1
|
ಜಗಳದ ಮನೆಯಲ್ಲಿ ಮೃಷ್ಠಾನ್ನ ತಿನ್ನುವುದಕ್ಕಿಂತಲೂ ಸಮಾಧಾನದ ಮನೆಯಲ್ಲಿ ಒಣ ರೊಟ್ಟಿಯನ್ನು ತಿನ್ನುವುದೇ ಮೇಲು. |
2
|
ಜ್ಞಾನಿಯಾದ ಸೇವಕನು ತನ್ನ ಯಜಮಾನನ ಅಯೋಗ್ಯ ಮಗನನ್ನೇ ತನ್ನ ಹತೋಟಿಯಲ್ಲಿಟ್ಟುಕೊಳ್ಳುವನು; ಅವನ ಸಹೋದರರೊಂದಿಗೂ ಆಸ್ತಿಯಲ್ಲಿ ಪಾಲು ಹೊಂದುವನು. |
3
|
ಜನರು ಬೆಳ್ಳಿಬಂಗಾರವನ್ನು ಬೆಂಕಿಗೆ ಹಾಕಿ ಶುದ್ಧಮಾಡುವರು. ಆದರೆ ಮನುಷ್ಯರ ಹೃದಯಗಳನ್ನು ಶುದ್ಧಮಾಡುವವನು ಯೆಹೋವನೇ. |
4
|
ಕೆಟ್ಟಮಾತುಗಳಿಗೆ ಕಿವಿಗೊಡುವವನು ಕೆಡುಕನಿಗೆ ಸಮಾನ. ಚಾಡಿಗೆ ಕಿವಿಗೊಡುವವನು ಸುಳ್ಳುಗಾರನಿಗೆ ಸಮಾನ. |
5
|
ಬಡವನನ್ನು ಗೇಲಿಮಾಡಿದರೆ ಅವನನ್ನು ನಿರ್ಮಿಸಿದ ದೇವರಿಗೇ ಅವಮಾನಮಾಡಿದಂತಾಗುವುದು. ಬೇರೊಬ್ಬನ ದುರಾವಸ್ಥೆಯಲ್ಲಿ ಸಂತೋಷಪಡುವವರಿಗೆ ದಂಡನೆಯು ಖಂಡಿತ. |
6
|
ಮೊಮ್ಮಕ್ಕಳು ವೃದ್ಧರಿಗೆ ಸಂತೋಷ. ಮಕ್ಕಳಿಗೆ ತಮ್ಮ ತಂದೆತಾಯಿಗಳ ಬಗ್ಗೆ ಹೆಮ್ಮೆ. |
7
|
ವಾಕ್ಚಾತುರ್ಯವು ಮೂಢನಿಗೆ ವಿರುದ್ಧ; ಸುಳ್ಳು ಮಾತು ಗಣ್ಯನಿಗೆ ಇನ್ನೂ ವಿರುದ್ಧ. |
8
|
ಲಂಚವು ಅದೃಷ್ಟ ಎಂದು ಭಾವಿಸಿಕೊಳ್ಳುವವರಿಗೆ, ಅವರು ಹೋದಲ್ಲೆಲ್ಲಾ ಅದೇ ಕಾರ್ಯಸಾಧಕದಂತೆ ಕಾಣುತ್ತದೆ. |
9
|
ನಿನಗೆ ತಪ್ಪು ಮಾಡಿದವನನ್ನು ನೀನು ಕ್ಷಮಿಸಿದರೆ ನೀನು ಸ್ನೇಹಿತನಾಗುವಿ. ಆದರೆ ನೀನು ಆ ವಿಷಯವನ್ನು ಬೇರೆಯವರಿಗೆ ಮತ್ತೆ ಹೇಳಿದರೆ ನಿಮ್ಮ ಗೆಳೆತನವು ಒಡೆದು ಹೋಗುವುದು. |
10
|
ಮೂಢನಿಗೆ ಮನವರಿಕೆ ಮಾಡಲು ನೂರು ಏಟುಗಳು ಬೇಕಾದರೂ ಜ್ಞಾನಿಗೆ ಒಂದೇ ಗದರಿಕೆಯು ಸಾಕು. |
11
|
ದುಷ್ಟನಿಗೆ ದೇವರ ವಿರುದ್ಧ ದಂಗೆ ಏಳುವುದಕ್ಕೆ ಇಷ್ಟ. ಕೊನೆಯಲ್ಲಿ ದೇವರು ತನ್ನ ದೂತನನ್ನು ಕಳುಹಿಸಿ ಅವನನ್ನು ದಂಡಿಸುವನು. |
12
|
ಮೂಢಕಾರ್ಯಗಳಲ್ಲಿ ನಿರತನಾಗಿರುವ ಮೂಢನನ್ನು ಭೇಟಿಯಾಗುವುದಕ್ಕಿಂತ ತನ್ನ ಮರಿಗಳನ್ನು ಕಳೆದುಕೊಂಡು ಕೋಪದಿಂದಿರುವ ತಾಯಿಕರಡಿಗೆ ಎದುರಾಗುವುದೇ ಮೇಲು. |
13
|
