1
|
ಸಮಾಧಾನದ ಉತ್ತರ ಕೋಪವನ್ನು ಕಡಿಮೆ ಮಾಡುವುದು; ಒರಟು ಉತ್ತರ ಕೋಪವನ್ನು ಹೆಚ್ಚಿಸುವುದು. |
2
|
ಜ್ಞಾನಿಯ ಮಾತನ್ನು ಜನರು ಕೇಳಬಯಸುತ್ತಾರೆ. ಮೂಢನು ಕೇವಲ ಮೂರ್ಖತನವನ್ನೇ ಮಾತಾಡುವನು. |
3
|
ಯೆಹೋವನ ದೃಷ್ಟಿಗೆ ಪ್ರತಿಯೊಂದೂ ಕಾಣುತ್ತದೆ. ಆತನು ಕೆಡುಕರನ್ನೂ ಒಳ್ಳೆಯವರನ್ನೂ ಗಮನಿಸುತ್ತಿದ್ದಾನೆ. |
4
|
ಹಿತನುಡಿಗಳು ಜೀವವುಳ್ಳ ಮರದಂತಿವೆ. ಸುಳ್ಳು ಮಾತುಗಳು ಮನುಷ್ಯನ ಆತ್ಮವನ್ನು ಜಜ್ಜಿಹಾಕುತ್ತವೆ. |
5
|
ಮೂರ್ಖನು ತಂದೆಯ ಬುದ್ಧಿಮಾತನ್ನು ತಿರಸ್ಕರಿಸುವನು. ಬುದ್ಧಿಮಾತನ್ನು ಸ್ವೀಕರಿಸಿಕೊಳ್ಳುವವನು ಜ್ಞಾನಿಯಾಗುತ್ತಾನೆ. |
6
|
ಒಳ್ಳೆಯವರ ಮನೆಗಳಲ್ಲಿ ಬಹಳ ಐಶ್ವರ್ಯವಿರುತ್ತದೆ. ಕೆಡುಕರ ಸಂಪಾದನೆಯಾದರೊ ಆಪತ್ತನ್ನು ಬರಮಾಡುತ್ತದೆ. |
7
|
ಜ್ಞಾನಿಯ ಮಾತುಗಳು ತಿಳುವಳಿಕೆಯನ್ನು ಹರಡುತ್ತವೆ. ಮೂಢರ ಮಾತುಗಳು ಕೇಳಲು ಯೋಗ್ಯವಲ್ಲ. |
8
|
ಕೆಡುಕರ ಕಾಣಿಕೆಯನ್ನು ಯೆಹೋವನು ದ್ವೇಷಿಸುವನು; ಒಳ್ಳೆಯವರ ಪ್ರಾರ್ಥನೆಯನ್ನು ಸಂತೋಷದಿಂದ ಕೇಳುವನು. |
9
|
ದುಷ್ಟರ ಜೀವಿತವು ಯೆಹೋವನಿಗೆ ಅಸಹ್ಯ. ಒಳ್ಳೆಯದನ್ನು ಮಾಡಲಿಚ್ಛಿಸುವವರು ಯೆಹೋವನಿಗೆ ಪ್ರಿಯ. |
10
|
ನೀತಿಮಾರ್ಗವನ್ನು ತೊರೆದವರಿಗೆ ಮಹಾದಂಡನೆಯಾಗುವುದು; ಶಿಕ್ಷಣ, ಗದರಿಕೆಯನ್ನು ದ್ವೇಷಿಸುವವನು ನಾಶವಾಗುವನು. |
11
|
ಮೃತ್ಯುಲೋಕದಲ್ಲಿ ನಡೆಯುತ್ತಿರುವುದು ಯೆಹೋವನಿಗೆ ತಿಳಿದಿದೆ. ಜನರು ಹೃದಯಗಳಲ್ಲಿಯೂ ಮನಸ್ಸುಗಳಲ್ಲಿಯೂ ಇರುವ ಆಲೋಚನೆಗಳು ಸಹ ಆತನಿಗೆ ಗೊತ್ತಿವೆ. |
12
|
