1
|
ನಿಮ್ಮಲ್ಲಿ ಕ್ರಿಸ್ತನಿಂದಾದ ಉತ್ತೇಜನ, ಪ್ರೀತಿಯ ಪ್ರೇರಣೆ, ಪವಿತ್ರಾತ್ಮನ ಅನ್ಯೋನ್ಯತೆ, ಕಾರುಣ್ಯ ದಯಾರಸಗಳು ಇವೆಯೋ? |
2
|
ನಿಮ್ಮಲ್ಲಿ ಇವುಗಳು ಇರುವುದಾದರೆ, ನೀವೆಲ್ಲರೂ ಏಕಮನಸ್ಸುಳ್ಳವರಾಗಿರಿ. ಆಗ ನನ್ನ ಸಂತೋಷವು ಪರಿಪೂರ್ಣವಾಗುವುದು. ಒಬ್ಬರಿಗೊಬ್ಬರು ಒಂದೇ ಪ್ರೀತಿ ಉಳ್ಳವರಾಗಿರಿ. ಅನ್ಯೋನ್ಯಭಾವವುಳ್ಳವರಾಗಿದ್ದು ಒಂದೇ ಗುರಿಯಿಂದ ಜೀವಿಸಿರಿ. |
3
|
ನೀವು ಯಾವುದನ್ನೇ ಮಾಡುವಾಗ, ಸ್ವಾರ್ಥವಾಗಲಿ ಅಹಂಕಾರವಾಗಲಿ ನಿಮಗೆ ಮಾರ್ಗದರ್ಶಕವಾಗದಂತೆ ನೋಡಿಕೊಳ್ಳಿರಿ. ದೀನಭಾವವುಳ್ಳವರಾಗಿದ್ದು ನಿಮಗಿಂತಲೂ ಹೆಚ್ಚಾಗಿ ಬೇರೆಯವರಿಗೆ ಗೌರವವನ್ನು ಕೊಡಿರಿ. |
4
|
ನಿಮ್ಮ ಅಭಿಲಾಷೆಗಳ ಬಗ್ಗೆ ಮಾತ್ರ ಚಿಂತಿಸದೆ ಇತರರ ಜೀವಿತದ ಬಗ್ಗೆಯೂ ಚಿಂತಿಸಿರಿ. |
5
|
ಕ್ರಿಸ್ತ ಯೇಸುವಿನಲ್ಲಿದ್ದಂಥ ಮನಸ್ಸು ನಿಮ್ಮಲ್ಲಿಯೂ ಇರಲಿ. |
6
|
ಆತನು ದೇವಸ್ವರೂಪನಾಗಿದ್ದರೂ ದೇವರಿಗೆ ಸರಿಸಮನಾಗಿದ್ದರೂ ಆ ಪದವಿಯನ್ನು ಬಿಡಲಾರೆ ಎನ್ನಲಿಲ್ಲ. |
7
|
ಆ ಪದವಿಯನ್ನು ಆತನು ಬಿಟ್ಟುಕೊಟ್ಟು ಸೇವಕನ ಸ್ವಭಾವವನ್ನು ಧರಿಸಿಕೊಂಡು ಮಾನವ ರೂಪದಲ್ಲಿ ಬಂದನು. |
8
|
ಆತನು ಮನುಷ್ಯನಾಗಿ ಜೀವಿಸುತ್ತಿದ್ದಾಗ ತನ್ನನ್ನು ತಗ್ಗಿಸಿಕೊಂಡು ಮರಣವನ್ನೂ ಕಡೆಗಣಿಸಿ ದೇವರಿಗೆ ಸಂಪೂರ್ಣ ವಿಧೇಯನಾಗಿ, ಶಿಲುಬೆಯ ಮೇಲೆ ಪ್ರಾಣವನ್ನೇ ಕೊಟ್ಟನು. |
9
|
ಆದ್ದರಿಂದ ದೇವರು ಆತನನ್ನು ಅತ್ಯುನ್ನತವಾದ ಸ್ಥಾನಕ್ಕೇರಿಸಿ ಉಳಿದೆಲ್ಲ ಹೆಸರುಗಳಿಗಿಂತ ಶ್ರೇಷ್ಠವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ. |
