1
|
ಬಹು ಧನಕ್ಕಿಂತಲೂ ಒಳ್ಳೆಯ ಹೆಸರೇ ಉತ್ತಮ. ಬೆಳ್ಳಿ ಬಂಗಾರಗಳಿಗಿಂತಲೂ ಸನ್ಮಾನಿತರಾಗಿರುವುದೇ ಅಮೂಲ್ಯ. |
2
|
ಐಶ್ವರ್ಯವಂತರಿಗೂ ಬಡವರಿಗೂ ಯಾವ ವ್ಯತ್ಯಾಸವಿಲ್ಲ. ಯಾಕೆಂದರೆ ಎಲ್ಲರನ್ನು ನಿರ್ಮಿಸಿದಾತನು ಯೆಹೋವನೇ. |
3
|
ಜ್ಞಾನಿಗಳು ಕೇಡನ್ನು ಕಂಡು ದೂರವಾಗುತ್ತಾರೆ. ಮೂಢರಾದರೋ ನೇರವಾಗಿ ಹೋಗಿ ಆಪತ್ತಿಗೀಡಾಗುವರು. |
4
|
ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿದ್ದು ದೀನತೆಯಿಂದಿರು; ಆಗ ನೀನು ಐಶ್ವರ್ಯ, ಸನ್ಮಾನ ಮತ್ತು ನಿಜಜೀವವನ್ನು ಹೊಂದಿಕೊಳ್ಳುವೆ. |
5
|
ವಕ್ರಬುದ್ಧಿಯುಳ್ಳವರು ಅನೇಕ ಆಪತ್ತುಗಳಿಗೆ ಸಿಕ್ಕಿಕ್ಕೊಂಡಿದ್ದಾರೆ. ಆದರೆ ತನ್ನ ಆತ್ಮದ ಬಗ್ಗೆ ಚಿಂತಿಸುವವನು ಆ ಆಪತ್ತುಗಳಿಂದ ದೂರವಿರುವನು. |
6
|
ಮಗನಿಗೆ ಬಾಲ್ಯದಲ್ಲಿಯೇ ಒಳ್ಳೆಯ ಮಾರ್ಗವನ್ನು ಉಪದೇಶಿಸು. ಅವನು ಬೆಳೆದು ದೊಡ್ಡವನಾದಾಗ ಅದೇ ರೀತಿಯಲ್ಲಿ ಜೀವಿಸುವನು. |
7
|
ಬಡವನು ಐಶ್ವರ್ಯವಂತನಿಗೆ ಗುಲಾಮನಾಗಿದ್ದಾನೆ. ಸಾಲ ತೆಗೆದುಕೊಳ್ಳುವವನು ಸಾಲಕೊಡುವವನಿಗೆ ಸೇವಕನಾಗಿದ್ದಾನೆ. |
8
|
ಕೇಡನ್ನು ಬಿತ್ತುವವನು ಕೇಡನ್ನು ಕೊಯ್ಯುವನು. ಅವನ ದುಷ್ಟಶಕ್ತಿಯು ನಾಶವಾಗುವುದು. |
9
|
ಉದಾರಿಯು ತನ್ನ ಆಹಾರವನ್ನು ಬಡವರೊಂದಿಗೆ ಹಂಚಿಕೊಳ್ಳುವುದರಿಂದ ಆಶೀರ್ವಾದ ಹೊಂದುವನು. |
10
|
ದುರಾಭಿಮಾನಿಯನ್ನು ಬಲವಂತವಾಗಿ ಹೊರಗಟ್ಟಿ. ಆಗ ಜಗಳವಾಗಲಿ ವಾದಗಳಾಗಲಿ ಅವಮಾನಗಳಾಗಲಿ ಇರುವುದಿಲ್ಲ. |
11
|
ನೀನು ಶುದ್ಧಹೃದಯವನ್ನೂ ಸವಿಮಾತುಗಳನ್ನೂ ಪ್ರೀತಿಸಿದರೆ ರಾಜನು ನಿನಗೆ ಸ್ನೇಹಿತನಾಗುವನು. |
12
|
ಯೆಹೋವನು ಜ್ಞಾನಿಗಳ ಮೇಲೆ ಲಕ್ಷ್ಯವಿಟ್ಟು ಕಾಪಾಡುವನು; ವಂಚಕರ ಮಾತುಗಳನ್ನಾದರೊ ನಾಶಪಡಿಸುವನು. |
13
|
“ನಾನು ಕೆಲಸಕ್ಕೆ ಹೋಗಲಾರೆ. ಹೊರಗಡೆ ಸಿಂಹವಿದೆ. ಅದು ನನ್ನನ್ನು ಕೊಲ್ಲುತ್ತದೆ” ಎನ್ನುತ್ತಾನೆ ಸೋಮಾರಿ. |
14
|
4ಕಾಮುಕಿಯ ಬಾಯಿ ಆಳವಾದ ಗುಂಡಿಯಂತಿದೆ. ಯೆಹೋವನಿಂದ ಶಪಿಸಲ್ಪಟ್ಟವರು ಆ ಗುಂಡಿಯೊಳಗೆ ಬೀಳುವರು. |
15
|
ಮಕ್ಕಳು ಮೂಢಕಾರ್ಯಗಳನ್ನು ಮಾಡುವರು. ನೀವು ಅವರನ್ನು ಶಿಕ್ಷಿಸಿದರೆ, ಅವುಗಳನ್ನು ಮಾಡಬಾರದೆಂದು ಅವರಿಗೆ ಗೊತ್ತಾಗುವುದು. |
