1
|
ನನ್ನ ಸಹೋದರ ಸಹೋದರಿಯರೇ, ಪ್ರಭುವಿನಲ್ಲಿ ಸಂತೋಷವಾಗಿರಿ. ನಾನು ಮೊದಲು ಬರೆದದ್ದನ್ನೇ ಮತ್ತೆ ಬರೆಯಲು ನನಗೆ ಬೇಸರವೇನೂ ಇಲ್ಲ; ಏಕೆಂದರೆ ಅದು ನಿಮ್ಮನ್ನು ಮತ್ತಷ್ಟು ಸಂರಕ್ಷಿಸುತ್ತದೆ. |
2
|
ಕೇಡು ಮಾಡುವಂಥ ಜನರ ವಿಷಯದಲ್ಲಿ ಎಚ್ಚರಿಕೆಯಿಂದಿರಿ. ಅವರು ನಾಯಿಗಳಂತಿದ್ದಾರೆ. ಸುನ್ನತಿ ಎಂದು ಹೇಳಿಕೊಂಡು ಅಂಗಚ್ಛೇದನೆ ಮಾಡುವವರ ವಿಷಯದಲ್ಲಿ ಎಚ್ಚರಿಕೆಯಾಗಿರಿ. |
3
|
ನಾವಾದರೋ ನಿಜವಾದ ಸುನ್ನತಿಯನ್ನು ಹೊಂದಿದವರಾಗಿದ್ದೇವೆ; ದೇವರನ್ನು ಆತ್ಮನ ಮೂಲಕ ಆರಾಧಿಸುವವರಾಗಿದ್ದೇವೆ. ನಾವು ಕ್ರಿಸ್ತ ಯೇಸುವಿನಲ್ಲಿರಲು ಹೆಮ್ಮೆಪಡುತ್ತೇವೆ. ನಾವು ನಮ್ಮ ಮೇಲಾಗಲಿ ನಾವು ಮಾಡಬಲ್ಲವುಗಳ ಮೇಲಾಗಲಿ ಭರವಸೆ ಇಡುವುದಿಲ್ಲ. |
4
|
ನಾನು ನನ್ನ ಮೇಲೆ ಭರವಸೆ ಇಡಬಲ್ಲವನಾಗಿದ್ದರೂ ಇಡುವುದಿಲ್ಲ. ತನ್ನ ಮೇಲೆ ಭರವಸೆ ಇಡಲು ತನಗೆ ಆಧಾರವಿರುವುದಾಗಿ ಯಾವನಾದರೂ ಯೋಚಿಸಿದರೆ, ನನ್ನ ಮೇಲೆ ಭರವಸೆ ಇಡಲು ನನಗೆ ಅದಕ್ಕಿಂತಲೂ ಹೆಚ್ಚಿನ ಆಧಾರವಿದೆ. |
5
|
ಹುಟ್ಟಿದ ಎಂಟನೆಯ ದಿನದಲ್ಲಿ ನನಗೆ ಸುನ್ನತಿಯಾಯಿತು. ನಾನು ಇಸ್ರೇಲ್ ವಂಶದವನು ಮತ್ತು ಬೆನ್ಯಾಮೀನನ ಕುಲದವನು. ನಾನು ಇಬ್ರಿಯನು ಮತ್ತು ನನ್ನ ತಂದೆತಾಯಿಗಳು ಸಹ ಇಬ್ರಿಯರು. ನಾನು ಮೋಶೆಯ ಧರ್ಮಶಾಸ್ತ್ರವನ್ನು ಮುಖ್ಯವಾದದ್ದೆಂದು ಪರಿಗಣಿಸಿ ಫರಿಸಾಯನಾದೆನು; |
6
|
ಯೆಹೂದ್ಯ ಧರ್ಮದಲ್ಲಿ ಬಹಳ ಆಸಕ್ತಿಯುಳ್ಳವನಾಗಿದ್ದು ಕ್ರೈಸ್ತಸಭೆಯನ್ನು (ವಿಶ್ವಾಸಿಗಳನ್ನು) ಹಿಂಸಿಸಿದೆನು. ಮೋಶೆಯ ಧರ್ಮಶಾಸ್ತ್ರಕ್ಕೆ ಯಾವಾಗಲೂ ವಿಧೇಯನಾಗಿದ್ದುದರಿಂದ ಯಾರೂ ನನ್ನ ವಿಷಯದಲ್ಲಿ ತಪ್ಪನ್ನು ಕಂಡುಹಿಡಿಯಲಾಗಲಿಲ್ಲ. |
7
|
ಒಂದು ಕಾಲದಲ್ಲಿ ಇವುಗಳೆಲ್ಲ ನನಗೆ ಮುಖ್ಯವಾಗಿದ್ದವು. ಆದರೆ ಈಗ ಅವುಗಳೆಲ್ಲ ಕ್ರಿಸ್ತನ ದೆಸೆಯಿಂದ ನಿಷ್ಪ್ರಯೋಜಕವಾಗಿವೆ. |
8
|
