1
|
ಒಂದು ದಿನ ಗಿಲ್ಯಾದ್ ಕುಲದ ಕುಟುಂಬಗಳ ನಾಯಕರು ಮೋಶೆಯೊಡನೆಯೂ ಇತರ ಇಸ್ರೇಲರ ಕುಟುಂಬಗಳ ನಾಯಕರೊಡನೆಯೂ ಮಾತಾಡುವುದಕ್ಕೆ ಬಂದರು. (ಗಿಲ್ಯಾದನು ಮಾಕೀರನ ಮಗ; ಮಾಕೀರನು ಮನಸ್ಸೆಯ ಮಗ; ಮನಸ್ಸೆಯು ಯೋಸೇಫನ ಮಗ.) |
2
|
ಅವರು, “ಸ್ವಾಮೀ, ಚೀಟುಹಾಕಿ ಇಸ್ರೇಲರಿಗೆ ದೇಶವನ್ನು ಹಂಚಿಕೊಡಬೇಕೆಂದು ಯೆಹೋವನು ನಿಮಗೆ ಆಜ್ಞಾಪಿಸಿದ್ದಾನೆ. ಅದಲ್ಲದೆ ನಮ್ಮ ಸಂಬಂಧಿಕನಾದ ಚಲ್ಪಹಾದನ ಭೂಮಿಯನ್ನು ಅವನ ಹೆಣ್ಣುಮಕ್ಕಳಿಗೆ ಕೊಡಬೇಕೆಂದು ಯೆಹೋವನು ಆಜ್ಞಾಪಿಸಿದ್ದಾನೆ. |
3
|
ಹೀಗಿರಲು ಅವರು ಇಸ್ರೇಲರ ಬೇರೆ ಯಾವ ಕುಲದವರನ್ನಾದರೂ ಮದುವೆಯಾದರೆ ಅವರ ಸ್ವಾಸ್ತ್ಯವು ನಮ್ಮ ಪೂರ್ವಿಕರ ಕುಲದಿಂದ ತೆಗೆಯಲ್ಪಟ್ಟು, ಅವರು ಮದುವೆಯ ಮೂಲಕ ಸೇರಿಕೊಳ್ಳುವ ಕುಲಕ್ಕೆ ಹೋಗುವುದು. ಇದರಿಂದ ನಮ್ಮ ಸ್ವಾಸ್ತ್ಯಕ್ಕೆ ನಷ್ಟವುಂಟಾಗುವುದು. |
4
|
ಇಸ್ರೇಲರ ಜೂಬಿಲಿ ಸಂವತ್ಸರವು ಬಂದಾಗ ಅವರ ಸ್ವಾಸ್ತ್ಯವು ಅವರು ಸೇರಿಕೊಳ್ಳುವ ಕುಲದ ಸ್ವಾಸ್ತ್ಯಕ್ಕೆ ಕೂಡಿಕೊಳ್ಳುವುದರಿಂದ ನಮ್ಮ ಕುಲದಿಂದ ತೆಗೆಯಲ್ಪಡುವುದು” ಎಂದು ಹೇಳಿದರು. |
5
|
ಆಗ ಮೋಶೆಯು ಯೆಹೋವನ ಅಪ್ಪಣೆಯನ್ನು ಹೊಂದಿ ಇಸ್ರೇಲರಿಗೆ, “ಯೋಸೇಫನ ಸಂತತಿಯವರು ಹೇಳುವುದು ನ್ಯಾಯ. |
6
|
ಆದಕಾರಣ ಚಲ್ಫಹಾದನ ಹೆಣ್ಣುಮಕ್ಕಳು ಮದುವೆಯಾಗುವುದಾದರೆ ತಮ್ಮ ತಂದೆಯ ಗೋತ್ರಕ್ಕೆ ಸಂಬಂಧಿಸಿದ ಯಾರನ್ನು ಬೇಕಾದರೂ ಮದುವೆಯಾಗಬಹುದೆಂದು ಯೆಹೋವನು ಆಜ್ಞಾಪಿಸಿದ್ದಾನೆ. |
7
|
