Indian Language Bible Word Collections
Proverbs 4
Proverbs Chapters
Proverbs 4 Verses
Books
Old Testament
New Testament
Bible Versions
English
Tamil
Hebrew
Greek
Malayalam
Hindi
Telugu
Kannada
Gujarati
Punjabi
Urdu
Bengali
Oriya
Marathi
Books
Old Testament
New Testament
Proverbs Chapters
Proverbs 4 Verses
1
|
ಮಕ್ಕಳೇ, ನಿಮ್ಮ ತಂದೆಯ ಉಪದೇಶಗಳಿಗೆ ಕಿವಿಗೊಡಿ, ಗಮನವಿಟ್ಟು ಅರ್ಥಮಾಡಿಕೊಳ್ಳಿರಿ. |
2
|
ನನ್ನ ಉಪದೇಶಗಳು ಸದುಪದೇಶಗಾಳಾಗಿರುವುದರಿಂದ ಅವುಗಳನ್ನು ಎಂದಿಗೂ ಮರೆಯಬೇಡಿ. |
3
|
ನಾನು ನನ್ನ ತಂದೆಗೆ ಚಿಕ್ಕ ಮಗನಾಗಿದ್ದೆ. ನನ್ನ ತಾಯಿಗೆ ನಾನೊಬ್ಬನೇ ಮಗನು. |
4
|
ನನ್ನ ತಂದೆ ನನಗೆ ಉಪದೇಶ ಮಾಡಿದ್ದೇನೆಂದರೆ: “ನನ್ನ ಮಾತುಗಳನ್ನು ನೆನಪು ಮಾಡಿಕೊ; ನನ್ನ ಆಜ್ಞೆಗಳಿಗೆ ವಿಧೇಯನಾಗು, ಆಗ ನೀನು ಬದುಕುವೆ. |
5
|
ಜ್ಞಾನವನ್ನು ಮತ್ತು ವಿವೇಕವನ್ನು ಪಡೆದುಕೋ! ನನ್ನ ಮಾತುಗಳನ್ನು ಮರೆಯಬೇಡ. ಯಾವಾಗಲೂ ನನ್ನ ಉಪದೇಶಗಳನ್ನು ಅನುಸರಿಸು. |
6
|
ಜ್ಞಾನವನ್ನು ಬಿಟ್ಟು ಬೇರೆ ಕಡೆಗೆ ತಿರುಗಿಕೊಳ್ಳಬೇಡ. ಆಗ ಅದು ನಿನ್ನನ್ನು ಕಾಪಾಡುವುದು. ಜ್ಞಾನವನ್ನು ಪ್ರೀತಿಸು, ಆಗ ಅದು ನಿನ್ನನ್ನು ಕಾಪಾಡುವುದು.” |
7
|
“ಜ್ಞಾನವನ್ನು ಪಡೆಯಲು ನೀನು ನಿರ್ಧರಿಸಿದಾಗಲೇ ಜ್ಞಾನವು ನಿನ್ನಲ್ಲಿ ಆರಂಭವಾಗುತ್ತದೆ. ಆದ್ದರಿಂದ ವಿವೇಕವನ್ನು ಪಡೆಯಲು ನಿನಗಿರುವದನ್ನೆಲ್ಲಾ ಉಪಯೋಗಿಸು. ಆಗ ನೀನು ವಿವೇಕಿಯಾಗುವೆ. |
8
|
ಜ್ಞಾನವನ್ನು ಪ್ರೀತಿಸು, ಆಗ ಅದು ನಿನ್ನನ್ನು ಉನ್ನತ ಸ್ಥಾನಕ್ಕೆ ತರುವುದು. ಜ್ಞಾನವನ್ನು ಅಪ್ಪಿಕೊ; ಆಗ ಅದು ನಿನಗೆ ಸನ್ಮಾನವನ್ನು ತರುವುದು. |
9
|
ಅದು ನಿನಗೆ ಅಂದವಾದ ಪುಷ್ಪಮಾಲೆಯಂತೆಯೂ ಸುಂದರವಾದ ಕಿರೀಟದಂತೆಯೂ ಇರುವುದು.” |
10
|
ಮಗನೇ, ನನ್ನ ಮಾತನ್ನು ಕೇಳು. ನಾನು ಹೇಳಿದಂತೆ ಮಾಡು, ಆಗ ನೀನು ಬಹುಕಾಲ ಬದುಕುವೆ. |
11
|
ನಾನು ನಿನಗೆ ಜ್ಞಾನದ ಕುರಿತು ಉಪದೇಶಿಸುತ್ತಿರುವೆನು. ನಾನು ನಿನ್ನನ್ನು ಧರ್ಮದ ಮಾರ್ಗದಲ್ಲಿ ನಡೆಸುತ್ತಿರುವೆನು. |
