1
|
ಯೆಹೋವನು ಮೋಸದ ತಕ್ಕಡಿಗಳನ್ನು ದ್ವೇಷಿಸುತ್ತಾನೆ. ನ್ಯಾಯವಾದ ತಕ್ಕಡಿಗಳಾದರೊ ಆತನನ್ನು ಸಂತೋಷಗೊಳಿಸುತ್ತವೆ. |
2
|
ದುರಾಭಿಮಾನಿಗಳು ನಾಚಿಕೆಗೀಡಾಗುವರು; ದೀನರು ಜ್ಞಾನಿಗಳಾಗಿದ್ದಾರೆ. |
3
|
ಯಥಾರ್ಥವಂತರಿಗೆ ಸರಳತೆಯು ಮಾರ್ಗದರ್ಶಕ. ಕೆಡುಕರು ತಮ್ಮ ಮೋಸಕೃತ್ಯಗಳ ಮೂಲಕ ತಮ್ಮನ್ನೇ ನಾಶಮಾಡಿಕೊಳ್ಳುತ್ತಾರೆ. |
4
|
ದೇವರು ಜನರಿಗೆ ನ್ಯಾಯತೀರ್ಪು ಮಾಡುವ ದಿನದಲ್ಲಿ, ಹಣದಿಂದ ಯಾವ ಲಾಭವೂ ಇಲ್ಲ. ಆದರೆ ನೀತಿಯು ಜನರನ್ನು ಮರಣದಿಂದ ಕಾಪಾಡುತ್ತದೆ. |
5
|
ನೀತಿವಂತನು ಯಥಾರ್ಥವಾಗಿದ್ದರೆ ಅವನ ಜೀವನವು ಸರಾಗವಾಗಿರುವುದು. ಆದರೆ ಕೆಡುಕನು ತನ್ನ ಕೆಟ್ಟಕಾರ್ಯಗಳಿಂದ ನಾಶವಾಗುವನು. |
6
|
ನೀತಿಯು ಯಥಾರ್ಥವಂತರನ್ನು ಕಾಪಾಡುತ್ತದೆ. ಆದರೆ ವಂಚಕರು ತಮ್ಮ ಆಸೆಗಳಿಂದಲೇ ಸಿಕ್ಕಿಬೀಳುವರು. |
7
|
ದುಷ್ಟನು ಸಾಯುವಾಗ ಅವನ ನಿರೀಕ್ಷೆಗಳೆಲ್ಲಾ ನಾಶವಾಗುತ್ತವೆ. ಅವನ ಅಪೇಕ್ಷೆಗಳೆಲ್ಲಾ ಕೊನೆಗೊಳ್ಳುತ್ತವೆ. |
8
|
ಶಿಷ್ಟನು ಇಕ್ಕಟ್ಟಿನಿಂದ ಪಾರಾಗುವನು. ಅವನ ಬದಲಾಗಿ ದುಷ್ಟನು ಇಕ್ಕಟ್ಟಿನಲ್ಲಿ ಸಿಕ್ಕಿಬೀಳುವನು. |
9
|
ಕೆಡುಕನು ತನ್ನ ಮಾತಿನಿಂದಲೇ ಬೇರೆಯವರನ್ನು ನಾಶಪಡಿಸುತ್ತಾನೆ. ಸಜ್ಜನರಿಗಾದರೋ ಅವರ ತಿಳುವಳಿಕೆಯೇ ರಕ್ಷಣೆ ನೀಡುವುದು. |
10
|
ಸಜ್ಜನರಿಗೆ ಜಯವಾದರೆ ನಗರಕ್ಕೆಲ್ಲ ಸಂತಸ. ಕೆಡುಕರು ನಾಶವಾದರೆ ಜನರು ಜಯಘೋಷ ಮಾಡುವರು. |
11
|
ಪಟ್ಟಣವು ತನ್ನಲ್ಲಿ ವಾಸವಾಗಿರುವ ಯಥಾರ್ಥವಂತರ ಆಶೀರ್ವಾದದಿಂದ ಏಳಿಗೆ ಹೊಂದುವುದು. ಕೆಡುಕರ ಮಾತುಗಳು ಪಟ್ಟಣವನ್ನು ನಾಶಮಾಡುತ್ತವೆ. |