10
|
ಆದುದರಿಂದ ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಪಾತಾಳದಲ್ಲಿಯೂ ಇರುವ ಪ್ರತಿಯೊಬ್ಬರು ಯೇಸುವಿನ ಹೆಸರಿನಲ್ಲಿ ಅಡ್ಡಬಿದ್ದು, |
11
|
“ಯೇಸು ಕ್ರಿಸ್ತನೇ ಪ್ರಭು”ವೆಂದು ಹೇಳುವರು. ಇದರಿಂದ ತಂದೆಯಾದ ದೇವರಿಗೆ ಮಹಿಮೆ ಉಂಟಾಗುವುದು. |
12
|
ನನ್ನ ಪ್ರಿಯ ಸ್ನೇಹಿತರೇ, ನಾನು ನಿಮ್ಮಲ್ಲಿದ್ದಾಗ ನೀವು ಯಾವಾಗಲೂ ನನ್ನ ಮಾತಿನಂತೆ ನಡೆದುಕೊಂಡಿರಿ. ಈಗ ನಾನು ದೂರವಿರುವಾಗಲೂ ಇನ್ನೂ ಹೆಚ್ಚಿನ ಆಸಕ್ತಿಯಿಂದ ನಡೆದುಕೊಳ್ಳಿರಿ. ನೀವು ದೇವರಿಗೆ ಭಯಭಕ್ತಿಯಿಂದಿದ್ದು ನಿಮ್ಮ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ. |
13
|
ಹೌದು, ಆತನಿಗೆ ಮೆಚ್ಚಿಕೆಕರವಾದ ಕಾರ್ಯಗಳನ್ನು ಮಾಡಬೇಕೆಂಬ ಅಪೇಕ್ಷೆಯನ್ನು ಆತನೇ ನಿಮ್ಮಲ್ಲಿ ಹುಟ್ಟಿಸುತ್ತಾನೆ ಅಲ್ಲದೆ ಅವುಗಳನ್ನು ಮಾಡಲು ಆತನೇ ನಿಮಗೆ ಶಕ್ತಿಯನ್ನು ಕೊಡುತ್ತಾನೆ. |
14
|
ನೀವು ಮಾಡುವ ಪ್ರತಿಯೊಂದನ್ನು ಗುಣಗುಟ್ಟದೆಯೂ ವಿವಾದವಿಲ್ಲದೆಯೂ ಮಾಡಿರಿ. |
15
|
ಆಗ ಮುಗ್ಧರೂ ಪರಿಶುದ್ಧರೂ ಆಗಿದ್ದು ಕಳಂಕರಹಿತವಾದ ದೇವಮಕ್ಕಳಾಗಿರುತ್ತೀರಿ. ದುಷ್ಟಜನರ ಮಧ್ಯದಲ್ಲಿ ವಾಸವಾಗಿರುವ ನೀವು ಕಾರ್ಗತ್ತಲೆಯಲ್ಲಿ ಪ್ರಕಾಶಿಸುವ ನಕ್ಷತ್ರಮಂಡಲದಂತಿದ್ದೀರಿ. |
16
|
ಜೀವದಾಯಕವಾದ ವಾಕ್ಯವನ್ನು ನೀವು ಆ ಜನರಿಗೆ ಕೊಟ್ಟರೆ, ಕ್ರಿಸ್ತನು ಬಂದಾಗ ನಾನು ಹೆಮ್ಮೆಯಿಂದಿರಲು ಸಾಧ್ಯವಾಗುತ್ತದೆ, ಏಕೆಂದರೆ ನನ್ನ ಕೆಲಸವು ವ್ಯರ್ಥವಾಗಲಿಲ್ಲ. ನಾನು ಪಂದ್ಯದಲ್ಲಿ ಓಡಿ ಗೆದ್ದೆನು. |