ಮೂಢನು ತನ್ನ ತಪ್ಪನ್ನು ಬೇರೆಯವರಿಂದ ಕೇಳಲು ಇಷ್ಟಪಡನು. ಮೂಢನು ಉಪದೇಶಕ್ಕಾಗಿ ಜ್ಞಾನಿಗಳ ಬಳಿಗೆ ಹೋಗುವುದಿಲ್ಲ. |
13
|
ಸಂತೋಷವಾಗಿರುವವನ ಮುಖದಲ್ಲಿ ಆನಂದ ಎದ್ದು ಕಾಣುವುದು. ದುಃಖಗೊಂಡಿರುವವನ ಆತ್ಮದಲ್ಲಿ ವ್ಯಥೆ ಎದ್ದು ಕಾಣುವುದು. |
14
|
ವಿವೇಕಿಯು ಮತ್ತಷ್ಟು ತಿಳುವಳಿಕೆಯನ್ನು ಪಡೆದುಕೊಳ್ಳಲು ಪ್ರಯತ್ನಿಸುವನು. ಮೂಢನು ಮತ್ತಷ್ಟು ಮೂಢತನವನ್ನು ಬಯಸುತ್ತಾನೆ. |
15
|
ಬಡಜನರ ದಿನಗಳೆಲ್ಲಾ ದುಃಖಕರ. ಸಂತೋಷದ ಹೃದಯದಲ್ಲಿ ಸದಾ ಔತಣ. |
16
|
ಬಹಳ ಐಶ್ವರ್ಯವನ್ನು ಹೊಂದಿದ್ದು ಸಮಾಧಾನವಿಲ್ಲದೆ ಇರುವುದಕ್ಕಿಂತ ಸ್ವಲ್ಪ ಐಶ್ವರ್ಯವನ್ನು ಹೊಂದಿದ್ದು ಯೆಹೋವನಲ್ಲಿ ಭಯಭಕ್ತಿಯಿಂದಿರುವುದೇ ಮೇಲು. |
17
|
ದ್ವೇಷವಿರುವಲ್ಲಿ ಹೆಚ್ಚಾಗಿ ತಿನ್ನುವುದಕ್ಕಿಂತಲೂ ಪ್ರೀತಿಯಿರುವಲ್ಲಿ ಸ್ವಲ್ಪ ತಿನ್ನುವುದೇ ಉತ್ತಮ. |
18
|
ಮುಂಗೋಪಿಯು ಜಗಳವನ್ನು ಎಬ್ಬಿಸುವನು. ತಾಳ್ಮೆಯುಳ್ಳವನು ಶಾಂತಿ ಸ್ಥಾಪಿಸುವನು. |
19
|
ಸೋಮಾರಿಗೆ ಎಲ್ಲೆಲ್ಲೂ ತೊಂದರೆ, ಯಥಾರ್ಥವಂತರಿಗೆ ಜೀವನ ಸರಾಗ. |
20
|
ಜ್ಞಾನಿಯಾದ ಮಗನಿಂದ ತಂದೆಗೆ ಸಂತೋಷ. ಮೂಢನಾದರೊ ತನ್ನ ತಾಯಿಯನ್ನು ಕಡೆಗಣಿಸುವನು. |
21
|
ಮೂಢನಿಗೆ ಮೂಢತನದಲ್ಲಿ ಸಂತೋಷ. ಜ್ಞಾನಿಯು ಎಚ್ಚರಿಕೆಯಿಂದಿದ್ದು ಒಳ್ಳೆಯದನ್ನು ಮಾಡುವನು. |
22
|
ಆಲೋಚನೆಯಿಲ್ಲದ ಯೋಜನೆಗಳು ವಿಫಲವಾಗುತ್ತವೆ. ಆಲೋಚಿಸಿ ಮಾಡಿದ ಯೋಜನೆಗಳು ಯಶಸ್ವಿಯಾಗುತ್ತವೆ. |
23
|
ಸಮರ್ಪಕವಾದ ಉತ್ತರ ಸಂತೋಷವನ್ನು ಉಂಟುಮಾಡುವುದು; ತಕ್ಕ ಸಮಯದಲ್ಲಿ ಸಮಯೋಚಿತವಾದ ಮಾತು ಅತ್ಯುತ್ತಮ. |
