1
|
ಜನರು ತಾವು ಹೇಳಬೇಕಾದದ್ದನ್ನು ಆಲೋಚಿಸಿಕೊಂಡರೂ ನಾಲಿಗೆಗೆ ತಕ್ಕ ಮಾತುಗಳನ್ನು ಕೊಡುವವನು ಯೆಹೋವನೇ. |
2
|
ಜನರು ತಮ್ಮ ಕಾರ್ಯಗಳೆಲ್ಲಾ ಸರಿಯೆಂದು ಆಲೋಚಿಸಿಕೊಂಡರೂ ಅವುಗಳ ಉದ್ದೇಶಕ್ಕನುಸಾರವಾಗಿ ತೀರ್ಪು ಕೊಡುವವನು ಯೆಹೋವನೇ. |
3
|
ನಿಮ್ಮ ಕಾರ್ಯಗಳನ್ನು ಯೆಹೋವನಿಗೆ ವಹಿಸಿರಿ; ಆಗ ನಿಮ್ಮ ಯೋಜನೆಗಳೆಲ್ಲಾ ಸಫಲವಾಗುವವು. |
4
|
ಯೆಹೋವನು ಪ್ರತಿಯೊಂದನ್ನು ತನ್ನ ಉದ್ದೇಶಕ್ಕನುಸಾರವಾಗಿ ಮಾಡಿದ್ದಾನೆ. ಆತನು ಕೆಡುಕನನ್ನೂ ನಾಶನದ ದಿನಕ್ಕಾಗಿ ಇಟ್ಟಿದ್ದಾನೆ. |
5
|
ಗರ್ವಿಷ್ಠರು ಯೆಹೋವನಿಗೆ ಅಸಹ್ಯ. ಆ ಗರ್ವಿಷ್ಠರಿಗೆ ಯೆಹೋವನ ದಂಡನೆ ಖಂಡಿತ. |
6
|
ಪ್ರೀತಿ ಮತ್ತು ನಂಬಿಗಸ್ತಿಕೆಗಳು ದೋಷಕ್ಕೆ ಪ್ರಾಯಶ್ಚಿತ್ತವಾಗಿವೆ. ಯೆಹೋವನಲ್ಲಿ ಭಯಭಕ್ತಿಯಿಂದಿರಿ, ಆಗ ನೀವು ದುಷ್ಟತನದಿಂದ ದೂರವಾಗುವಿರಿ. |
7
|
ಯೆಹೋವನ ಚಿತ್ತಕ್ಕನುಸಾರವಾಗಿ ಜೀವಿಸುವವನು ತನ್ನ ವೈರಿಗಳೊಡನೆಯೂ ಸಮಾಧಾನದಿಂದಿರುವನು. |
8
|
ಅನ್ಯಾಯದಿಂದ ಹೆಚ್ಚು ಸಂಪಾದಿಸುವುದಕ್ಕಿಂತ ನ್ಯಾಯವಾಗಿ ಸ್ವಲ್ಪ ಸಂಪಾದಿಸುವುದೇ ಉತ್ತಮ. |
9
|
ಒಬ್ಬನು ಅನೇಕ ಯೋಜನೆಗಳನ್ನು ಮಾಡಿಕೊಂಡರೂ ಭವಿಷ್ಯತ್ತನ್ನು ನಿರ್ಧರಿಸುವವನು ಯೆಹೋವನೇ. |
10
|
ರಾಜನ ಮಾತು ದೇವರಿಂದ ಬಂದ ಸಂದೇಶದಂತಿದೆ. ಅವನ ತೀರ್ಮಾನ ಯಾವಾಗಲೂ ನ್ಯಾಯವಾಗಿರಬೇಕು. |
11
|
ಎಲ್ಲಾ ನ್ಯಾಯವಾದ ಅಳತೆಮಾಪಕಗಳು ಮತ್ತು ತಕ್ಕಡಿಗಳು ಯೆಹೋವನಿಗೆ ಇಷ್ಟ. ನ್ಯಾಯವಾದ ಒಪ್ಪಂದವು ಆತನಿಗೆ ಇಷ್ಟ. |
12
|
