1
|
ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡಿ ಹೋಗುವನು. ಆದರೆ ಒಳ್ಳೆಯವನು ಸಿಂಹದಂತೆ ಧೀರನಾಗಿರುವನು. |
2
|
ದೇಶದಲ್ಲಿ ದಂಗೆಯೇಳುತ್ತಲೇ ಇದ್ದರೆ ಅಧಿಪತಿಗಳು ಬದಲಾಗುತ್ತಲೇ ಇರುವರು. ಜ್ಞಾನಿಯೂ ಅನುಭವಸ್ಥನೂ ಆಗಿರುವ ಅಧಿಪತಿಯ ದೇಶ ಸ್ಥಿರವಾಗಿರುವುದು. |
3
|
ಬಡಜನರನ್ನು ದರೋಡೆಮಾಡುವ ಬಡವನು ಬೆಳೆಯನ್ನು ನಾಶಮಾಡುವ ಬಿರುಸಾದ ಮಳೆಯಂತಿರುವನು. |
4
|
ನೀನು ನ್ಯಾಯಪ್ರಮಾಣಕ್ಕೆ ವಿಧೇಯನಾಗದಿದ್ದರೆ ಕೆಡುಕರ ಪರವಾಗಿರುವೆ. ನೀನು ನ್ಯಾಯಪ್ರಮಾಣಕ್ಕೆ ವಿಧೇಯನಾಗಿದ್ದರೆ ಕೆಡುಕರಿಗೆ ವಿರೋಧವಾಗಿರುವೆ. |
5
|
ಕೆಡುಕರು ನ್ಯಾಯವನ್ನು ಅರ್ಥಮಾಡಿಕೊಳ್ಳಲಾರರು; ಯೆಹೋವನನ್ನು ಪ್ರೀತಿಸುವ ಜನರಾದರೊ ಅದನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳುವರು. |
6
|
ಮೋಸದಿಂದ ಐಶ್ವರ್ಯವಂತರಾಗುವುದಕ್ಕಿಂತ ಯಥಾರ್ಥವಾಗಿದ್ದು ಬಡವರಾಗಿರುವುದೇ ಮೇಲು. |
7
|
ನ್ಯಾಯಪ್ರಮಾಣಕ್ಕೆ ವಿಧೇಯನಾಗುವವನು ಜಾಣ. ಅಯೋಗ್ಯರ ಸ್ನೇಹಿತನು ತನ್ನ ತಂದೆಗೇ ಅವಮಾನ ತರುವನು. |
8
|
ಬಡವರಿಗೆ ಮೋಸಮಾಡಿ ಗಳಿಸಿದ ಐಶ್ವರ್ಯ ಕಳೆದು ಹೋಗುವುದು; ಬಡವರಿಗೆ ದಯೆ ತೋರುವವನಿಗೆ ಅದು ದೊರೆಯುವುದು. |
9
|
ದೇವರ ಉಪದೇಶವನ್ನು ತಿರಸ್ಕರಿಸುವವನ ಪ್ರಾರ್ಥನೆಯನ್ನು ದೇವರೂ ತಿರಸ್ಕರಿಸುವನು. |
10
|
ಯಥಾರ್ಥವಂತರನ್ನು ದಾರಿತಪ್ಪಿಸಿ ಅಪಾಯದ ಮಾರ್ಗದಲ್ಲಿ ನಡೆಸುವವನು ತಾನು ತೋಡಿದ ಗುಂಡಿಗೆ ತಾನೇ ಬೀಳುವನು. |
11
|
ಐಶ್ವರ್ಯವಂತನು ತಾನೇ ಬುದ್ಧಿವಂತನೆಂದು ಭಾವಿಸುತ್ತಾನೆ. ವಿವೇಕಿಯಾದ ಬಡವನಾದರೊ ಸತ್ಯವನ್ನು ಕಾಣಬಲ್ಲನು. |
12
|
ಒಳ್ಳೆಯವರು ನಾಯಕರಾದಾಗ ಎಲ್ಲರಿಗೂ ಸಂತೋಷ. ಆದರೆ ಕೆಡುಕನು ಅಧಿಪತಿಯಾದಾಗ ಎಲ್ಲರೂ ಅಡಗಿಕೊಳ್ಳುವರು. |
13
|
ಪಾಪಗಳನ್ನು ಅಡಗಿಸಿಕೊಳ್ಳುವವನಿಗೆ ಯಶಸ್ಸು ಇಲ್ಲವೇ ಇಲ್ಲ. ತನ್ನ ಪಾಪವನ್ನು ಅರಿಕೆಮಾಡಿ ಬಿಟ್ಟು ಬಿಡುವವನಿಗೆ ಕರುಣೆ ದೊರೆಯುವುದು. |
14
|
ಕೇಡನ್ನು ಮಾಡಲು ಭಯಪಡುವವನು ಆಶೀರ್ವಾದ ಹೊಂದುವನು. ಆದರೆ ಮೊಂಡನು ಆಪತ್ತಿಗೆ ಸಿಕ್ಕಿಬೀಳುವನು. |
15
|
