1
|
ಜ್ಞಾನವಂತೆಯು ತನ್ನ ಮನೆಯನ್ನು ಕಟ್ಟಿಕೊಳ್ಳುವಳು, ಆದರೆ ಜ್ಞಾನಹೀನಳು ತನ್ನ ಕೈಯಿಂದಲೇ ಅದನ್ನು ಬೀಳಿಸುವಳು. |
2
|
ಸನ್ಮಾರ್ಗಿಯು ಯೆಹೋವನಲ್ಲಿ ಭಯಭಕ್ತಿಯಿಂದಿರುವನು. ವಕ್ರಮಾರ್ಗಿಯಾದರೊ ಆತನನ್ನು ಕಡೆಗಣಿಸುವನು. |
3
|
ಮೂಢನ ಮಾತುಗಳು ಅವನಿಗೇ ತೊಂದರೆಯನ್ನು ಉಂಟುಮಾಡುತ್ತವೆ. ಜ್ಞಾನಿಯ ಮಾತುಗಳಾದರೊ ಅವನನ್ನು ಕಾಪಾಡುತ್ತವೆ. |
4
|
ಎತ್ತುಗಳಿಲ್ಲದಿದ್ದರೆ ಕೊಟ್ಟಿಗೆ ಬರಿದಾಗಿರುವುದು. ದೊಡ್ಡ ಸುಗ್ಗಿಪಡೆಯಲು ಎತ್ತಿನ ಶಕ್ತಿ ಜನರಿಗೆ ಅಗತ್ಯ. |
5
|
ಸತ್ಯಸಾಕ್ಷಿಯು ಸುಳ್ಳು ಹೇಳುವುದಿಲ್ಲ. ಆದರೆ ಸುಳ್ಳು ಸಾಕ್ಷಿಯು ಸುಳ್ಳನ್ನೇ ಹೇಳುವುದು. |
6
|
ಜ್ಞಾನದೂಷಕನು ಜ್ಞಾನಕ್ಕಾಗಿ ಹುಡುಕಿದರೂ ಅದನ್ನು ಕಂಡುಕೊಳ್ಳುವುದಿಲ್ಲ. ಆದರೆ ವಿವೇಕಿಯು ತಿಳುವಳಿಕೆಯನ್ನು ಸರಾಗವಾಗಿ ಕಂಡುಕೊಳ್ಳುವನು. |
7
|
ಅಜ್ಞಾನಿಯೊಡನೆ ಸ್ನೇಹ ಬೆಳಸಬೇಡಿ; ನಿಮಗೆ ಉಪದೇಶಿಸಲು ಅವನಲ್ಲೇನೂ ಇಲ್ಲ. |
8
|
ಜಾಣರು ಜ್ಞಾನಿಗಳಾಗಿದ್ದಾರೆ; ಅವರು ವಿವೇಚಿಸಿ ಕಾರ್ಯಗಳನ್ನು ಮಾಡುತ್ತಾರೆ, ಮೂಢರು ಬುದ್ಧಿಹೀನರಾಗಿದ್ದಾರೆ; ತಾವು ಮೋಸದಿಂದ ಬದುಕಬಲ್ಲೆವು ಎಂದು ಅವರು ಯೋಚಿಸಿಕೊಂಡಿದ್ದಾರೆ. |
9
|
ಮೂಢರಿಗೆ ಪ್ರಾಯಶ್ಚಿತ್ತವು ಹಾಸ್ಯಾಸ್ಪದವಾಗಿದೆ; ಯಥಾರ್ಥವಂತರು ಕ್ಷಮೆಗಾಗಿ ಶ್ರಮಿಸುವರು. |
10
|
ಅವನವನ ವ್ಯಥೆಯು ಅವನವನಿಗೇ ಮಾತ್ರ ತಿಳಿದಿದೆ. ಹಾಗೆಯೇ ಅವನವನ ಸಂತೋಷವು ಅವನವನಿಗೆ ಮಾತ್ರ ತಿಳಿದಿರುತ್ತದವೆ. |
11
|
ದುಷ್ಟನ ಮನೆ ನಾಶಕರ; ಶಿಷ್ಟನ ಮನೆ ಅಭಿವೃದ್ಧಿಕರ. |
12
|
ಒಳ್ಳೆಯದೆಂದು ಜನರು ಭಾವಿಸಿಕೊಂಡಿರುವ ಮಾರ್ಗವೊಂದುಂಟು. ಆದರೆ ಅದರ ಅಂತ್ಯ ಮರಣವೇ. |