12
|
ಬುದ್ಧಿಹೀನನು ಇತರರನ್ನು ಹೀನೈಸುತ್ತಾನೆ. ಆದರೆ ಬುದ್ಧಿವಂತನು ಮೌನವಾಗಿರುತ್ತಾನೆ. |
13
|
ಗುಟ್ಟು ರಟ್ಟುಮಾಡುವವನನ್ನು ನಂಬಲಾಗದು. ಆದರೆ ನಂಬಿಗಸ್ತನು ವಿಷಯಗಳನ್ನು ರಹಸ್ಯವಾಗಿಡುವನು. |
14
|
ಜ್ಞಾನದ ಮಾರ್ಗದರ್ಶನವಿಲ್ಲದೆ ದೇಶವು ಬಿದ್ದು ಹೋಗುವುದು. ಆದರೆ ಒಳ್ಳೆಯ ಸಲಹೆಗಾರರನ್ನು ಹೊಂದಿರುವ ದೇಶವು ಕ್ಷೇಮವಾಗಿರುವುದು. |
15
|
ಬೇರೊಬ್ಬನ ಸಾಲಕ್ಕೆ ನೀನು ಜಾಮೀನಾಗಿದ್ದರೆ ಕಷ್ಟಕ್ಕೀಡಾಗಿರುವೆ; ನೀನು ಜಾಮೀನಾಗಿಲ್ಲದಿದ್ದರೆ ಕ್ಷೇಮವಾಗಿರುವೆ. |
16
|
ದಯೆಯುಳ್ಳ ಸ್ತ್ರೀಯು ಗೌರವವನ್ನು ಪಡೆಯುವಳು. ಬಲಾತ್ಕಾರಿಗಳಾದ ಗಂಡಸರು ಕೇವಲ ಹಣವನ್ನು ಗಳಿಸುವರು. |
17
|
ದಯೆಯುಳ್ಳವನು ತನಗೆ ಲಾಭ ಮಾಡಿಕೊಳ್ಳುವನು. ಕ್ರೂರಿಯು ತನಗೇ ಕೇಡು ಮಾಡಿಕೊಳ್ಳುವನು. |
18
|
ಕೆಡುಕನು ತಾತ್ಕಾಲಿಕವಾದ ಲಾಭವನ್ನು ಮಾಡಿಕೊಳ್ಳುತ್ತಾನೆ. ಆದರೆ ನೀತಿವಂತನು ಯೋಗ್ಯವಾದ ಪ್ರತಿಫಲವನ್ನು ಹೊಂದಿಕೊಳ್ಳುವನು. |
19
|
ನೀತಿವಂತನು ನಿಜವಾಗಿಯೂ ಜೀವವನ್ನು ಹೊಂದಿಕೊಳ್ಳುವನು, ಆದರೆ ಕೆಡುಕನನ್ನು ಹಿಂಬಾಲಿಸುತ್ತಾ ಹೋಗುವವನು ಸಾವಿಗೀಡಾಗುವನು. |
20
|
ಕೆಡುಕರು ಯೆಹೋವನಿಗೆ ಅಸಹ್ಯರು. ಆದರೆ ಸನ್ಮಾರ್ಗಿಗಳು ಆತನ ಮೆಚ್ಚಿಕೆಗೆ ಪಾತ್ರರಾಗಿದ್ದಾರೆ. |
21
|
ದುಷ್ಟರಿಗೆ ದಂಡನೆ ಖಂಡಿತ. ಶಿಷ್ಟರಿಗೆ ಬಿಡುಗಡೆ ನಿಶ್ಚಯ. |
22
|