ಅಷ್ಟೇ ಅಲ್ಲ, ನನ್ನ ಪ್ರಭುವಾದ ಯೇಸು ಕ್ರಿಸ್ತನನ್ನು ತಿಳಿದುಕೊಳ್ಳುವುದೇ ಎಲ್ಲಾ ಸಂಗತಿಗಳಿಗಿಂತಲೂ ಅತಿಶ್ರೇಷ್ಠವಾದದ್ದೆಂದು ನನಗೆ ಮನದಟ್ಟಾಗಿದೆ. ನಾನು ಯಾವುದನ್ನು ಮುಖ್ಯವಾದವುಗಳೆಂದು ಪರಿಗಣಿಸಿದ್ದೆನೊ ಅವುಗಳನ್ನೆಲ್ಲ ಕ್ರಿಸ್ತನ ನಿಮಿತ್ತ ಕಳೆದುಕೊಂಡೆನು. ಅವುಗಳೆಲ್ಲ ನಿಷ್ಪ್ರಯೋಜಕವಾದವುಗಳೆಂದು ನನಗೆ ತಿಳಿದಿದೆ. |
9
|
ನಾನು ಕ್ರಿಸ್ತನನ್ನು ಹೊಂದಿಕೊಳ್ಳಲು ಮತ್ತು ಕ್ರಿಸ್ತನಲ್ಲಿರಲು ಇದು ನನಗೆ ಅವಕಾಶ ಮಾಡಿಕೊಡುತ್ತದೆ. ನಾನು ಕ್ರಿಸ್ತನ ಮೂಲಕ ನೀತಿವಂತನಾಗಿದ್ದೇನೆ. ಈ ನೀತಿಯು, ಧರ್ಮಶಾಸ್ತ್ರವನ್ನು ಅನುಸರಿಸಿದ ಮಾತ್ರಕ್ಕೆ ದೊರೆಯುವುದಿಲ್ಲ. ಇದು ನಂಬಿಕೆಯ ಮೂಲಕ ದೇವರಿಂದ ಬರುತ್ತದೆ. ಕ್ರಿಸ್ತನಲ್ಲಿ ನನಗಿರುವ ನಂಬಿಕೆಯ ಮೂಲಕ ದೇವರು ನನ್ನನ್ನು ನೀತಿವಂತನನ್ನಾಗಿ ಮಾಡಿದನು. |
10
|
ಕ್ರಿಸ್ತನನ್ನೂ ಪುನರುತ್ಥಾನದ ಶಕ್ತಿಯನ್ನೂ ತಿಳಿದುಕೊಂಡು ಆತನ ಸಂಕಟದಲ್ಲಿ ಪಾಲುಗಾರನಾಗಿ ಆತನ ಮರಣದಲ್ಲಿ ಆತನಂತಾಗಬೇಕೆಂಬುದೇ ನನ್ನ ಅಪೇಕ್ಷೆ. |
11
|
ಹೀಗಾದರೆ, ನಾನು ಸತ್ತವರೊಳಗಿಂದ ಎಬ್ಬಿಸಲ್ಪಡುತ್ತೇನೆ ಎಂಬ ನಿರೀಕ್ಷೆ ನನಗಿದೆ. |
12
|
ಈಗಾಗಲೇ ನಾನು ಇದೆಲ್ಲವನ್ನು ಸಾಧಿಸಿ ಪರಿಪೂರ್ಣತೆಯನ್ನು ಗಳಿಸಿದ್ದೇನೆ ಎಂದು ಹೇಳುತ್ತಿಲ್ಲ. ನಾನು ಆ ಗುರಿಯನ್ನು ಇನ್ನೂ ಮುಟ್ಟಿಲ್ಲ. ಆದರೆ ಆ ಗುರಿಯನ್ನು ಮುಟ್ಟಿ ಅದನ್ನು ನನ್ನದಾಗಿಸಿಕೊಳ್ಳಲು ಪ್ರಯತ್ನಿಸುತ್ತಿದ್ದೇನೆ. ಇದು ಕ್ರಿಸ್ತನ ಅಪೇಕ್ಷೆ. ಆದಕಾರಣವೇ, ಕ್ರಿಸ್ತನು ನನ್ನನ್ನು ತನ್ನವನನ್ನಾಗಿ ಮಾಡಿಕೊಂಡನು. |
13
|
ಸಹೋದರ ಸಹೋದರಿಯರೇ, ನಾನಿನ್ನೂ ಆ ಗುರಿಯನ್ನು ಮುಟ್ಟಿಲ್ಲವೆಂಬುದು ನನಗೆ ಗೊತ್ತಿದೆ. ಆದರೆ ನಾನು ಯಾವಾಗಲೂ ಹಿಂದಿನ ಸಂಗತಿಗಳನ್ನು ಮರೆತುಬಿಟ್ಟು ನನ್ನ ಮುಂದಿರುವ ಗುರಿಯನ್ನು ಮುಟ್ಟಲು ನನ್ನಿಂದಾದಷ್ಟರ ಮಟ್ಟಿಗೆ ಓಡುತ್ತಿದ್ದೇನೆ. |