13
|
ಒಬ್ಬನು ನಗುತ್ತಿರುವಾಗಲೂ ವ್ಯಸನದಿಂದಿರಲು ಸಾಧ್ಯ. ಅಂತೆಯೇ ಆನಂದವೂ ದುಃಖದಲ್ಲಿ ಅಂತ್ಯವಾಗಬಹುದು. |
14
|
ದುಷ್ಟರು ತಾವು ಮಾಡುವ ಕೆಟ್ಟಕಾರ್ಯಗಳಿಗೆ ಸಂಪೂರ್ಣವಾಗಿ ದಂಡನೆ ಅನುಭವಿಸುವರು. ಆದರೆ ಸಜ್ಜನರು ತಮ್ಮ ಒಳ್ಳೆಯಕಾರ್ಯಗಳಿಗೆ ಸಂಪೂರ್ಣವಾಗಿ ಪ್ರತಿಫಲ ಪಡೆಯುವರು. |
15
|
ಮೂಢನು ತಾನು ಕೇಳಿದ್ದನ್ನೆಲ್ಲ ನಂಬುವನು. ಆದರೆ ಜಾಣನು ಪ್ರತಿಯೊಂದರ ಬಗ್ಗೆ ಎಚ್ಚರಿಕೆಯಿಂದ ಯೋಚಿಸುವನು. |
16
|
ಜ್ಞಾನಿಯು ಎಚ್ಚರವಾಗಿದ್ದು ಆಪತ್ತಿನಿಂದ ದೂರವಿರುತ್ತಾನೆ. ಜ್ಞಾನಹೀನನಾದರೋ ಸೊಕ್ಕಿನಿಂದ ಯೋಚಿಸದೆ ಕಾರ್ಯಗಳನ್ನು ಮಾಡುತ್ತಾನೆ. |
17
|
ಮುಂಗೋಪಿಯು ಮೂಢಕಾರ್ಯಗಳನ್ನು ಮಾಡುವನು. ಕುತಂತ್ರಿಗಳನ್ನು ಜನರು ದ್ವೇಷಿಸುವರು. |
18
|
ದಡ್ಡರಿಗೆ ಮೂಢತನವೇ ಪ್ರತಿಫಲ. ಜಾಣರಾದರೊ ಜ್ಞಾನವೆಂಬ ಕಿರೀಟವನ್ನು ಹೊಂದುವರು. |
19
|
ಕೊನೆಯಲ್ಲಿ ಕೆಟ್ಟವರ ಮೇಲೆ ಒಳ್ಳೆಯವರು ಜಯಗಳಿಸುವರು. ಕೆಟ್ಟವರು ಬಲವಂತದಿಂದ ಒಳ್ಳೆಯವರ ಮುಂದೆ ತಲೆಬಾಗುವರು. |
20
|
ಬಡವನು ತನ್ನ ನೆರೆಯವನಿಂದಲೂ ತಿರಸ್ಕರಿಸಲ್ಪಡುವನು. ಐಶ್ವರ್ಯವಂತರಿಗಾದರೊ ಅನೇಕ ಮಂದಿ ಸ್ನೇಹಿತರು. |
21
|
ನೆರೆಯವರನ್ನು ತಿರಸ್ಕರಿಸುವುದು ತಪ್ಪು. ನೀವು ಸಂತೋಷದಿಂದ ಇರಬೇಕಾದರೆ ಬಡವರಿಗೆ ದಯೆತೋರಿಸಿ. |
22
|
ದುರ್ಮಾರ್ಗಿಯು ದಾರಿ ತಪ್ಪುವನು. ಒಳ್ಳೆಯದನ್ನು ಮಾಡಲು ಪ್ರಯತ್ನಿಸುವವನು ಪ್ರೀತಿಗೂ ಭರವಸೆಗೂ ಪಾತ್ರನಾಗುವನು. |
23
|
ಕಷ್ಟಪಟ್ಟು ದುಡಿದರೆ, ಸಮೃದ್ಧಿಯಿರುವುದು. ಕೇವಲ ಮಾತಾಡಿದರೆ ಬಡತನ ಬರುವುದು. |
24
|
ಜ್ಞಾನಿಗಳಿಗೆ ದೊರೆಯುವ ಪ್ರತಿಫಲ ಐಶ್ವರ್ಯ. ಜ್ಞಾನಹೀನರಿಗೆ ದೊರೆಯುವ ಪ್ರತಿಫಲ ಮೂಢತನ. |
