English Bible Languages

Indian Language Bible Word Collections

Bible Versions

English

Tamil

Hebrew

Greek

Malayalam

Hindi

Telugu

Kannada

Gujarati

Punjabi

Urdu

Bengali

Oriya

Marathi

Assamese

Books

Numbers Chapters

Numbers 7 Verses

1 ಮೋಶೆ ಪವಿತ್ರಗುಡಾರದ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿದ ಮೇಲೆ ಅದನ್ನು ಅದರ ವಸ್ತುಗಳೊಡನೆ, ಯಜ್ಞವೇದಿಕೆಯೊಡನೆ ಮತ್ತು ಅದರ ಎಲ್ಲಾ ಉಪಕರಣಗಳೊಡನೆ ಯೆಹೋವನಿಗಾಗಿ ಅಭಿಷೇಕಿಸಿ ಪ್ರತಿಷ್ಠಿಸಿದನು. ಇವು ಯೆಹೋವನ ಆರಾಧನೆಗಾಗಿ ಮಾತ್ರ ಉಪಯೋಗಿಸಲ್ಪಡುತ್ತವೆಂದು ಹೀಗೆ ಪ್ರತ್ಯೇಕಿಸಲ್ಪಟ್ಟವು.
2 ಬಳಿಕ ಇಸ್ರೇಲಿನ ಪ್ರಧಾನ ಪುರುಷರು, ಅವರ ಕುಟುಂಬಗಳ ನಾಯಕರು ಅಂದರೆ ಜನಗಣತಿಯ ಮೇಲ್ವಿಚಾರಣೆಯನ್ನು ಸಹ ವಹಿಸಿಕೊಂಡಿದ್ದ
3 ಗೋತ್ರಪ್ರಧಾನರು ಮುಂದೆ ಬಂದು, ತಮ್ಮ ಕಾಣಿಕೆಗಳನ್ನು ಸಮರ್ಪಿಸಿದರು. ಇಬ್ಬಿಬ್ಬರು ಆರು ಕಮಾನು ಬಂಡಿಗಳನ್ನೂ ಅವುಗಳನ್ನು ಎಳೆಯುವುದಕ್ಕೆ ಆರು ಜೊತೆ ಎತ್ತುಗಳನ್ನೂ ಕೊಟ್ಟರು. ಪ್ರಧಾನರು ಇವುಗಳನ್ನು ಪವಿತ್ರಗುಡಾರದಲ್ಲಿ ಯೆಹೋವನಿಗೆ ಒಪ್ಪಿಸಿದರು.
4 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:
5 “ಪ್ರಧಾನರಿಂದ ಈ ಕಾಣಿಕೆಗಳನ್ನು ಸ್ವೀಕರಿಸು. ಇವು ದೇವದರ್ಶನಗುಡಾರದ ವರ್ಗಾವಣೆಗೆ ಉಪಯೋಗಿಸಲ್ಪಡಲಿ. ಇವುಗಳನ್ನು ಲೇವಿಯರಿಗೆ ಕೊಡು. ಅವರು ತಮ್ಮ ಕೆಲಸಗಳನ್ನು ಮಾಡಲು ಇದು ಸಹಾಯ ಮಾಡುವುದು.”
6 ಆದ್ದರಿಂದ ಮೋಶೆಯು ಆ ಬಂಡಿಗಳನ್ನೂ ಎತ್ತುಗಳನ್ನೂ ಸ್ವೀಕರಿಸಿ ಅವುಗಳನ್ನು ಲೇವಿಯರಿಗೆ ಕೊಟ್ಟನು.
7 ಅವನು ಗೇರ್ಷೋನ್ ಗೋತ್ರಪುರುಷರಿಗೆ ಅವರ ಕೆಲಸಕ್ಕೆ ಅಗತ್ಯವಾಗಿದ್ದ ಎರಡು ಬಂಡಿಗಳನ್ನು ಮತ್ತು ಎರಡು ಜೊತೆ ಎತ್ತುಗಳನ್ನು ಕೊಟ್ಟನು.