ರಾಜನು ಕೆಟ್ಟದ್ದನ್ನು ಸಹಿಸಲಾರನು; ಯಾಕೆಂದರೆ ಒಳ್ಳೆಯದರಿಂದಲೇ ಅವನ ರಾಜ್ಯಕ್ಕೆ ಬಲ. |
13
|
ರಾಜರಿಗೆ ಸತ್ಯವನ್ನು ಕೇಳಲು ಇಷ್ಟ, ಸುಳ್ಳಾಡದ ಜನರೂ ಇಷ್ಟ. |
14
|
ರಾಜನು ಕೋಪದಿಂದಿರುವಾಗ ಯಾರನ್ನಾದರೂ ಕೊಂದರೂ ಕೊಲ್ಲಬಹುದು. ಆದರೆ ಜ್ಞಾನಿಯು ಆತನ ಕೋಪವನ್ನು ಶಮನಗೊಳಿಸಬಲ್ಲನು. |
15
|
ರಾಜನು ಸಂತೋಷದಿಂದಿರುವಾಗ ಎಲ್ಲರ ಜೀವನವು ಉತ್ತಮವಾಗಿರುವುದು. ರಾಜನು ನಿನ್ನನ್ನು ಮೆಚ್ಚಿಕೊಂಡರೆ, ಅದು ನಿನ್ನ ಪಾಲಿಗೆ ಮೋಡದಿಂದ ಸುರಿಯುವ ಮುಂಗಾರು ಮಳೆಯಂತಿರುವುದು. |
16
|
ಜ್ಞಾನ ಸಂಪಾದನೆಯು ಬಂಗಾರ ಸಂಪಾದನೆಗಿಂತಲೂ ಶ್ರೇಷ್ಠ. ವಿವೇಕ ಸಂಪಾದನೆಯು ಬೆಳ್ಳಿ ಸಂಪಾದನೆಗಿಂತಲೂ ಉತ್ತಮ. |
17
|
ನೀತಿವಂತರ ಜೀವಿತವು ದುಷ್ಟತನದಿಂದ ದೂರವಾಗಿರುವುದು. ತನ್ನ ಜೀವಿತದ ಬಗ್ಗೆ ಎಚ್ಚರಿಕೆಯುಳ್ಳವನು ತನ್ನ ಪ್ರಾಣವನ್ನು ಕಾಪಾಡಿಕೊಳ್ಳುವನು. |
18
|
ಅಹಂಕಾರಿಯು ನಾಶನದ ಅಪಾಯದಲ್ಲಿದ್ದಾನೆ. ದುರಾಭಿಮಾನಿಯು ಸೋಲಿನ ಅಪಾಯದಲ್ಲಿದ್ದಾನೆ. |
19
|
ಗರ್ವಿಷ್ಠರೊಡನೆ ಐಶ್ವರ್ಯವನ್ನು ಹಂಚಿಕೊಳ್ಳುವದಕ್ಕಿಂತ ದೀನರಾಗಿದ್ದು ಬಡಜನರೊಡನೆ ವಾಸಿಸುವುದೇ ಉತ್ತಮ. |
20
|
ಉಪದೇಶವನ್ನು ಗಮನವಿಟ್ಟು ಕೇಳುವವನು ಅದರ ಲಾಭ ಹೊಂದುವನು; ಯೆಹೋವನಲ್ಲಿ ಭರವಸೆ ಇಡುವವನು ಆಶೀರ್ವಾದ ಹೊಂದುವನು. |
21
|
ಜ್ಞಾನಿಯನ್ನು ಅವನ ಜ್ಞಾನದಿಂದಲೇ ಜನರು ಗುರುತಿಸುವರು. ಎಚ್ಚರಿಕೆಯಿಂದ ಮಾತಾಡುವವನು ಒಡಂಬಡಿಸುವನು. |
22
|
ವಿವೇಕವು ವಿವೇಕಿಗಳಿಗೆ ನಿಜಜೀವವನ್ನು ಕೊಡುತ್ತದೆ. ಆದರೆ ಮೂಢರು ತಮ್ಮ ಮೂಢತನದಿಂದಲೇ ದಂಡಿಸಲ್ಪಡುವರು. |