ಇಸ್ರೇಲರ ಯಾವ ಸ್ವಾಸ್ತ್ಯವೂ ಒಂದು ಕುಲದಿಂದ ಬೇರೊಂದು ಕುಲಕ್ಕೆ ಹೋಗಬಾರದು. ಇಸ್ರೇಲರೆಲ್ಲರೂ ತಮ್ಮ ಪೂರ್ವಿಕರಿಂದ ಸ್ವಾಸ್ತ್ಯವಾಗಿ ಪಡೆದುಕೊಂಡ ತಮ್ಮ ಗೋತ್ರದ ಭೂಮಿಯನ್ನು ತಮ್ಮ ಸ್ವಾಧೀನದಲ್ಲೇ ಇಟ್ಟುಕೊಂಡಿರಬೇಕು. |
8
|
ಆದ್ದರಿಂದ ಇಸ್ರೇಲರ ಕುಲಗಳಲ್ಲಿ ಭೂಮಿಯನ್ನು ಸ್ವಾಸ್ತ್ಯವಾಗಿ ಹೊಂದುವ ಪ್ರತಿಯೊಬ್ಬ ಮಗಳು, ತನ್ನ ತಂದೆಯ ಗೋತ್ರದವನನ್ನೇ ಮದುವೆಯಾಗಬೇಕು. |
9
|
ಹೀಗೆ ಯಾವ ಸ್ವಾಸ್ತ್ಯವೂ ಒಂದು ಕುಲದಿಂದ ಬೇರೊಂದು ಕುಲಕ್ಕೆ ಹೋಗದೆ ಇಸ್ರೇಲರ ಪ್ರತಿಯೊಂದು ಕುಲವೂ ತನ್ನ ಸ್ವಾಸ್ತ್ಯವನ್ನು ಹೊಂದಿಕೊಂಡೇ ಇರುವುದು” ಎಂದು ಹೇಳಿದನು. |
10
|
ಯೆಹೋವನು ಮೋಶೆಗೆ ಕೊಟ್ಟ ಆಜ್ಞೆಗೆ ಚಲ್ಪಹಾದನ ಹೆಣ್ಣುಮಕ್ಕಳು ವಿಧೇಯರಾದರು. |
11
|
ದ್ದರಿಂದ ಚಲ್ಪಹಾದನ ಹೆಣ್ಣುಮಕ್ಕಳಾದ ಮಹ್ಲಾ, ತಿರ್ಚಾ, ಹೊಗ್ಲಾ, ಮಿಲ್ಕಾ, ನೋವಾ ಎಂಬವರು ಯೆಹೋವನ ಆಜ್ಞಾನುಸಾರವಾಗಿ ನಡೆದು ತಂದೆಯ ಅಣ್ಣತಮ್ಮಂದಿರ ಗಂಡುಮಕ್ಕಳನ್ನು ಮದುವೆಯಾದರು. |
12
|
ಅವರು ಯೋಸೇಫನ ಮಗನಾದ ಮನಸ್ಸೆಯ ಕುಲದವರನ್ನೇ ಮದುವೆಯಾದದ್ದರಿಂದ ಅವರ ಸ್ವಾಸ್ತ್ಯವು ತಂದೆಯ ಕುಲದಲ್ಲಿಯೇ ನಿಂತಿತು. |
13
|
ಜೆರಿಕೊ ಪಟ್ಟಣದ ಎದುರಾಗಿರುವ ಜೋರ್ಡನ್ ನದಿಯ ಬಳಿಯಲ್ಲಿರುವ ಮೋವಾಬಿನ ಬಯಲಿನಲ್ಲಿ ಯೆಹೋವನು ಇಸ್ರೇಲರಿಗೆ ಮೋಶೆಯ ಮೂಲಕ ಕೊಟ್ಟ ಆಜ್ಞೆಗಳೂ ವಿಧಿಗಳೂ ಇವೇ. |
Numbers 36:7 Kannada Language Bible Words basic statistical display
COMING SOON ...