8 ಬಳಿಕ ಮೆರಾರೀಯರ ಕೆಲಸಕ್ಕೆ ಬೇಕಾಗಿದ್ದ ನಾಲ್ಕು ಬಂಡಿಗಳನ್ನೂ ನಾಲ್ಕು ಜೊತೆ ಎತ್ತುಗಳನ್ನೂ ಅವರಿಗೆ ಕೊಟ್ಟನು. ಇವರೆಲ್ಲರು ಮಾಡುವ ಕೆಲಸಕ್ಕೆ ಯಾಜಕನಾದ ಆರೋನನ ಮಗನಾದ ಈತಾಮಾರನು ಮೇಲ್ವಿಚಾರಕನಾಗಿದ್ದನು.
9 ಮೋಶೆಯು ಕೆಹಾತ್ಯರಿಗೆ ಎತ್ತುಗಳನ್ನಾಗಲಿ ಬಂಡಿಗಳನ್ನಾಗಲಿ ಕೊಡಲಿಲ್ಲ. ಯಾಕೆಂದರೆ ಅವರು ಪವಿತ್ರವಸ್ತುಗಳನ್ನು ತಮ್ಮ ಭುಜದ ಮೇಲೆ ಹೊರಬೇಕು. ಅವರಿಗೆ ಈ ಕೆಲಸವು ಕೊಡಲ್ಪಟ್ಟಿತು.
10 ವೇದಿಕೆಯು ಅಭಿಷೇಕಿಸಲ್ಪಟ್ಟಾಗ, ಯಜ್ಞವೇದಿಕೆಯ ಆರಂಭಕ್ಕಾಗಿ ಪ್ರಧಾನರು ಸಹ ತಮ್ಮ ಕಾಣಿಕೆಗಳನ್ನು ವೇದಿಕೆಯ ಮುಂದೆ ತಂದರು.
11 ಯೆಹೋವನು ಮೋಶೆಗೆ, “ಪ್ರತಿದಿನ ಒಬ್ಬ ಪ್ರಧಾನನು ವೇದಿಕೆಯ ಪ್ರತಿಷ್ಠೆಗಾಗಿ ತನ್ನ ಕಾಣಿಕೆಯನ್ನು ತರಬೇಕು” ಎಂದು ಆಜ್ಞಾಪಿಸಿದನು.
12 (12-83) ಹನ್ನೆರಡು ಪ್ರಧಾನರಲ್ಲಿ ಪ್ರತಿಯೊಬ್ಬನೂ ತನ್ನ ಕಾಣಿಕೆಯನ್ನು ತಂದನು. ಅವರು ಕೊಟ್ಟ ಕಾಣಿಕೆಗಳು ಹೀಗಿವೆ: ಪ್ರತಿಯೊಬ್ಬ ಪ್ರಧಾನನು ಮೂರುಕಾಲು ಪೌಂಡು ತೂಕವುಳ್ಳ ಬೆಳ್ಳಿಯ ತಟ್ಟೆಯನ್ನೂ ಒಂದು ಮುಕ್ಕಾಲು ಪೌಂಡು ತೂಕವುಳ್ಳ ಬೆಳ್ಳಿಯ ಬಟ್ಟಲನ್ನೂ ತಂದನು. ಇವೆರಡನ್ನೂ ಅಧಿಕೃತ ಅಳತೆಯಿಂದ ತೂಕ ಮಾಡಲಾಯಿತು. ಧಾನ್ಯಸಮರ್ಪಣೆಗಾಗಿ ಉಪಯೋಗವಾಗುವ ಎಣ್ಣೆ ಬೆರೆಸಿದ ಶ್ರೇಷ್ಠ ಗೋಧಿಹಿಟ್ಟನ್ನು ಬಟ್ಟಲಲ್ಲಿ ಮತ್ತು ತಟ್ಟೆಯಲ್ಲಿ ತುಂಬಿಡಲಾಗಿತ್ತು. ಧೂಪದ್ರವ್ಯ ತುಂಬಿದ್ದ ನಾಲ್ಕು ತೊಲೆ ತೂಕವುಳ್ಳ ಚಿನ್ನದ ಧೂಪಾರತಿಯನ್ನೂ ಒಂದು ಎಳೆಯ ಹೋರಿಯನ್ನೂ ಸರ್ವಾಂಗಹೋಮಕ್ಕಾಗಿ ಒಂದು ಹೋರಿಯನ್ನೂ ಒಂದು ಟಗರನ್ನೂ ಒಂದು ವರ್ಷದ ಗಂಡು ಕುರಿಮರಿಯನ್ನೂ ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ಸಮಾಧಾನಯಜ್ಞಕ್ಕಾಗಿ ಎರಡು ಎತ್ತುಗಳನ್ನೂ ಐದು ಟಗರುಗಳನ್ನೂ ಐದು ಹೋತಗಳನ್ನೂ ಒಂದು ವರ್ಷದ ಐದು