1
|
ಇವು ಸಹ ಸೊಲೊಮೋನನು ಹೇಳಿದ ಜ್ಞಾನೋಕ್ತಿಗಳು. ಈ ನುಡಿಗಳನ್ನು ಯೆಹೂದದ ರಾಜನಾಗಿದ್ದ ಹಿಜ್ಕೀಯನ ಸೇವಕರು ನಕಲು ಮಾಡಿದರು: |
2
|
ವಿಷಯಗಳನ್ನು ರಹಸ್ಯಗೊಳಿಸಿದ್ದರಿಂದ ದೇವರಿಗೆ ಸನ್ಮಾನ; ವಿಷಯಗಳನ್ನು ಕಂಡು ಹಿಡಿಯುವುದರಿಂದ ರಾಜನಿಗೆ ಸನ್ಮಾನ. |
3
|
ಆಕಾಶದ ಎತ್ತರವನ್ನಾಗಲಿ ಭೂಮಿಯ ಆಳವನ್ನಾಗಲಿ ಅಳೆಯಲು ಯಾರಿಗೆ ಸಾಧ್ಯ? ಅಂತೆಯೇ ರಾಜರುಗಳ ಮನಸ್ಸನ್ನು ಯಾರೂ ಅರ್ಥಮಾಡಿಕೊಳ್ಳಲಾರರು. |
4
|
ನೀನು ಬೆಳ್ಳಿಯಿಂದ ಕಲ್ಮಶವನ್ನು ತೆಗೆದುಹಾಕಿ ಶುದ್ಧಗೊಳಿಸಿದರೆ, ಅಕ್ಕಸಾಲಿಗನು ಅದರಿಂದ ಸುಂದರವಾದ ವಸ್ತುಗಳನ್ನು ಮಾಡಬಲ್ಲನು. |
5
|
ಅಂತೆಯೇ, ರಾಜನಿಂದ ಕೆಟ್ಟ ಆಲೋಚನೆಗಾರರನ್ನು ತೆಗೆದುಹಾಕಿದರೆ, ಒಳ್ಳೆಯತನವು ಅವನ ಆಡಳಿತವನ್ನು ಭದ್ರಗೊಳಿಸುತ್ತದೆ. |
6
|
ರಾಜನ ಮುಂದೆ ಜಂಬಕೊಚ್ಚಿಕೊಳ್ಳಬೇಡ. ಪ್ರಮುಖರ ಸ್ಥಳದಲ್ಲಿ ನಿಂತುಕೊಳ್ಳಬೇಡ. |
7
|
ಗಣ್ಯರ ಮುಂದೆ ಅವಮಾನಿತನಾಗುವುದಕ್ಕಿಂತ, “ಮೇಲಕ್ಕೆ ಬಾ” ಎಂದು ಹೇಳಿಸಿಕೊಳ್ಳುವುದೇ ಉತ್ತಮ. |
8
|
ನೀನು ಕಂಡ ಯಾವುದನ್ನಾದರೂ ನ್ಯಾಯಧೀಶನಿಗೆ ತಿಳಿಸಲು ಆತುರಪಡಬೇಡ. ನೀನು ತಪ್ಪಿತಸ್ಥನೆಂದು ಬೇರೊಬ್ಬನು ಹೇಳಿದರೆ, ನಿನಗೆ ಅವಮಾನವಾಗುವುದು. |
9
|
ನೀನು ನಿನ್ನ ನೆರೆಯವನೊಂದಿಗೆ ವಾಗ್ವಾದ ಮಾಡಿದ್ದರೆ, ಗುಟ್ಟಾದ ವಿಷಯಗಳನ್ನು ಬೇರೊಬ್ಬನಿಗೆ ಪ್ರಕಟಿಸಬೇಡ. |
10
|
ಇಲ್ಲವಾದರೆ ಅದನ್ನು ಕೇಳಿದವರೆಲ್ಲರೂ ನಿನ್ನನ್ನು ಖಂಡಿಸುವರು; ಆ ಕೆಟ್ಟ ಹೆಸರು ನಿನ್ನನ್ನೆಂದಿಗೂ ಬಿಟ್ಟುಹೋಗದು. |
11
|
ನೀನು ಸರಿಸಮಯದಲ್ಲಿ ಒಳ್ಳೆಯದನ್ನು ಹೇಳಿದರೆ, ಅದು ಬೆಳ್ಳಿಯ ತಟ್ಟೆಯಲ್ಲಿರುವ ಚಿನ್ನದ ಸೇಬಿನಂತಿರುವುದು. |
12
|
ಜ್ಞಾನಿಯು ನಿನಗೆ ಕೊಡುವ ಎಚ್ಚರಿಕೆಯು ಚಿನ್ನದ ಉಂಗುರಗಳಿಗಿಂತಲೂ ಬಂಗಾರದ ಆಭರಣಗಳಿಗಿಂತಲೂ ಹೆಚ್ಚು ಬೆಲೆ ಬಾಳುತ್ತದೆ. |
13
|
ನಂಬಿಗಸ್ತನಾದ ಸಂದೇಶಕನಿಂದ ಯಜಮಾನನಿಗೆ ಉಲ್ಲಾಸ. ಅವನು ಸುಗ್ಗೀಕಾಲದ ಬಿಸಿಲಿನ ದಿನಗಳಲ್ಲಿರುವ ತಣ್ಣನೆಯ ಹಿಮದಂತಿರುವನು. |
14
|
ದಾನ ಮಾಡುವುದಾಗಿ ಹೇಳಿಯೂ ಮಾಡದವರು ಮಳೆಯನ್ನು ತಾರದ ಮೋಡಗಳಂತೆಯೂ ಗಾಳಿಯಂತೆಯೂ ಇರುವರು. |
15
|
