿ ಮೂರು ದಿನಗಳವರೆಗೆ ಪ್ರಯಾಣಮಾಡಿ ಅಲ್ಲಿ ಪಾಳೆಯ ಮಾಡಿಕೊಂಡರು. |
9
|
ಜನರು ಮಾರವನ್ನು ಬಿಟ್ಟು ಏಲೀಮಿಗೆ ಪ್ರಯಾಣ ಮಾಡಿ ಅಲ್ಲಿ ಇಳಿದುಕೊಂಡರು. ಅಲ್ಲಿ ಹನ್ನೆರಡು ನೀರಿನ ಒರತೆಗಳೂ ಎಪ್ಪತ್ತು ಖರ್ಜೂರದ ಮರಗಳೂ ಇದ್ದವು. |
10
|
ಜನರು ಏಲೀಮನ್ನು ಬಿಟ್ಟು ಕೆಂಪುಸಮುದ್ರದ ಹತ್ತಿರ ಪಾಳೆಯ ಮಾಡಿಕೊಂಡರು. |
11
|
ಕೆಂಪುಸಮುದ್ರದಿಂದ ಹೊರಟು ಸೀನ್ ಅರಣ್ಯದಲ್ಲಿ ಪಾಳೆಯ ಮಾಡಿಕೊಂಡರು. |
12
|
ಸೀನ್ ಅರಣ್ಯದಿಂದ ಹೊರಟು ದೊಫ್ಕದಲ್ಲಿ ಇಳಿದುಕೊಂಡರು. |
13
|
ದೊಪ್ಕದಿಂದ ಹೊರಟು ಆಲೂಷಿನಲ್ಲಿ ಇಳಿದುಕೊಂಡರು. |
14
|
ಆಲೂಷಿನಿಂದ ಹೊರಟು ರೆಫೀದೀಮಿನಲ್ಲಿ ಇಳಿದುಕೊಂಡರು. ಅಲ್ಲಿ ಜನರಿಗೆ ಕುಡಿಯಲು ನೀರು ಇರಲಿಲ್ಲ. |
15
|
ರೆಫೀದೀಮಿನಿಂದ ಹೊರಟು ಸೀನಾಯಿ ಮರುಭೂಮಿಯಲ್ಲಿ ಇಳಿದುಕೊಂಡರು. |
16
|
ಸೀನಾಯಿ ಮರುಭೂಮಿಯಿಂದ ಹೊರಟು ಕಿಬ್ರೋತ್ ಹತಾವದಲ್ಲಿ ಇಳಿದುಕೊಂಡರು. |
17
|
ಕಿಬ್ರೋತ್ ಹತಾವದಿಂದ ಹೊರಟು ಹಚೇರೋತಿನಲ್ಲಿ ಇಳಿದುಕೊಂಡರು. |
18
|
ಹಚೇರೋತಿನಿಂದ ಹೊರಟು ರಿತ್ಮದಲ್ಲಿ ಇಳಿದುಕೊಂಡರು. |
19
|
ರಿತ್ಮದಿಂದ ಹೊರಟು ರಿಮ್ಮೋನ್ ಪೆರೆಚಿನಲ್ಲಿ ಇಳಿದುಕೊಂಡರು. |
20
|
ರಿಮ್ಮೋನ್ ಪೆರೆಚಿನಿಂದ ಹೊರಟು ಲಿಬ್ನದಲ್ಲಿ ಇಳಿದುಕೊಂಡರು. |
21
|
ಲಿಬ್ನದಿಂದ ಹೊರಟು ರಿಸ್ಸದಲ್ಲಿ ಇಳಿದುಕೊಂಡರು. |
22
|
ರಿಸ್ಸದಿಂದ ಹೊರಟು ಕೆಹೇಲಾತದಲ್ಲಿ ಇಳಿದುಕೊಂಡರು. |
23
|
ಕೆಹೇಲಾತದಿಂದ ಹೊರಟು ಶೆಫೆರ್ ಬೆಟ್ಟದಲ್ಲಿ ಇಳಿದುಕೊಂಡರು. |