ಗಂಡು ಕುರಿಮರಿಗಳನ್ನೂ ಪ್ರತಿಯೊಬ್ಬ ಯಾಜಕನೂ ತಂದನು. ಇವೆಲ್ಲವೂ ಯಜ್ಞವಾಗಿ ಸಮರ್ಪಿಸಲ್ಪಟ್ಟವು. ಮೊದಲನೆಯ ದಿನದಲ್ಲಿ ಯೆಹೂದ ಕುಲಾಧಿಪತಿ ಅಮ್ಮೀನಾದ್ವಾನ ಮಗನಾದ ನಹಶೋನನು ತನ್ನ ಕಾಣಿಕೆಗಳನ್ನು ತಂದನು. ಎರಡನೆಯ ದಿನದಲ್ಲಿ ಇಸ್ಸಾಕಾರ್ ಕುಲಾಧಿಪತಿ ಚೂವಾರನ ಮಗನಾದ ನೆತನೇಲನು ತನ್ನ ಕಾಣಿಕೆಗಳನ್ನು ತಂದನು. ಮೂರನೆಯ ದಿನದಲ್ಲಿ ಜೆಬುಲೂನ್ ಕುಲಾಧಿಪತಿ ಹೇಲೋನನ ಮಗನಾದ ಎಲೀಯಾಬನು ತನ್ನ ಕಾಣಿಕೆಗಳನ್ನು ತಂದನು. ನಾಲ್ಕನೆಯ ದಿನದಲ್ಲಿ ರೂಬೇನ್ ಕುಲಾಧಿಪತಿ ಶೆದೇಯೂರನ ಮಗನಾದ ಎಲೀಚೂರನು ತನ್ನ ಕಾಣಿಕೆಗಳನ್ನು ತಂದನು. ಐದನೆಯ ದಿನದಲ್ಲಿ ಸಿಮೆಯೋನ್ ಕುಲಾಧಿಪತಿ ಚೂರೀಷದ್ದೈಯ ಮಗನಾದ ಶೆಲುಮೀಯೇಲನು ತನ್ನ ಕಾಣಿಕೆಗಳನ್ನು ತಂದನು. ಆರನೆಯ ದಿನದಲ್ಲಿ ಗಾದ್ ಕುಲಾಧಿಪತಿ ದೆಗೂವೇಲನ ಮಗನಾದ ಎಲ್ಯಾಸಾಫನು ತನ್ನ ಕಾಣಿಕೆಗಳನ್ನು ತಂದನು. ಏಳನೆಯ ದಿನದಲ್ಲಿ ಎಫ್ರಾಯೀಮ್ ಕುಲಾಧಿಪತಿ ಅಮ್ಮೀಹೂದನ ಮಗನಾದ ಎಲೀಷಾಮನು ತನ್ನ ಕಾಣಿಕೆಗಳನ್ನು ತಂದನು. ಎಂಟನೆಯ ದಿನದಲ್ಲಿ ಮನಸ್ಸೆ ಕುಲಾಧಿಪತಿ ಪೆದಾಚೂರನ ಮಗನಾದ ಗಮ್ಲೀಯೇಲನು ತನ್ನ ಕಾಣಿಕೆಗಳನ್ನು ತಂದನು. ಒಂಭತ್ತನೆಯ ದಿನದಲ್ಲಿ ಬೆನ್ಯಾಮೀನ್ ಕುಲಾಧಿಪತಿ ಗಿದ್ಯೋನಿಯ ಮಗನಾದ ಅಬೀದಾನನು ತನ್ನ ಕಾಣಿಕೆಗಳನ್ನು ತಂದನು. ಹತ್ತನೆಯ ದಿನದಲ್ಲಿ ದಾನ್ ಕುಲಾಧಿಪತಿ ಅಮ್ಮೀಷದ್ದೈನ ಮಗನಾದ ಅಹೀಗೆಜರನು ತನ್ನ ಕಾಣಿಕೆಗಳನ್ನು ತಂದನು. ಹನ್ನೊಂದನೆಯ ದಿನದಲ್ಲಿ ಆಶೇರ್ ಕುಲಾಧಿಪತಿ ಒಕ್ರಾನನ ಮಗನಾದ ಪಗೀಯೇಲನು ತನ್ನ ಕಾಣಿಕೆಗಳನ್ನು ತಂದನು. ಹನ್ನೆರಡನೆಯ ದಿನದಲ್ಲಿ ನಫ್ತಾಲಿ ಕುಲಾಧಿಪತಿ ಏನಾನನ ಮಗನಾದ ಅಹೀರನು ತನ್ನ ಕಾಣಿಕೆಗಳನ್ನು ತಂದನು.