12
|
ಈ ದಾರಿಯಲ್ಲೇ ಹೋಗು, ಆಗ ನಿನ್ನ ಕಾಲುಗಳು ಇಕ್ಕಟ್ಟಿಗೆ ಸಿಕ್ಕಿಕೊಳ್ಳುವುದಿಲ್ಲ. ನೀನು ಓಡಿದರೂ ಮುಗ್ಗರಿಸುವುದಿಲ್ಲ. |
13
|
ಈ ಉಪದೇಶಗಳನ್ನು ಯಾವಾಗಲೂ ನೆನಪುಮಾಡಿಕೊ; ಮರೆತುಬಿಡಬೇಡ. ಅವು ನಿನಗೆ ಜೀವವಾಗಿವೆ! |
14
|
ಕೆಡುಕರ ಮಾರ್ಗದಲ್ಲಿ ನಡೆಯಬೇಡ. ಅವರಂತೆ ಜೀವಿಸಬೇಡ. |
15
|
ದುಷ್ಟತನಕ್ಕೆ ದೂರವಾಗಿರು. ಅದರ ಬಳಿಗೆ ಹೋಗಬೇಡ. ನೇರವಾಗಿ ನಡೆದು ಅದರಿಂದ ದೂರವಾಗು. |
16
|
ಏನಾದರೂ ಕೇಡುಮಾಡದಿದ್ದರೆ ಕೆಡುಕರಿಗೆ ನಿದ್ರೆಬಾರದು. ಯಾರಿಗಾದರೂ ನೋವು ಮಾಡದೆ ಅವರು ನಿದ್ರಿಸಲಾರರು. |
17
|
ಅವರು ಬೇರೆಯವರಿಗೆ ಕೇಡನ್ನಾಗಲಿ ನೋವನ್ನಾಗಲಿ ಮಾಡದೆ ಜೀವಿಸಲಾರರು. ಅದೇ ಅವರ ಆಹಾರ ಮತ್ತು ಪಾನೀಯ. |
18
|
ನೀತಿವಂತರ ಜೀವಿತವು ಮಧ್ಯಾಹ್ನದವರೆಗೂ ಹೆಚ್ಚುತ್ತಾ ಬರುವ ಮುಂಜಾನೆಯ ಬೆಳಕಿನಂತಿರುವುದು. |
19
|
ಆದರೆ ದುಷ್ಟರ ಜೀವಿತವು ರಾತ್ರಿಯ ಕತ್ತಲೆಯಂತಿದೆ. ಅವರು ಕತ್ತಲೆಯಲ್ಲಿ ತಪ್ಪಿಸಿಕೊಂಡಿದ್ದು ತಮಗೆ ಕಾಣದ ವಸ್ತುಗಳ ಮೇಲೆ ಎಡವಿ ಬೀಳುತ್ತಾರೆ. |
20
|
ನನ್ನ ಮಗನೇ, ನನ್ನ ಮಾತುಗಳಿಗೆ ಗಮನಕೊಡು. ನನ್ನ ನುಡಿಗಳಿಗೆ ಕಿವಿಗೊಡು. |
21
|
ನಿನ್ನ ದೃಷ್ಟಿಯು ಅವುಗಳ ಮೇಲಿರಲಿ, ಅವುಗಳನ್ನು ನಿನ್ನ ನೆನಪಿನಲ್ಲಿಟ್ಟುಕೋ. |
22
|
ನನ್ನ ಉಪದೇಶಕ್ಕೆ ಕಿವಿಗೊಡುವವರು ಜೀವವನ್ನು ಹೊಂದಿಕೊಳ್ಳುವರು. ನನ್ನ ಮಾತುಗಳು ದೇಹಕ್ಕೆ ಒಳ್ಳೆಯ ಆರೋಗ್ಯವನ್ನು ನೀಡುತ್ತವೆ. |
23
|
ನಿನ್ನ ಆಲೋಚನೆಗಳ ವಿಷಯದಲ್ಲಿ ಎಚ್ಚರಿಕೆಯಿಂದಿರು. ನಿನ್ನ ನಡತೆಯು ನಿನ್ನ ಆಲೋಚನೆಗಳ ಮೇಲೆ ಆಧಾರಗೊಂಡಿದೆ. |
24
|
ಸತ್ಯವನ್ನು ಸೊಟ್ಟಗೆ ಮಾಡದಿರು; ಸುಳ್ಳನ್ನೂ ಹೇಳದಿರು. |
25
|
ಒಳ್ಳೆಯದನ್ನೇ ದೃಷ್ಟಿಸು; ನಿನ್ನ ನೋಟವನ್ನು ನಿನ್ನ ಗುರಿಯ ಮೇಲೆ ಕೇಂದ್ರೀಕರಿಸು. |
26
|
ನಿನ್ನ ಕಾರ್ಯಗಳನ್ನು ಎಚ್ಚರಿಕೆಯಿಂದ ಮಾಡು; ಆಗ ನಿನ್ನ ಜೀವನವು ದೃಢವಾಗಿರುವುದು. |
27
|
ಒಳ್ಳೆಯ ಮಾರ್ಗವನ್ನು ಬಿಟ್ಟು ಹೋಗಬೇಡ; ಆದರೆ ಕೆಡುಕಿಗೆ ಯಾವಾಗಲೂ ದೂರವಾಗಿರು. |