ಬಲಹೀನರನ್ನು ಆಳುವ ಕೆಡುಕನು ಗರ್ಜಿಸುವ ಸಿಂಹದಂತಿರುವನು; ಮೇಲೆರಗಲಿರುವ ಕರಡಿಯಂತಿರುವನು. |
16
|
ವಿವೇಕವಿಲ್ಲದ ಅಧಿಪತಿ ತನ್ನ ಅಧೀನದಲ್ಲಿರುವವರಿಗೆ ಕೇಡುಮಾಡುವನು. ಅನ್ಯಾಯದ ಹಣವನ್ನು ತೆಗೆದುಕೊಳ್ಳದ ಅಧಿಪತಿ ಬಹುಕಾಲ ಆಳುವನು. |
17
|
ಕೊಲೆಮಾಡಿದ ಅಪರಾಧಿಯು ತನ್ನ ಸಮಾಧಿಗೆ ಓಡಿಹೋಗಲಿ. ಅವನಿಗೆ ಸಹಾಯಮಾಡಬೇಡ. |
18
|
ಒಳ್ಳೆಯವನು ಕ್ಷೇಮವಾಗಿರುವನು; ಕೆಡುಕನಾದರೊ ಇದ್ದಕ್ಕಿದ್ದಂತೆ ಹಾಳಾಗುವನು. |
19
|
ಕಷ್ಟಪಟ್ಟು ದುಡಿಯುವವನಿಗೆ ಬೇಕಾದಷ್ಟು ಆಹಾರವಿರುವುದು. ನನಸಾಗದ ಕನಸುಗಳನ್ನೇ ಆಲೋಚಿಸಿಕೊಂಡಿರುವವನು ಬಡವನಾಗಿಯೇ ಇರುವನು. |
20
|
ನಂಬಿಗಸ್ತನು ಬಹಳವಾಗಿ ಆಶೀರ್ವದಿಸಲ್ಪಡುವನು. ಐಶ್ವರ್ಯವಂತನಾಗುವುದಕ್ಕಾಗಿಯೇ ಪ್ರಯತ್ನಿಸುವವನು ದಂಡನೆ ಹೊಂದುವನು. |
21
|
ಪಕ್ಷಪಾತ ತಪ್ಪು. ಕೆಲವರಾದರೊ ಒಂದು ತುಂಡು ರೊಟ್ಟಿಗಾಗಿಯೂ ತಪ್ಪು ಮಾಡುವರು. |
22
|
ಜಿಪುಣನು ಐಶ್ವರ್ಯವಂತನಾಗಲು ಆತುರಪಡುವನು: ಆದರೆ ತಾನು ಬೇಗನೆ ಬಡವನಾಗಲಿರುವುದನ್ನು ಅವನು ಗ್ರಹಿಸಿಕೊಳ್ಳಲಾರನು. |
23
|
ಗದರಿಸುವವನು ಸ್ವಲ್ಪಕಾಲದ ನಂತರ ಮುಖಸ್ತುತಿ ಮಾಡುವವನಿಗಿಂತಲೂ ಹೆಚ್ಚಾಗಿ ಗೌರವಿಸಲ್ಪಡುವನು. |
24
|
ಕೆಲವರು ತಮ್ಮ ತಂದೆತಾಯಿಗಳಿಂದ ಕದ್ದುಕೊಂಡು, “ಅದು ತಪ್ಪಲ್ಲ” ಎಂದು ಹೇಳುವರು. ಆದರೆ ಆ ವ್ಯಕ್ತಿಯು ಮನೆಯೊಳಗೆ ನುಗ್ಗಿ ಸರ್ವಸ್ವವನ್ನು ನಾಶಮಾಡುವ ವ್ಯಕ್ತಿಯಂತೆಯೇ ಕೆಟ್ಟವನಾಗಿದ್ದಾನೆ. |
25
|
ದುರಾಶೆಯುಳ್ಳವನು ಜಗಳಗಳನ್ನು ಎಬ್ಬಿಸುತ್ತಾನೆ. ಯೆಹೋವನಲ್ಲಿ ಭರವಸೆ ಇಡುವವನಾದರೊ ಅಭಿವೃದ್ಧಿ ಹೊಂದುವನು. |
26
|
ಸ್ವಂತ ಆಲೋಚನೆಯ ಮೇಲೆ ಭರವಸೆ ಇಡುವವನು ಮೂರ್ಖನಾಗಿದ್ದಾನೆ. ಜ್ಞಾನಮಾರ್ಗದಲ್ಲಿ ನಡೆಯುವವನು ಸುರಕ್ಷಿತನಾಗಿರುವನು. |
27
|
ಬಡವರಿಗೆ ಕೊಡುವವನು ತನಗೆ ಅಗತ್ಯವಾದ ಪ್ರತಿಯೊಂದನ್ನೂ ಹೊಂದಿಕೊಳ್ಳುವನು. ಬಡವರಿಗೆ ಸಹಾಯಮಾಡದವನಿಗೆ ಅನೇಕ ಶಾಪಗಳು ಬರುತ್ತವೆ. |
28
|
ಕೆಡುಕನು ಅಧಿಕಾರಕ್ಕೆ ಬಂದರೆ, ಜನರೆಲ್ಲರೂ ಅಡಗಿಕೊಳ್ಳುವರು. ಕೆಡುಕನು ಸೋತುಹೋದಾಗ ಒಳ್ಳೆಯವರು ಮತ್ತೆ ಆಳುವರು. |
Proverbs 28:21 Kannada Language Bible Words basic statistical display
COMING SOON ...