25
|
ಸತ್ಯವನ್ನಾಡುವವನು ಬೇರೆಯವರಿಗೆ ಸಹಾಯಿಸುತ್ತಾನೆ. ಸುಳ್ಳುಗಾರನಾದರೋ ಮತ್ತೊಬ್ಬನಿಗೆ ನೋವನ್ನುಂಟು ಮಾಡುತ್ತಾನೆ. |
26
|
ಯೆಹೋವನಲ್ಲಿ ಭಯಭಕ್ತಿಯುಳ್ಳವನು ಕ್ಷೇಮವಾಗಿರುವನು; ಅವನ ಮಕ್ಕಳು ಸಹ ಕ್ಷೇಮವಾಗಿರುವರು. |
27
|
ಯೆಹೋವನಲ್ಲಿರುವ ಭಯಭಕ್ತಿ ಜೀವದ ಬುಗ್ಗೆ. ಅದು ಮನುಷ್ಯನನ್ನು ಮರಣದ ಬಲೆಯಿಂದ ಕಾಪಾಡುತ್ತದೆ. |
28
|
ಅಧಿಕ ಜನಸಂಖ್ಯೆಯು ರಾಜನಿಗೆ ಗೌರವ. ಪ್ರಜೆಗಳೇ ಇಲ್ಲದಿದ್ದರೆ ರಾಜನಿಗೆ ಬೆಲೆಯೇ ಇಲ್ಲ. |
29
|
ತಾಳ್ಮೆಯುಳ್ಳವನು ತುಂಬಾ ಜಾಣ. ಮುಂಗೋಪಿಯು ತಾನು ಮೂಢ ಎಂಬುದನ್ನು ತೋರಿಸಿಕೊಳ್ಳುತ್ತಾನೆ. |
30
|
ಮನಶ್ಯಾಂತಿಯುಳ್ಳವನ ದೇಹವು ಆರೋಗ್ಯದಿಂದಿರುವುದು. ಹೊಟ್ಟೆಕಿಚ್ಚು ದೇಹಕ್ಕೆ ಕಾಯಿಲೆಯನ್ನು ಬರಮಾಡುವುದು. |
31
|
ಬಡವರನ್ನು ಹಿಂಸಿಸುವವನು ತನ್ನ ಸೃಷ್ಟಿಕರ್ತನಿಗೇ ಅವಮಾನ ಮಾಡುತ್ತಾನೆ. ಬಡವರಿಗೆ ಕರುಣೆ ತೋರುವವನು ತನ್ನ ಸೃಷ್ಟಿಕರ್ತನನ್ನೇ ಸನ್ಮಾನಿಸುತ್ತಾನೆ. |
32
|
ದುಷ್ಟರು ತನ್ನ ಕೆಡುಕಿನಿಂದಲೇ ಸೋತುಹೋಗುವನು; ಆದರೆ ಒಳ್ಳೆಯವರು ಮರಣದ ಸಮಯದಲ್ಲೂ ಜಯಶಾಲಿಗಳಾಗುವರು. |
33
|
ವಿವೇಕಿಯು ಯಾವಾಗಲೂ ಜ್ಞಾನದ ಕಾರ್ಯಗಳನ್ನು ಆಲೋಚಿಸುವನು. ಮೂಢನಿಗಾದರೊ ಜ್ಞಾನದ ಬಗ್ಗೆ ಏನೂ ತಿಳಿಯದು. |
34
|
ಒಳ್ಳೆತನವು ದೇಶದ ಏಳಿಗೆಗೆ ಕಾರಣ. ಪಾಪವು ದೇಶಕ್ಕೆ ಅವಮಾನಕರ. |
35
|
ಬುದ್ಧಿವಂತ ನಾಯಕನನ್ನು ಹೊಂದಿರುವ ರಾಜನು ಸಂತೋಷವಾಗಿರುವನು. ಅಯೋಗ್ಯನಾದ ಸೇವಕನ ಮೇಲೆ ರಾಜನು ಕೋಪಗೊಳ್ಳುವನು. |
Proverbs 14:9 Kannada Language Bible Words basic statistical display
COMING SOON ...