24
|
ಶೆಫೆರ್ ಬೆಟ್ಟದಿಂದ ಹೊರಟು ಹರಾದದಲ್ಲಿ ಇಳಿದುಕೊಂಡರು. |
25
|
ಹರಾದದಿಂದ ಹೊರಟು ಮಖೇಲೋತಿನಲ್ಲಿ ಇಳಿದುಕೊಂಡರು. |
26
|
ಮಖೇಲೋತಿನಿಂದ ಹೊರಟು ತಹತಿನಲ್ಲಿ ಇಳಿದುಕೊಂಡರು. |
27
|
ತಹತಿನಿಂದ ಹೊರಟು ತೆರಹದಲ್ಲಿ ಇಳಿದುಕೊಂಡರು. |
28
|
ತೆರಹದಿಂದ ಹೊರಟು ಮಿತ್ಕದಲ್ಲಿ ಇಳಿದುಕೊಂಡರು. |
29
|
ಮಿತ್ಕದಿಂದ ಹೊರಟು ಹಷ್ಮೋನದಲ್ಲಿ ಇಳಿದುಕೊಂಡರು. |
30
|
ಹಷ್ಮೋನದಿಂದ ಹೊರಟು ಮೋಸೇರೋತಿನಲ್ಲಿ ಇಳಿದುಕೊಂಡರು. |
31
|
ಮೋಸೇರೋತಿನಿಂದ ಹೊರಟು ಬೆನೇಯಾಕಾನಿನಲ್ಲಿ ಇಳಿದುಕೊಂಡರು. |
32
|
ಬೆನೇಯಾಕಾನಿನಿಂದ ಹೊರಟು ಹೋರ್ಹಗಿದ್ಗಾದ್ನಲ್ಲಿ ಇಳಿದುಕೊಂಡರು. |
33
|
ಹೋರ್ಹಗಿದ್ಗಾದ್ನಿಂದ ಹೊರಟು ಯೊಟ್ಬಾತದಲ್ಲಿ ಇಳಿದುಕೊಂಡರು. |
34
|
ಯೊಟ್ಬಾತದಿಂದ ಹೊರಟು ಅಬ್ರೋನದಲ್ಲಿ ಇಳಿದುಕೊಂಡರು. |
35
|
ಅಬ್ರೋನದಿಂದ ಹೊರಟು ಎಚ್ಯೋನ್ಗೆಬೆರಿನಲ್ಲಿ ಇಳಿದುಕೊಂಡರು. |
36
|
ಎಚ್ಯೋನ್ಗೆಬೆರಿನಿಂದ ಹೊರಟು ಚಿನ್ ಮರುಭೂಮಿಯಲ್ಲಿ ಇಳಿದುಕೊಂಡರು. ಅದು ಕಾದೇಶ್. |
37
|
ಕಾದೇಶಿನಿಂದ ಹೊರಟು ಎದೋಮ್ಯರ ದೇಶದ ಅಂಚಿನಲ್ಲಿರುವ ಹೋರ್ ಬೆಟ್ಟದ ಬಳಿಯಲ್ಲಿ ಇಳಿದುಕೊಂಡರು. |
38
|
ಮಹಾಯಾಜಕನಾದ ಆರೋನನು ಯೆಹೋವನಿಂದ ಆಜ್ಞಾಪಿಸಲ್ಪಟ್ಟ ಹೋರ್ ಬೆಟ್ಟವನ್ನು ಹತ್ತಿದನು. ಇಸ್ರೇಲರು ಈಜಿಪ್ಟನ್ನು ಬಿಟ್ಟು ಹೊರಟ ನಂತರ ನಲವತ್ತನೆ ವರ್ಷದ ಐದನೆ ತಿಂಗಳಿನ ಮೊದಲನೆ ದಿನದಲ್ಲಿ ಆರೋನನು ಅಲ್ಲಿ ಪ್ರಾಣಬಿಟ್ಟನು. |
