1
|
ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: |
2
|
“ನೀನು ಇಸ್ರೇಲರಿಗೆ ಹೀಗೆ ಆಜ್ಞಾಪಿಸಬೇಕು: ನೀವು ಕಾನಾನ್ ದೇಶವನ್ನು ಪ್ರವೇಶಿಸಿದಾಗ, ಇಡೀ ಕಾನಾನ್ ದೇಶವನ್ನು ಅದರ ಗಡಿಗಳೊಡನೆ ನಿಮಗೆ ಸ್ವಾಸ್ತ್ಯವಾಗಿ ಕೊಡಲಾಗುವುದು. |
3
|
ದಕ್ಷಿಣಭಾಗವು ಎದೋಮಿನ ಗಡಿಯಲ್ಲಿರುವ ಚಿನ್ ಮರುಭೂಮಿಯನ್ನು ಒಳಗೊಂಡಿದೆ. ಪೂರ್ವದ ಕಡೆಯಿರುವ ದಕ್ಷಿಣ ಗಡಿಯು ಉಪ್ಪುಸಮುದ್ರದ ದಕ್ಷಿಣಭಾಗದಿಂದ ಆರಂಭವಾಗುತ್ತದೆ. |
4
|
ಅಲ್ಲಿಂದ ಅದು ಅಕ್ರಬ್ಬೀಮ್ ಕಣಿವೆಗೆ ತಿರುಗಿಕೊಂಡು ಚಿನಿಗೆ ಮುಂದುವರಿಯುವುದು. ಅದರ ಪರಿಮಿತಿ ದಕ್ಷಿಣ ಕಾದೇಶ್ ಬರ್ನೇಯಾ. ಅಲ್ಲಿಂದ ಅದು ಹಚರದ್ದಾರ್ಗೆ ಹೋಗಿ ಅಚ್ಮೋನಿಗೆ ಮುಂದುವರಿಯುತ್ತದೆ. |
5
|
ಗಡಿಯು ಅಚ್ಮೋನಿನಿಂದ ಈಜಿಪ್ಟಿನ ನದಿಯ ಕಡೆಗೆ ತಿರುಗಿಕೊಂಡು ಸಮುದ್ರವನ್ನು ಸೇರುವುದು. |
6
|
ಪಶ್ಚಿಮದಿಕ್ಕಿನಲ್ಲಿ ಮೆಡಿಟೆರೇನಿಯನ್ ಸಮುದ್ರದ ತೀರ ನಿಮ್ಮ ದೇಶದ ಮೇರೆಯಾಗಿರುವುದು. |
7
|
ಉತ್ತರದಿಕ್ಕಿನ ಮೇರೆ ಮೆಡಿಟೆರೇನಿಯನ್ ಸಮುದ್ರದಿಂದ ಹಿಡಿದು ಲೆಬನೋನಿನಲ್ಲಿರುವ ಹೋರ್ ಬೆಟ್ಟದವರೆಗೂ ಇರುವುದು. |
8
|
ಹೋರ್ ಬೆಟ್ಟದಿಂದ ಅದು ಲೆಬೊಹಮಾತಿಗೆ ಹೋಗಿ ಅಲ್ಲಿಂದ ಚೆದಾದಿಗೆ ಹೋಗುವುದು. |
9
|
ಬಳಿಕ ಆ ಮೇರೆಯು ಜಿಫ್ರೋನಿಗೆ ಹೋಗಿ ಹಚರೇನಾನಿನಲ್ಲಿ ಮುಗಿಯುವುದು. ಹೀಗೆ ಅದು ನಿಮ್ಮ ಉತ್ತರ ಮೇರೆಯಾಗಿರುವುದು. |
10
|
ನಿಮ್ಮ ಪೂರ್ವಮೇರೆಯು ಹಚರೇನಾನಿನಿಂದ ಹೊರಟು ಶೆಫಾಮಿಗೆ ಹೋಗುವುದು. |
11
|
ಶೆಫಾಮಿನಿಂದ ಆ ಮೇರೆಯು ಆಯಿನಿನ ಪೂರ್ವದಲ್ಲಿರುವ ರಿಬ್ಲಕ್ಕೆ ಹೋಗಿ ಗಲಿಲೇಯ ಸರೋವರದ ಪೂರ್ವದಲ್ಲಿರುವ ಬೆಟ್ಟಗಳನ್ನು ಮುಟ್ಟುವುದು. |
12
|
ಬಳಿಕ ಈ ಮೇರೆಯು ಜೋರ್ಡನ್ ನದಿಯ ಉದ್ದಕ್ಕೂ ಮುಂದುವರೆಯುವುದು. ಅದು ಉಪ್ಪು ಸಮುದ್ರದಲ್ಲಿ ಕೊನೆಗೊಳ್ಳುವುದು. ಇವುಗಳೇ ನಿಮ್ಮ ದೇಶದ ಸುತ್ತಲಿನ ಮೇರೆಗಳು.” |
13
|