84 ಇವೆಲ್ಲವೂ ಇಸ್ರೇಲರ ಪ್ರಧಾನರು ತಂದ ಕಾಣಿಕೆಗಳು. ಯಜ್ಞವೇದಿಕೆಯನ್ನು ಅಭಿಷೇಕಿಸಿ ಪ್ರತಿಷ್ಠಿಸಿದಾಗ ಯಜ್ಞವೇದಿಕೆಗೋಸ್ಕರ ಅವರು ಕೊಟ್ಟ ಕಾಣಿಕೆಗಳು ಇವುಗಳೇ. ಅವರು ಹನ್ನೆರಡು ಬೆಳ್ಳಿಯ ತಟ್ಟೆಗಳನ್ನೂ ಹನ್ನೆರಡು ಬೆಳ್ಳಿಯ ಬಟ್ಟಲುಗಳನ್ನೂ ಹನ್ನೆರಡು ಚಿನ್ನದ ಧೂಪಾರತಿಗಳನ್ನೂ ತಂದರು.
85 ಪ್ರತಿಯೊಂದು ಬೆಳ್ಳಿಯ ತಟ್ಟೆಯ ತೂಕ ಸುಮಾರು ಮೂರುಕಾಲು ಪೌಂಡುಗಳು, ಪ್ರತಿ ಬಟ್ಟಲು ಸುಮಾರು ಮೂರುಮುಕ್ಕಾಲು ಪೌಂಡು ತೂಕವುಳ್ಳದ್ದಾಗಿದ್ದವು. ಬೆಳ್ಳಿಯ ತಟ್ಟೆಗಳು ಮತ್ತು ಬೆಳ್ಳಿಯ ಬಟ್ಟಲುಗಳು ಒಟ್ಟಿಗೆ ಅಧಿಕೃತ ಅಳತೆಯ ಪ್ರಕಾರ ಅರವತ್ತು ಪೌಂಡುಗಳಷ್ಟು ತೂಕವಾಗಿದ್ದವು.
86 ಧೂಪವುಳ್ಳ ಹನ್ನೆರಡು ಚಿನ್ನದ ಧೂಪಾರತಿಗಳಲ್ಲಿ ಪ್ರತಿಯೊಂದು ಧೂಪಾರತಿ ಅಧಿಕೃತ ಅಳತೆಯ ಪ್ರಕಾರ ಹತ್ತು ತೊಲೆ ತೂಕವುಳ್ಳದ್ದಾಗಿತ್ತು. ಹನ್ನೆರಡು ಚಿನ್ನದ ಧೂಪಾರತಿಗಳು ಒಟ್ಟಿಗೆ ನೂರಿಪ್ಪತ್ತು ತೊಲೆಗಳಷ್ಟು ತೂಕವುಳ್ಳದ್ದಾಗಿದ್ದವು.
87 ಸರ್ವಾಂಗಹೋಮಕ್ಕಾಗಿ ಉಪಯೋಗಿಸಲ್ಪಟ್ಟ ಒಟ್ಟು ಪಶುಗಳು: ಹನ್ನೆರಡು ಹೋರಿಗಳು, ಹನ್ನೆರಡು ಟಗರುಗಳು, ಒಂದು ವರ್ಷದ ಎರಡು ಗಂಡು ಕುರಿಮರಿಗಳು. ಆ ಸಮರ್ಪಣೆಗಳೊಂದಿಗೆ ಧಾನ್ಯಸಮರ್ಪಣೆಗಳೂ ಅರ್ಪಿಸಲ್ಪಟ್ಟವು. ದೋಷಪರಿಹಾರಕ ಯಜ್ಞವಾಗಿ ಹನ್ನೆರಡು ಹೋತಗಳು ಯೆಹೋವನಿಗೆ ಸಮರ್ಪಿಸಲ್ಪಟ್ಟವು.
88 ಸಮಾಧಾನಯಜ್ಞಕ್ಕಾಗಿಯೂ ಪ್ರಧಾನರು ಪಶುಗಳನ್ನು ಕೊಟ್ಟರು. ಅವುಗಳ ಒಟ್ಟು ಸಂಖ್ಯೆ ಇಪ್ಪತ್ನಾಲ್ಕು ಹೋರಿಗಳು, ಅರವತ್ತು ಟಗರುಗಳು, ಅರವತ್ತು ಹೋತಗಳು, ಒಂದು ವರ್ಷದ ಅರವತ್ತು ಗಂಡು ಕುರಿಮರಿಗಳು. ಯಜ್ಞವೇದಿಕೆಯನ್ನು ಅಭಿಷೇಕಿಸಿ ಪ್ರತಿಷ್ಠಿಸಿದಾಗ ಅದಕೋಸ್ಕರ ಅವರು ಕೊಟ್ಟ ಕಾಣಿಕೆಗಳು ಇವೇ.
89 ಮೋಶೆ ಯೆಹೋವನ ಸಂಗಡ ಮಾತಾಡಲು ದೇವದರ್ಶನಗುಡಾರದೊಳಗೆ ಹೋದಾಗ, ಒಡಂಬಡಿಕೆಯ ಪವಿತ್ರ ಪೆಟ್ಟಿಗೆಯ ಹೊದಿಕೆಯ ಮೇಲಿದ್ದ ಎರಡು ಕೆರೂಬಿಗಳ ಮಧ್ಯದಿಂದ ಯೆಹೋವನ ಸ್ವರವು ಮೋಶೆಗೆ ಕೇಳಿಸಿತು. ಹೀಗೆ ಆತನು ಅವನ ಸಂಗಡ ಮಾತಾಡಿದನು.
×

Alert

×