ನಿನಗೆ ಉಪಕಾರ ಮಾಡುವವರಿಗೆ ಅಪಕಾರ ಮಾಡಬೇಡ. ಇಲ್ಲವಾದರೆ ನಿನ್ನ ಜೀವಮಾನವೆಲ್ಲಾ ಕಷ್ಟಪಡುವೆ. |
14
|
ವಾದವು ಜಲಾಶಯದ ಕಟ್ಟೆಯಲ್ಲಿ ಮಾಡುವ ತೂತಿಗೆ ಸಮಾನ. ಅದು ಹೆಚ್ಚೆಚ್ಚು ದೊಡ್ಡದಾಗುವುದಕ್ಕಿಂತ ಮೊದಲೇ ನಿಲ್ಲಿಸು. |
15
|
ನಿರಪರಾಧಿಗಾಗುವ ದಂಡನೆಯೂ ಅಪರಾಧಿಗಾಗುವ ಬಿಡುಗಡೆಯೂ ಯೆಹೋವನಿಗೆ ಅಸಹ್ಯ. |
16
|
ಮೂಢನಲ್ಲಿ ಹಣವಿದ್ದರೂ ಪ್ರಯೋಜನವಿಲ್ಲ. ಯಾಕೆಂದರೆ ಜ್ಞಾನವನ್ನು ಪಡೆದುಕೊಳ್ಳುವುದಕ್ಕೆ ಅವನ ಹಣ ನಿಷ್ಪ್ರಯೋಜಕ. |
17
|
ಸ್ನೇಹಿತನು ಯಾವಾಗಲೂ ಪ್ರೀತಿಸುವನು. ಕಷ್ಟದ ಸಮಯಗಳಲ್ಲಿ ಸಹೋದರನು ಸಹಾಯಮಾಡುವನು. |
18
|
ಮೂಢನು ಬೇರೊಬ್ಬನ ಸಾಲಕ್ಕೆ ಜಾಮೀನುಗಾರನಾಗುವನು. |
19
|
ಜಗಳದಲ್ಲಿ ಸಂತೋಷಿಸುವವನು ಪಾಪದಲ್ಲಿಯೂ ಸಂತೋಷಿಸುವನು. ಜಂಬಕೊಚ್ಚಿಕೊಳ್ಳುವುದು ಕೇಡನ್ನು ಕರೆಯುವುದಕ್ಕೆ ಸಮಾನ. |
20
|
ಕೆಡುಕನಿಗೆ ಲಾಭವೆಂದೂ ಆಗದು. ಸುಳ್ಳುಗಾರನಿಗೆ ತೊಂದರೆಯೇ ಗತಿ. |
21
|
ಮೂಢಮಗನನ್ನು ಪಡೆದಿರುವ ತಂದೆಗೆ ಬಹು ವ್ಯಥೆ. ಅವನ ತಂದೆಯು ಸಂತೋಷದಿಂದರಲಾರನು |
22
|
ಸಂತೋಷವು ಒಳ್ಳೆಯ ಔಷಧಿಯಂತಿದೆ. ಆದರೆ ದುಃಖವು ಕಾಯಿಲೆಯಂತಿದೆ. |
23
|
ದುಷ್ಟನು ನ್ಯಾಯ ದೊರೆಯದಂತೆ ಮಾಡಲು ಗುಟ್ಟಾಗಿ ಲಂಚ ತೆಗೆದುಕೊಳ್ಳುವನು. |
24
|
ವಿವೇಕಿಯು ಜ್ಞಾನದ ಮೇಲೆ ಮನಸ್ಸಿಡುತ್ತಾನೆ. ಆದರೆ ಮೂಢನು ಬಹುದೂರದ ಸ್ಥಳಗಳ ಬಗ್ಗೆ ಕನಸು ಕಾಣುತ್ತಲೇ ಇರುವನು. |
25
|
ಮೂಢಮಗನಿಂದ ತಂದೆಗೆ ದುಃಖ; ಹೆತ್ತತಾಯಿಗೆ ವ್ಯಥೆ. |
26
|
ನಿರಪರಾಧಿಯನ್ನು ಶಿಕ್ಷಿಸುವುದು ತಪ್ಪು. ನ್ಯಾಯವಂತರಾದ ನಾಯಕರಿಗೆ ಹೊಡೆಯುವುದು ತಪ್ಪು. |
27
|
ಜ್ಞಾನಿಯು ಎಚ್ಚರಿಕೆಯಿಂದ ಮಾತಾಡುವನು. ವಿವೇಕಿಯು ಬೇಗನೆ ಕೋಪಗೊಳ್ಳುವುದಿಲ್ಲ. |
28
|
ಮೌನವಾಗಿದ್ದರೆ ಮೂಢನು ಸಹ ಜ್ಞಾನಿಯಂತೆ ಕಾಣುವನು; ಮಾತಾಡದಿದ್ದರೆ ವಿವೇಕಿಯಂತೆ ಕಾಣುವನು. |
Proverbs 17:9 Kannada Language Bible Words basic statistical display
COMING SOON ...