ಅವಿವೇಕಳಿಗೆ ಸೌಂದರ್ಯವು ಹಂದಿಯ ಮೂಗಿನಲ್ಲಿರುವ ಸುಂದರವಾದ ಚಿನ್ನದ ಮೂಗುತಿಯಂತಿರುವುದು. |
23
|
ಒಳ್ಳೆಯವರ ಬಯಕೆ ಅವರನ್ನು ಕ್ಷೇಮಕ್ಕೆ ನಡೆಸುತ್ತದೆ. ಆದರೆ ದುಷ್ಟರ ಆಕಾಂಕ್ಷೆ ಅವರನ್ನು ದಂಡನೆಗೆ ನಡೆಸುತ್ತದೆ. |
24
|
ಉಚಿತವಾಗಿ ಕೊಡುವವನು ಅದಕ್ಕಿಂತಲೂ ಹೆಚ್ಚುಗಳಿಸುವನು. ಆದರೆ ಕೊಡಲೊಲ್ಲದವನು ಬಡವನಾಗುವನು. |
25
|
ಉದಾರಿಯು ಅಭಿವೃದ್ಧಿಯಾಗುವನು. ಬೇರೆಯವರಿಗೆ ಸಹಾಯಮಾಡುವವನು ಸಹಾಯವನ್ನು ಹೊಂದಿಕೊಳ್ಳುವನು. |
26
|
ಧಾನ್ಯವನ್ನು ಮಾರದೆ ಕೂಡಿಟ್ಟುಕೊಳ್ಳುವವನನ್ನು ಜನರು ಶಪಿಸುವರು. ಧಾನ್ಯ ಮಾರುವವನನ್ನು ಜನರು ಆಶೀರ್ವದಿಸುವರು. |
27
|
ಒಳ್ಳೆಯದನ್ನು ಮಾಡುವವನನ್ನು ಜನರು ಗೌರವಿಸುವರು. ಕೇಡನ್ನು ಮಾಡುವವನಿಗೆ ಕೇವಲ ಕೇಡೇ ಆಗುವುದು. |
28
|
ಐಶ್ವರ್ಯದ ಮೇಲೆ ಭರವಸೆಯಿಟ್ಟಿರುವವನು ಎಲೆಯಂತೆ ಉದುರಿಹೋಗುವನು. ಆದರೆ ಸದ್ದರ್ಮಿಯು ಚಿಗುರಿದ ಎಲೆಯಂತೆ ಬೆಳೆಯುವನು. |
29
|
ತನ್ನ ಕುಟುಂಬಕ್ಕೆ ತೊಂದರೆ ಕೊಡುವವನಿಗೆ ಆಸ್ತಿಯು ದೊರೆಯುವುದಿಲ್ಲ. ಮೂಢನು ಬಲವಂತಕ್ಕೊಳಗಾಗಿ ಜ್ಞಾನಿಯ ಸೇವೆ ಮಾಡಬೇಕಾಗುವುದು. |
30
|
ನೀತಿವಂತನ ಕಾರ್ಯಗಳು ಜೀವವುಳ್ಳ ಮರಗಳಂತಿವೆ. ಜ್ಞಾನಿಯು ಆತ್ಮಗಳನ್ನು ಗೆದ್ದುಕೊಳ್ಳುವನು. |
31
|
ಶಿಷ್ಟರು ಭೂಮಿಯ ಮೇಲೆ ಪ್ರತಿಫಲವನ್ನು ಹೊಂದುವುದಾದರೆ ಕೆಡುಕರು ಸಹ ತಮಗೆ ಬರತಕ್ಕ ದಂಡನೆಯನ್ನು ಹೊಂದುವುದು ನಿಶ್ಚಯ. |
Proverbs 11:1 Kannada Language Bible Words basic statistical display
COMING SOON ...