ಮೋಶೆಯು ಇಸ್ರೇಲರಿಗೆ ಹೀಗೆ ಆಜ್ಞಾಪಿಸಿದನು: “ನೀವು ಚೀಟುಹಾಕಿ ಭಾಗಮಾಡಿಕೊಳ್ಳುವ ದೇಶವೇ ಇದು. ಒಂಭತ್ತುವರೆ ಕುಲಗಳವರಿಗೆ ಈ ದೇಶವನ್ನು ಕೊಡಬೇಕೆಂದು ಯೆಹೋವನು ಆಜ್ಞಾಪಿಸಿದ್ದಾನೆ. |
14
|
[This verse may not be a part of this translation] |
15
|
[This verse may not be a part of this translation] |
16
|
ಆಗ ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೇನೆಂದರೆ: |
17
|
“ನಿಮಗೋಸ್ಕರ ದೇಶವನ್ನು ಹಂಚಿಕೊಡುವ ಕುಲಪ್ರಧಾನರು ಯಾರೆಂದರೆ: ಮಹಾಯಾಜಕನಾದ ಎಲ್ಲಾಜಾರ್, ನೂನನ ಮಗನಾದ ಯೆಹೋಶುವ |
18
|
ಮತ್ತು ಪ್ರತಿಯೊಂದು ಕುಲದಿಂದ ಒಬ್ಬ ಕುಲಪ್ರಧಾನ. |
19
|
ಪ್ರತಿಯೊಂದು ಕುಲದಿಂದ ನೀವು ನೇಮಿಸಬೇಕಾದವರು ಇವರೇ: ಯೆಹೂದ ಕುಲದಿಂದ ಯೆಫುನ್ನೆಯ ಮಗನಾದ ಕಾಲೇಬ್. |
20
|
ಸಿಮೆಯೋನ್ ಕುಲದಿಂದ ಅಮ್ಮೀಹೂದನ ಮಗನಾದ ಶೆಮೂವೇಲ್. |
21
|
ಬೆನ್ಯಾಮೀನ್ ಕುಲದಿಂದ ಕಿಸ್ಲೋನನ ಮಗನಾದ ಎಲೀದಾದ್. |
22
|
ದಾನ್ ಕುಲದಿಂದ ಯೊಗ್ಲೀಯ ಮಗನಾದ ಬುಕ್ಕೀ ಕುಲಾಧಿಪತಿ. |
23
|
ಯೋಸೇಫನ ಸಂತತಿಯವರಲ್ಲಿ ಮನಸ್ಸೆ ಕುಲದಿಂದ ಏಫೋದನ ಮಗನಾದ ಹನ್ನೀಯೇಲ್ ಕುಲಾಧಿಪತಿ. |
24
|
ಎಫ್ರಾಯೀಮ್ ಕುಲದಿಂದ ಶಿಫ್ಟಾನನ ಮಗನಾದ ಕೆಮೂವೇಲ್ ಕುಲಾಧಿಪತಿ. |
25
|
ಜೆಬುಲೂನ್ ಕುಲದಿಂದ ಪರ್ನಾಕನ ಮಗನಾದ ಎಲೀಚಾಫಾನ್ ಕುಲಾಧಿಪತಿ. |
26
|
ಇಸ್ಸಾಕಾರ್ ಕುಲದಿಂದ ಅಜ್ಜಾನನ ಮಗನಾದ ಪಲ್ಟೀಯೇಲ್ ಕುಲಾಧಿಪತಿ. |
27
|
ಆಶೇರ್ ಕುಲದಿಂದ ಶೆಲೋಮಿಯ ಮಗನಾದ ಅಹೀಹೂದ್ ಕುಲಾಧಿಪತಿ. |
28
|
ನಫ್ತಾಲಿ ಕುಲದಿಂದ ಅಮ್ಮೀಹೂದನ ಮಗನಾದ ಪೆದಹೇಲ್ ಕುಲಾಧಿಪತಿ.” |
29
|
ಕಾನಾನ್ ದೇಶದಲ್ಲಿ, ಇಸ್ರೇಲರಿಗೆ ಅವರವರ ಸ್ವಾಸ್ತ್ಯಗಳನ್ನು ಹಂಚಿಕೊಡುವುದಕ್ಕೆ ಯೆಹೋವನು ಇವರನ್ನೆಲ್ಲಾ ನೇಮಿಸಿದನು. |
Numbers 34:15 Kannada Language Bible Words basic statistical display
COMING SOON ...