14
|
ದೇವರು ನಮ್ಮನ್ನು ಕ್ರಿಸ್ತನ ಮೂಲಕ ಮೇಲೋಕದ ಜೀವಿತಕ್ಕೆ ಕರೆದು ನಮ್ಮ ಮುಂದೆ ಇಟ್ಟಿರುವ ಬಹುಮಾನವನ್ನು ಗುರಿಮಾಡಿಕೊಂಡು ಓಡುತ್ತಾ ಇದ್ದೇನೆ. |
15
|
ಆತ್ಮಿಕತೆಯಲ್ಲಿ ಪರಿಪೂರ್ಣವಾದ ಮಟ್ಟಕ್ಕೆ ಬಂದಿರುವ ನಾವೆಲ್ಲರೂ ಇದೇ ರೀತಿ ಯೋಚಿಸಬೇಕು. ನೀವು ಈ ಸಂಗತಿಗಳಲ್ಲಿ ಯಾವುದನ್ನಾದರೂ ಒಪ್ಪಿಕೊಳ್ಳದಿದ್ದರೆ ದೇವರೇ ನಿಮಗೆ ಅದನ್ನು ಸ್ಪಷ್ಟಪಡಿಸುವನು. |
16
|
ಆದರೆ ನಾವು ಈಗಾಗಲೇ ಹೊಂದಿರುವ ಸತ್ಯವನ್ನು ಅನುಸರಿಸುತ್ತಾ ನಡೆಯೋಣ. |
17
|
ಸಹೋದರ ಸಹೋದರಿಯರೇ, ನೀವೆಲ್ಲರೂ ನನ್ನಂತೆ ಜೀವಿಸಲು ಪ್ರಯತ್ನಿಸಿ. ನಾವು ನಿಮಗೆ ತೋರಿಸಿದ ಮಾದರಿಯ ಪ್ರಕಾರ ಜೀವಿಸುವವರನ್ನು ಅನುಸರಿಸಿರಿ. |
18
|
ಅನೇಕರು ಕ್ರಿಸ್ತನ ಶಿಲುಬೆಗೆ ವೈರಿಗಳೊ ಎಂಬಂತೆ ಜೀವಿಸುತ್ತಾರೆ. ಅವರ ಬಗ್ಗೆ ನಾನು ನಿಮಗೆ ಅನೇಕ ಸಲ ತಿಳಿಸಿದ್ದೇನೆ. ಈಗಲೂ ಕಣ್ಣೀರಿನಿಂದ ಹೇಳುತ್ತೇನೆ. |
19
|
ಅವರ ನಡತೆಯು ಅವರನ್ನು ನಾಶದೆಡೆಗೆ ನಡೆಸುತ್ತಿದೆ. ಅವರು ದೇವರ ಸೇವೆ ಮಾಡುತ್ತಿಲ್ಲ. ಆ ಜನರು ಕೇವಲ ತಮ್ಮ ಸಂತೋಷಕ್ಕಾಗಿ ಜೀವಿಸುತ್ತಿದ್ದಾರೆ. ಅವರು ನಾಚಿಕೆಕರವಾದ ಕೆಲಸಗಳನ್ನು ಮಾಡಿ, ಅವುಗಳ ಬಗ್ಗೆ ಹೆಮ್ಮೆಪಡುತ್ತಾರೆ. ಅವರು ಕೇವಲ ಈ ಲೋಕದ ವಿಷಯಗಳ ಬಗ್ಗೆ ಆಲೋಚಿಸುತ್ತಾರೆ. |
20
|
ನಾವದರೊ ಪರಲೋಕ ಸಂಸ್ಥಾನದವರು. ನಮ್ಮ ರಕ್ಷಕನು ಅಲ್ಲಿಂದಲೇ ಬರುವುದನ್ನು ನಾವು ಎದುರುನೋಡುತ್ತಿದ್ದೇವೆ. ಪ್ರಭುವಾದ ಯೇಸು ಕ್ರಿಸ್ತನೇ ನಮ್ಮ ರಕ್ಷಕನು. |
21
|
ಆತನು ತನ್ನ ಶಕ್ತಿಯಿಂದ ಸಮಸ್ತವನ್ನು ಆಳುತ್ತಾನೆ ಮತ್ತು ನಮ್ಮ ದೀನಾವಸ್ಥೆಯ ಈ ಶರೀರವನ್ನು ರೂಪಾಂತರಪಡಿಸಿ ತನ್ನ ಸ್ವಂತ ಮಹಿಮಾಶರೀರದಂತೆ ಮಾಡುತ್ತಾನೆ. |
Philippians 3:6 Kannada Language Bible Words basic statistical display
COMING SOON ...