16
|
ಐಶ್ವರ್ಯವಂತರಾಗಲು ಬಡವರನ್ನು ಹಿಂಸಿಸುವವರಿಗೂ ಐಶ್ವರ್ಯವಂತರಿಗೆ ಉಡುಗೊರೆಗಳನ್ನು ಕೊಡುವವರಿಗೂ ಕೊರತೆಯೇ ಗತಿ. |
17
|
ನನ್ನ ಉಪದೇಶಗಳಿಗೆ ಕಿವಿಗೊಡು. ಜ್ಞಾನಿಗಳ ಉಪದೇಶವನ್ನೇ ನಾನು ನಿನಗೆ ಉಪದೇಶಿಸುವೆನು. ಈ ಉಪದೇಶಗಳಿಂದ ಕಲಿತುಕೊ. |
18
|
ನೀನು ಈ ಉಪದೇಶಗಳನ್ನು ಜ್ಞಾಪಕದಲ್ಲಿಟ್ಟುಕೊಂಡರೆ ನಿನಗೆ ಒಳ್ಳೆಯದಾಗುವುದು. ನೀನು ಈ ಉಪದೇಶಗಳನ್ನು ಹೇಳಬಲ್ಲವನಾದರೆ ನಿನಗೆ ಅನುಕೂಲವಾಗುವುದು. |
19
|
ಆ ಜ್ಞಾನೋಕ್ತಿಗಳನ್ನು ನಾನೀಗ ಉಪದೇಶಿಸುವೆನು, ನೀನು ಯೆಹೋವನಲ್ಲಿ ಭರವಸೆ ಇಡಬೇಕೆಂಬುದೇ ನನ್ನ ಅಪೇಕ್ಷೆ. |
20
|
ನಾನು ನಿನಗೋಸ್ಕರ ಮೂವತ್ತು ನುಡಿಗಳನ್ನು ಬರೆದಿರುವೆ. ಇವು ಬುದ್ಧಿವಾದದ ಮತ್ತು ವಿವೇಕದ ನುಡಿಗಳಾಗಿವೆ. |
21
|
ಈ ನುಡಿಗಳು ನಿನಗೆ ಸತ್ಯವನ್ನೂ ಮುಖ್ಯವಾದವುಗಳನ್ನೂ ಉಪದೇಶಿಸುತ್ತವೆ. ಆಗ ನೀನು ನಿನ್ನನ್ನು ಕಳುಹಿಸಿದವನಿಗೆ ಒಳ್ಳೆಯ ಉತ್ತರಗಳನ್ನು ಕೊಡಬಲ್ಲವನಾಗುವೆ. |
22
|
ಅಸಹಾಯಕರಾದ ಬಡವರಿಂದ ಕದ್ದುಕೊಳ್ಳಬೇಡ; ನ್ಯಾಯಾಲಯದಲ್ಲಿ ಅವರಿಗೆ ಅನ್ಯಾಯಮಾಡಬೇಡ. |
23
|
ಯಾಕೆಂದರೆ ಯೆಹೋವನು ಅವರ ಪರವಾಗಿ ವಾದಿಸುವನು; ಅವರನ್ನು ದರೋಡೆ ಮಾಡಬೇಕೆಂದಿರುವವರ ಪ್ರಾಣಗಳನ್ನು ತೆಗೆದುಹಾಕುವನು. |
24
|
ಮುಂಗೋಪಿಯ ಸ್ನೇಹಿತನಾಗಿರಬೇಡ. ತಟ್ಟನೆ ಸಿಟ್ಟುಗೊಳ್ಳುವವನ ಸಮೀಪಕ್ಕೆ ಹೋಗಬೇಡ. |
25
|
ಇಲ್ಲವಾದರೆ, ನೀನೂ ಅವನಂತಾಗುವೆ. ಆಗ ಅವನಿಗಿರುವ ತೊಂದರೆಗಳು ನಿನಗೂ ಬರುತ್ತವೆ. |
26
|
ಬೇರೊಬ್ಬನ ಸಾಲಗಳಿಗೆ ಜಾಮೀನಾಗಬೇಡ. |
27
|
ನೀನು ಅವನ ಸಾಲವನ್ನು ತೀರಿಸಲಾಗದಿದ್ದರೆ, ನಿನ್ನಲ್ಲಿರುವ ಪ್ರತಿಯೊಂದನ್ನು ಕಳೆದುಕೊಳ್ಳುವೆ. ನಿನ್ನ ಹಾಸಿಗೆಯನ್ನು ನೀನೇಕೆ ಕಳೆದುಕೊಳ್ಳಬೇಕು. |
28
|
ಬಹುಕಾಲದ ಹಿಂದೆ ನಿನ್ನ ಪೂರ್ವಿಕರು ಜಮೀನಿಗೆ ಹಾಕಿದ ಮೇರೆಗಲ್ಲನ್ನು ಎಂದಿಗೂ ಜರುಗಿಸಬೇಡ. |
29
|
ಚತುರ ಕೆಲಸಗಾರನು ರಾಜರ ಸೇವೆಗೆ ಯೋಗ್ಯನಾಗಿದ್ದಾನೆ. ಅವನು ಸಾಮಾನ್ಯರ ಸೇವೆ ಮಾಡಬೇಕಿಲ್ಲ. |
Proverbs 22:15 Kannada Language Bible Words basic statistical display
COMING SOON ...