39
|
ಆರೋನನು ‘ಹೋರ್’ ಬೆಟ್ಟದಲ್ಲಿ ಸತ್ತಾಗ ಅವನಿಗೆ ನೂರಿಪ್ಪತ್ಮೂರು ವರ್ಷ ವಯಸ್ಸಾಗಿತ್ತು. |
40
|
ಇಸ್ರೇಲರು ಬರುತ್ತಾರೆಂಬ ಸುದ್ದಿಯನ್ನು ನೆಗೆವ್ನಲ್ಲಿ ವಾಸವಾಗಿದ್ದ ಅರಾದ್ ಪಟ್ಟಣದ ಅರಸನು ಕೇಳಿದನು. |
41
|
ಇಸ್ರೇಲರು ಹೋರ್ ಬೆಟ್ಟದಿಂದ ಹೊರಟು ಚಲ್ಮೋನದಲ್ಲಿ ಇಳಿದುಕೊಂಡರು. |
42
|
ಚಲ್ಮೋನದಿಂದ ಹೊರಟು ಪೂನೋನಿನಲ್ಲಿ ಇಳಿದುಕೊಂಡರು. |
43
|
ಪೂನೋನಿನಿಂದ ಹೊರಟು ಓಬೋತಿನಲ್ಲಿ ಇಳಿದುಕೊಂಡರು. |
44
|
ಓಬೋತಿನಿಂದ ಹೊರಟು ಮೋವಾಬ್ಯರ ಸರಹದ್ದಿನಲ್ಲಿರುವ ಜೋರ್ಡನ್ ಆಚೆ ಇರುವ ಇಯ್ಯಿಮಿನಲ್ಲಿ ಇಳಿದುಕೊಂಡರು. |
45
|
ಇಯ್ಯಿಮಿನಿಂದ ಹೊರಟು ದೀಬೋನ್ಗಾದಿನಲ್ಲಿ ಇಳಿದುಕೊಂಡರು. |
46
|
ದೀಬೋನ್ಗಾದಿನಿಂದ ಹೊರಟು ಅಲ್ಮೋನ್ ದಿಬ್ಲಾತಯಿಮಿನಲ್ಲಿ ಇಳಿದುಕೊಂಡರು. |
47
|
ಅಲ್ಮೋನ್ ದಿಬ್ಲಾತಯಿಮಿನಿಂದ ಹೊರಟು ಅಬಾರೀಮ್ ಬೆಟ್ಟಗಳಲ್ಲಿರುವ ನೆಬೋವಿನ ಪೂರ್ವದಿಕ್ಕಿನಲ್ಲಿ ಇಳಿದುಕೊಂಡರು. |
48
|
ಅಬಾರೀಮ್ ಬೆಟ್ಟಗಳಿಂದ ಹೊರಟು, ಜೆರಿಕೊ ಪಟ್ಟಣದ ಆಚೆಕಡೆಯಲ್ಲಿರುವ ಜೋರ್ಡನ್ ನದಿಯ ತೀರದಲ್ಲಿ ಮೋವಾಬಿನ ಬಯಲಿನಲ್ಲಿ ಇಳಿದುಕೊಂಡರು. |
49
|
ಅವರು ಮೋವಾಬ್ಯರ ಮೈದಾನದಲ್ಲಿ ಬೇತ್ಯೆಷೀಮೋತಿನಿಂದ ಅಬೇಲ್ ಶಿಟ್ಟೀಮಿನವರೆಗೂ ಜೋರ್ಡನ್ ನದಿಯ ತೀರದಲ್ಲಿ ಇಳಿದುಕೊಂಡರು. |
50
|
ಆ ಸ್ಥಳದಲ್ಲಿದ್ದಾಗ ಯೆಹೋವನು ಮೋಶೆಯೊಡನೆ ಮಾತಾಡಿ ಹೇಳಿದ್ದೇನೆಂದರೆ: |
51
|