ತಾಳ್ಮೆಯು ಅಧಿಪತಿಯನ್ನು ಸಹ ಮನವೊಪ್ಪಿಸುವುದು. ನಯವಾದ ಮಾತಿಗೆ ಬಹುಬಲ. |
16
|
ಜೇನುತುಪ್ಪ ಒಳ್ಳೆಯದು. ಆದರೆ ಅತಿಯಾಗಿ ತಿನ್ನಬೇಡ. ಇಲ್ಲವಾದರೆ, ಕಾಯಿಲೆಬೀಳುವೆ. |
17
|
ಅಂತೆಯೇ, ನಿನ್ನ ನೆರೆಯವನ ಮನೆಗೆ ಪದೇಪದೇ ಹೋಗಬೇಡ. ನೀನು ಹೋದರೆ, ಅವನು ನಿನ್ನ ಮೇಲೆ ಬೇಸರಗೊಳ್ಳುವನು. |
18
|
ನೆರೆಯವನ ವಿರುದ್ಧ ಸುಳ್ಳುಸಾಕ್ಷಿ ಹೇಳುವವನು ಅಪಾಯಕಾರಿ. ಅವನು ದೊಣ್ಣೆಯಂತೆಯೂ ಕತ್ತಿಯಂತೆಯೂ ಚೂಪಾದ ಬಾಣದಂತೆಯೂ ಇದ್ದಾನೆ. |
19
|
ಕಷ್ಟಕಾಲಗಳಲ್ಲ ಅಪನಂಬಿಗಸ್ತನನ್ನು ಆಶ್ರಯಿಸಿಕೊಳ್ಳುವುದು ಮುರುಕು ಹಲ್ಲಿನಿಂದ ತಿನ್ನವಂತೆಯೂ ಕುಂಟು ಕಾಲಿನಿಂದ ನಡೆಯುವಂತೆಯೂ ಇದೆ. |
20
|
ವ್ಯಸನದಿಂದಿರುವವನಿಗೆ ಸಂತಸದ ಗೀತೆಗಳನ್ನು ಹಾಡಿದರೆ ಚಳಿಯಲ್ಲಿರುವವನ ಬಟ್ಟೆಯನ್ನು ತೆಗೆದು ಹಾಕಿದಂತೆಯೂ ಗಾಯದ ಮೇಲೆ ಹುಳಿರಸವನ್ನು ಸುರಿದಂತೆಯೂ ಇರುವುದು. |
21
|
ನಿನ್ನ ವೈರಿ ಹಸಿವೆಗೊಂಡಿದ್ದರೆ, ಅವನಿಗೆ ಊಟಕೊಡು. ನಿನ್ನ ವೈರಿ ಬಾಯಾರಿದ್ದರೆ, ಅವನಿಗೆ ನೀರು ಕೊಡು. |
22
|
ಆಗ, ಉರಿಯುವ ಕೆಂಡಗಳನ್ನು ಅವನ ತಲೆಯ ಮೇಲೆ ಇಟ್ಟಂತಾಗುವುದು. ಯೋಹೋವನು ನಿನಗೆ ಅದರ ಪ್ರತಿಫಲವನ್ನು ಕೊಡುವನು. |
23
|
ಉತ್ತರದಿಕ್ಕಿನಿಂದ ಬೀಸುವ ಗಾಳಿ ಮಳೆಯನ್ನು ತರುವುದು. ಅಂತೆಯೇ ಚಾಡಿಮಾತು ಕೋಪಕ್ಕೆ ಕಾರಣ. |
24
|
ವಾದಿಸುವ ಹೆಂಡತಿಯೊಡನೆ ಮನೆಯಲ್ಲಿ ಇರುವುದಕ್ಕಿಂತ ಮೇಲ್ಛಾವಣಿಗೆಯ ಒಂದು ಮೂಲೆಯಲ್ಲಿ ವಾಸಿಸುವುದೇ ಮೇಲು. |
25
|
ಬಹುದೂರದ ಒಳ್ಳೆಯ ಸುದ್ದಿಯು ಬಾಯಾರಿದವನಿಗೆ ಕೊಟ್ಟ ತಣ್ಣನೆ ನೀರಿನಂತಿರುವುದು. |
26
|
ದುಷ್ಟನು ಒಳ್ಳೆಯವನಿಗೆ ಆಪತ್ತನ್ನು ಬರಮಾಡಿದರೆ, ಅದು ಚಿಲುಮೆಗೆ ಮಣ್ಣುಹಾಕಿದಂತೆಯೂ ಒರತೆಯನ್ನು ಹೊಲಸು ಮಾಡಿದಂತೆಯೂ ಇದೆ. |
27
|
ಜೇನುತುಪ್ಪವನ್ನು ಅತಿಯಾಗಿ ತಿನ್ನುವುದು ಒಳ್ಳೆಯದಲ್ಲ. ಅಂತೆಯೇ, ನಿನಗೋಸ್ಕರ ಅತಿಯಾಗಿ ಸನ್ಮಾನವನ್ನು ಬಯಸಬೇಡ. |
28
|
ತನ್ನನ್ನು ಹತೋಟಿಯಲ್ಲಿ ಇಟ್ಟುಕೊಳ್ಳಲಾರದವನು ಕೋಟೆ ಬಿದ್ದುಹೋದ ಪಟ್ಟಣದಂತಿರುವನು. |
Proverbs 25:24 Kannada Language Bible Words basic statistical display
COMING SOON ...