17
|
ನೀವು ನಿಮ್ಮ ಜೀವಿತಗಳನ್ನು ದೇವರ ಸೇವೆಗಾಗಿ ಯಜ್ಞದೋಪಾದಿಯಲ್ಲಿ ಅರ್ಪಿಸಿಕೊಳ್ಳಲು ನಿಮ್ಮ ನಂಬಿಕೆಯು ನಿಮ್ಮನ್ನು ಪ್ರೇರೇಪಿಸುತ್ತದೆ. ಒಂದುವೇಳೆ, ನಿಮ್ಮ ಯಜ್ಞದೊಡನೆ ನಾನೇ ಪಾನದ್ರವ್ಯವಾಗಿ ಅರ್ಪಿತವಾಗಬೇಕಾದರೂ ಸಂತೋಷಿಸುತ್ತೇನೆ, ನಿಮ್ಮೆಲ್ಲರೊಂದಿಗೆ ಸಂತೋಷಿಸುತ್ತೇನೆ. |
18
|
ಹಾಗೆಯೇ ನೀವು ಸಹ ಸಂತೋಷಿಸಿರಿ, ನನ್ನೊಂದಿಗೆ ಸಂತೋಷಿಸಿರಿ. |
19
|
ನಿಮ್ಮ ಬಳಿಗೆ ತಿಮೊಥೆಯನನ್ನು ಆದಷ್ಟು ಬೇಗನೆ ಕಳುಹಿಸಿಕೊಡಲು ಪ್ರಭುವಾದ ಯೇಸುವಿನಲ್ಲಿ ನಿರೀಕ್ಷಿಸುತ್ತಿದ್ದೇನೆ. ಅವನ ಮೂಲಕ ನಿಮ್ಮ ಯೋಗಕ್ಷೇವುವನ್ನು ತಿಳಿದುಕೊಳ್ಳುವುದರಿಂದ ನನಗೆ ಪ್ರೋತ್ಸಾಹವಾಗಬಹುದು. |
20
|
ಅವನಂತೆ ನಿಮ್ಮ ವಿಷಯದಲ್ಲಿ ನಿಜವಾಗಿಯೂ ಚಿಂತಿಸುವವರು ನನ್ನ ಬಳಿ ಯಾರೂ ಇಲ್ಲ. |
21
|
ಉಳಿದವರು ಕೇವಲ ತಮ್ಮ ಬಗ್ಗೆ ಚಿಂತಿಸುತ್ತಾರೆಯೇ ಹೊರತು ಕ್ರಿಸ್ತ ಯೇಸುವಿನ ಸೇವೆಯ ಬಗ್ಗೆ ಚಿಂತಿಸುವುದಿಲ್ಲ. |
22
|
ತಿಮೊಥೆಯನು ಎಂಥವನೆಂಬುದು ನಿಮಗೆ ಗೊತ್ತಿದೆ. ಮಗನು ತನ್ನ ತಂದೆಯೊಡನೆ ಸೇವೆ ಮಾಡುವಂತೆ ಅವನು ಸುವಾರ್ತೆಯನ್ನು ತಿಳಿಸುವುದರಲ್ಲಿ ನನ್ನೊಂದಿಗೆ ಸೇವೆ ಮಾಡಿದನು. |
23
|
ನನ್ನ ಬಗ್ಗೆ ನಡೆಯುತ್ತಿರುವ ವಿಚಾರಣೆಯ ಫಲಿತಾಂಶವು ತಿಳಿದಕೂಡಲೇ ಅವನನ್ನು ನಿಮ್ಮ ಬಳಿಗೆ ಕಳುಹಿಸುತ್ತೇನೆ. |
24
|
ಅಲ್ಲದೆ ಪ್ರಭುವಿನ ಸಹಾಯದಿಂದ ನಿಮ್ಮ ಬಳಿಗೆ ಅದಷ್ಟು ಬೇಗನೆ ಬರುತ್ತೇನೆ ಎಂಬ ಭರವಸೆ ನನಗಿದೆ. |
25
|