23
|
ಜ್ಞಾನಿಯ ಹೃದಯವು ಅವನ ಬಾಯಿಗೆ ಮಾರ್ಗದರ್ಶನ. ಅವನ ಮಾತುಗಳು ಒಳ್ಳೆಯದಾಗಿವೆ; ಕೇಳಲು ಯೋಗ್ಯವಾಗಿವೆ. |
24
|
ಸವಿನುಡಿಗಳು ಜೇನಿನಂತಿವೆ. ಅವು ಸ್ವೀಕಾರಕ್ಕೆ ಸುಲಭ; ಆರೋಗ್ಯಕ್ಕೆ ಉಪಯುಕ್ತ. |
25
|
ಮನುಷ್ಯದೃಷ್ಟಿಗೆ ಸರಳವಾಗಿ ತೋರುವ ಒಂದು ಮಾರ್ಗವಿದೆ; ಆದರೆ ಅದರ ಅಂತ್ಯವು ಮರಣ. |
26
|
ಕೆಲಸಗಾರನನ್ನು ಅವನ ಹೊಟ್ಟೆಯೇ ದುಡಿಮೆಯಲ್ಲಿ ತೊಡಗಿಸುತ್ತದೆ. ಅವನ ಹಸಿವೇ ಊಟಕ್ಕಾಗಿ ಅವನನ್ನು ದುಡಿಸುತ್ತದೆ. |
27
|
ನೀಚನು ಕೆಟ್ಟಕಾರ್ಯಗಳನ್ನು ಆಲೋಚಿಸಿಕೊಳ್ಳುವನು. ಅವನ ಮಾತುಗಳು ಬೆಂಕಿಯಂತೆ ನಾಶಕರ. |
28
|
ಕೆಡುಕನು ಜಗಳ ಎಬ್ಬಿಸುವನು; ಗಾಳಿಸುದ್ದಿಯನ್ನು ಹಬ್ಬಿಸುವವನು ಆಪ್ತಸ್ನೇಹಿತರಲ್ಲಿ ಒಡಕು ಉಂಟುಮಾಡುವನು. |
29
|
ಕೆಡುಕನು ತನ್ನ ಸ್ನೇಹಿತರನ್ನೇ ಮೋಸಗೊಳಿಸಿ ನಾಶನಕ್ಕೆ ನಡೆಸುವನು. |
30
|
ಕಣ್ಣುಮಿಟುಕಿಸಿ ನಗುವವನು ತಪ್ಪಾದ ಹಾಗೂ ಕೆಟ್ಟಕಾರ್ಯವೆಸಗಲು ಯೋಜಿಸುತ್ತಿರುವನು. |
31
|
ಒಳ್ಳೆಯವರಿಗೆ ಅವರ ನರೆಗೂದಲೇ ವೈಭವದ ಕಿರೀಟ. |
32
|
ಶೂರನಾಗಿರುವುದಕ್ಕಿಂತ ತಾಳ್ಮೆಯಿಂದಿರುವುದೇ ಶ್ರೇಷ್ಠ; ಪಟ್ಟಣವನ್ನು ವಶಪಡಿಸಿಕೊಳ್ಳುವುದಕ್ಕಿಂತ ನಿಮ್ಮ ಕೋಪವನ್ನು ಸ್ವಾಧೀನದಲ್ಲಿಟ್ಟುಕೊಳ್ಳವುದೇ ಉತ್ತಮ. |
33
|
ಜನರು ಚೀಟುಹಾಕಿ ನಿರ್ಧಾರ ಮಾಡಿದರೂ ಆ ನಿರ್ಧಾರಗಳು ಬರುವುದು ಯೆಹೋವನಿಂದಲೇ. |
Proverbs 16:1 Kannada Language Bible Words basic statistical display
COMING SOON ...