24
|
ಜ್ಞಾನಿಯ ಕಾರ್ಯಗಳು ಅವನನ್ನು ಯಶಸ್ಸಿಗೆ ನಡೆಸುತ್ತವೆ; ಅವು ಅವನನ್ನು ಮರಣದ ಹಾದಿಯಿಂದ ತಪ್ಪಿಸುತ್ತವೆ. |
25
|
ಅಹಂಕಾರಿಗಳ ಆಸ್ತಿಯನ್ನು ಯೆಹೋವನು ನಾಶಗೊಳಿಸುತ್ತಾನೆ; ಆದರೆ ವಿಧವೆಯರ ಆಸ್ತಿಯನ್ನು ಕಾಪಾಡುವನು. |
26
|
ಯೆಹೋವನು ದುರಾಲೋಚನೆಗಳನ್ನು ದ್ವೇಷಿಸುವನು; ಕನಿಕರದ ಮಾತುಗಳಲ್ಲಾದರೊ ಸಂತೋಷಪಡುವನು. |
27
|
ದುರಾಶೆಪಡುವವನು ತನ್ನ ಕುಟುಂಬಕ್ಕೆ ಆಪತ್ತನ್ನು ಬರಮಾಡಿಕೊಳ್ಳುವನು. ಲಂಚ ತೆಗೆದುಕೊಳ್ಳದವನಿಗೆ ಯಾವ ಸಮಸ್ಯೆಯೂ ಇರುವುದಿಲ್ಲ. |
28
|
ಒಳ್ಳೆಯವರು ಎಚ್ಚರಿಕೆಯಿಂದ ಯೋಚಿಸಿ ಉತ್ತರ ಕೊಡುವರು. ದುಷ್ಟರಾದರೊ ಯೋಚಿಸದೆ ಮಾತಾಡುವರು; ಅದರಿಂದ ಜನರಿಗೆ ಕೇವಲ ತೊಂದರೆಯಷ್ಟೇ. |
29
|
ಯೆಹೋವನು ದುಷ್ಟರಿಗೆ ಬಹುದೂರ. ಶಿಷ್ಟರ ಪ್ರಾರ್ಥನೆಯನ್ನಾದರೊ ಆತನು ಯಾವಾಗಲೂ ಕೇಳುತ್ತಾನೆ. |
30
|
ನಗುಮುಖವು ಜನರನ್ನು ಸಂತೋಷಗೊಳಿಸುವುದು; ಒಳ್ಳೆಯ ಸುದ್ದಿಯಿಂದ ಜನರ ಆರೋಗ್ಯ ಹೆಚ್ಚುವುದು. |
31
|
ತನ್ನ ತಪ್ಪನ್ನು ಎಚ್ಚರಿಕೆಯಿಂದ ಕೇಳುವವನು ಬಹು ಜ್ಞಾನಿ. |
32
|
ಶಿಕ್ಷೆಯನ್ನು ಒಪ್ಪದವನು ತನಗೇ ಕೇಡು ಮಾಡಿಕೊಳ್ಳುತ್ತಾನೆ. ಗದರಿಕೆಯನ್ನು ಕೇಳುವವನು ತಿಳುವಳಿಕೆಯನ್ನು ಪಡೆದುಕೊಳ್ಳುವನು. |
33
|
ಯೆಹೋವನಲ್ಲಿ ಭಯಭಕ್ತಿಯುಳ್ಳವನು ಜ್ಞಾನಿಯಾಗುತ್ತಿದ್ದಾನೆ. ಸನ್ಮಾನ ಹೊಂದಬೇಕೆನ್ನುವವನು ಮೊದಲು ದೀನನಾಗಿರಬೇಕು. |
Proverbs 15:11 Kannada Language Bible Words basic statistical display
COMING SOON ...