51”ನೀನು ಇಸ್ರೇಲರಿಗೆ ಹೀಗೆ ಆಜ್ಞಾಪಿಸು: ‘ನೀವು ಜೋರ್ಡನ್ ಹೊಳೆದಾಟಿ ಕಾನಾನ್ ದೇಶವನ್ನು ಸೇರಿದಾಗ |
52
|
ಆ ದೇಶದ ನಿವಾಸಿಗಳನ್ನೆಲ್ಲ ಹೊರಡಿಸಿಬಿಟ್ಟು ಅವರ ಕೆತ್ತಿದ ಪ್ರತಿಮೆಗಳನ್ನು ಮತ್ತು ಲೋಹದ ವಿಗ್ರಹಗಳನ್ನು ನಾಶಮಾಡಿ ಅವರ ಪೂಜಾಸ್ಥಳಗಳನ್ನು ಹಾಳು ಮಾಡಬೇಕು. |
53
|
ನಾನು ನಿಮಗೆ ಆ ದೇಶವನ್ನು ಸ್ವದೇಶವಾಗುವುದಕ್ಕೆ ಕೊಟ್ಟಿದ್ದೇನೆ. ನೀವು ಅದನ್ನು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಿಸಬೇಕು. |
54
|
ನೀವು ಚೀಟುಹಾಕಿ ಆ ದೇಶವನ್ನು ನಿಮ್ಮನಿಮ್ಮ ಕುಲಗಳಿಗೆ ಹಂಚಿಕೊಳ್ಳಬೇಕು. ಹೆಚ್ಚು ಮಂದಿಯುಳ್ಳ ಕುಲಕ್ಕೆ ಹೆಚ್ಚಾಗಿಯೂ ಕಡಿಮೆ ಮಂದಿಯುಳ್ಳ ಕುಲಕ್ಕೆ ಕಡಿಮೆಯಾಗಿಯೂ ಸ್ವಾಸ್ತ್ಯವು ದೊರೆಯಬೇಕು. ಒಂದೊಂದು ಕುಲಕ್ಕೆ ಯಾವಯಾವ ಸ್ಥಳವನ್ನು ಸೂಚಿಸುತ್ತದೋ ಆ ಸ್ಥಳದಲ್ಲಿಯೇ ಆ ಕುಲದ ಸ್ವಾಸ್ತ್ಯವಿರಬೇಕು. ಒಂದೊಂದು ಕುಲದ ಕುಟುಂಬಗಳು ಒಂದೇ ಪ್ರದೇಶದಲ್ಲಿರಬೇಕು. |
55
|
“ನೀವು ಆ ದೇಶದ ನಿವಾಸಿಗಳನ್ನು ಹೊರಡಿಸದೆ ಹೋದರೆ, ಅವರು ಉಳಿದುಕೊಂಡು ನಿಮ್ಮ ಕಣ್ಣುಗಳಲ್ಲಿ ಮರದ ಚೂರಿನಂತೆಯೂ ನಿಮ್ಮ ಪಕ್ಕೆಗಳಲ್ಲಿ ಮುಳ್ಳುಗಳಂತೆಯೂ ಇರುವರು. ನೀವು ವಾಸಿಸುವ ದೇಶದಲ್ಲಿ ನಿಮಗೆ ತೊಂದರೆ ಮಾಡುವರು. |
56
|
ಅದಲ್ಲದೆ, ನಾನು ಅವರಿಗೆ ಏನನ್ನು ಮಾಡಲು ಯೋಚಿಸಿದೆನೋ ಅದನ್ನು ನಿಮಗೆ ಮಾಡುವೆನು.” |
Numbers 33:38 Kannada Language Bible Words basic statistical display
COMING SOON ...