ಎಪಫ್ರೊದೀತನು ಕ್ರಿಸ್ತನಲ್ಲಿ ನನ್ನ ಸಹೋದರನಾಗಿದ್ದಾನೆ. ಕ್ರಿಸ್ತನ ಸೈನ್ಯದಲ್ಲಿ ಅವನು ನನ್ನೊಂದಿಗೆ ಕೆಲಸ ಮಾಡುತ್ತಿದ್ದಾನೆ ಮತ್ತು ಸೇವೆ ಮಾಡುತ್ತಿದ್ದಾನೆ. ನನಗೆ ಸಹಾಯಬೇಕಿದ್ದಾಗ, ನೀವು ಅವನನ್ನು ನನ್ನ ಬಳಿಗೆ ಕಳುಹಿಸಿಕೊಟ್ಟಿರಿ. ಈಗ ನಾನು ಅವನನ್ನು ನಿಮ್ಮ ಬಳಿಗೆ ಮತ್ತೆ ಕಳುಹಿಸಬೇಕೆಂದಿದ್ದೇನೆ. |
26
|
ಏಕೆಂದರೆ ಅವನು ನಿಮ್ಮೆಲ್ಲರನ್ನು ನೋಡಲು ಬಹು ತವಕಪಡುತ್ತಿದ್ದಾನೆ. ತಾನು ಅಸ್ವಸ್ಥನಾಗಿದ್ದದ್ದು ನಿಮಗೆ ತಿಳಿದದ್ದರಿಂದ ಅವನಿಗೆ ಚಿಂತೆಯಾಗಿದೆ. |
27
|
ಅವನು ಅನಾರೋಗ್ಯದಿಂದ ಸಾಯುವ ಸ್ಥಿತಿಯಲ್ಲಿದ್ದನು. ಆದರೆ ದೇವರು ಅವನನ್ನು ಕರುಣಿಸಿದನು; ಅವನನ್ನು ಮಾತ್ರವಲ್ಲದೆ ನನ್ನನ್ನು ಸಹ ಕರುಣಿಸಿದನು. |
28
|
ಆದ್ದರಿಂದ ಅವನನ್ನು ನಿಮ್ಮ ಬಳಿಗೆ ಕಳುಹಿಸಿಕೊಡಲು ನಾನು ಬಹಳ ತವಕಪಡುತ್ತಿದ್ದೇನೆ. ನೀವು ಅವನನ್ನು ನೋಡಿದಾಗ ಸಂತೋಷಪಡುತ್ತೀರಿ ಮತ್ತು ನಿಮ್ಮ ವಿಷಯದಲ್ಲಿ ನನಗಿರುವ ಚಿಂತೆಯು ಕೊನೆಗೊಳ್ಳುತ್ತದೆ. |
29
|
ಮಹಾ ಆನಂದದಿಂದ ಪ್ರಭುವಿನಲ್ಲಿ ಅವನನ್ನು ಸ್ವಾಗತಿಸಿರಿ. ಎಪಫ್ರೊದೀತನಂಥ ಜನರನ್ನು ಗೌರವಿಸಿರಿ. |
30
|
ಅವನು ಕ್ರಿಸ್ತನ ಕೆಲಸಕ್ಕಾಗಿ ಬಹು ಮಟ್ಟಿಗೆ ತನ್ನ ಪ್ರಾಣವನ್ನೇ ಕೊಟ್ಟದ್ದರಿಂದ ಅವನಿಗೆ ಮಾನ್ಯತೆ ದೊರೆಯಬೇಕು. ನನಗೆ ಸಹಾಯಮಾಡಲು ಅವನು ತನ್ನ ಪ್ರಾಣವನ್ನೇ ಅಪಾಯಕ್ಕೆ ಈಡುಮಾಡಿಕೊಂಡನು. ಈ ರೀತಿಯ ಸಹಾಯ ಮಾಡಲು ನಿಮಗೆ ಸಾಧ್ಯವಾಗಲಿಲ್ಲ. |
Philippians 2:1 Kannada Language Bible Words basic statistical display
COMING SOON ...